Horoscope: ಈ ರಾಶಿಯವರಿಗೆ ಹಳೆಯ ಪ್ರೇಮವು ಬೆಳಕಿಗೆ ಬಂದು ಮುಜುಗರ ಉಂಟಾದೀತು

| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 02, 2023 | 12:30 AM

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ನವೆಂಬರ್​ 02) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರಿಗೆ ಹಳೆಯ ಪ್ರೇಮವು ಬೆಳಕಿಗೆ ಬಂದು ಮುಜುಗರ ಉಂಟಾದೀತು
ಪ್ರಾತಿನಿಧಿಕ ಚಿತ್ರ
Follow us on

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್​ 02) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ಸ್ವಾತೀ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಪಂಚಮೀ, ನಿತ್ಯನಕ್ಷತ್ರ: ಮೃಗಶಿರಾ, ಯೋಗ: ಬ್ರಹ್ಮ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 28 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 02 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 01:43 ರಿಂದ 03:10 ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 06:29 ರಿಂದ 07:56 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:23 ರಿಂದ 10:49ರ ವರೆಗೆ.

ಸಿಂಹ ರಾಶಿ : ವ್ಯಾಪಾರದಲ್ಲಿ ಸ್ಪರ್ಧೆಗಳು ಶುರುವಾಗಿ ನಿಮಗೆ ಆದಾಯ ನಷ್ಟವಾಗಬಹುದು.‌ ಅಪರಿಚಿತರ ಜೊತೆ ಸಲುಗೆ ಬೆಳೆಯಬಹುದು. ಯಾರ ಬಗ್ಗೆಯೂ ಹಗುರಾದ ಮಾತುಗಳನ್ನು ಆಡುವುದು ಬೇಡ. ನಿಮ್ಮದಲ್ಲದ ವಸ್ತುವನ್ನು ಬಳಸಿಕೊಂಡು ಹಾಳು ಮಾಡುವಿರಿ.‌ ಹಳೆಯ ಪ್ರೇಮವು ಬೆಳಕಿಗೆ ಬಂದು ಮುಜುಗರ ಉಂಟಾದೀತು. ಉದ್ಯೋಗದಲ್ಲಿ ಒತ್ತಡ ಸ್ವೀಕರಿಸುವುದು ಅಭ್ಯಾಸವಾಗಿ ಹೋಗುವುದು. ಯಾವುದೇ ಪ್ರಭಾವಕ್ಕೆ ಸಿಕ್ಕಿ ನಿಮ್ಮನ್ನು ಬದಲಿಸಿಕೊಳ್ಳಬೇಕಾಗಬಹುದು. ನಿಮ್ಮ ಮಾನಸಿಕ ಅಸಮಾಧಾನಕ್ಕೆ ದೈವದ ಮೊರೆ ಹೋಗುವುದು ಒಳಿತು. ಆಸ್ತಿಯನ್ನು ಉಳಿಸಿಕೊಳ್ಳುವುದೇ ತಲೆನೋವಾಗಬಹುದು. ಮನೆಯಿಂದ ದೂರವಿದ್ದವರು ಹತ್ತಿರವಾಗಬೇಕು ಎನಿಸಬಹುದು. ಕುಲದೇವರ ಆರಾಧನೆಯಲ್ಲಿ ತೊಡಗುವಿರಿ.

ಕನ್ಯಾ ರಾಶಿ : ಹಲವರ ಒತ್ತಡದ ಕಾರಣ ನೂತನ ಗೃಹನಿರ್ಮಾಣವನ್ನು ಆರಂಭಿಸುವಿರಿ. ಪೂರ್ವಾಪರ ಯೋಚನೆ ಇಲ್ಲದೇ ಒಂದು ಕೆಟ್ಟ ನಿರ್ಧಾರವನ್ನು ತೆಗೆಸುಕೊಳ್ಳುವಿರಿ. ಮಕ್ಕಳ ವಿಷಯದಲ್ಲಿ ನಿರ್ಲಕ್ಷ್ಯ ಬೇಡ. ತಾಯಿ ಆರೋಗ್ಯದಲ್ಲಿ ವ್ಯತ್ಯಾಸವು ಕಾಣಿಸಿಕೊಳ್ಳಬಹುದು. ನಿಮಗೆ ಇಷ್ಟವಾಗದ ಕಾರ್ಯವನ್ನು ಮಾಡಬೇಕಾಗಬಹುದು. ಉದ್ಯೋಗವನ್ನು ನಿರೀಕ್ಷಿತ ಹಂತಕ್ಕೆ ಕೊಂಡೊಯ್ಯಲು ಅಧಿಕ ಶ್ರಮಿಸುವಿರಿ. ವಾತ‌ದೋಷದಿಂದ ನಿಮಗೆ ಕಷ್ಟವಾಗುವುದು. ನಿಮಗೆ ಕೊಟ್ಟ ಜವಾಬ್ದಾರಿಯು ಹಸ್ತಾಂತರ ಆಗಬಹುದು. ಮಕ್ಕಳಿಂದ‌ ನಿಮಗೆ ಪ್ರೀತಿಯಿಂದ ಉಡುಗೊರೆ ಕೊಡುವರು. ಅಧ್ಯಾತ್ಮದಲ್ಲಿ ಮನಸ್ಸು ಹೆಚ್ಚಿರುವುದು. ವಿವಾಹವನ್ನು ತಿರಸ್ಕರಿಸುವಿರಿ.

ತುಲಾ ರಾಶಿ : ನಿಮ್ಮ ಅಂದುಕೊಂಡ ಕಾರ್ಯವು ವೇಗವನ್ನು ಪಡೆಯದೇ ಇರಲು ಹಿತಶತ್ರುಗಳೇ ಕಾರಣವಾಗುವರು. ನಿಮ್ಮನ್ನು ಎದುರಗೆ ಹೊಗಳುವರು. ಅಜಾಗರೂಕತೆಯಿಂದ‌ ಬಿದ್ದು ಗಾಯ ಮಾಡಿಕೊಳ್ಳಬಹುದು. ಕೈಗೊಂಡ ಕಾರ್ಯಗಳಲ್ಲಿ ಪೂರ್ಣ ಜಯವು ಪ್ರಾಪ್ತವಾಗುವುದು. ಪ್ರಾಮಾಣಿಕತೆಗೆ ಸಿಕ್ಕ ಪ್ರಶಂಸೆಯಿಂದ ಇನ್ನಷ್ಟು ಉತ್ಸಾಹ ಇರುವುದು. ಯಾರದೋ ಕಾರ್ಯಕ್ಕೆ ನೀವು ದಂಡಿಸಿ ಕೆಲಸ ಮಾಡಬೇಕಾದೀತು. ಆರ್ಥಿಕತೆಯನ್ನು ಬಲಗೊಳಿಸಲು ಅನ್ಯ ಉದ್ಯೋಗವನ್ನು ಮಾಡಬೇಕಾಗಬಹುದು. ನಿಮ್ಮ ಮಾತುಗಳು ಹಾಸ್ಯದಿಂದ ಕೂಡಿರಲಿದೆ. ಹಠದ ಸ್ವಭಾವದಿಂದ ಸುಲಭವಾಗಿ ಸಿಗುವುದನ್ನು ಕಳೆದುಕೊಳ್ಳುವಿರಿ. ಕಲಾವಿದರಿಗೆ ಉತ್ಸಾಹವು ಕಡಿಮೆ‌ ಇರುವುದು.

ವೃಶ್ಚಿಕ ರಾಶಿ : ಹಿರಿಯರ ಮಾತಿನಂತೆ ಇಂದು ಮನೆಯಲ್ಲಿ ಮಂಗಲ ಕಾರ್ಯವನ್ನು ಮಾಡುವಿರಿ. ಅನಿವಾರ್ಯವಿದ್ದರೂ ಧನವ್ಯಯದ ಕಾರಣ ಖರೀದಿಯನ್ನು ಮುಂದೂಡುವಿರಿ. ಸಾಮಾಜಿಕ‌ ಗೌರವವನ್ನು ಪಡೆಯಲು ಆಸೆ ಇರುವುದು. ತಾಯಿಯ ಪ್ರೀತಿಯಿಂದ ವಂಚಿತರಾಗಬಹುದು. ವಾಹನದಿಂದ ನಿಮಗೆ ಆದಾಯ ಸಿಗುವುದು. ಉದ್ಯೋಗದ ಕಾರಣಕ್ಕೆ ದೂರದ ಊರಿಗೆ ಹೋಗಬೇಕಾಗಬಹುದು. ಪ್ರಯಾಣದ ಮುಂಜಾಗ್ರತೆಯ ಕ್ರಮವಿರಲಿ‌. ಗೊತ್ತಿಲ್ಲದ ಪ್ರದೇಶಕ್ಕೆ ಒಂಟಿಯಾಗಿ ಹೋಗಬೇಕಾಗಬಹುದು. ಹೊಸ ಉದ್ಯಮವನ್ನು ಮಾಡಲು ಆಪ್ತರ ಅಥವಾ ಅನುಭವಿಗಳ ಸಲಹೆ ಬೇಕಾದೀತು.‌ ದಾಂಪತ್ಯದಲ್ಲಿನ ಒಡಕು ಎಲ್ಲರಿಗೂ ಗೊತ್ತಾಗುವ ಮೊದಲೇ ಸರಿ ಮಾಡಿಕೊಳ್ಳಿ. ಆಕಸ್ಮಿಕ ವಾರ್ತೆಯು ನಿಮ್ಮನ್ನು ಸ್ತಬ್ಧಗೊಳಿಸಬಹುದು. ಆದಾಯ ಹೆಚ್ಚಾಗಲಿ ದೇವರನ್ನೊಂದೇ ಪ್ರಾರ್ಥಿಸಿದರೆ ಸಾಲದು, ಪುರುಷಪ್ರಯತ್ನವೂ ಬೇಕು.