AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ, ಅತಿಯಾದ ನಂಬಿಕೆಯು ನಿಮ್ಮ ಮೌಲ್ಯಯುತ ವಸ್ತುಗಳನ್ನು ಕಳೆದುಕೊಳ್ಳುವಂತೆ ಮಾಡುವುದು

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಅಕ್ಟೋಬರ್ 07)) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ರಾಶಿಭವಿಷ್ಯ, ಅತಿಯಾದ ನಂಬಿಕೆಯು ನಿಮ್ಮ ಮೌಲ್ಯಯುತ ವಸ್ತುಗಳನ್ನು ಕಳೆದುಕೊಳ್ಳುವಂತೆ ಮಾಡುವುದು
ಪ್ರಾತಿನಿಧಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Oct 07, 2023 | 12:30 AM

Share

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ಅಕ್ಟೋಬರ್ 07) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ನವಮೀ, ನಿತ್ಯನಕ್ಷತ್ರ: ಪುನರ್ವಸು, ಯೋಗ: ಪರಿಘ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06-23ಕ್ಕೆ, ಸೂರ್ಯಾಸ್ತ ಸಂಜೆ 06 – 17ಕ್ಕೆ, ರಾಹು ಕಾಲ ಬೆಳಿಗ್ಗೆ 09:22 – 10:51ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:50 – 03:19ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:24 – 07:53ರ ವರೆಗೆ.

ಸಿಂಹ ರಾಶಿ : ವೃತ್ತಿಯಲ್ಲಿ ನಿಮಗೆ ಆಕಸ್ಮಿಕ ಪ್ರಶಂಸೆಯಿಂದ ಅಚ್ಚರಿಗೊಳ್ಳುವಿರಿ. ನಿಮ್ಮ ಗೌರವಕ್ಕೆ ಧಕ್ಕೆ ಬರುವ ಮಾತನ್ನು ನೀವು ಸಹಿಸಲಾರಿರಿ. ವಾಮಮಾರ್ಗದಿಂದ ಹಣವನ್ನು ಸಂಪಾದಿಸುವ ಮನಸ್ಸು ಇರಲಿದೆ. ಅತಿಯಾದ ನಂಬಿಕೆಯು ನಿಮ್ಮ ಮೌಲ್ಯಯುತ ವಸ್ತುಗಳನ್ನು ಕಳೆದುಕೊಳ್ಳುವಂತೆ ಮಾಡುವುದು. ಮನೆಯಲ್ಲಿ ಅಶಾಂತಿಯ ವಾತಾವರಣವು ಸರಿಮಾಡಿಕೊಳ್ಳಿ. ನಿಮ್ಮ ವ್ಯವಹಾರಕ್ಕೆ ಯಾರಾದರೂ ಮಧ್ಯ ಬರಬಹುದು. ಬೇಗ ಸಿಟ್ಟು ಮಾಡಿಕೊಂಡರೂ ಕ್ಷಣ ಕಾಲದಲ್ಲಿ ಸರಿಯಾಗುವುದು. ತಾಯಿಯು ನಿಮಗೆ ಹಿತವಚನವನ್ನು ಹೇಳುವರು. ಆತ್ಮವಿಶ್ವಾಸದ‌ ಕೊರತೆಯನ್ನು ಸ್ನೇಹಿತರು ತುಂಬುವರು. ವೃತ್ತಿಯಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಿಕೊಳ್ಳುವಿರಿ. ಬಾಲ್ಯದ ಸ್ನೇಹಿತರು ನಿಮ್ಮನ್ನು ಕಂಡು ಖುಷಿಪಡುವರು. ನಮ್ಮ ವೃತ್ತಿಜೀವನವು ಹೊಸ ದಿಕ್ಕಿಗೆ ಜಾರಬಹುದು.

ಕನ್ಯಾ ರಾಶಿ : ಹಿರಿಯರು ನಿಮ್ಮ‌ ಬಗ್ಗೆ ವ್ಯಂಗ್ಯವಾಗಿ ಮಾತನಾಡಬಹುದು. ಉದ್ಯೋಗದ ಕಾರಣ ದೂರ ಪ್ರಯಾಣ ಮಾಡುವಿರಿ. ಸಾಲ ಕೊಟ್ಟವರ ಎದುರು ತಲೆ ಮೆರೆಸಿಕೊಂಡು ಓಡಾಡುವಿರಿ. ರಾಜಕೀಯವಾಗಿ ಹಿನ್ನಡೆಯನ್ನು ಅನುಭವಿಸುವರು. ಹೊಸ ತಂತ್ರವನ್ನು ನೀವು ರೂಪಿಸಿಕೊಳ್ಳಬೇಕಾದೀತು. ಸಿಟ್ಟಾಗುವ ಸಂದರ್ಭದಲ್ಲಿ ತಾಳ್ಮೆಯನ್ನು ಇಟ್ಟುಕೊಳ್ಳಿ. ಹಳೆಯ ನೋವುಗಳು ನಿಮ್ಮನ್ನು ಕಾಡುವುಸು. ಶುಭ ಸುದ್ದಿಯ ನಿರೀಕ್ಷೆಯು ಇಂದು ಕೇವಲ ನಿರೀಕ್ಷೆಯಾಗಿಯೇ ಇರುವುದು. ಮನಃಸ್ಥಿತಿಯು ಸರಿ ಇಲ್ಲದ ಕಾರಣ ಯಾವ ಕೆಲಸವನ್ನೂ ಖುಷಿಯಿಂದ ಮಾಡುವುದಿಲ್ಲ. ದಾಂಪತ್ಯದಲ್ಲಿ ಸಣ್ಣ ವಿರಸವು ಬರಬಹುದು. ಮಕ್ಕಳ ವಿಚಾರದಲ್ಲಿ ನಿಮ್ಮ ತೀರ್ಮಾನ ಸರಿಯಲ್ಲ. ಅಧಿಕಾರಿಗಳನ್ನು ಮೆಚ್ಚಿಸಲು ನೀವು ಸಮಯವನ್ನು ವ್ಯರ್ಥ ಮಾಡವಿರಿ.

ತುಲಾ ರಾಶಿ : ಅಧಿಕಾರ ತಪ್ಪುವ ಸಾಧ್ಯತೆ ಇದೆ. ಉದ್ಯೋಗವನ್ನು ಬಿಟ್ಟು ಭೂಮಿಯ ವ್ಯವಹಾರದಲ್ಲಿ ತೊಡಗಿಕೊಳ್ಳುವಿರಿ. ಪ್ರಯಾಣದಲ್ಲಿ ಯಾವುದೇ ತೊಂದರೆಗಳು ಬಾರದು. ಕೆಲವು ಜನರ ಭೇಟಿಯು ನಿಮಗೆ ಖುಷಿ ಕೊಡುವುದು. ನಕಾರಾತ್ಮಕ ಚಿಂತನೆಯನ್ನು ಹೆಚ್ಚಿಸಲು ನಿಮ್ಮ ಸುತ್ತ ಅಂತಹ ವಾತಾವರಣವು ಇರುವುದು. ಅವುಗಳಿಗೆ ಕಿವಿಗೊಡದೇ ಕಾನೂನು ಪ್ರಕ್ರಿಯೆಯನ್ನು ಮಾಡಿ. ಮಕ್ಕಳಿಗಾಗಿ ಮಾಡಿದ ಖರ್ಚು ನಿಮಗೆ ಸಾರ್ಥಕ ಎನಿಸಬಹುದು. ಸಂಗಾತಿಗೆ ನಿಮ್ಮ ಉಡುಗೊರೆಯು ಇಷ್ಟವಾಗದು.‌ ಮಹಿಳೆಯರು ಸಮಾರಂಭಗಳಿಗೆ ಮನೆಗೆ ಹೋಗುವ ಸಾಧ್ಯತೆ ಇದೆ. ಆಹಾರವನ್ನು ಸರಿಯಾಗಿ ಸಮಯಕ್ಕೆ ಸ್ವೀಕರಿಸಿ. ನಿಮ್ಮ ನಂಬಿಕೆಯನ್ನು ನೀವು ಎಲ್ಲರೆದುರು ಸಮರ್ಥಿಸಿಕೊಳ್ಳುವಿರಿ. ಅಪರಿಚಿತರು ನಿಮ್ಮ ವಿವರಗಳನ್ನು ಪಡೆಯುವರು.

ವೃಶ್ಚಿಕ ರಾಶಿ : ಮಕ್ಕಳಿಂದ ನಿಮಗೆ ಕೀರ್ತಿಯು ಪ್ರಾಪ್ತವಾಗುವುದು. ಮಾತಿನಿಂದ ಆಪ್ತರನ್ನು ದೂರ ಮಾಡಿಕೊಳ್ಳುವಿರಿ. ಆಕಸ್ಮಿಕವಾಗಿ ಅಧಿಕಾರವು ಸಿಗಬಹುದು. ಪರಿಚಿತರ ವಿವಾಹಕ್ಕೆ ಓಡಾಟ ಮಾಡಿ ಸಫಲರಾಗುವಿರಿ. ಇಂದು ಬಹು ದಿನಗಳ ಚಿಂತಿತ ಕಾರ್ಯವು ಫಲ ಕೊಡದು. ಮನೆಗೆ ಬೇಕಾದ ವಸ್ತುಗಳನ್ನು ಖರೀದಿಸಿ ಹಣವನ್ನು ವ್ಯಯ ಮಾಡುವಿರಿ. ನಿಮಗೆ ಆಗಬೇಕಾದ ಕೆಲಸವನ್ನು ವಿವಾದ ಇಲ್ಲದೇ ಮಾಡಿಕೊಳ್ಳಿ. ವಾಹನವನ್ನು ಸರಿ ಮಾಡಿಸಲು ಹಣವು ಖರ್ಚಾಗಲಿದೆ. ಇಂದು ಸಂಗಾತಿಯ ಪ್ರೀತಿಯನ್ನು ನೀವು ಹೆಚ್ಚು ಅನುಭವಿಸುವಿರಿ. ನಿಮ್ಮ ಕಂಡು ಅಸೂಯೆ ಪಡುವವರಿಗೆ ನೀವು ಇನ್ನಷ್ಟು ತುಪ್ಪ ಸುರಿಯುವುದು ಬೇಡ. ಎಲ್ಲ ಸಂದರ್ಭದಲ್ಲಿಯೂ ವಾತಾವರಣವು ನಿಮ್ಮ ಪರವಾಗಿಯೇ ಇರುತ್ತದೆ ಎಂದುಕೊಳ್ಳಬೇಡಿ. ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳಬಹುದು.‌