Daily Horoscope: ಈ ರಾಶಿಯವರ ದಾಂಪತ್ಯದಲ್ಲಿ ಮಧುರ ಕ್ಷಣಗಳು ಇರಲಿವೆ

| Updated By: Rakesh Nayak Manchi

Updated on: Aug 09, 2023 | 12:30 AM

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಆಗಸ್ಟ್ 09) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಈ ರಾಶಿಯವರ ದಾಂಪತ್ಯದಲ್ಲಿ ಮಧುರ ಕ್ಷಣಗಳು ಇರಲಿವೆ
ಇಂದಿನ ರಾಶಿಭವಿಷ್ಯ
Image Credit source: iStock Photo
Follow us on

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಆಗಸ್ಟ್ 09) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ : ಆಶ್ಲೇಷಾ, ಮಾಸ : ಅಧಿಕ ಶ್ರಾವಣ, ಪಕ್ಷ : ಕೃಷ್ಣ, ವಾರ : ಬುಧ, ತಿಥಿ : ನವಮೀ, ನಿತ್ಯನಕ್ಷತ್ರ : ಕೃತ್ತಿಕಾ, ಯೋಗ : ವೃದ್ಧಿ, ಕರಣ : ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 18 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 57 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:38 ರಿಂದ 02:13ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:53 ರಿಂದ 09:28 ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:03 ರಿಂದ ಮಧ್ಯಾಹ್ನ 12:38ರ ವರೆಗೆ.

ಸಿಂಹ ರಾಶಿ: ಅಸೂಯೆಯು ನಿಮ್ಮ ಇತರ ಕೆಲಸಗಳನ್ನು ನಷ್ಟ ಮಾಡಿಸುವುದು. ಸ್ನೇಹಿತರ ಸಹಾಯವು ನಿಮಗೆ ಬಲವನ್ನು ತಂದುಕೊಡುವುದು. ಪ್ರಭಾವೀ ವ್ಯಕ್ತಿಗಳು ನಿಮ್ಮನ್ನು ಆಕರ್ಷಿಸಬಹುದು. ದಾಂಪತ್ಯದಲ್ಲಿ ಮಧುರ ಕ್ಷಣಗಳು ಇರಲಿವೆ. ಎಲ್ಲವನ್ನೂ ತಿಳಿದುಕೊಂಡೂ ನೀವು ಮುಂದೆ ಸಾಗಲು ಭಯಪಡುವಿರಿ. ಬಂಧುಗಳ ಕಾರಣದಿಂದ ಮನೆಯಲ್ಲಿ ಕಲಹಗಳು ಉಂಟಾಗಬಹುದು. ಒತ್ತಡದಿಂದ ನೀವು ಕೆಟ್ಟ ಮಾರ್ಗವನ್ನು ಅನುಸರಿಸಬೇಕಾದೀತು. ವ್ಯಾಪಾರವನ್ನು ಮಿತವಾದ ಲಾಭದಲ್ಲಿ ಮಾಡಿ. ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರೆ ನಿಮಗೆ ಅಸಮಾಧಾನದ ವಾತಾವರಣವು ಉಂಟಾಗಬಹುದು.

ಕನ್ಯಾ ರಾಶಿ: ಬಹು ದಿನಗಳಿಂದ ಇದ್ದ ನಿರುದ್ಯೋಗ ಸಮಸ್ಯೆಯು ಇಂದು ದೂರಾಗಿ, ಬೇಸರವೂ ಕಳೆಯಬಹುದು. ನಿಮ್ಮ ಗುರಿಯಾಗಿಸಿಕೊಂಡು ಸಹೋದ್ಯೋಗಿಗಳು ಕೆಲಸವನ್ನು ಮಾಡುವರು. ಭೂಮಿಯು ಲಾಭವಾಗುವಂತೆ ಇದ್ದರೂ ಕೈ ತಪ್ಪಿ ಹೋಗಬಹುದು. ನಿಮ್ಮ ಸ್ವಭಾವವು ಇತರರಿಗೆ ಕಿರಿಕಿರಿ ತರಿಸಬಹುದು. ಒಳ್ಳೆಯ ವಸ್ತುವಿನ ಲಾಭವಾಗುವುದು. ಯಾರನ್ನೂ ನೀವು ಕೆಳಮಟ್ಟದಲ್ಲಿ ಕಾಣಲು ಬೇಡ. ಉನ್ನತ ವ್ಯಾಸಂಗಕ್ಕಾಗಿ ನೀವು ಸ್ನೇಹಿತನ‌ ಜೊತೆ ತರಳುವಿರಿ. ಸ್ಥಾನಚ್ಯುತಿಯ ಭಯವು ನಿಮ್ಮನ್ನು ಕಾಡಬಹುದು.‌ಮನೆಯ ಸಂದರ್ಭವನ್ನು ನೆನೆದು ದುಃಖಿಸಬಹುದು. ಬಂಧುಗಳು ನಿಮ್ಮನ್ನು ಅಳೆಯಬಹುದು.

ತುಲಾ ರಾಶಿ: ಅಧಿಕಾರಿಗಳು ಹೆಚ್ಚು ಒತ್ತಡದಿಂದ ಇರುವಿರಿ. ಮಾತನಾಡುವಾಗ ಹೆಚ್ಚು ಸ್ಪಷ್ಟತೆ ಇರಲಿ. ಹಣಕಾಸಿನ ಲೆಕ್ಕಾಚಾರದಲ್ಲಿ ನಿಮಗೆ ಕೆಲವು ಗೊಂದಲಗಳು ಬರಬಹುದು. ವಿದ್ಯಾರ್ಥಿಗಳು ಅಧ್ಯಯನಕ್ಕಾಗಿ ನಿಯಮಗಳನ್ನು ಹಾಕಿಕೊಳ್ಳುವರು. ಅಥವಾ ಪೋಷಕರು ಹಾಕಿಕೊಡಬೇಕಾಗುವುದು. ಸಹೋದ್ಯೋಗಿಗಳ ಜೊತೆ ನಿಮ್ಮ ವರ್ತನೆಯು ಸರಿಯಾಗಿ ಇರಲಿ. ಅಧಿಕಲಾಭಕ್ಕಾಗಿ ಏನನ್ನಾದರೂ ಮಾಡಲು ಹೋಗುವುದು ಬೇಡ. ಶತ್ರುಗಳು ನಿಮ್ಮ ಕಾರ್ಯವನ್ನು ತಪ್ಪಿಸಲು ಹುಟ್ಟಿಕೊಳ್ಳಬಹುದು. ಕ್ರೀಡಾಸಕ್ತರು ಜಯಗಳಿಸುವರು. ಮನೋರಂಜನೆಗಾಗಿ ಹೆಚ್ಚು ಸಮಯವನ್ನು ನೀಡುವಿರಿ‌. ನಿಮ್ಮ ವಿದ್ಯೆಗೆ ಯೋಗ್ಯವಾದ ಉದ್ಯಮವನ್ನು ಅನ್ವೇಷಣೆ ಮಾಡುವಿರಿ.

ವೃಶ್ಚಿಕ ರಾಶಿ: ಲಾಭವು ಇಲ್ಲದ ಪ್ರಯಾಣವು ನಿಮಗೆ ಬೇಸರವನ್ನು ತರಿಸಬಹುದು. ನಿಮಗೆ ಪ್ರಶಂಸೆಯ ಜೊತೆ ಹೆಚ್ಚಿನ ಜವಾಬ್ದಾರಿಗಳೂ ಬರಬಹುದು. ನಿಮ್ಮ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ನೌಕರರು ಹಿಂದೇಟು ಹಾಕಬಹುದು. ಪ್ರಯಾಣದ ಆಯಾಸವನ್ನು ಪರಿಹರಿಸಿಕೊಳ್ಖುವುದು ನಿಮಗೆ ಕಷ್ಟವಾದೀತು. ಇಬ್ಬರೂ ಒಪ್ಪಿಕೊಂಡ ಸಂಗಾತಿಗಳು ದೂರವಾಗುವ ಸಾಧ್ಯತೆಯೂ ಇದೆ. ನಿಮ್ಮ ಕಂಡು ಹಾಸ್ಯ ಮಾಡಬಹುದು. ಪಕ್ಷಪಾತ ಮಾಡುವುದನ್ನು ಯಾರೂ ಒಪ್ಪಲಾರರು. ಅಧಿಕ ಖರ್ಚನ್ನು ನೀವು ನಿಯಂತ್ರಿಸುವುದು ಒಳ್ಳೆಯದೇ.