AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ, ಈ ರಾಶಿಯವರ ಗಮನ ಗುರಿಯ ಕಡಗೆ ಮಾತ್ರ ಇರಲಿ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ನವೆಂಬರ್​ 07) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ದಿನಭವಿಷ್ಯ, ಈ ರಾಶಿಯವರ ಗಮನ ಗುರಿಯ ಕಡಗೆ ಮಾತ್ರ ಇರಲಿ
ರಾಶಿಭವಿಷ್ಯImage Credit source: iStock Photo
TV9 Web
| Edited By: |

Updated on: Nov 07, 2023 | 12:30 AM

Share

ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್​ 07) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ದಶಮೀ, ನಿತ್ಯನಕ್ಷತ್ರ: ಮಘಾ, ಯೋಗ: ಬ್ರಹ್, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 31 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 01 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:09 ರಿಂದ 04:35 ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:24 ರಿಂದ 10:50 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:16 ರಿಂದ 01:42ರ ವರೆಗೆ.

ಸಿಂಹ ರಾಶಿ: ಪಕ್ಷಪಾತೀಯ ಗುಣವು ನಿಮ್ಮ ವ್ಯಕ್ತಿತ್ವವನ್ನು ಹೇಳುತ್ತದೆ. ನಿಮ್ಮ ಅನಿಸಿಕೆಗಳನ್ನು ತಾತ್ಸಾರ ಮಾಡಬಹುದು. ನೀವು ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಬೇಕಾದೀತು. ಗುರಿಯ ಕಡಗೆ ಮಾತ್ರ ನಿಮ್ಮ ಗಮನವಿರಲಿ. ಇಷ್ಟ ಪಟ್ಟವರನ್ನು ಮದುವೆಯಾಗುವ ಮಕ್ಕಳ ಸ್ವಾತಂತ್ರ್ಯಕ್ಕೆ ಅಡ್ಡಿಯಾಗುವಿರಿ. ನಂಬಿಕೆಗಳನ್ನು ಬದಲಾಯಿಸಿಕೊಳ್ಳುವುದು ಸಾಹಸ‌ ಬೇಡ. ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಿ. ನಿಮ್ಮದಾದ ಜೀವನಕ್ರಮವು ನಿಮಗೆ ಹಿಡಿಸದೇ ಇರಬಹುದು. ನಿಮ್ಮ ಹಿಂದಿನ ಆಸೆಗಳನ್ನು ಇಂದು ಪೂರೈಸಿಕೊಳ್ಳುವಿರಿ. ಹಣವು ಸಿಗದೇ ನಿಮಗೆ ನಿರಾಸೆಯಾಗುವುದು. ಆರೋಗ್ಯವನ್ನು ಸುಧಾರಿಸಿಕೊಂಡು ಕೆಲಸದಲ್ಲಿ ಪ್ರವೃತ್ತರಾಗುವಿರಿ. ವೃತ್ತಿಯನ್ನು ಸಂತೋದಿಂದ ಮಾಡುವುದನ್ನು ಕಲಿಯಬೇಕಾಗಬಹುದು. ಅಮೂಲ್ಯ ವಸ್ತುಗಳನ್ನು ಕಳೆದುಕೊಂಡು ಸಂಕಟಪಡಬೇಕಾದೀತು. ಹಳೆಯ ಖಾಯಿಲೆಗಳು ಕಾಣಿಸಿಕೊಳ್ಳಬಹುದು.

ಕನ್ಯಾ ರಾಶಿ: ಸಹೋದರರ ನಡುವೆ ಅನ್ಯೋನ್ಯತೆ ದೂರವಾಗಬಹುದು. ನಿಮ್ಮ ಸಮಯ ಮೀರಿದ ಕೆಲಸದಿಂದ ಆರೋಗ್ಯದ ಮೇಲೆ‌ ಪರಿಣಾಮ ಬೀರಬಹುದು. ಯಾರದೋ ಮೇಲಿನ ಸಿಟ್ಟನ್ನು ಮನೆಮಂದಿಯ ಮೇಲೆ ತೋರಿಸುವಿರಿ. ವಾಹನ ಓಡಾಡವು ಸುಖಕರವಲ್ಲ. ತಾಯಿಗೆ ಕೊಡುವ ಗೌರವವು ಕಡಿಮೆ ಆದೀತು. ಕರ್ತವ್ಯಗಳನ್ನು ದೃಢ ಮನಸ್ಸಿನಿಂದ ಮಾಡುವಿರಿ. ಒಡ ಹುಟ್ಟಿದವರ ಬಗ್ಗೆ ಅಸೂಯೆ ತೋರಿಸುವಿರಿ. ಇಂದು ನಿಮ್ಮ ಮನೋಬಲವು ದುರ್ಬಲವಾಗಬಹುದು. ದಾಂಪತ್ಯದಲ್ಲಿ ಪರಸ್ಪರ ಹೊಂದಾಣಿಕೆ ಇಲ್ಲದೇ ಹೋದೀತು. ಇಂದು ವಾಸದ ಮನೆಯನ್ನು ಬದಲಿಸುವಿರಿ. ಆಹಾರವನ್ನು ಮಿತಿವಾಗಿಯೂ ಹಾಗೂ ಬದಲಾವಣೆಯನ್ನೂ ಮಾಡಿಕೊಳ್ಳುವುದು ಉತ್ತಮ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣುವುದು. ನಿಮ್ಮ ಬಗ್ಗೆ ಸಹೋದ್ಯೋಗಿಗಳು ಆಡುಕೊಳ್ಳುವರು. ಮನಸ್ಸುನ್ನು ಅಚಲವಾಗಿಸಿಕೊಳ್ಳಿ.

ತುಲಾ ರಾಶಿ: ಉದ್ಯೋಗದಲ್ಲಿ ಬಂದ ಸಂಕಷ್ಟವನ್ನು ದೂರಮಾಡಿಕೊಳ್ಳುವಿರಿ. ನಿಮ್ಮ ನಿಷ್ಠೆಯನ್ನು ಬದಲಾಯಿಸುವುದು ಬೇಡ. ನಿಮ್ಮ ಇಂದಿನ ಸ್ಥಿತಿಯು ಅಭಿವೃದ್ದಿಗೆ ಹಲವಾರು ದಾರಿಗಳನ್ನು ಹುಡುಕುವಿರಿ. ನಿಮಗಿರುವ ಚಂಚಲ ಮನಸ್ಸಿನಿಂದ ನಕಾರಾತ್ಮಕ ಯೋಚನೇಗಳೇ ಕಾಣಿಸಬಹುದು. ಸಂಗಾತಿಯ ಆಯ್ಕೆಯನ್ನು ನಾನಾ ಕಾರಣದಿಂದ ಮುಂದೂಡುವುದು ಸರಿಯಾಗದು. ಆಸ್ತಿಯನ್ನು ಅನ್ಯರಿಗೆ ಕೊಡುವ ಚಿಂತನೆಯೂ ನಿಮ್ಮ ಮನಸ್ಸಿಗೆ ಬರಬಹುದು. ನಿಮ್ಮ ಸ್ಥಿರಾಸ್ತಿಯನ್ನು ಮಾರಾಟಮಾಡುವಿರಿ. ಇಂದು ನೀವು ಕುಟುಂಬದ ಜೊತೆ ಹೆಚ್ಚು ಸಮಯವನ್ನು ಕಳೆಯಲು ಇಚ್ಛಿಸುವಿರಿ. ವೃತ್ತಿಯ ಸ್ಥಳದಲ್ಲಿ ಪ್ರೇಮವು ಅಂಕುರಿಸುವುದು. ಮಕ್ಕಳಿಂದ ನೀವು ಅನಾದರಕ್ಕೆ ಒಳಗಾಗಬಹುದು.

ವೃಶ್ಚಿಕ ರಾಶಿ: ಹೊರ ದೇಶಕ್ಕೆ ತೆರಳುವ ಅವಕಾಶವು ಸಿಗಬಹುದು. ಆಪ್ತರಿಗೆ ಉಡುಗೊರೆ ಕೊಟ್ಟು ಮನಸ್ತಾಪವನ್ನು ಸರಿ ಮಾಡಿಕೊಳ್ಳುವಿರಿ. ತೊಂದರೆಗೆ ಸಿಕ್ಕಿಕೊಳ್ಳಲು ನಿಮ್ಮ ಮೊಂಡುತನವೇ ಕಾರಣ. ಇದೇ ನಿಮಗೆ ಮುಳುವಾಗಬಹುದು. ಕುಟುಂಬದ ಬಗ್ಗೆ ನಿಮಗೆ ಅಭಿಮಾನದ ಕೊರತೆ ಕಾಣುವುದು. ಸಾಲಗಾರರಿಂದ ಹಿಂಸೆ ಹೆಚ್ಚಾಗುವುದು. ನಿಮಗೆ ಸಿಕ್ಕ ಪ್ರಶಂಸೆಯಿಂದ ಸಹೋದ್ಯೋಗಿಗಳು ತೊಂದರೆಯನ್ನು ಕೊಡಬಹುದು. ಮಿತ್ರರು ನಿಮಗೆ ಬೇಕಾದ ಸಹಾಯ ಮಾಡಲು ಸ್ವಲ್ಪ ಆಲೋಚಿಸುವರು.‌ ಹಣಕಾಸಿನ ವ್ಯವಹಾರದಲ್ಲಿ ಅಪರಿಚಿತರ ಆಗಮನವಾಗಬಹುದು. ಅಧಿಕ ವಿಶ್ವಾಸದಿಂದ ಕಾರ್ಯದ ಹಾನಿಯಾಗಬಹುದು. ಸದ್ಯವಷ್ಟೇ ಸಾಲದಿಂದ ಮುಕ್ತರಾಗಿದ್ದರೂ ಅನಾರೋಗ್ಯದ ಕಾರಣಕ್ಕೆ ಪುನಃ ಸಾಲ ಮಾಡಬೇಕಾಗಿ ಬರಬಹುದು. ನಿಮ್ಮ ಅಧಿಕ ಮಾತು ಕಿರಿಕಿರಿ ಕೊಟ್ಟೀತು.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ