Horoscope: ರಾಶಿಭವಿಷ್ಯ, ಈ ರಾಶಿಯವರು ಅಸೂಯೆಯಿಂದ ಇತರ ಕೆಲಸಗಳನ್ನು ಹಾಳುಮಾಡಿಕೊಳ್ಳುವಿರಿ
ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಅಕ್ಟೋಬರ್ 09)) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.
ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ಅಕ್ಟೋಬರ್ 09) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಆಶ್ಲೇಷಾ, ಯೋಗ: ಸಿದ್ಧ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06:24ಕ್ಕೆ, ಸೂರ್ಯಾಸ್ತ ಸಂಜೆ 06:15ಕ್ಕೆ, ರಾಹು ಕಾಲ ಬೆಳಿಗ್ಗೆ 07:53-09:22ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:51–12:20ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 01:49 –03:18ರ ವರೆಗೆ.
ಸಿಂಹ ರಾಶಿ : ನಿಮ್ಮ ವರ್ತನೆಯನ್ನು ಬದಲಿಸಿಕೊಳ್ಳಲು ಯೋಚಿಸುವಿರಿ. ದಿನದ ಆರಂಭವು ಬಹಳ ಉತ್ಸಾಹದಿಂದ ಇರುವುದು. ಸಾಲದಿಂದ ಮುಕ್ತರಾಗಲು ನಿಮಗೆ ಅನುಕೂಲವಾಗುವುದು. ತಾಯಿಯ ವಾತ್ಸಲ್ಯವು ಸಿಗುವುದು. ಅಸೂಯೆಯಿಂದ ನಿಮ್ಮ ಇತರ ಕೆಲಸಗಳನ್ನು ಹಾಳುಮಾಡಿಕೊಳ್ಳುವಿರಿ. ಸ್ನೇಹಿತರ ಸಹಾಯದಿಂದ ನಿಮಗೆ ಬಲವು ಬರುವುದು. ದೂರದ ಬಂಧುಗಳಿಂದ ಸಹಾಯವು ಸಿಗಬಹುದು. ದಾಂಪತ್ಯದಲ್ಲಿ ಮಧುರ ಕ್ಷಣಗಳಿಂದ ಖುಷಿಯಾಗಲಿದೆ. ಎಲ್ಲವನ್ನೂ ತಿಳಿದುಕೊಂಡರೂ ಹಿಂದೆ ಸರಿಯುವಿರಿ. ಬಂಧುಗಳ ಕಾರಣದಿಂದ ಮನೆಯಲ್ಲಿ ವೈಮನಸ್ಯ ಉಂಟಾಗಬಹುದು. ಒತ್ತಡದಿಂದ ನೀವು ಯಾವುದಾದರೂ ಮಾರ್ಗವನ್ನು ಅನುಸರಿಸುವಿರಿ. ವ್ಯಾಪಾರವನ್ನು ಮಿತವಾದ ಲಾಭವನ್ನು ನಿರೀಕ್ಷಿಸಿ.
ಕನ್ಯಾ ರಾಶಿ : ಕಷ್ಟಗಳ ನಿವಾರಣೆಗೆ ದೈವಕ್ಕೆ ಶರಣಾಗುವಿರಿ. ನಿಮ್ಮ ಕಾರ್ಯಗಳಿಗೆ ಕುಟುಂಬದ ಬೆಂಬಲವು ಸಿಗುವುದು. ಬಂಧುಗಳಿಂದ ನಿಮಗೆ ಇಂದು ಆಲಸ್ಯದ ಪಟ್ಟವು ಸಿಗಬಹುದು. ನಿಮ್ಮ ನಿರುದ್ಯೋಗ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳುವಿರಿ. ಸಂಗಾತಿಯನ್ನು ದೂರ ಮಾಡಿಕೊಂಡು ಮನೆಯಲ್ಲಿ ಕಷ್ಟವಾದೀತು. ನಿಮ್ಮ ಗುರಿಯಾಗಿಸಿಕೊಂಡು ಸಹೋದ್ಯೋಗಿಗಳು ಕೆಲಸವನ್ನು ಮಾಡುವರು. ಕೈಗೆ ಸಿಕ್ಕ ಭೂಮಿಯು ತಪ್ಪಿ ಹೋಗಬಹುದು. ನಿಮ್ಮ ಮಾತನಾಡುವ ಸ್ವಭಾವವು ಇತರರಿಗೆ ಕಿರಿಕಿರಿ ಉಂಟಾದೀತು. ನಿಮ್ಮ ವಸ್ತುವನ್ನು ಕಳೆದುಕೊಳ್ಳುವಿರಿ. ಅವಹೇಳನಕಾರಿ ಮಾತುಗಳನ್ನು ಎಲ್ಲರೆದುರು ಆಡುವಿರಿ. ಉನ್ನತ ವ್ಯಾಸಂಗಕ್ಕಾಗಿ ನೀವು ಸ್ನೇಹಿತನ ಜೊತೆ ತೆರಳುವಿರಿ. ಸ್ಥಾನಚ್ಯುತಿಯ ಭಯವು ಇರುವುದು. ಮನೆಯ ಪರಿಸ್ಥಿತಿಯನ್ನು ನೆನೆದು ದುಃಖಿಸುವಿರಿ. ಬಂಧುಗಳು ನಿಮ್ಮನ್ನು ಅಳೆಯುವರು.
ತುಲಾ ರಾಶಿ : ವ್ಯಾಪಾರದಲ್ಲಿ ಸ್ತ್ರೀಯರ ಸಹಾಯದಿಂದ ಲಾಭವನ್ನು ಪಡೆಯುವಿರಿ. ಅನಿರೀಕ್ಷಿತ ದೂರ ಪ್ರಯಾಣವನ್ನು ಮಾಡಲಿದ್ದೀರಿ. ಸಣ್ಣ ವಿಚಾರಗಳಿಗೂ ಕೋಪ ಮಾಡಿಕೊಳ್ಳುವಿರಿ. ಇಂದು ಹಣದ ವಿಚಾರದಲ್ಲಿ ನಿಮಗೆ ಹಿನ್ನಡೆಯಾಗುವುದು. ಅಧಿಕಾರಿಗಳು ಹೆಚ್ಚು ಒತ್ತಡದಿಂದ ಇರುವರು. ವ್ಯವಹಾರಕ್ಕೆ ಸಂಬಂಧಪಟ್ಟಂತೆ ಮಾತುಗಳು ನಿಖರವಾಗಿ ಇರಲಿ. ವಿದ್ಯಾರ್ಥಿಗಳು ಅಧ್ಯಯನಕ್ಕಾಗಿ ನಿಯಮಗಳನ್ನು ಹಾಕಿಕೊಳ್ಳುವುದು ಉತ್ತಮ. ಸಹೋದ್ಯೋಗಿಗಳ ಜೊತೆ ಸಲುಗೆಯಿಂದ ಇರುವಿರಿ. ಅಧಿಕಲಾಭಕ್ಕಾಗಿ ಏನನ್ನಾದರೂ ಮಾಡಲು ಹೋಗುವುದು ಬೇಡ. ಹಿತಶತ್ರುಗಳು ನಿಮ್ಮ ಕಾರ್ಯವನ್ನು ತಪ್ಪಿಸಬಹುದು. ಹಳೆಯ ಪರಿಚಿತ ವ್ಯಕ್ತಿಗಳು ಹೊಸಬರಂತೆ ತೋರುವುದು.
ವೃಶ್ಚಿಕ ರಾಶಿ : ಅಧಿಕ ಹೂಡಿಕೆಯು ನಿಮಗೆ ಸ್ಥಾನದ ಪ್ರಶ್ನೆಯಾಗಿ ಉಳಿಯುವುದು. ಉತ್ತಮ ಅವಕಾಶಗಳಿಗೆ ನೀವು ಕಾಯುತ್ತಿರುವಿರಿ. ಯಾರದೋ ಮಾತಿನಿಂದ ನಿಮ್ಮ ನೆಮ್ಮದಿಯನ್ನು ಕಳೆದುಕೊಳ್ಳುವಿರಿ. ಏನೂ ಲಾಭವಿಲ್ಲದೇ ಪ್ರಯಾಣವು ನಿಮಗೆ ಬೇಸರ ಎನಿಸುವುದು. ಇಂದು ನಿಮಗೆ ಪ್ರಶಂಸೆಯಿಂದ ಜವಾಬ್ದಾರಿಗಳೂ ಹೆಚ್ಚುವುದು. ನಿಮ್ಮ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ನೌಕರರು ಒಪ್ಪುವುದಿಲ್ಲ. ಪ್ರಯಾಣದ ಆಯಾಸವನ್ನು ಪರಿಹರಿಸಿಕೊಳ್ಖುವುದು ನಿಮಗೆ ಕಷ್ಟವಾದೀತು. ಇಬ್ಬರೂ ಒಪ್ಪಿಕೊಂಡ ಬಾಂಧವ್ಯವು ದೂರವಾಗಬಹುದು. ನಿಮ್ಮ ವರ್ತನೆಯನ್ನು ಕಂಡು ಯಾರಾದರೂ ಅಪಹಾಸ್ಯ ಮಾಡಬಹುದು. ನಿಮಗೆ ಮುಜುಗರವಾದೀತು.