AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nithya Bhavishya: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ ಭವಿಷ್ಯ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಆಗಸ್ಟ್ 03) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Nithya Bhavishya: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ ಭವಿಷ್ಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 03, 2023 | 12:25 AM

Share

ಇಂದಿನ ನಿಮ್ಮ ರಾಶಿ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಆಗಸ್ಟ್ 03) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಪುಷ್ಯಾ, ಮಾಸ: ಅಧಿಕ ಶ್ರಾವಣ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಶತಭಿಷಾ, ಯೋಗ: ಆಯುಷ್ಮಾನ್, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 17 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 59 ನಿಮಿಷಕ್ಕೆ. ರಾಹು ಕಾಲ ಮಧ್ಯಾಹ್ನ 02:14 ರಿಂದ 03:49ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:17 ರಿಂದ 07:53ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:28 ರಿಂದ 11:03ರ ವರೆಗೆ.

ಸಿಂಹ ರಾಶಿ: ಹಣಕಾಸಿನ ವಿಚಾರದಲ್ಲಿ ನಿಮಗೆ ಮೋಸವಾಗಲಿದ್ದು, ಅದರಲ್ಲೂ ನಿಮ್ಮವರೇ ಅದನ್ನು ಮಾಡಿದ್ದು ಎಂಬ ವದಂತಿಯು ನಿಮಗೆ ಸಹಿಸಲು ಅಸಾಧ್ಯವಾದುದಾಗಿದೆ. ಎಂದೋ ನಿರೀಕ್ಷಿಸಿದ್ದ ಬಡ್ತಿಯು ಇಂದು ಸಿಗಲಿದೆ. ಯಾರಾದರೂ ಹುಳಿ ಹಿಂಡುವ ಕೆಲಸಕ್ಕೆ ಬರಬಹುದು. ಮಾತಿನ ನಿಯಂತ್ರಣವು ತಪ್ಪಿ‌ಹೋಗಲಿದೆ. ವಿಳಂಬಕ್ಕಾಗಿ ನೀವು ವ್ಯಥೆ ಪಡಬೇಕಾದೀತು. ನಿಮಗೆ ಧೈರ್ಯವನ್ನು ತುಂಬಲು ಸಂಗಾತಿಯ ಸಹಾಯವನ್ನು ಪಡೆಯಿರಿ. ಬಂಧುಗಳು ನಿಮ್ಮ ಮನೆಗೆ ಬರಲಿದ್ದಾರೆ. ನಿದ್ರಾಹೀನತೆಯಿಂದ ನಿಮಗೆ ಕೆಲವು ತೊಂದರೆಗಳು ಆಗಬಹುದು. ಅನಪೇಕ್ಷಿತ ಖರ್ಚನ್ನು ಮಾಡಬೇಕಾದೀತು.

ಕನ್ಯಾ ರಾಶಿ: ಪ್ರೇಮಪ್ರಕರಣವು ನಿಮಗೆ ದುಃಖವನ್ನು ಕೊಟ್ಟೀತು. ನಿಮ್ಮನ್ನು ನಿಂದಿಸುವವರ ವಿರುದ್ಧ ಅತಿಯಾದ ಕೋಪವು ಬರಲಿದೆ. ಶತ್ರುಗಳೂ ನಿಮಗೆ ಉಪದೇಶ ಮಾಡುವರು. ಮಕ್ಕಳಿಗಾಗಿ ನೀವು ಬದಲಾವಣೆಯನ್ನು ಮಾಡಿಕೊಳ್ಳುವಿರಿ. ಹಣಕಾಸಿನ ವಿಚಾರದಲ್ಲಿ ನೀವು ಬಹಳ ಅನಾದರ ತೋರುವುರಿ. ವಿದ್ಯಾರ್ಥಿಗಳಿಂದ ಹೆಚ್ಚಿನ ನಿರೀಕ್ಷೆಯು ಇರಲಿದೆ. ನಿಮಗೆ ಬರುವ ಸಮಸ್ಯೆಗಳು ನಗಣ್ಯವಾಗಿದ್ದರೂ ಅದನ್ನು ದೊಡ್ಡ ಮಾಡಿಕೊಳ್ಳುವಿರಿ. ಆರೋಗ್ಯವು ನಿಮಗೆ ವರವಾಗಿದ್ದರೂ ಅದು ಕೆಲವು ಸಮಯ ತೊಂದರೆಯನ್ನು ಕೊಡುವುದು. ನಿಮ್ಮವರನ್ನು ನೀವು ಮರೆಯುವಿರಿ. ಒಳ್ಳೆಯವರ ಸಹವಾಸವು ಸಿಗಬಹುದು.

ತುಲಾ ರಾಶಿ: ಮಕ್ಕಳು ವಿದ್ಯಾಭ್ಯಾಸದಲ್ಲಿ ಹಿನ್ನಡೆಯನ್ನು ಕಂಡು ಪಾಲಕರಿಗೆ ಆತಂಕವಾಗಬಹುದು. ಸ್ನೇಹಿತರಿಂದ ಉಡುಗೊರೆಗಳು ಸಿಗಬಹುದು. ತಾಯಿಯ ಪ್ರೀತಿಯು ನಿಮಗೆ ಹೆಚ್ಚು ಸಿಗುವುದು. ಇಂದು ನಿಮ್ಮ ಕೋಪವನ್ನು ನಿಯಂತ್ರಣಕ್ಕೆ ತಂದುಕೊಳ್ಳುವಿರಿ. ನಿಮ್ಮ ನಡವಳಿಕೆಯಯನ್ನು ಸರಿಮಾಡಿಕೊಳ್ಳಲು ಪ್ರಯತ್ನಿಸುವಿರಿ. ಸಂಗಾತಿಯ ಜೊತೆ ಕಲಹವಾಡಿ ಅನಂತರ ಪಶ್ಚಾತ್ತಾಪಪಡುವಿರಿ‌. ನಿಮ್ಮ ಯೋಜನೆಯನ್ನು ಸರಿಯಾಗಿ ನಿರ್ವಹಿಸಲು ಕಷ್ಟವಾದೀತು. ನಿಮಗೆ ಸಮ್ಮಾನಗಳು ಸಿಗುವ ಸಾಧ್ಯತೆ ಇದೆ. ಮಕ್ಕಳ ಜೊತೆ ಇಂದು ಕಾಲವನ್ನು ಕಳೆಯುವುದು ನಿಮಗೆ ಇಷ್ಟವಾದೀತು. ಸಣ್ಣ ವಿಚಾರದಲ್ಲಿ ನಿಮಗೆ ಇನ್ನೊಬ್ಬರ ಜೊತೆ ಕಲಹವಾದೀತು. ಒಳ್ಳೆಯ ಸಮಯವನ್ನು ನೀವು ನಿರೀಕ್ಷಿಸುವಿರಿ.

ವೃಶ್ಚಿಕ ರಾಶಿ: ಸಾಲಬಾಧೆಯಿಂದ ನಿಮಗೆ ಬಹಳ ತೊಂದರೆಯಾಗಲಿದೆ. ನಿಮಗೆ ಸಹಾಯವನ್ನು ಕೇಳಲು ಮುಜುಗರವಾದೀತು. ವ್ಯಾಪಾರದ ಸಲುವಾಗಿ ದೂರಪ್ರಯಾಣವನ್ನು ಮಾಡಬೇಕಾಗಬಹುದು. ಇಂದು ನೀವು ಒತ್ತಡ ಮಾಡಿಕೊಳ್ಳಬಾರದೆಂದು ಅಂದುಕೊಂಡಿದ್ದರೂ ಸಂದರ್ಭವು ಅದೇ ರೀತಿ ಬರುವುದು. ಆರೋಗ್ಯವನ್ನು ಗಟ್ಟಿಯಾಗಿಸಿಕೊಳ್ಳಲು ನೀವು ಪ್ರಯತ್ನಿಸಬೇಕು.‌ ಉದ್ಯಮದಲ್ಲಿ ಹೊಸ ಮೈಲುಗಲ್ಲನ್ನು ಸೃಷ್ಟಿಸುವಿರಿ. ನಿಮ್ಮ ನೌಕರರು ನೀವು ಹೇಳಿದ ಕೆಲಸವನ್ನು ಸರಿಯಾಗಿ ಮಾಡದೇ ಇರಬಹುದು. ನಿಮ್ಮ ಮಾತನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಸುಬ್ರಹ್ಮಣ್ಯನ ಆರಾಧನೆಯನ್ನು ನೀವು ಮಾಡಿಕೊಂಡು ಮುಂದುವರಿಯಿರಿ.

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ