AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರಿಗೆ ಮಾನಸಿಕ ಒತ್ತಡಗಳು ನಿಮ್ಮ ಕೆಲಸವನ್ನು ಹಾಳುಮಾಡುವುದು

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ನವೆಂಬರ್​ 09) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರಿಗೆ ಮಾನಸಿಕ ಒತ್ತಡಗಳು ನಿಮ್ಮ ಕೆಲಸವನ್ನು ಹಾಳುಮಾಡುವುದು
ರಾಶಿ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 09, 2023 | 12:30 AM

Share

ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್​ 09) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಉತ್ತರಾಫಲ್ಗುಣೀ, ಯೋಗ: ವೈಧೃತಿ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 30 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 01 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 01:42 ರಿಂದ 03:09 ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:32 ರಿಂದ 07:58 ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:24 ರಿಂದ 10:50ರ ವರೆಗೆ.

ಸಿಂಹ ರಾಶಿ : ಅನಿರೀಕ್ಷಿತ ಹಣದ ಆಗಮನದಿಂದ‌ ಕೊಡಬೇಕಾದವರಿಗೆ ಕೊಟ್ಟು ಮುಗಿಸುವಿರಿ. ಎಂದಿಗಿಂತ ವ್ಯಾಪಾರದಲ್ಲಿ ಹಿನ್ನಡೆ ಇರಲಿದೆ. ಚಿಂತೆಯು ಕಾಡಬಹುದು. ಪಾಲುದಾರಿಕೆಯಲ್ಲಿ ನಿಮಗೆ ಹೊಂದಾಣಿಕೆಯ ಕೊರತೆ ಆಗಬಹುದು. ಅನಿರೀಕ್ಷಿತ ವೆಚ್ಚವನ್ನು ಮಾಡಬೇಕಾಗಬಹುದು. ಪ್ರಯಾಣದಲ್ಲಿ ತೊಂದರೆಗಳು ಬಂದರೂ ತಲುಪಬೇಕಾದ ಸ್ಥಳಕ್ಕೆ ಹೋಗುವಿರಿ. ಸರ್ಕಾರಿ ನೌಕರರು ಅಧಿಕಾರಿಗಳಿಂದ ಸಮಸ್ಯೆಯನ್ನು ಎದುರಿಸಬೇಕಾದೀತು. ಮಾನಸಿಕ ಒತ್ತಡಗಳು ನಿಮ್ಮ ಕೆಲಸವನ್ನು ಹಾಳುಮಾಡುವುದು. ಸಂಗಾತಿಯ ಮೌನದಿಂದ ನಿಮಗೆ ಆತಂಕ ಹುಟ್ಟಬಹುದು‌. ಬೇಕಾದಷ್ಟು ಮಾತುಗಳು ಮಾತ್ರ ಆಡಿರಿ. ಪ್ರೇಮವು ಬಿಟ್ಟರೂ ಬಿಡದೀ ಮಾಯೆ ಎನ್ನುವಂತೆ ಆಗುವುದು.

ಕನ್ಯಾ ರಾಶಿ : ದೇಹಾಲಸ್ಯವು ನಿಮ್ಮ ಕಾರ್ಯದಲ್ಲಿ ಹಿನ್ನಡೆಯಾಗಲಿದೆ. ಅತಿಯಾದ ಚಿಂತೆಯು ನಿಮ್ಮ ಜೊತೆಗಿರುವವರ ಮನಸ್ಸನ್ನೂ ಕೆಡಿಸೀತು. ಉದ್ಯೋಗದ ಬದಲಾವಣೆ ಆಗಲಿದ್ದು ಸರಿಯಾದ ಪ್ರತ್ಯುತ್ತರ ಸಿಗದೇ ಬೇಸರವಾಗುವುದು. ನಿಮ್ಮ ನಿಯಮಗಳನ್ನು ನೀವೇ ಭಂಗ ಮಾಡಿಕೊಳ್ಳುವಿರಿ. ಎಚ್ಚರಿಕೆಯಿಂದ ನಿಮ್ಮ ಹೆಜ್ಜೆಯನ್ನು ಇಡಿ. ಅಳುಕಿನಿಂದ ಇರುವಿರಿ. ಇಂದು ಕೈಗೊಂಡ ಪ್ರವಾಸದಲ್ಲಿ ನಿಮಗೆ ತೃಪ್ತಿ ಸಿಗದು. ವೈದ್ಯ ವೃತ್ತಿಯಲ್ಲಿ ಒತ್ತಡವು ಅಧಿಕವಾಗಿ ಬರಬಹುದು. ಯಾರದ್ದೋ ಮೂಲಕ ನೀವು ಶತ್ರುಗಳ ಯೋಜನೆಯನ್ನು ತಿಳಿಯುವಿರಿ. ಸಹನೆಯಿಂದ ಆಗುವ ಲಾಭವು ಅನುಭವಕ್ಕೆ ಬರಬಹುದು. ಮಕ್ಕಳು ನಿಮ್ಮ ಮಾತನ್ನು ಕೇಳದೇ ತಮಗೆ ತೋಚಿದಂತೆ ನಡೆದುಕೊಳ್ಳುವುದು ನಿಮಗೆ ಇಷ್ಟವಾಗದು. ಸಣ್ಣ ತಪ್ಪಿಗೆ ಸಿಕ್ಕಿಕೊಳ್ಳುವಿರಿ.

ತುಲಾ ರಾಶಿ : ಆಶಕ್ತರಿಗೆ ಸಹಕಾರ ನೀಡುವಿರಿ. ಸಭ್ಯರ ಸಹವಾಸವು ಸಿಗುವುದು. ಸಾಮಾಜಿಕ ಕೆಲಸಗಳು ನಿಮ್ಮನ್ನು ಹುಡುಕಿಕೊಂಡು ಬರಬಹುದು. ವ್ಯವಹಾರದಲ್ಲಿ ಊಹಿಸಿದ್ದಕ್ಕಿಂತ ಹೆಚ್ಚಿನ ಲಾಭವು ಸಿಗುವುದು. ದುಡುಕಿ ಮಾತನಾಡಿ ಸತ್ಯವನ್ನು ಹೇಳುವಿರಿ. ಆಸ್ತಿಯ ಕಲಹವನ್ನು ನ್ಯಾಯಾಲಯಕ್ಕೆ ತಡಗೆದುಕೊಂಡು ಹೋಗುವಿರಿ. ವಿನಾಕಾರಣ ಯಾರ ಮೇಲಾದರೂ ಅಧಿಕಾರವನ್ನು ಚಲಾಯಿಸುವಿರಿ. ಹಣಕಾಸಿನ ವ್ಯವಹಾರವು ಪಾರದರ್ಶಕವಾಗಿ ಇರಲಿ. ಸಂಗಾತಿಯಿಂದ ನಿಮಗೆ ನೂತನ ವಸ್ತ್ರಗಳು ಬರಬಹುದು. ನಿಮ್ಮ ಆದಾಯದ ಮೂಲವನ್ನು ಹೆಚ್ಚುಮಾಡಿಕೊಳ್ಳುವಿರಿ. ಕೆಲಸದಲ್ಲಿ ಪ್ರಾಮಾಣಿಕತೆ ಕಡಿಮೆ ಆದಂತೆ ತೋರಬಹುದು. ಪಾಲುದಾರಿಕೆಯಿಂದ ಹೊರಬರವುದು ಒಳ್ಳೆಯದು ಎಂದು ಅನ್ನಿಸಬಹುದು. ಎಲ್ಲರ ಜೊತೆ ಸ್ನೇಹಿಭಾವದಿಂದ ಬರೆಯುವಿರಿ.

ವೃಶ್ಚಿಕ ರಾಶಿ : ಸಹೋದ್ಯೋಗಿಗಳ ಬಗ್ಗೆ ನಿಮಗೆ ಅಸಮಾಧಾನ ಇರಲಿದೆ‌. ಪುಣ್ಯಕ್ಷೇತ್ರಗಳ ದರ್ಶನವನ್ನು ಮಾಡುವ ಇಚ್ಛೆ ಇರಲಿದೆ. ಬಂಧುಗಳು ನಿಮ್ಮ ಸಮಸ್ಯೆಗೆ ಸ್ಪಂದಿಸುವರು. ವ್ಯಾಪಾರವು ಲಾಭಾಂಶವನ್ನು ಹೆಚ್ಚು ಪಡೆಯುವುದು. ಹುಡುಗಾಟದ ಬುದ್ಧಿಯಿಂದ ಕೆಲವು ವಿಚಾರಗಳು ನಿಮಗೆ ಗೊತ್ತಾಗದೇ ಹೋಗಬಹುದು. ಸಂಗಾತಿಯ ಬೆಂಬಲವು ಸಿಗದೇಹೋಗಬಹುದು. ಇಂದಿನ ಕಾರ್ಯದಲ್ಲಿ ಮುನ್ನಡೆಯಿರಲಿದ್ದು ನಿಮ್ಮ ಬಗ್ಗೆ ಸದಭಿಪ್ರಾಯವು ಇರುವುದು. ಆಪ್ತರ ಜೊತೆ ಮಾಡಿದ‌ ಸಮಾಲೋಚನೆಯಿಂದ ಮನಸ್ಸಿಗೆ ಸಂತೋಷ ಸಿಗುವುದು. ಸ್ಥಳ ಬದಲಾವಣೆಯಿಂದ ಹೊಂದಿಕೊಳ್ಳುವುದು ಕಷ್ಟವಾದೀತು. ಆಕಸ್ಮಿಕವಾದ ವಿಷಯದಿಂದ ನಿಮಗೆ ದುಃಖವಾಗುವುದು. ವಿದ್ಯಾಭ್ಯಾಸದ ಕಾರಣಕ್ಕೆ ಪ್ರಯಾಣ ಮಾಡು ಸನ್ನಿವೇಶವು ಬರಬಹುದು.

ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್