AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ, ಈ ರಾಶಿಯವರ ದಾಂಪತ್ಯದಲ್ಲಿ ಬಿರಕು ಬಂದು ಮನೆಯಿಂದ ದೂರ ಇರುವಿರಿ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಅಕ್ಟೋಬರ್ 08)) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ರಾಶಿಭವಿಷ್ಯ, ಈ ರಾಶಿಯವರ ದಾಂಪತ್ಯದಲ್ಲಿ ಬಿರಕು ಬಂದು ಮನೆಯಿಂದ ದೂರ ಇರುವಿರಿ
ರಾಶಿ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 08, 2023 | 12:30 AM

Share

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ಅಕ್ಟೋಬರ್ 08) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ದಶಮೀ, ನಿತ್ಯನಕ್ಷತ್ರ: ಪುಷ್ಯ, ಯೋಗ: ಶಿವ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06-23ಕ್ಕೆ, ಸೂರ್ಯಾಸ್ತ ಸಂಜೆ 06 – 16ಕ್ಕೆ, ರಾಹು ಕಾಲ ಸಂಜೆ 04:47 –06:16ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:20 –01:49ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:18 –04:47ರ ವರೆಗೆ.

ಸಿಂಹ ರಾಶಿ : ವ್ಯವಹಾರಗಳ ವಿಷಯದಲ್ಲಿ ನಿಮ್ಮನ್ನು ಅದೃಷ್ಟವಂತರನ್ನಾಗಿ ಮಾಡುತ್ತದೆ. ನೀವು ಜನಪ್ರಿಯತೆಯನ್ನು ಗಳಿಸುವಿರಿ. ಪ್ರೇಮಿಗಳಿಗೆ ಈ ಸಮಯವು ಶುಭವಲ್ಲ. ನಿಮ್ಮನ್ನು ಸ್ಥಾನದಿಂದ‌ ಕೆಳಗೆ ಹಾಕಲು ನೋಡಬಹುದು. ಸಿಟ್ಟಿಗೆ ಕಾರಣವಿಲ್ಲದಿದ್ದರೂ ಸಿಟ್ಟಾಗುವಿರಿ. ಮೇಲಧಿಕಾರಿಗಳ ಬೆಂಬಲವು ನಿಮಗೆ ಸಿಕ್ಕರೂ ಸಹೋದ್ಯೋಗಿಗಳಿಂದ ಕಿರಿಕಿರಿ ಆಗಬಹುದು. ನಿಮಗೆ ನಾನಾ ರೀತಿಯ ಸೌಲಭ್ಯಗಳು ಸಿಗಲಿದೆ. ಚೋರಭೀತಿಯು ನಿಮಗೆ ಕಾಡಬಹುದು. ಭೂಮಿಯ ವ್ಯವಹಾರದಿಂದ ಸಂಬಂಧಗಳು ಹಾಳಾಗುವುದು. ನೀವು ಕೆಲವು ಸಮಸ್ಯೆಯನ್ನು ಅನಿರೀಕ್ಷಿತವಾಗಿ ಎದುರಿಸಬೇಕಾಗುವುದು. ನಿಮ್ಮ ಆಸ್ತಿಯ ದಾಖಲೆಗಳನ್ನು ಸರಿಯಾಗಿ ಇಟ್ಟಕೊಳ್ಳಬೇಕಾಗುವುದು.

ಕನ್ಯಾ ರಾಶಿ : ಇಂದು ನೀವು ಏನೇ ಮಾಡಿದರೂ ಉತ್ಸಾಹದಿಂದ ಮಾಡುವಿರಿ. ಚೆನ್ನಾಗಿ ಯೋಚಿಸಿದ ನಿರ್ಧಾರಗಳು ದೀರ್ಘಕಾಲದವರೆಗೆ ಪರಿಣಾಮಕಾರಿಯಾಗುತ್ತವೆ. ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಸಾಧ್ಯ. ಆಸ್ತಿ ವ್ಯವಹಾರಗಳು ನಿಮಗೆ ಲಾಭವನ್ನು ನೀಡುವುದು. ಉದ್ಯೋಗಸ್ಥರಿಗೆ ಪ್ರಗತಿಯ ಸಾಧ್ಯತೆಗಳಿವೆ. ಆರ್ಥಿಕವಾದ ಸಮಾನರಲ್ಲಿ ನಿಮ್ಮ ಸಖ್ಯವು ಇರಲಿದೆ. ನಿರಂತರ ಕಾರ್ಯದಿಂದ ನಿಮಗೆ ಫಲವು ಲಭ್ಯವಾಗುವುದು. ಮಕ್ಕಳ ನಡುವಿನ ಕಲಹವನ್ನು ಪರಿಹರಿಸಲು ನೀವು ಮಧ್ಯಪ್ರವೇಶ ಮಾಡುವಿರಿ. ದಾಂಪತ್ಯದಲ್ಲಿ ಬಿರಕು ಬಂದು ಮನೆಯಿಂದ ದೂರ ಇರುವಿರಿ. ದೈವದ ಬಗ್ಗೆ ಭಕ್ತಿಯ ಕೊರತೆ ಇರಲಿದೆ. ಸಂಬಂಧವನ್ನು ಉಳಿಸಿಕೊಳ್ಳಲು ಸಮಯವನ್ನೂ ಕೊಡಬೇಕಾದೀತು. ನಿಮಗೆ ಇಂದಿನ ಕಾರ್ಯದಿಂದ ಪಾಪಪ್ರಜ್ಞೆಯು ಕಾಡಬಹುದು. ಮನಸ್ಸನ್ನು ನಿರ್ಲಿಪ್ತಗೊಳಿಸಲು ಪ್ರಯತ್ನಿಸುವಿರಿ. ಬಂಧುಗಳ ವಿಚಾರದಲ್ಲಿ ಅಸಮಾಧಾನವು ಇರುವುದು.

ತುಲಾ ರಾಶಿ : ಇಂದು ಸಂಶೋಧನಾ ಕ್ಷೇತ್ರಕ್ಕೆ ಸಂಬಂಧಿಸಿದ ಜನರು ಭವಿಷ್ಯಕ್ಕಾಗಿ ತಮ್ಮ ಮಾರ್ಗವನ್ನು ಪರಿಶೀಲಿಸಿಕೊಳ್ಳುವರು. ಪ್ರೇಮ ವ್ಯವಹಾರಗಳಲ್ಲಿ ತೊಡಗಿರುವ ಜನರು ತಮ್ಮ ಸಂಗಾತಿಯ ಭಾವನೆಗಳನ್ನು ಬೆಂಬಲಿಸುವರು. ಉದ್ಯೋಗಾಕಾಂಕ್ಷಿಗಳು ಯಶಸ್ವಿಯಾಗಲು ಹೆಚ್ಚುವರಿ ಪ್ರಯತ್ನಗಳನ್ನು ಮಾಡಬೇಕು. ಮಕ್ಕಳ ಪ್ರಗತಿಯನ್ನು ನೀವು ನಿರೀಕ್ಷಿಸಿದ್ದು ಇಂದು ಸಾಫಲ್ಯವಾಗುವುದ್. ಅತಿಯಾದ ವಿಶ್ವಾಸದಿಂದ ವಂಚನೆಯಾಗಲಿದೆ. ವ್ಯಾಯಾಮದ ಮೂಲಕ ನೀವು ನಿಮ್ಮ ದುರ್ಬಲ ದೇಹವನ್ನು ಗಟ್ಟಿ ಮಾಡಿಕೊಳ್ಳುವಿರಿ. ಸಾಲದ ವಿಚಾರವು ನಿಮಗೆ ಇಷ್ಟವಿಲ್ಲದಿದ್ದರೂ ಮಾಡಬೇಕಾದೀತು. ಅದೃಷ್ಟವನ್ನು ನಂಬಿ ನಿಮ್ಮ ಪ್ರಯತ್ನವು ಇಲ್ಲದೆಯೂ ಇರಬಹುದು. ಉದ್ಯೋಗದ ಕಾರಣದಿಂದ ನೀವು ದೂರ ಪ್ರಯಾಣವನ್ನು ಮಾಡಬೇಕಾಗಬಹುದು. ದಾಂಪತ್ಯದಲ್ಲಿ ನಡೆಯುತ್ತಿರುವ ಶೀತಲಸಮರವು ಸ್ಫೋಟವಾಗಬಹುದು.

ವೃಶ್ಚಿಕ ರಾಶಿ : ಇಂದು ನೀವು ಹಠಮಾರಿಯಂತೆ ತೋರುವಿರಿ. ನೀವು ಕಷ್ಟಕರ ಸಂದರ್ಭಗಳಲ್ಲಿ ಸ್ವಲ್ಪ ತಾಳ್ಮೆಯಿಂದ ವರ್ತಿಸಿ. ಆದಷ್ಟು ವಾದಗಳಿಂದ ದೂರವಿರಿ. ನಿಮ್ಮ ಕುಟುಂಬದ ಸದಸ್ಯರು ತೀರ್ಥಯಾತ್ರೆಗೆ ಹೋಗಬಹುದು. ನೀವು ಜೀವನ ಸಂಗಾತಿಯ ಬೆಂಬಲದಿಂದ ಖುಷಿಪಡುವಿರಿ. ಆರ್ಥಿಕ ದೃಷ್ಟಿಯಿಂದ ಈ ದಿನವು ಉತ್ತಮವಲ್ಲ. ನಿಮಗೆ ಸ್ನೇಹಿತರಿಂದ ಧನಸಹಾಯವಾಗುವುದು. ಶತ್ರುಗಳು ನಿಮ್ಮ ಏಳ್ಗೆಯನ್ನು ಸಹಿಸಲಾರರು. ಅದಕ್ಕೆ ಏನಾದರೂ ತೊಂದರೆ ಕೊಟ್ಟಾರು. ದೂರದ ಪ್ರಯಾಣಕ್ಕೆ ಇಂದು ಅನುಕೂಲವಲ್ಲ. ಕೆಲಸಗಳನ್ನು ಮಾಡಿಕೊಡಲು ನಿಮಗೆ ಹಣವನ್ನು ನೀಡುವರು. ಸ್ತ್ರೀಯರ ಸಹಾಯವನ್ನು ಪಡೆದು ನೀವು ಕಛೇರಿಯ ಕೆಲಸವನ್ನು ಬೇಗ ಮುಗಿಸುವಿರಿ. ನಿದ್ರೆಯ ವ್ಯತ್ಯಾಸದಿಂದ ನಿಮಗೆ ಕಿರಿಕಿರಿ. ಕಲಾವಿದರು ಹೆಚ್ಚಿನ ಆದಾಯವನ್ನು ಮಾಡಿಕೊಳ್ಳುವರು. ರಾಜಕೀಯಕ್ಕೆ ಹೋಗಲು ಆತುರದಿಂದ ಇರುವಿರಿ. ಹೊಸ ಜವಾಬ್ದಾರಿಗಳನ್ನು ಪಡೆಯಲೂ ಬಹಳ ಉತ್ಸುಕರಾಗಿ ಇರುವಿರಿ.

Follow Us
Lohitha Hebbar
Lohitha Hebbar

ವಿದ್ವಾನ್​ ಲೋಹಿತ ಶರ್ಮಾ. ಸಾಗರ ಮೂಲದ ಇಡುವಾಣಿ ಗ್ರಾಮ. ವೇದ ಹಾಗೂ ಸಂಸ್ಕೃತ ಅಧ್ಯಯನ, ಜ್ಯೋತಿಷ್ಯದಲ್ಲಿ ವಿದ್ವತ್ತನ್ನು ಸಂಪಾದಿಸಿರುತ್ತಾರೆ. ಹಸ್ತಪ್ರತಿಶಾಸ್ತ್ರದಲ್ಲಿ ಡಿಪ್ಲೋಮಾ ಮಾಡಿರುತ್ತಾರೆ. ಜ್ಞಾನ-ವಿಜ್ಞಾನ ಅಧ್ಯಯನ ಕೇಂದ್ರ ಬೆಂಗಳೂರಿನಲ್ಲಿ ಸಂಶೋಧಕರಾಗಿ ಮೌಲ್ಯಶಿಕ್ಷಣ ಎನ್ನುವ ಪಠ್ಯವನ್ನು ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ರಚಿಸಿದ್ದಾರೆ. ಧರ್ಮಭಾರತೀ, ತ್ರಿವಿಕ್ರಮ ಮುಂತಾದ ಮಾಸಪತ್ರಿಕೆಯಲ್ಲಿ ಸಂಪಾದಕನಾಗಿ ಕಾರ್ಯ ಮಾಡಿರುತ್ತಾರೆ. ಹಿತೋಪದೇಶ, ಸಂತಗೋರಕ್ಷನಾಥ, ಮಹರ್ಷಿ ಶಂಖಲಿಖಿತ ಗ್ರಂಥಗಳನ್ನು ಬರೆದಿದ್ದಾರೆ. ಅನೇಕ ಲೇಖನಗಳು, ಕಥೆಗಳು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಆಸಕ್ತಿಯ ವಿಷಯ ಸಂಗೀತ, ನಾಟಕ, ಓದು, ಬರಹ, ಚಾರಣ, ಡಿಜಿಟಲ್ ವಿನ್ಯಾಸ. ಸದ್ಯ ಶಿಕ್ಷಕನಾಗಿ ಕಾರ್ಯ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!