Horoscope: ಈ ರಾಶಿಯವರು ಅಮೂಲ್ಯ ವಸ್ತುಗಳನ್ನು ಕಳೆದುಕೊಂಡು ಸಂಕಟಪಡಬೇಕಾದೀತು

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಸೆಪ್ಟೆಂಬರ್ 07) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರು ಅಮೂಲ್ಯ ವಸ್ತುಗಳನ್ನು ಕಳೆದುಕೊಂಡು ಸಂಕಟಪಡಬೇಕಾದೀತು
ಜ್ಯೋತಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 07, 2023 | 12:30 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 07 ಗುರುವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ನಿಜ ಶ್ರಾವಣ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ರೋಹಿಣೀ, ಯೋಗ: ಹರ್ಷಣ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 39 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:03 ರಿಂದ 03:35 ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:22 ರಿಂದ 07:54ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 09:26 ರಿಂದ 10:59ರ ವರೆಗೆ.

ಸಿಂಹ ರಾಶಿ : ನೀವು ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಬೇಕಾದೀತು. ಗುರಿಯ ಕಡಗೆ ಮಾತ್ರ ನಿಮ್ಮ ಗಮನವಿರಲಿ. ಇಷ್ಟ ಪಟ್ಟವರನ್ನು ಮದುವೆಯಾಗುವ ಮಕ್ಕಳ ಸ್ವಾತಂತ್ರ್ಯಕ್ಕೆ ಅಡ್ಡಿಯಾಗುವಿರಿ. ನಂಬಿಕೆಗಳನ್ನು ಬದಲಾಯಿಸಿಕೊಳ್ಳುವುದು ಸಾಹಸ‌ ಬೇಡ. ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಿ. ನಿಮ್ಮ ಹಿಂದಿನ ಆಸೆಗಳನ್ನು ಇಂದು ಪೂರೈಸಿಕೊಳ್ಳುವಿರಿ. ಹಣವು ಸಿಗದೇ ನಿಮಗೆ ನಿರಾಸೆಯಾಗುವುದು. ಆರೋಗ್ಯವನ್ನು ಸುಧಾರಿಸಿಕೊಂಡು ಕೆಲಸದಲ್ಲಿ ಪ್ರವೃತ್ತರಾಗುವಿರಿ. ಅಮೂಲ್ಯ ವಸ್ತುಗಳನ್ನು ಕಳೆದುಕೊಂಡು ಸಂಕಟಪಡಬೇಕಾದೀತು. ಹಳೆಯ ಖಾಯಿಲೆಗಳು ಕಾಣಿಸಿಕೊಳ್ಳಬಹುದು. ಏಕಾಂತದಲ್ಲಿ ಹೆಚ್ಚಿನ ಸಮಯವನ್ನು ಕಳೆಯುವಿರಿ. ಹಳೆಯ ನಿಮ್ಮ ಸ್ನೇಹಿತವು ದೂರಾಗುವುದು.‌

ಕನ್ಯಾ ರಾಶಿ : ಯಾರದೋ ಮೇಲಿನ ಸಿಟ್ಟನ್ನು ಮನೆಮಂದಿಯ ಮೇಲೆ ತೋರಿಸುವಿರಿ. ವಾಹನ ಓಡಾಡವು ಸುಖಕರವಲ್ಲ. ತಾಯಿಗೆ ಕೊಡುವ ಗೌರವವು ಕಡಿಮೆ ಆದೀತು. ಕರ್ತವ್ಯಗಳನ್ನು ದೃಢ ಮನಸ್ಸಿನಿಂದ ಮಾಡುವಿರಿ. ಒಡ ಹುಟ್ಟಿದವರ ಬಗ್ಗೆ ಅಸೂಯೆ ತೋರಿಸುವಿರಿ. ಇಂದು ನಿಮ್ಮ ಮನೋಬಲವು ದುರ್ಬಲವಾಗಬಹುದು. ದಾಂಪತ್ಯದಲ್ಲಿ ಪರಸ್ಪರ ಹೊಂದಾಣಿಕೆ ಇಲ್ಲದೇ ಹೋದೀತು. ಇಂದು ವಾಸದ ಮನೆಯನ್ನು ಬದಲಿಸುವಿರಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣುವುದು. ನಿಮ್ಮ ಬಗ್ಗೆ ಸಹೋದ್ಯೋಗಿಗಳು ಆಡುಕೊಳ್ಳುವರು. ಮನಸ್ಸುನ್ನು ಅಚಲವಾಗಿಸಿಕೊಳ್ಳಿ. ಭವಿಷ್ಯವನ್ನು ಕಟ್ಟಿಕೊಳ್ಳುವ ಕುರಿತು ಚಿಂತೆ ಬರಬಹುದು. ನಿಮ್ಮ ಅನಾರೋಗ್ಯದಿಂದ ಉತ್ಸಾಹವು ಕುಗ್ಗಬಹುದು.

ತುಲಾ ರಾಶಿ : ನಿಮ್ಮ ಇಂದಿನ ಸ್ಥಿತಿಯು ಅಭಿವೃದ್ದಿಗೆ ಹಲವಾರು ದಾರಿಗಳನ್ನು ಹುಡುಕುವಿರಿ. ನಿಮಗಿರುವ ಚಂಚಲ ಮನಸ್ಸಿನಿಂದ ನಕಾರಾತ್ಮಕ ಯೋಚನೇಗಳೇ ಕಾಣಿಸಬಹುದು. ಸಂಗಾತಿಯ ಆಯ್ಕೆಯನ್ನು ನಾನಾ ಕಾರಣದಿಂದ ಮುಂದೂಡುವುದು ಸರಿಯಾಗದು. ಮಕ್ಕಳ ಅಧೀನದಲ್ಲಿ ಇರುವುದು ನಿಮಗೆ ಇಷ್ಟವಾಗದು. ಉದ್ಯೋಗದಲ್ಲಿರುವ ಮಹಿಳೆಗೆ ಉನ್ನತ ಸ್ಥಾನ ಪ್ರಾಪ್ತವಾಗಬಹುದು. ನಿಮ್ಮ ಸ್ಥಿರಾಸ್ತಿಯನ್ನು ಮಾರಾಟಮಾಡುವಿರಿ. ಇಂದು ನೀವು ಕುಟುಂಬದ ಜೊತೆ ಹೆಚ್ಚು ಸಮಯವನ್ನು ಕಳೆಯಲು ಇಚ್ಛಿಸುವಿರಿ. ವೃತ್ತಿಯ ಸ್ಥಳದಲ್ಲಿ ಪ್ರೇಮವು ಅಂಕುರಿಸುವುದು. ನಿಮ್ಮ ಸ್ವಂತ ಕೆಲಸಗಳಿಗೆ ಇನ್ನೊಬ್ಬರ ಸಹಾಯವನ್ನು ನೀವು ಬಯಸುವುದಿಲ್ಲ.

ವೃಶ್ಚಿಕ ರಾಶಿ : ತೊಂದರೆಗೆ ಸಿಕ್ಕಿಕೊಳ್ಳಲು ನಿಮ್ಮ ಮೊಂಡುತನವೇ ಕಾರಣ. ಇದೇ ನಿಮಗೆ ಮುಳುವಾಗಬಹುದು. ಕುಟುಂಬದ ಬಗ್ಗೆ ನಿಮಗೆ ಅಭಿಮಾನದ ಕೊರತೆ ಕಾಣುವುದು. ಸಾಲಗಾರರಿಂದ ಹಿಂಸೆ ಹೆಚ್ಚಾಗುವುದು. ನಿಮಗೆ ಸಿಕ್ಕ ಪ್ರಶಂಸೆಯಿಂದ ಸಹೋದ್ಯೋಗಿಗಳು ತೊಂದರೆಯನ್ನು ಕೊಡಬಹುದು. ಮಿತ್ರರು ನಿಮಗೆ ಬೇಕಾದ ಸಹಾಯ ಮಾಡಲು ಸ್ವಲ್ಪ ಆಲೋಚಿಸುವರು.‌ ಹಣಕಾಸಿನ ವ್ಯವಹಾರದಲ್ಲಿ ಅಪರಿಚಿತರ ಆಗಮನವಾಗಬಹುದು. ನಿಮ್ಮನ್ನು ಕೆಲಸದಿಂದ ತೆಗೆಯುತ್ತಾರೆ ಎಂಬ ಭಯವು ಇರಲಿದೆ. ಸದ್ಯವಷ್ಟೇ ಸಾಲದಿಂದ ಮುಕ್ತರಾಗಿದ್ದರೂ ಅನಾರೋಗ್ಯದ ಕಾರಣಕ್ಕೆ ಪುನಃ ಸಾಲ ಮಾಡಬೇಕಾಗಿ ಬರಬಹುದು. ಸ್ನೇಹಿತ ಭೇಟಿಯನ್ನು ನೀವು ಅಲ್ಲಗಳೆಯುವಿರಿ.

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ