Horoscope: ಈ ರಾಶಿಯವರು ಆಪ್ತರಿಗೆ ಕೊಟ್ಟ ಹಣವು ಮರಳಿ ಬಾರದೇ ಇರಬಹುದು

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ನವೆಂಬರ್​ 03) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರು ಆಪ್ತರಿಗೆ ಕೊಟ್ಟ ಹಣವು ಮರಳಿ ಬಾರದೇ ಇರಬಹುದು
ಪ್ರಾತಿನಿಧಿಕ ಚಿತ್ರ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 03, 2023 | 12:30 AM

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್​ 03) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ಸ್ವಾತೀ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಆರ್ದ್ರಾ, ಯೋಗ: ಐಂದ್ರ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 29 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 02 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:49 ರಿಂದ ಮಧ್ಯಾಹ್ನ 12:16 ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:09 ರಿಂದ 04:36 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:56 ರಿಂದ 09:23ರ ವರೆಗೆ.

ಸಿಂಹ ರಾಶಿ : ಇಂದು ಹಣದ ಬಗ್ಗೆ ನಿಮಗೆ ಲೆಕ್ಕವೇ ಸಿಗದೇ ಖರ್ಚಾಗುವುದು. ಆಪ್ತರಿಗೆ ಕೊಟ್ಟ ಹಣವು ಮರಳಿ ಬಾರದೇ ಇರಬಹುದು. ಉನ್ನತ ವಿದ್ಯಾಭ್ಯಾಸಕ್ಕೆ ಮಕ್ಕಳಿಗೆ ಹಣವನ್ನು ಹೊಂದಿಸುವಿರಿ. ನಿಮ್ಮ ಬಗ್ಗೆ ಮಾತನಾಡುವವರಿಗೆ ಈಗಲೇ ಉತ್ತರ ಕೊಡುವುದು ಬೇಡ. ನಿಮ್ಮ ಒರಟು ಸ್ವಭಾವವು ಇಷ್ಟವಾಗದೇ ಹೋಗಬಹುದು. ಸುಮ್ಮನೇ ಒಂಟಿಯಾಗಿ ಇದ್ದು ಹತ್ತಾರು ಯೋಚನೆಗಳು ಬರಬಹುದು. ಬಂಧುಗಳಿಂದ‌ ಉಡುಗೊರೆ ಸಿಗಲಿದೆ. ನಿಮ್ಮ ಮಾತಿನ‌ ಮೇಲೆ ನಂಬಿಕೆಯು ಕಷ್ಟವಾದೀತು. ಅಪಘಾತ ಭೀತಿಯು ಕಾಡಬಹುದು. ಕಲಾವಿದರು ಅವಕಾಶವನ್ನು ಹೆಚ್ಚು ಪಡೆಯಬಹುದು. ಹೂಡಿಕೆಯನ್ನು ಮಿತಿಯಲ್ಲಿ ಮಾಡುವುದು ಸೂಕ್ತ. ಅತಿಯಾದ ಓಡಾಟದಿಂದ ಆಯಾಸವಾಗುವುದು.

ಕನ್ಯಾ ರಾಶಿ : ನಿಮ್ಮ ವಿದ್ಯಾಭ್ಯಾಸದಲ್ಲಿ ಹಿನ್ನಡೆ ಹಾಗೂ ಓದಿನ ಕಡೆ ಗಮನವು ಇಲ್ಲದಿರುವುದು ಪಾಲಕರಿಗೆ ಗೊತ್ತಾಗಿ ಬೇಸರವಾಗಬಹುದು. ಯಾವುದೇ ಉದ್ಯಮಕ್ಕೂ ಕಾನೂನಿನ ವಿಷಯದಲ್ಲಿ ನಿಮಗೆ ಬೇಕಾದ ಮಾಹಿತಿಯನ್ನು ಪಡೆದು ಮುಂದುವರಿಯಿರಿ. ಕೆಲವು ಘಟನೆಗಳು ನಿಮ್ಮ ಮನಸ್ಸನ್ನು ಚಂಚಲಗೊಳಿಸಬಹುದು. ಸ್ಪರ್ಧೆಯಲ್ಲಿ ಸೋಲಾಗುವ ಸಾಧ್ಯತೆ ಇದೆ. ಮಹಿಳೆಯರು ಸ್ವ ಉದ್ಯಮದಿಂದ ಲಾಭವನ್ನು ಮಾಡಿಕೊಳ್ಳುವರು. ಪ್ರೀತಿಯು ಅಪನಂಬಿಕೆಯಿಂದ ನಾಶವಾಗಬಹುದು. ಆಪ್ತರ ಸಹಾಯದಿಂದ ನಿಮಗೆ ಉದ್ಯೋಗವು ಸಿಗಲಿದೆ. ಭವಿಷ್ಯದ ಯೋಜನೆಯನ್ನು ಸರಿಯಾಗಿ ತೀರ್ಮಾನಿಸಿಕೊಳ್ಳುವಿರಿ. ಪಾರದರ್ಶಕ ಕಾರ್ಯವು ನಿಮ್ಮ ಮೇಲಿನ‌ ಅನುಮಾನವನ್ನು ದೂರಮಾಡುವುದು.

ತುಲಾ ರಾಶಿ : ಹಳೆಯ ವ್ಯಾಧಿಯು ಮತ್ತೆ ಕಾಣಸಿಕೊಳ್ಳುವುದು. ಉದ್ಯೋಗದ ವಿಚಾರವನ್ನು ಬಹಳ ಗೌಪ್ಯವಾಗಿ ಇಡುವಿರಿ. ಸಲ್ಲದ ಮಾತನ್ನು ಹಿರಿಯರಿಗೆ ಹೇಳುವಿರಿ. ಅಹಂಕಾರವು ನಿಮ್ಮನ್ನು ಕೆಳಗೆ ದೂಡಬಹುದು. ಸರಳತೆಯನ್ನು ರೂಢಿಸಿಕೊಳ್ಳುವ ಬಗ್ಗೆ ಆಲೋಚನೆ ಇರಲಿ. ಅನಗತ್ಯಗಳ ಅಪೇಕ್ಷೆಯಿಂದ ಸಂಗಾತಿಯ ಸಂಪತ್ತನ್ನು ಖಾಲಿ‌ಮಾಡುವಿರಿ. ನಿಮ್ಮ ಮನಸ್ಸು ಕಾರ್ಯದಲ್ಲಿ ಮಗ್ನವಾಗಿ ಇರದು. ಆರಂಭಿಸಿದ ಉದ್ಯೋಗದಲ್ಲಿ ಯಾವ ವಿಘ್ನವೂ ಬಾರದಂತೆ ಪ್ರಾರ್ಥಿಸಿ. ತಂದೆಯ ಮಾತು ನಿಮಗೆ ಕಿರಿಕಿರಿ ಎನಿಸಬಹುದು. ನಿಮ್ಮ ಆದಾಯದ ಮೂಲವಾದ ವ್ಯಾಪಾರದಲ್ಲಿ ಲಾಭವಿರುವುದು. ಬಹಳ ದಿಗಳಿಂದ ಅನುಭವಿಸುತ್ತಿರುವ ರೋಗಕ್ಕೆ ಔಷಧವು ಸಿಗುವುದು. ಸಹೋದ್ಯೋಗಿಗಳಿಗೆ ಸಿಕ್ಕ ಪ್ರಶಂಸಯಿಂದ‌ ಅಸೂಯೆಯಾಗಬಹುದು.

ವೃಶ್ಚಿಕ ರಾಶಿ : ಮನಮೋಹಕ ಸ್ಥಳಗಳಿಗೆ ಹೋಗುವಿರಿ. ಅನಿರೀಕ್ಷಿತವಾಗಿ ಸಿಕ್ಕ ಬಂಧುಗಳನ್ನು ಮನೆಗೆ ಆಮಂತ್ರಿಸುವಿರಿ. ಪ್ರೀತಿಯಲ್ಲಿ ನಂಬಿಕೆ ಕಡಿಮೆ ಆಗಬಹುದು. ನಿರುಪಯುಕ್ತ ವಸ್ತುಗಳನ್ನು ದಾನರೂಪವಾಗಿ ಕೊಡುವಿರಿ. ನಿಮ್ಮ ಎಲ್ಲ ಕಾರ್ಯಗಳೂ ವಿಳಂಬವಾಗಿ ಅಧಿಕಾರಿಗಳಿಂದ ಹೇಳಿಸಿಕೊಳ್ಳುವಿರಿ. ಇಂದು ಸ್ತ್ರೀಯರು ಅಲಂಕಾರಲ್ಲಿ ಹೆಚ್ಚು ತೊಡಗಿಕೊಳ್ಳುವರು. ಮಾಡಿದ ತಪ್ಪಿನಿಂದ ಪಶ್ಚಾತ್ತಾಪ ಪಡುವಿರಿ. ಎಷ್ಟೇ ಪ್ರಯತ್ನಿಸಿದರೂ ಕೊಟ್ಟ ಹಣವು ನಿಮಗೆ ಸಿಗದು. ಅದರ ಆಸೆಯನ್ನು ಬಿಡುವಿರಿ. ನಿಮ್ಮವರ ಮೇಲೆ ನೀವು ಇಟ್ಟ ನಂಬಿಕೆಯು ಹುಸಿಯಾಗುವುದು. ಮಕ್ಕಳ ವಿವಾಹಕ್ಕೆ ಅತಿಯಾದ ಪ್ರಯತ್ನದಿಂದ‌ ಫಲವನ್ನು ಕಾಣುವಿರಿ. ಸಹೋದರನ‌ ಆರೋಗ್ಯವು ಕೆಡಬಹುದು.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್