Horoscope: ರಾಶಿಭವಿಷ್ಯ, ದಾಂಪತ್ಯ ಜೀವನದಲ್ಲಿ ಕೆಲವು ಹೊಸತನವನ್ನು ಅನುಭವಿಸುವಿರಿ
ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಅಕ್ಟೋಬರ್ 06)) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.
ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ಅಕ್ಟೋಬರ್ 06) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಆರ್ದ್ರಾ, ಯೋಗ: ವರೀಯಾನ್, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06-23ಕ್ಕೆ, ಸೂರ್ಯಾಸ್ತ ಸಂಜೆ 06 – 17ಕ್ಕೆ, ರಾಹು ಕಾಲ ಬೆಳಿಗ್ಗೆ 10:51 – 12:21ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:19 – 04:49ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:53 – 09:22ರ ವರೆಗೆ.
ಸಿಂಹ ರಾಶಿ : ಇಂದು ಕೆಲಸದ ಸ್ಥಳದ ಸಮಸ್ಯೆಗಳಿಗೆ ನಿಮ್ಮ ನಿಷ್ಪಕ್ಷಪಾತ ವಿಧಾನವು ನಿಮ್ಮನ್ನು ಜನಪ್ರಿಯಗೊಳಿಸುವುದು. ಕೆಲವು ಆಸ್ತಿ ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ನೀವು ಇಂದು ಎಲ್ಲರ ಜೊತೆ ವಿನಯದಿಂದ ಮಾತನಾಡಬೇಕು. ರಾಜಕೀಯದಲ್ಲಿ ಸಂಪರ್ಕ ಪ್ರದೇಶವು ವಿಶಾಲವಾಗಿರುತ್ತದೆ. ಕೆಲವು ಹೊಸ ಅವಕಾಶಗಳು ಸಿಗುವ ಲಕ್ಷಣಗಳಿವೆ. ಸರ್ಕಾರಿ ಯೋಜನೆಗೆ ಹಣ ಹೂಡುವ ಸಾಧ್ಯತೆಗಳಿವೆ. ಹಣದ ವ್ಯವಹಾರಗಳಲ್ಲಿ ಯಶಸ್ಸು ಇರುತ್ತದೆ. ಉತ್ತಮ ಕೆಲಸದಿಂದಾಗಿ, ಉದ್ಯೋಗದಲ್ಲಿ ಬಡ್ತಿ ಮತ್ತು ಉನ್ನತ ಸ್ಥಾನ ಪಡೆಯುವ ಲಕ್ಷಣವಿದೆ.
ಕನ್ಯಾ ರಾಶಿ : ವೃತ್ತಿಪರರು ಇಂದು ಉತ್ತಮ ಅವಕಾಶಗಳನ್ನು ಕಂಡುಕೊಳ್ಳಬಹುದು. ಹಳೆಯ ಬಂಧುಗಳನ್ನು ಭೇಟಿ ಮಾಡುವುದು ಇಂದಿನ ಉತ್ಸಾಹಕ್ಕೆ ಕಾರಣವಾಗುವುದು. ನೀವು ಹೊಸ ಗುರಿಗಳನ್ನು ಹೊಂದಿದ್ದು ನಿಮ್ಮ ಪ್ರಯತ್ನಗಳನ್ನು ಪ್ರಾರಂಭಿಸುವಿರಿ. ನೀವು ಕೆಲವು ವ್ಯವಹಾರ ವಿಷಯಗಳನ್ನು ಜಾಣ್ಮೆಯಿಂದ ನಿಭಾಯಿಸುವಿರಿ. ಸಂಪತ್ತಿನ ಹೆಚ್ಚಳವಾಗಬಹುದು. ಇಂದು ಯಾವುದೇ ಕೆಲಸ ಮಾಡುವಾಗ, ನಿಮ್ಮ ಮನಸ್ಸನ್ನು ಶಾಂತವಾಗಿಟ್ಟುಕೊಳ್ಳಬೇಕು. ದಾಂಪತ್ಯ ಜೀವನದಲ್ಲಿ ಕೆಲವು ಹೊಸತನವನ್ನು ಅನುಭವಿಸುವಿರಿ.
ತುಲಾ ರಾಶಿ : ಇಂದು ಆರೋಗ್ಯಕಾವಾದ ಆಹಾರದ ಬಗ್ಗೆ ಆಸಕ್ತಿ ಮೂಡುವ ಸಾಧ್ಯತೆ ಇದೆ. ಬಂಧುಗಳ ಸಲಹೆಯು ಸಮಸ್ಯೆಯನ್ನು ವಿಭಿನ್ನ ದೃಷ್ಟಿಕೋನದಿಂದ ನೋಡಲು ನಿಮಗೆ ಸಹಾಯ ಮಾಡುತ್ತದೆ. ದೂರದೂರಿಗೆ ಪ್ರಯಾಣ ಸಾಧ್ಯತೆ ಇದೆ. ನಿಮ್ಮ ದಾಂಪತ್ಯದಲ್ಲಿ ಪರಸ್ಪರ ಸಾಮರಸ್ಯ ಹೆಚ್ಚಾಗುತ್ತದೆ. ವೃತ್ತಿಪರ ಜೀವನದಲ್ಲಿ ಪ್ರತಿಯೊಂದು ವಿಷಯದ ಬಗ್ಗೆ ಸ್ಪಷ್ಟ ನಿಲುವನ್ನು ಇಟ್ಟುಕೊಳ್ಳಿ. ವ್ಯವಹಾರದ ದೃಷ್ಟಿಯಿಂದ ಎಲ್ಲವೂ ಚೆನ್ನಾಗಿರುತ್ತದೆ. ನಿಮ್ಮ ಆದಾಯ ಚೆನ್ನಾಗಿರುತ್ತದೆ. ಕೆಲವರಿಗೆ ವಿದೇಶಕ್ಕೆ ಹೋಗುವ ಶುಭ ಸುದ್ದಿ ಸಿಗಬಹುದು.
ವೃಶ್ಚಿಕ ರಾಶಿ : ಕೆಲಸದಲ್ಲಿನ ಪ್ರಗತಿಯು ತೃಪ್ತಿಕರವಾಗಿರುತ್ತದೆ. ವೃತ್ತಿಪರ ಸಮಸ್ಯೆಗಳನ್ನು ನಿವಾರಿಸಲು ನಿಮಗೆ ಅವಕಾಶ ದೊರೆಯಲಿದೆ. ಸರಿಯಾದ ಆಹಾರ ಮತ್ತು ಶಿಸ್ತುಬದ್ಧ ಜೀವನವು ನಿಮ್ಮ ಉತ್ತಮ ಆರೋಗ್ಯಕ್ಕೆ ಪ್ರಮುಖವಾಗಿದೆ. ಮನೆಯಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ತರಲು ನೀವು ನಿಮ್ಮ ಕೋಪವನ್ನು ನಿಯಂತ್ರಿಸುವುದು ಉತ್ತಮ. ಸಂಜೆಯ ವೇಳೆಗೆ ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯುವಿರಿ. ಕಠಿಣ ಪರಿಶ್ರಮದ ಆಧಾರದ ಮೇಲೆ, ಕಷ್ಟಕರವಾದ ಕೆಲಸಗಳನ್ನು ಕೂಡ ಸುಲಭವಾಗಿ ಪೂರ್ಣಗೊಳಿಸುವಿರಿ. ಸಮಯಕ್ಕೆ ಸರಿಯಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಾಗುವುದು. ವ್ಯಾಪಾರದಲ್ಲಿ ಲಾಭದ ಅವಕಾಶಗಳಿರುತ್ತವೆ. ಕೆಲವು ಸ್ಥಳದಿಂದ ಹಣ ಪಡೆಯುವಿರಿ.