ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್ 01) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ಸ್ವಾತೀ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ರೋಹಿಣೀ, ಯೋಗ: ಶುಭ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 28 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:16 ರಿಂದ 01:43 ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 07:56 ರಿಂದ 09:22 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 10:49 ರಿಂದ 12:16ರ ವರೆಗೆ.
ಸಿಂಹ ರಾಶಿ : ಮೇಲಧಿಕಾರಿಗಳ ಮಾತುಗಳಿಂದ ನಿಮಗೆ ಅವಮಾನವಾಗಿದ್ದು ಮುಂದೇನು ಎಂಬುದರ ಬಗ್ಗೆ ನಿಮಗೆ ಚಿಂತೆ ಬರಬಹುದು. ಅಧಿಕ ಲಾಭದ ನಿರೀಕ್ಷೆಯಲ್ಲಿ ಹೊರಟ ನಿಮಗೆ ಅಲ್ಪ ಲಾಭವಾಗಬಹುದು. ಜಾಣ್ಮೆಯಿಂದ ಸರ್ಕಾರದ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ಸ್ವಂತ ವಾಹನದ ದುರಸ್ತಿಗೆ ಖರ್ಚಾಗಬಹುದು. ಇಂದು ಸ್ಥೈರ್ಯವನ್ನು ಕಳೆದುಕೊಳ್ಳುವಿರಿ. ನಿಮ್ಮಲ್ಲಿ ವಿದ್ಯೆ ಇರುವ ಕಾರಣ ಯಾವ ಸಂದರ್ಭಕ್ಕೂ ಹೆದರುವುದಿಲ್ಲ. ನಿಮ್ಮನ್ನು ಅತಿಥಿಗಳಾಗಿ ಆಹ್ವಾನಿಸಬಹುದು. ನಿಮ್ಮ ಪ್ರೇಮಸಂಬಂಧವು ಸಡಿಲಾಗಬಹುದು. ಬೆನ್ನು ನೋವಿಗೆ ಸರಿಯಾದ ಚಿಕಿತ್ಸೆಯನ್ನು ಮಾಡಿಕೊಳ್ಳುವುದು ಉಚಿತವೆನಿಸೀತು. ಅರಿವಿಲ್ಲದೇ ಎಲ್ಲರೆದುರು ಅಸಭ್ಯ ವರ್ತನೆಯನ್ನು ನೀವು ತೋರಿಸುವಿರಿ.
ಕನ್ಯಾ ರಾಶಿ : ನಿಮ್ಮ ಜಾಣ್ಮೆಯಿಂದ ಭೂಮಿಯ ಕಲಹವನ್ನು ಸರಿಮಾಡಿಕೊಳ್ಳುವಿರಿ. ಮಿತ್ರನ ಬಗ್ಗೆ ಯಾರಾದರೂ ಸಲ್ಲದ ಮಾತನಾಡಬಹುದು. ಕಾರ್ಯದ ವಿಳಂಬದಿಂದ ಮನೆಗೆ ಬರುವುದು ವಿಳಂಬವಾಗುವುದು. ಲೆಕ್ಕ ಪರಿಶೋಧಕರು ಒತ್ತಡದಲ್ಲಿ ಇರುವರು. ನಾಜೂಕಿನಿಂದ ಇಂದಿನ ಕಾರ್ಯವನ್ನು ಮಾಡಿಕೊಳ್ಳುವಿರಿ. ವಿದ್ಯಾರ್ಥಿಗಳು ವಿಶೇಷ ತರಬೇತಿಯನ್ನು ಪಡೆಯಬೇಕಾಗಬಹುದು. ಮನೆಯಿಂದ ದೂರದಲ್ಲಿ ನಿಮ್ಮ ಹೊಸ ಜೀವನವನ್ನು ನಡೆಸಬಹುದು. ಇಂದು ಅಧಿಕ ಮಾತನ್ನು ಆಡುವುದು ಬೇಡ. ಕಲಾವಿದು ಕೆಲವು ಅವಕಾಶದಿಂದ ವಂಚಿತರಾಗಬಹುದು. ಖರ್ಚಿನ ಬಗ್ಗೆ ಅಂದಾಜಿರಲಿ. ನಿಮ್ಮ ವಸ್ತುಗಳು ಕಾಣಿದಸದೇ ನೀವು ಆತಂಕಗೊಳ್ಳಬೇಕಾಗಬಹುದು. ಸಿಕ್ಕ ಅವಕಾಶವನ್ನು ನೀವೇ ಬಿಟ್ಟುಕೊಂಡು ನಿಮ್ಮನ್ನೇ ಹಳಿದುಕೊಳ್ಳುವಿರಿ.
ತುಲಾ ರಾಶಿ : ಬೆಳಗಿನಿಂದಲೇ ಮನಸ್ಸು ಸರಿ ಇಲ್ಲದ ಕಾರಣ ಎಲ್ಲದಕ್ಕೂ ಸಿಟ್ಟು ಮಾಡುವಿರಿ. ಇಲ್ಲವೇ ಸುಮ್ಮನೆ ಇರುವಿರಿ. ಅಮೂಲ್ಯ ವಸ್ತುಗಳನ್ನು ಪಡೆದುಕೊಳ್ಳುವ ಹಂಬಲವಿರುವುದು. ಮಕ್ಕಳಿಗಾಗಿ ಹಣವನ್ನು ಇಡುವಿರಿ. ಸ್ನೇಹಿತರ ಸಹವಾಸದಿಂದ ದುರಭ್ಯಾಸವು ರೂಢಿಯಾಗಬಹುದು. ಆಲಸ್ಯದಿಂದ ಸಮಯವನ್ನು ಹಾಳುಮಾಡಿಕೊಳ್ಳುವಿರಿ. ಮಿತ್ರರಿಂದ ಧನದ ವಿಚಾರದಲ್ಲಿ ಮೋಸವಾಗಬಹುದು. ಧಾರ್ಮಿಕ ವಿಚಾರದಲ್ಲಿ ಆಸಕ್ತಿ ಬರಲಿದ್ದು ಹಿರಿಯರಿಂದ ಕೇಳಿಪಡೆಯುವಿರಿ. ವೃತ್ತಿಯಲ್ಲಿ ಒಂದಿಲ್ಲೊಂದು ಕಾರಣಕ್ಕೆ ಕಲಹವಾಗುವ ಕಾರಣ ಸ್ಥಾನವು ಬದಲಾಗಬಹುದು. ಹಲವು ವರ್ಷಗಳಿಂದ ಬಳಸದೇ ಇದ್ದ ಸ್ಥಿರಾಸ್ತಿಗೆ ಸರ್ಕಾರದಿಂದ ಪತ್ರಬರಬಹುದು. ಅನೇಕ ವಿಚಾರಕ್ಕೆ ತಲೆ ಹಾಕುವುದು ಅಸಾಧ್ಯ ಎನಿಸಬಹುದು.
ವೃಶ್ಚಿಕ ರಾಶಿ : ವೃತ್ತಿಯಲ್ಲಿ ಒಂದೇ ಕೆಲಸವನ್ನು ಇಬ್ಬರು ಮಾಡಲು ಹೋಗಿ ವೈಮನಸ್ಯ ಉಂಟಾಗುವುದು. ಹೊಂದಾಣಿಕೆಯಿಂದ ಇರುವುದು ಒಳ್ಳೆಯದು. ಉದ್ಯೋಗದಲ್ಲಿ ನಿರಂತರ ಯಾವುದಾದರೂ ಸಮಸ್ಯೆಯು ಬಾಧಿಸುತ್ತಿದ್ದು ದೈವಜ್ಞರಿಂದ ಸೂಕ್ತ ಪರಿಹಾರವನ್ನು ಕಂಡುಕೊಳ್ಳಬೇಕಾಗಬಹುದು. ಸಂಗಾತಿಯ ಮಾತುಗಳು ನಿಮ್ಮ ಅಭಿಮಾನಕ್ಕೆ ತೊಂದರೆ ಕೊಡಬಹುದು. ನೀವು ಅಪಮಾನವನ್ನೂ ನುಂಗಿಕೊಂಡು ಕಾರ್ಯದಲ್ಲಿ ಮಗ್ನರಾಗುವಿರಿ. ನಿಮ್ಮ ಉದ್ಯಮವನ್ನು ವಿಸ್ತಾರಗೊಳಿಸುವ ಆಲೋಚನೆಯು ಬೇರೆಯವರಿಂದ ಸಿಗಬಹುದು. ನಿಮ್ಮ ಶ್ರೇಯಸ್ಸಿನಲ್ಲಿ ಬಂಧುಗಳ ಪಾತ್ರವು ಇರುವುದು. ಮನೆಯಲ್ಲಿ ಹರ್ಷದ ವಾತಾವರಣ ಇರಲಿದೆ. ಸಾಮಾಜಿಕ ತಾಣದಲ್ಲಿ ಸಮಯವನ್ನು ಕಳೆಯುವಿರಿ.
Published On - 12:00 am, Wed, 1 November 23