Horoscope: ರಾಶಿಭವಿಷ್ಯ, ಈ ರಾಶಿಯವರಿಗೆ ವೈವಾಹಿಕ ಜೀವನವನ್ನು ನಡೆಸಲು ಕಷ್ಟ ಎನಿಸಬಹುದು

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಅಕ್ಟೋಬರ್ 04)) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ರಾಶಿಭವಿಷ್ಯ, ಈ ರಾಶಿಯವರಿಗೆ ವೈವಾಹಿಕ ಜೀವನವನ್ನು ನಡೆಸಲು ಕಷ್ಟ ಎನಿಸಬಹುದು
ರಾಶಿ ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 04, 2023 | 12:30 AM

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ಅಕ್ಟೋಬರ್ 04) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಷಷ್ಠೀ, ನಿತ್ಯನಕ್ಷತ್ರ: ರೋಹಿಣೀ, ಯೋಗ: ಸಿದ್ಧಿ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06-22ಕ್ಕೆ, ಸೂರ್ಯಾಸ್ತ ಸಂಜೆ 06 – 19ಕ್ಕೆ, ರಾಹು ಕಾಲ ಮಧ್ಯಾಹ್ನ 12:21 – 01:51ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 07:53 – 09:22ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 10:52 – 12:21ರ ವರೆಗೆ.

ಸಿಂಹ ರಾಶಿ : ವೈವಾಹಿಕ ಜೀವನವನ್ನು ನಡೆಸಲು ನಿಮಗೆ ಕಷ್ಟ ಎನಿಸಬಹುದು. ಸಂಗಾತಿಯೂ ನಿಮಗೆ ಮಾನಸಿಕವಾಗಿ ಘಾಸಿ ಮಾಡಬಹುದು. ನಿಮ್ಮ ಮನಸ್ಸಿನ ತಾದಾತ್ಮ್ಯದಿಂದ ನಿಮಗೆ ಕಷ್ಟದ ಪೂರ್ಣ ಪ್ರಭಾವವು ನಿಮ್ಮ‌ ಮೇಲೆ ಆಗದೇಹೋದೀತು. ಮಕ್ಕಳಿಗೆ ಶಿಸ್ತನ್ನು ಕಲಿಸಲು ನಿಮಗೆ ಆಗದೇ ಹೋದೀತು. ನಿಮ್ಮ ಇಂದಿನ ಮುಖ್ಯ ಕೆಲಸವೇ ಗೌಣವಾಗಬಹುದು. ಪಿತ್ರಾರ್ಜಿತ ಆಸ್ತಿಯನ್ನು ಪಡೆಯಲ್ಲು ಪತ್ನಿಯಿಂದ ಪ್ರಚೋದಿತರಾಗುವಿರಿ. ಉದ್ಯೋಗದ ಪಡೆಯಲು ನೀವು ಕಾದು ಸಮಯವನ್ನು ಹಾಳು ಮಾಡುವಿರಿ. ನೀವು ಮಾತನ್ನು ಕಡಿಮೆ ಮಾಡುವುದು ಉತ್ತಮ. ಕೂಡಿಬರುವ ವಿವಾಹಭಾಗ್ಯವನ್ನು ನೀವು ಒಪ್ಪಿಕೊಳ್ಳುವಿರಿ. ಆತುರದಿಂದ ಏನಾದರೂ ಅಚಾತುರ್ಯವನ್ನು ಮಾಡಿಕೊಳ್ಳಬಹುದು. ಧಾರ್ಮಿಕ ವಿಚಾರದ ಬಗ್ಗೆ ಆಸಕ್ತಿ ಹೆಚ್ಚಾಗುವುದು.

ಕನ್ಯಾ ರಾಶಿ : ನಿಮಗೆ ಅನಾಥಪ್ರಜ್ಞೆಯು ಕಾಡಲಿದ್ದು ದುಃಖವು ಉಮ್ಮಳಿಸಿ ಬರವುದು. ಇಂದಿನ ದೂರಪ್ರಯಾಣವು ನಿರಾಶಾದಾಯಕವಾಗಿದ್ದು ಎಲ್ಲರನ್ನೂ ಹೀಗಳೆಯುವಿರಿ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಗೊಂದಲವು ನಿವಾರಣೆಯಾಗುವುದು. ನಿಮ್ಮ ನಿರೀಕ್ಷೆಯ ಸಮಯವು ಬಾರದೇ ನಿಮಗೆ ಬೇಸರವಾಗುವುದು. ಅತಿಯಾದ ಚಿಂತೆಯಿಂದ ಆರೋಗ್ಯವನ್ನು ಹಾಳು ಮಾಡಿಕೊಳ್ಳುವಿರಿ. ಬೇಕಾದಷ್ಟು ಸಂಪತ್ತಿದ್ದರೂ ನಿಮಗೆ ಸರಿಯಾದ ನೆಮ್ಮದಿಯ ಸಿಗದು. ಇಂದು ನೀವು ಕೃತಜ್ಞತೆಯನ್ನು ಮರೆಯುವಿರಿ. ಸಂಬಂಧಗಳ ಮಹತ್ತ್ವವನ್ನು ನೀವು ಅರಿತುಕೊಳ್ಳಲಾರಿರಿ. ವಿಶ್ವಾಸಕ್ಕೆ ಘಾಸಿಯಾಗದಂತೆ ನಡೆದುಕೊಳ್ಳುವಿರಿ. ಅಧಿಕಾರಿಗಳು ನಿಮಗೆ ತೊಂದರೆಯನ್ನು ಕೊಡಬಹುದು. ಯಾರೂ ನಿಮ್ಮ ಮಾತಿಗೆ ಲಕ್ಷ್ಯ ಕೊಡದೇಹೋಗಬಹುದು.

ತುಲಾ ರಾಶಿ : ಸಮಯದ ದುರುಪಯೋಗವನ್ನು ಮಾಡಿಕೊಳ್ಳುವಿರಿ. ನಿಮಗೆ ಕಛೇರಿಯಲ್ಲಿ ಪ್ರಶಂಸೆಯು ಸಿಗಬಹುದು. ಕೆಲವರು ನಿಮ್ಮ ಬಗ್ಗೆ ಆಡಿಕೊಳ್ಳಬಹುದು. ವಿಶ್ವಾಸಕ್ಕೆ ಯೋಗ್ಯವಾದ ಕೆಲಸವನ್ನು ಮಾಡುವಿರಿ. ಮಾನಸಿಕ ಅಶಾಂತಿಗೆ ನಿಮ್ಮಲ್ಲಿಯೇ ಮದ್ದು ಇರುವುದು. ನಿಮ್ಮ ಶಿಸ್ತಿನ ಜೀವನವನ್ನು ಯಾರೂ ಕೇಳರು. ಹಣದ ವ್ಯವಹಾರವನ್ನು ಆಪ್ತರ ಜೊತೆ ಸೇರಿ ಮಾಡುವುದು ಉತ್ತಮ. ನಂಬಿಕಸ್ಥರನ್ನು ಮಾತ್ರ ನಿಮ್ಮ ಹತ್ತಿರ ಸೇರಿಸಿಕೊಳ್ಳುವಿರಿ. ಎಲ್ಲ ವಿಚಾರಕ್ಕೂ ನೀವು ಇನ್ನೊಬ್ಬರನ್ನು ಹಗುರಾಗಿ ಕಾಣುವಿರಿ. ಬಿಡುವಿನ ಸಮಯದಲ್ಲಿ ನಿಮ್ಮ ಕಾರ್ಯವನ್ನು ಮಾಡಿಕೊಳ್ಳುವಿರಿ. ಸ್ವಂತ ಉದ್ಯಮವನ್ನು ಆರಂಭಿಸಲು ಚಿಂತಿಸುವಿರಿ. ನಿಮ್ಮ ಕೆಲವು ಮಾತುಗಳು ಕುಟುಂಬದ ಗೌರವವನ್ನು ತಗ್ಗಿಸೀತು. ಹೆಚ್ಚು ಆಹಾರದ ಸೇವೆಯಿಂದ ಕಷ್ಟವಾದೀತು. ಇಂದು ಭೂಮಿಯ ವ್ಯವಹಾರದ ಕಡೆ ಗಮನ ಹರಿಸಲು ಇಷ್ಟವಾಗದು.

ವೃಶ್ಚಿಕ ರಾಶಿ : ಮಕ್ಕಳಿಗೆ ಮನೆಯ ಜವಾಬ್ದಾರಿಯನ್ನು ಕೊಟ್ಟು ನಿಶ್ಚಿಂತರಾಗಲು ಇಷ್ಟಪಡುವಿರಿ. ವೃತ್ತಿಯಲ್ಲಿ ಕಾರ್ಯವು ಸರಿಯಾಗದೇ ಸಂಕಷ್ಟಕ್ಕೆ ಬೀಳುವಿರಿ. ಅಧಿಕಾರಿಗಳಿಂದ ನಿಮಗೆ ಅಪಮಾನವೂ ಆದೀತು. ವಿದ್ಯಾಭ್ಯಾಸದ‌ ಸಮಸ್ಯೆಯನ್ನು ನೀವು ಬಗೆಹರಿಸಿಕೊಳ್ಳುವಿರಿ. ನಿಮ್ಮ ಸಹಜ ವರ್ತನೆಯೂ ನಿಮ್ಮರಿಗೆ ಸಿಟ್ಟನ್ನು ತರಿಸಬಹುದು. ಪಕ್ಷಪಾತ ಮಾಡದೇ ನೀವು ಸಮಾನಭಾವದಿಂದ ಕಾಣಬೇಕಾದೀತು.‌ ದೇಹವನ್ನು ದಂಡಿಸಿ ಹೆಚ್ಚು ಲಾಭವನ್ನು ಗಳಿಸುವಿರಿ. ನಿಮಗೆ ಇಂದು ಕಾರ್ಯಗಳನ್ನು ಮಾಡಿಸಲು ಆಗದು. ನಿಮ್ಮ‌ ಮಾತನ್ನು ಯಾರೂ ಕೇಳರು. ಉದರಕ್ಕೆ ಸಂಬಂಧಿಸಿದ ರೋಗವು ಕಾಣಿಸಿಕೊಂದು ಒದ್ದಾಡುವಿರಿ. ಇನ್ನೊಬ್ಬರ ಜೊತೆ ನಿಮ್ಮನ್ನು ತುಲನೆ ಮಾಡಿಕೊಳ್ಳುವುದು ಬೇಡ. ನಿಮಗೆ ನೆಮ್ಮದಿಯು ಕಡಿಮೆ ಆಗುವುದು.

-ಲೋಹಿತಶರ್ಮಾ – 8762924271 (what’s app only)

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ