Horoscope: ಈ ರಾಶಿಯವರು ಸಣ್ಣ ವಿಚಾರಕ್ಕೆ ಕೋಪಗೊಂಡು ಮನಸ್ಸನ್ನು ಹಾಳು ಮಾಡಿಕೊಳ್ಳುವಿರಿ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಸೆಪ್ಟೆಂಬರ್ 08) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರು ಸಣ್ಣ ವಿಚಾರಕ್ಕೆ ಕೋಪಗೊಂಡು ಮನಸ್ಸನ್ನು ಹಾಳು ಮಾಡಿಕೊಳ್ಳುವಿರಿ
ಜ್ಯೋತಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 08, 2023 | 12:45 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 08 ಶುಕ್ರವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ನಿಜ ಶ್ರಾವಣ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ನವಮೀ, ನಿತ್ಯನಕ್ಷತ್ರ: ಮೃಗಶಿರಾ, ಯೋಗ: ವಜ್ರ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 38 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:58 ರಿಂದ 12:30 ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:35 ರಿಂದ 05:07ರ ವರೆಗೆ, ಗುಳಿಕ ಕಾಲ ಸಂಜೆ 07:26 ರಿಂದ 09:26ರ ವರೆಗೆ.

ಧನು ರಾಶಿ : ಎಲ್ಲ ರೀತಿಯಿಂದಲೂ ಅನುಕೂಲವಾಗಲಿ ಎಂಬ ಮನೋಭಾವವು ಇರಲಿದೆ. ಹಿತಶತ್ರುಗಳ ತೊಂದರೆಯ ನಡುವೆಯೂ ನಿಮ್ಮ ಅಭಿವೃದ್ಧಿಯು ಆಗಲಿದೆ. ಇದರಿಂದ‌ ನಿಮ್ಮ ಅಳಿದುಳಿದ ಶತ್ರುಗಳು ನಾಶವಾಗುವರು. ನಿಮ್ಮದೇ ಶ್ರಮದಿಂದ ಭೂಲಾಭವನ್ನು ಮಾಡಿಕೊಂಡರೂ ನಿಮಗೆ ಸಲ್ಲದ ಮಾತುಗಳನ್ನು ಕೇಳಬೇಕಾದೀತು. ಬಹಳ ದಿನಗಳ ಅನಂತರ ಮನೆಯಲ್ಲಿ ಧಾರ್ಮಿಕ ಕಾರ್ಯದಲ್ಲಿ ಆಸಕ್ತಿಯು ಬರಬಹುದು. ಸಣ್ಣ ವಿಚಾರಕ್ಕೆ ನೀವು ಕೋಪಗೊಂಡು ಮನಸ್ಸನ್ನು ಹಾಳು ಮಾಡಿಕೊಳ್ಳುವಿರಿ. ಇನ್ನೊಬ್ಬರನ್ನು ನಿಂದಿಸುವ ಮಾತು ವಿವಾದಕ್ಕೆ ಗುರಿಯಾಗಬಹುದು. ಇಂದಿನ ನಿಮ್ಮ ನಿರೀಕ್ಷೆಯು ಪೂರ್ಣವಾಗಿ ಸಾಕಾರಗೊಳ್ಳದು. ವಾಹನ ಖರೀದಿಗೆ ಆಪ್ತರ ಸಲಹೆಯನ್ನು ಪಡೆಯುವಿರಿ.

ಮಕರ ರಾಶಿ : ಸಹೋದ್ಯೋಗಿಗಳಿಂದ ಸವಾಲು ಬರಬಹುದು. ಸ್ನೇಹಿತರಿಗೆ ಸಹಾಯ ಮಾಡುವ ಸಲುವಾಗ ಓಡಾಟಗಳಾಗಬಹುದು. ಸಾಲದಿಂದ ವಿಮುಕ್ತಿ ಹೊಂದಲು ಆದಾಯದ ಮೂಲವನ್ನು ಹೆಚ್ಚಿಸಿಕೊಳ್ಳುವುದು ಅಗತ್ಯವಾಗಬಹುದು. ಸ್ಥಿರಾಸ್ತಿಯ ಸಂಪಾದನೆಗೆ ಆಪ್ತರ ಮಾರ್ಗದರ್ಶನವನ್ನು ಪಡೆದುಕೊಳ್ಳುವುದು ಉತ್ತಮ. ಇಂದು ವಿದೇಶಕ್ಕೆ ಪ್ರಯಾಣ ಹೋಗುವ ಅವಕಾಶಗಳು ತೆರೆದುಕೊಳ್ಳಬಹುದು. ನಿಮ್ಮ ಪ್ರಯತ್ನಕ್ಕೆ ಫಲವು ಇಂದೇ ಸಿಗಲಿ ಎಂಬ ನಿರೀಕ್ಷೆ ಬೇಡ. ಇಂದು ನೀವು ತಂದೆಯವರಿಗೆ ಎದುರು ಮಾತನಾಡಿ ಅವರ ಮನಸ್ಸನ್ನು ನೋಯಿಸುವಿರಿ. ಅನಂತರ ಪಶ್ಚಾತ್ತಾಪಪಡುವಿರಿ.

ಕುಂಭ ರಾಶಿ : ಹೆಚ್ಚಿನ ಖರ್ಚು ಮಾಡಿ ಇಂದಿನ‌ ಕಾರ್ಯವನ್ನು ಸಾಧಿಸಿಕೊಳ್ಳುವಿರಿ. ವಾಸಸ್ಥಳವನ್ನು ಬದಲಾಯಿಸಲಿದ್ದೀರಿ. ಮನಸ್ಸಿಗೆ ನಿಮ್ಮವರು ಆಡಿದ ಮಾತುಗಳು ಹಿಂಸೆಯನ್ನು ಕೊಡಬಹುದು. ತಾಯಿಯಿಂದ ನಿಮಗೆ ಲಾಭವಾಗಬಹುದು. ಇಂದಿನ ವ್ಯರ್ಥ ಓಡಾಟದಿಂದ ನಿಮಗೆ ಆಯಾಸವಾಗುವುದು. ಇಷ್ಟರೊಳಗೆ ಆಗಬೇಕಾದ ಸರ್ಕಾರಿ ಕೆಲಸವು ಮತ್ತೂ ಮುಂದಕ್ಕೆ ಹೋಗುವುದು. ಬಂದ ಅವಕಾಶವನ್ನು ಬಿಟ್ಟು ಸಂಕಟಪಡುವಿರಿ. ಆರ್ಥಿಕ ತೊಂದರೆಗೆ ನೀವು ಬಂಧುಗಳ ಸಹಾಯವನ್ನು ಪಡೆಯಬಹುದು. ಸಂಗಾತಿಗೆ ಸಮಯವನ್ನು ಕೊಡುವುದು ಕಷ್ಟವಾದೀತು. ವಿದ್ಯಾಭ್ಯಾಸವನ್ನು ಮುಗಿಸಿ ಉದ್ಯೋಗವನ್ನು ಪಡೆಯಲು ಇಚ್ಛಿಸುವಿರಿ. ಅಂತರ್ಜಾಲದಲ್ಲಿ ಕಾಣುವ ಉದ್ಯೋಗಕ್ಕೆ ಮಾರುಹೋಗಬಹುದು.

ಮೀನ ರಾಶಿ : ಸ್ತ್ರೀಯರಿಗೆ ಎಲ್ಲ ರೀತಿಯಿಂದ ಅನುಕೂಲಕರವಾಗಲಿದೆ. ಇಂದಿನ ಕಾರ್ಯಗಳಲ್ಲಿ ಪ್ರಗತಿ ಇರಲಿದ್ದು ಸಂತೋಷವಾಗುವುದು. ಉದ್ಯೋಗದಲ್ಲಿ ಭಡ್ತಿ ಸಿಗುವ ಸಾಧ್ಯತೆ ಇದೆ. ಸಾದಿಷ್ಟವಾದ ಭೋಜನದಿಂದ ಸಂತೃಪ್ತಿ ಇರಲಿದೆ. ಗೊಂದಲದಿಂದ ಇರುವ ಮನಸ್ಸು ಇಂದು ಪ್ರಶಾಂತವಾಗಲಿದೆ. ಆತ್ಮೀಯರ ಭೇಟಿಯಿಂದ ನಿಮಗೆ ಸಮಾಧಾನ ಸಿಗಲಿದೆ. ಸಹೋದ್ಯೋಗಿಗಳ‌ ಜೊತೆ ಭಿನ್ನಾಭಿಪ್ರಾಯ ಬಂದು ಅದು ವೈಯಕ್ತಿಕ ಶತ್ರುತ್ವ ಬರಬಹುದು. ಸಂತೋಷದ ಸಮಯವನ್ನು ನೆನಪಿಸಿಕೊಳ್ಳುವಿರಿ. ನೀವು ಪ್ರಸಿದ್ಧಿಯನ್ನು ಪಡೆಯಲು ಆಸಕ್ತಿಯು ಹೆಚ್ಚುವುದು. ಸತ್ಯವನ್ನೇ ಹೇಳುವ ಉದ್ದೇಶವಿದ್ದರೂ ಅದನ್ನು ಹೇಳುವ ರೀತಿಯಲ್ಲಿ ನೀವು ಹೇಳಿ.

-ಲೋಹಿತಶರ್ಮಾ 8762924271 (what’s app only)

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ