ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 5 ಮಂಗಳವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ನಿಜ ಶ್ರಾವಣ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ಪಂಚಮೀ, ನಿತ್ಯನಕ್ಷತ್ರ: ಭರಣೀ, ಯೋಗ: ಧ್ರುವ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 40 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:36 ರಿಂದ 05:09 ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:27 ರಿಂದ 10:59ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:31 ರಿಂದ 02:04ರ ವರೆಗೆ.
ಸಿಂಹ ರಾಶಿ: ನಿಮಗೆ ಗೌರವಕ್ಕೆ ತೊಂದರೆ ಆಗಬಹುದು. ಇದರಿಂದ ಸಿಟ್ಟುಗೊಳ್ಳುವಿರಿ. ಆರೋಗ್ಯವು ಕೆಡಲಿದ್ದು ಹತ್ತಾರು ಆಲೋಚನೆಗಳು ಬರಬಹುದು. ದೂರದಲ್ಲಿರುವ ನಿಮ್ಮ ಮಕ್ಕಳ ಬಗ್ಗೆ ಚಿಂತೆಯಾಗುವುದು. ನೀವು ಇಂದು ವಿದ್ಯುತ್ ಉಪಕರಣದ ಮಾರಟಗಾರರಾಇದ್ದರೆ ಅಧಿಕ ಲಾಭವು ಸಿಗುವುದು. ಸಾರ್ವಜನಿಕವಾಗಿ ಹೆಚ್ಚು ಪ್ರಭಾವ ಉಳ್ಳವರಾಗಿದ್ದು ಗೌರವವು ಸಿಗಲಿದೆ. ಸಹೋದ್ಯೋಗಿಗಳು ನಿಮ್ಮ ಮೇಲೆ ಒತ್ತಡವನ್ನು ಹೇಳಬಹುದು. ನಿಮ್ಮ ಸ್ನೇಹ ಬಳಗವು ದೊಡ್ಡದಾಗುವುದು. ಭೂಮಿಯ ಖರೀದಿಗೆ ಇಂದು ಸ್ಥಳವನ್ನು ಪರಿಶೀಲಿಸುವಿರಿ. ಪ್ರಮುಖ ದಾಖಲೆಗಳು ಕಣ್ಮರೆಯಾದೀತು.
ಕನ್ಯಾ ರಾಶಿ: ಮಾತಿನಲ್ಲಿ ಹಿಡಿತವಿಲ್ಲದೇ ಮನ ಬಂದಂತೆ ಮಾತನಾಡುವಿರಿ. ಯಾರಿಗೂ ಹೇಳಿಕೊಳ್ಳದೇ ನೀವೊಬ್ಬರೇ ರೋಗವನ್ನು ಅನುಭವಿಸುವಿರಿ. ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೆ ಉತ್ತಮಸ್ಥಾನವು ಸಿಗಲಿದೆ. ನಿಮ್ಮ ಬಗ್ಗೆ ಪ್ರೀತಿಯುಳ್ಳವರು ನಿಮ್ಮನ್ನು ಹರಸುವರು. ಹಣಕಾಸಿನ ವಿಚಾರಕ್ಕೆ ಅಪವಾದ ಬರಬಹುದು. ನಿಮ್ಮನ್ನು ಪರೋಕ್ಷವಾಗಿ ಯಾರದರೂ ನಿವಾರಿಸಬಹುದು. ಸಂಗಾತಿಯ ಮಾತಿಗೆ ನೀವು ಉತ್ತರಿಸಲಾರಿರಿ. ನಿಮ್ಮ ಲಾಭಾಂಶದ ಕೆಲವು ಭಾಗವನ್ನು ನೀವು ದಾನ ಮಾಡುವಿರಿ. ನಿಮ್ಮ ಒಳಗುಟ್ಟನ್ನು ಯಾರ ಮುಂದೂ ಬಿಚ್ಚಿಡುವುದು ಬೇಡ. ನಿಮ್ಮ ಮಾತಿನಿಂದ ನೀವು ಹಗುರಾಗುವಿರಿ.
ತುಲಾ ರಾಶಿ: ನಿಮಗೆ ಬೇಡದ ವಸ್ತುಗಳನ್ನು ನೀವು ಇನ್ನೊಬ್ಬರಿಗೆ ದಾನವಾಗಿ ಕೊಡುವಿರಿ. ದುರ್ಜನರ ಸಹವಾಸದಿಂದ ನಿಮಗೆ ಅಪವಾದವು ಬರಬಹುದು. ಕೆಲಸಗಳಲ್ಲಿ ನೀವು ಜಯವನ್ನು ಸಾಧಿಸಬಹುದು. ಸೊಂಟದ ನೋವು ಅಧಿಕವಾಗಿ ಕಾಡಬಹುದು. ಪೋಷಕರ ಜೊತೆ ನಿಮ್ಮ ವರ್ತನೆಯು ಆಪ್ತವಾಗಿ ಇರಲಿದೆ. ಅಪೇಕ್ಷಿಸಿದ ಸ್ಥಳಕ್ಕೆ ಕರೆದುಕೊಂಡು ಹೋಗುವಿರಿ. ನಿಮ್ಮ ಸ್ವಲ್ಪ ಸಹಾಯವನ್ನು ಮಾಡಿ. ವಿರೋಧಿಗಳಿಗೆ ನಿಮ್ಮ ಬಲವನ್ನು ತೋರಿಸುವಿರಿ. ಹೆಚ್ಚು ಆದಾಯ ಸಿಗುವ ಕೆಲಸವನ್ನು ಹುಡುಕಲು ಬಯಸುವಿರಿ. ನಿಮ್ಮದಲ್ಲದ ಪರಿಸರಕ್ಕೆ ಹೊಂದಿಕೊಳ್ಳಲು ಕಷ್ಟಪಡುವಿರಿ. ಸ್ನೇಹಿತರಿಂದ ಉದ್ಯೋಗವನ್ನು ನೀವು ನಿರೀಕ್ಷಿಸುವಿರಿ.
ವೃಶ್ಚಿಕ ರಾಶಿ: ಇಂದಿನ ನಿಮ್ಮ ಕೆಲಸಗಳು ಬಹಳ ವಿಳಂಬವಾಗುದು. ನೀವು ಹೇಳಿದ ಕೆಲಸವೂ ವೇಗವಾಗಿ ಮುಗಿಯದು. ಸ್ನೇಹಿತರಿಗೆ ಬೇಸರವಾಗಬಾರದೆಂದು ಅವರ ಜೊತೆ ಸಮಸ್ಯೆ ಕಳೆಯುವಿರಿ. ದಾಂಪತ್ಯದಲ್ಲಿನ ವೈಮನಸ್ಯವು ಹಿರಿಯರ ಭೇಟಿಯಿಂದ ಸರಿಯಾಗುವುದು. ಅಧಿಕಾರಿಗಳು ನಿಮಗೆ ತೊಂದರೆ ಕೊಡಬಹುದು. ನಿಮ್ಮ ಬಳಿ ಇರುವ ವಸ್ತುಗಳನ್ನು ಬಳಸಿಕೊಂಡು ನಿಮ್ಮ ಕಾರ್ಯವನ್ನು ಪೂರೈಸಿಕೊಳ್ಳಿ. ಹೊಸ ವಸ್ತುವಿಗೆ ಧನವನ್ನು ವ್ಯಯಮಾಡುವುದು ಬೇಡ. ಇಂದಿನ ಓಡಾಟದಿಂದ ಶರೀರವು ದಣಿಯಬಹುದು. ಮನಸ್ಸಿಗೆ ಶಾಂತಿಯು ಇರಲಿದ್ದು ಗೊಂದಲವನ್ನು ಅನಾಯಾಸವಾಗಿ ದಾಟುವಿರಿ. ಸಹೋದ್ಯೋಗಿಗಳ ವರ್ತನೆಯು ಬೇಸರ ತರಿಸಬಹುದು.
ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ