Horoscope: ರಾಶಿಭವಿಷ್ಯ, ಮಿತ್ರರನ್ನು ಅನುಮಾನದಿಂದ ಕಾಣಬೇಕಾಗುವುದು
ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಅಕ್ಟೋಬರ್ 01)) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.
ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ಅಕ್ಟೋಬರ್ 01) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಅಶ್ವಿನೀ, ಯೋಗ: ವ್ಯಾಘಾತ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06-23ಕ್ಕೆ, ಸೂರ್ಯಾಸ್ತ ಸಂಜೆ 06 – 21ಕ್ಕೆ, ರಾಹು ಕಾಲ ಸಂಜೆ 04:52 – 06:21ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:22 – 01:52ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:22 – 04:52ರ ವರೆಗೆ.
ಸಿಂಹ ರಾಶಿ : ಇಂದು ನಿಮ್ಮ ಪ್ರೀತಿಪಾತ್ರರ ಜೊತೆ ಉತ್ತಮ ಸಮಯವನ್ನು ಕಳೆಯುವಿರಿ. ನಿಮಗೆ ಯಶಸ್ಸನ್ನು ಲಾಭವಾಗುವ ಉತ್ತಮ ಕಾರ್ಯವನ್ನು ಆಯ್ಕೆ ಮಾಡಿಕೊಳ್ಳುವಿರಿ. ಸಂಗಾತಿಯ ಪ್ರೀತಿಯಿಂದ ನೀವು ಅಚ್ಚರಿಗೊಳ್ಳುವಿರಿ. ತೆಗಳಿಕೆಗಳನ್ನು ನೀವು ಸಕಾರಾತ್ಮಕವಾಗಿ ಸ್ವೀಕರಿಸುವಿರಿ. ಸಂಗಾತಿಯ ಮಾತನ್ನು ನಿರ್ಲಕ್ಷಿಸಿದ ಕಾರಣ ಸಿಟ್ಟಾಗಬಹುದು. ಬಹಳ ದಿನಗಳಿಂದ ಮರೆತುಹೋಗಿದ್ದ ಸಂಗತಿಯನ್ನು ನೆನಪಿಸಿಕೊಳ್ಳುವಿರಿ. ಪಿತ್ರಾರ್ಜಿತ ಆಸ್ತಿಯನ್ನು ಕೇಳುವ ಒತ್ತಾಯವಿದ್ದರೂ ಧೈರ್ಯ ಸಾಲದು. ಆಪ್ತರನ್ನು ನೀವು ಮಾತಿನಿಂದಾಗಿ ದೂರ ಮಾಡಿಕೊಳ್ಳುವಿರಿ. ಬರಬೇಕಾದ ಹಣವು ನಿಮ್ಮ ಕೈ ಸೇರಲಿದೆ. ಇಂದು ನಿಮ್ಮ ನಡೆಯು ಹೊಸಬರಂತೆ ಕಾಣುವುದು.
ಕನ್ಯಾ ರಾಶಿ : ಕೋಪವನ್ನು ಶಾಂತ ಮಾಡಿಸಲು ಹಲವಾರು ದಾರಿಗಳನ್ನು ಕಂಡುಕೊಳ್ಳುವಿರಿ. ಆರೋಗ್ಯವು ಹದವನ್ನು ಕಳೆದುಕೊಳ್ಳಬಹುದು. ಬಂಧುಗಳ ಜೊತೆ ಆತ್ಮೀಯ ಒಡನಾಟ ಮಾಡುವಿರಿ. ಹೂಡಿಕೆಯ ವಿಚಾರವಾಗಿ ಚರ್ಚಿಸುವಿರಿ. ನಿಮ್ಮ ತಪ್ಪನ್ನು ಇನ್ನೊಬ್ಬರ ಮೇಲೆ ಹಾಕುವಿರಿ. ಮಿತ್ರರನ್ನು ಅನುಮಾನದಿಂದ ಕಾಣಬೇಕಾಗುವುದು. ಸಹಾಯ ಮಾಡಲು ಹೋಗಿ ತೊಂದರೆಯಲ್ಲಿ ಸಿಕ್ಕಿಕೊಳ್ಳುವಿರಿ. ನೂತನ ಗೃಹದ ಖರೀದಿಯ ಬಗ್ಗೆ ಸದ್ಯ ಮಾತುಕತೆ ಬೇಡ. ವಿವಾಹದ ಮಾತುಕತೆಯನ್ನೂ ಮುಂದೂಡುವುದು ಉತ್ತಮ. ಕುಟುಂಬಕ್ಕೆ ನಿಮ್ಮಿಂದ ಅಲ್ಪ ಧನ ಸಹಾಯವು ಸಿಗುವುದು. ಯಾರನ್ನೂ ಲಘುವಾಗಿ ಕಾಣುವುದು ಬೇಡ. ಇಂದು ವಹಿಸಿಕೊಂಡ ನಿಮ್ಮ ಜವಾಬ್ದಾರಿಯನ್ನು ನಿರ್ವಹಿಸಲು ಕಷ್ಟವಾದೀತು. ತಾಯಿಯ ಅನಾರೋಗ್ಯಕ್ಕೆ ಸೂಕ್ತ ಚಿಕಿತ್ಸೆಯನ್ನು ಕೊಡಿಸಿ.
ತುಲಾ ರಾಶಿ : ವಿರಾಮದ ದಿನವೂ ನಿಮಗೆ ನೆಮ್ಮದಿಯಿಂದ ಇರಲು ಕೊಡರು. ನಿಮ್ಮ ತಪ್ಪನ್ನು ಎಲ್ಲರೆದು ಒಪ್ಪಿಕೊಳ್ಳುವಿರಿ. ಅಧಿಕ ಆಸ್ತಿಯೇ ನಿಮಗೆ ತೊಂದರೆಯನ್ನು ಉಂಟುಮಾಡಬಹುದು. ನಿದ್ರೆಯಿಲ್ಲದೇ ಚಿಂತೆ ಆರಂಭವಾಗುವುದು. ಅನಪೇಕ್ಷಿತ ವಿಚಾರದ ಬಗ್ಗೆ ಚರ್ಚೆ ಬೇಡ. ಸುಮ್ಮನೇ ಸಮಯವನ್ನು ಹಾಳು ಮಾಡಿಕೊಳ್ಳುವಿರಿ. ಉದ್ಯಮದಲ್ಲಿ ಕಡಿಮೆ ಲಾಭವು ಸಮಾಧಾನ ತರದು. ಉದ್ಯೋಗದಲ್ಲಿ ಒತ್ತಡವನ್ನು ನಿಭಾಯಿಸಲು ಒದ್ದಾಡುವಿರಿ. ಸಂಗಾತಿಗಾಗಿ ಹಣವನ್ನು ವ್ಯಯಿಸುವಿರಿ. ರಾಜಕಾರಣಿಗಳ ಭೇಟಿಯಾಗಿ ನಿಮಗೆ ಬೇಕಾದ ವ್ಯವಸ್ಥೆಯನ್ನು ಮಾಡಿಸಿಕೊಳ್ಳುವಿರಿ. ನಿಮ್ಮ ಸಹಜತೆಯು ಇಂದು ನಾಟಕೀಯದಂತೆ ಕಾಣಿಸುವುದು. ಮನೆಯಲ್ಲಿ ಒಟ್ಟಿಗೇ ಹತ್ತಾರು ಕಾರ್ಯಗಳಲ್ಲಿ ನೀವು ಮಗ್ನರಾಗಿರುವಿರಿ.
ವೃಶ್ಚಿಕ ರಾಶಿ : ಮನೆಯವರ ಜೊತೆ ವಾಗ್ವಾದಕ್ಕೆ ನಿಲ್ಲುವಿರಿ. ಸಂತಾನ ಸಂತೋಷವನ್ನು ನೀವು ಇಂದು ಅನುಭವಿಸುವಿರಿ. ಉದ್ಯೋಗಕ್ಕೆ ಸಂಬಂಧಿಸದಂತೆ ಶುಭವಾರ್ತೆಯೂ ನಿಮ್ಮ ಸಂತೋಷಕ್ಕೆ ಮತ್ತಷ್ಟು ಪುಷ್ಟಿಯನ್ನು ಕೊಡುವುದು. ಅಧಿಕ ಖರ್ಚಿನಂತೆ ಕಾಣುವ ವ್ಯವಹಾರವನ್ನು ನೀವು ಬಿಡುವಿರಿ. ನೀವು ಕಷ್ಟದಲ್ಲಿ ಸುಖವನ್ನು ಕಾಣುವ ಮಾರ್ಗವನ್ನು ಹುಡುಕಿಕೊಳ್ಳುವಿರಿ. ನಿಮ್ಮ ಸುಳಿವು ಸಿಗದೇ ಮನೆಯಲ್ಲಿ ಆತಂಕವಾಹಬಹುದು. ಮಧುರವಾದ ಸಂಬಂಧಗಳಲ್ಲಿ ಒಡಕು ಬರಬಹುದು. ನಿಮ್ಮ ನೋವನ್ನು ಯಾರ ಬಳಿಯಾದರೂ ಹಂಚಿಕೊಂಡು ಸಮಾಧನ ತಂದುಕೊಳ್ಳಿ. ನಿಮ್ಮ ಮನಸ್ಸು ಎಂದಿಗಿಂತ ಹಗುರಾದಂತೆ ಅನ್ನಿಸುವುದು. ಏನನ್ನಾದರೂ ಸಾಧಿಸಬೇಕು ಎಂಬ ಆಸೆ ಬರುವುದು.