Horoscope: ದಿನಭವಿಷ್ಯ, ಈ ರಾಶಿಯವರು ನೂತನ ಕಾರ್ಯದ ಆರಂಭಕ್ಕೆ ಮೊದಲು ಹಿರಿಯರ ಸಲಹೆ ಪಡೆಯಿರಿ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಸೆಪ್ಟೆಂಬರ್ 04) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ, ಈ ರಾಶಿಯವರು ನೂತನ ಕಾರ್ಯದ ಆರಂಭಕ್ಕೆ ಮೊದಲು ಹಿರಿಯರ ಸಲಹೆ ಪಡೆಯಿರಿ
ರಾಶಿಭವಿಷ್ಯImage Credit source: iStock Photo
Follow us
TV9 Web
| Updated By: Rakesh Nayak Manchi

Updated on: Sep 04, 2023 | 12:30 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 4 ಸೋಮವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ನಿಜ ಶ್ರಾವಣ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಅಶ್ವಿನೀ, ಯೋಗ: ವೃದ್ಧಿ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ರಿಂದ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ರಿಂದ 41 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 07:54 ರಿಂದ 09:27ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 10:59 ರಿಂದ ಮಧ್ಯಾಹ್ನ 12:32ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:04 ರಿಂದ 03:37 ರ ವರೆಗೆ.

ಸಿಂಹ ರಾಶಿ: ಅಪಮಾನದಿಂದಾಗಿ ಆದ ದುಃಖವನ್ನು ಆಪ್ತರ ಬಳಿ ಮಾತ್ರ ಹಂಚಿಕೊಳ್ಳಿ. ಶ್ರಮಪಟ್ಟು ಆರಂಭಿಸಿದ ಕಾರ್ಯಗಳು ವಿರೋಧಿಗಳ ಪಿತೂರಿಯಿಂದ ಅರ್ಧಕ್ಕೆ ನಿಲ್ಲಬಹುದು. ನಿಮ್ಮ ದೌರ್ಬಲ್ಯವು ಶತ್ರುಗಳಿಗೆ ಅಸ್ತ್ರವಾಗಬಹುದು. ಯಾವಾಗಲೂ ಯೋಚಿಸದ ಸಂಬಂಧಗಳು ನಿಮ್ಮ ಹತ್ತಿರ ಬರಬಹುದು. ಜೀವನ ಸಂಗಾತಿಯ ಜೊತೆ ಯಾವುದಾದರೂ ವಿಚಾರಕ್ಕೆ ಕಲಹವಾಗಬಹುದು. ನೂತನ ಕಾರ್ಯದ ಆರಂಭಕ್ಕೆ ಮೊದಲು ಯಾರಾದರೂ ಹಿರಿಯರ ಸಲಹೆಯನ್ನು ಪಡೆಯಿರಿ.

ಕನ್ಯಾ ರಾಶಿ: ನಿಮ್ಮ ಜಾಣ್ಮೆಯಿಂದ ಇಂದಿನ ಆದಾಯವನ್ನು ಹೆಚ್ಚುಮಾಡಿಕೊಳ್ಳುವಿರಿ. ನಿಮ್ಮ ಅಸಹಾಯಕತೆಯನ್ನು ಮನೆಯವರ ಮೇಲೆ ಹಾಕುವ ಸಾಧ್ಯತೆ ಇದೆ. ಬಂಧುಗಳ ಜೊತೆ ನಿಮ್ಮ ಸಂಬಂಧವು ಗಟ್ಟಿಯಾಗುವುದು. ಆದಾಯಕ್ಕೆ ತಕ್ಕಂತೆ ಜೀವನ ಇಟ್ಟುಕೊಳ್ಳಿ. ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಲು ಆಸಕ್ತಿ ಇರುವುದು. ಮನೆಯ ಅಲಂಕಾರದ ವಸ್ತುಗಳ ಮೇಲೆ ಹಣವನ್ನು ಖರ್ಚು ಮಾಡಬಹುದು. ನಿಮ್ಮ ಹೊಸ ವಾಹನ ಖರೀದಿಯ ಕನಸು ನನಸಾಗಬಹುದು.

ತುಲಾ ರಾಶಿ: ಕುಟುಂಬದಲ್ಲಿ ನಡೆಯಬಹುದಾದ ಅನಿರೀಕ್ಷಿತ ಘಟನೆಗೆ ನಿಮ್ಮಿಂದ ಹೆಚ್ಚಿನ ಹಣ ಖರ್ಚು ಮಾಡುವ ಸನ್ನಿವೇಶವು ಬರಬಹುದು. ಹೂಡಿಕೆಯಲ್ಲಿ ಉತ್ಸಾಹವಿರುವ ನೀವು ವಿವೇಚನೆಯಿಂದ ಹೂಡಿಕೆ ಮಾಡಿ. ಪ್ರತಿ ಕೆಲಸಕ್ಕೂ ಬೇರೆಯವರನ್ನು ಅವಲಂಬಿಸಿ ಆರ್ಥಿಕ ನಷ್ಟವನ್ನು ಎದುರಿಸಬೇಕಾಗುವುದು. ನಿಮ್ಮ ಮೇಲೆ ಪ್ರಾಬಲ್ಯ ಸಾಧಿಸಲು ಯಾರಿಗೂ ಬಿಡಬೇಡಿ. ನೀವು ಮುಖ್ಯವಾದ ಅವಕಾಶಗಳಿಂದ ವಂಚಿತರಾಗುವಿರಿ. ವ್ಯವಹಾರಕ್ಕೆ ಸಂಬಂಧಿಸಿದ ಬಹಳಷ್ಟು ಹೊಸ ಅವಕಾಶಗಳು ಬರುತ್ತವೆ.

ವೃಶ್ಚಿಕ ರಾಶಿ: ಇಂದಿನ ನಿಮ್ಮ ಕಾರ್ಯದಲ್ಲಿ ತಾಳ್ಮೆ ಅಗತ್ಯವಾಗಿ ಬೇಕಾಗುವುದು. ಶತ್ರುವನ್ನು ಉಪಾಯದಿಂದ ಜಯಿಸಿ. ಹೆಚ್ಚಲಿರುವ ಆದಾಯದಿಂದ ನಿಮ್ಮ ಆರ್ಥಿಕ ಪರಿಸ್ಥಿತಿ ಚೆನ್ನಾಗಿ ಆಗುವುದು. ವಿದ್ಯಾರ್ಥಿಗಳು ತಮಗೆ ಬರುವ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವರು. ಅಮೂಲ್ಯ ವಸ್ತುಗಳನ್ನು ಕಾಣೆಯಾಗದಂತೆ ನೋಡಿಕೊಳ್ಳಿ. ನಿಮ್ಮ ಜೀವನದಲ್ಲಿ ಹೊಸ ವ್ಯಕ್ತಿಯು ಬರುವುದರಿಂದ ಸಂತೋಷವಾಗಿ ಇರುವಿರಿ. ಆರೋಗ್ಯವು ಚೆನ್ನಾಗಿ ಇರಲಿದ್ದು ಆಲಸ್ಯವನ್ನು ಬಿಡಬೇಕಾದೀತು. ಈ ದಿನ ತಂದೆ ತಾಯಿಯ ಬೆಂಬಲವು ಪೂರ್ಣವಾಗಿ ಇರುವುದು. ಅವರಿಂದ ಆರ್ಥಿಕ ಸಹಾಯವೂ ದೊರೆಯಬಹುದು.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ