Horoscope: ಈ ರಾಶಿಯವರಿಗೆ ಸಂಗಾತಿಯ ಮೌನದಿಂದ ಆತಂಕ ಹುಟ್ಟಬಹುದು‌

| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 09, 2023 | 12:45 AM

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಸೆಪ್ಟೆಂಬರ್ 09) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರಿಗೆ ಸಂಗಾತಿಯ ಮೌನದಿಂದ ಆತಂಕ ಹುಟ್ಟಬಹುದು‌
ಪ್ರಾತಿನಿಧಿಕ ಚಿತ್ರ
Follow us on

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 09 ಶನಿವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ನಿಜ ಶ್ರಾವಣ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ದಶಮೀ, ನಿತ್ಯನಕ್ಷತ್ರ: ಆರ್ದ್ರಾ, ಯೋಗ: ಸಿದ್ಧಿ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 37 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:26 ರಿಂದ 10:58 ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:02 ರಿಂದ 03:34ರ ವರೆಗೆ, ಗುಳಿಕ ಕಾಲ ಸಂಜೆ 06:22 ರಿಂದ 07:54ರ ವರೆಗೆ.

ಸಿಂಹ ರಾಶಿ : ಸಾಲಗಾರರಿಗೆ ಚಿಂತೆ ಇರಲಿದೆ. ಪಾಲುದಾರಿಕೆಯಲ್ಲಿ ನಿಮಗೆ ಹೊಂದಾಣಿಕೆಯ ಕೊರತೆ ಆಗಬಹುದು. ಅನಿರೀಕ್ಷಿತ ವೆಚ್ಚವನ್ನು ಮಾಡಬೇಕಾಗಬಹುದು. ಪ್ರಯಾಣದಲ್ಲಿ ತೊಂದರೆಗಳು ಬಂದರೂ ತಲುಪಬೇಕಾದ ಸ್ಥಳಕ್ಕೆ ಹೋಗುವಿರಿ. ಮಾನಸಿಕ ಒತ್ತಡಗಳು ನಿಮ್ಮ ಕೆಲಸವನ್ನು ಹಾಳುಮಾಡುವುದು. ಸಂಗಾತಿಯ ಮೌನದಿಂದ ನಿಮಗೆ ಆತಂಕ ಹುಟ್ಟಬಹುದು‌. ಬೇಕಾದಷ್ಟು ಮಾತುಗಳು ಮಾತ್ರ ಆಡಿರಿ. ಇಷ್ಟಪಟ್ಟ ವಸ್ತುವು ಕಾಣೆಯಾಗುವುದು. ನಿಮಗೆ ನೇರವಾಗಿ ಸಂಬಂಧಪಟ್ಟ ವಿಚಾರಗಳ ಬಗ್ಗೆ ಮಾತ್ರ ಪ್ರವೇಶಿಸಿ. ಸಂಗಾತಿಯ ಮಾತುಗಳಿಂದ ನೀವು ಸಿಟ್ಟಾಗಬಹುದು. ಇಂದು ನಿಮ್ಮನ್ನು ಅಪರಿಚಿತರು ಭೇಟಿ ಮಾಡಬಹುದು.

ಕನ್ಯಾ ರಾಶಿ : ಉದ್ಯೋಗದ ಬದಲಾವಣೆ ಆಗಲಿದ್ದು ಸರಿಯಾದ ಪ್ರತ್ಯುತ್ತರ ಸಿಗದೇ ಬೇಸರವಾಗುವುದು. ನಿಮ್ಮ ನಿಯಮಗಳನ್ನು ನೀವೇ ಭಂಗ ಮಾಡಿಕೊಳ್ಳುವಿರಿ. ಎಚ್ಚರಿಕೆಯಿಂದ ನಿಮ್ಮ ಹೆಜ್ಜೆಯನ್ನು ಇಡಿ. ಅಳುಕಿನಿಂದ ಇರುವಿರಿ. ಇಂದು ಕೈಗೊಂಡ ಪ್ರವಾಸದಲ್ಲಿ ನಿಮಗೆ ತೃಪ್ತಿ ಸಿಗದು. ಯಾರದ್ದೋ ಮೂಲಕ ನೀವು ಶತ್ರುಗಳ ಯೋಜನೆಯನ್ನು ತಿಳಿಯುವಿರಿ. ಸಹನೆಯಿಂದ ಆಗುವ ಲಾಭವು ಅನುಭವಕ್ಕೆ ಬರಬಹುದು. ಮಕ್ಕಳು ನಿಮ್ಮ ಮಾತನ್ನು ಕೇಳದೇ ತಮಗೆ ತೋಚಿದಂತೆ ನಡೆದುಕೊಳ್ಳುವುದು ನಿಮಗೆ ಇಷ್ಟವಾಗದು. ಪದೋನ್ನತಿಯ ವಿಚಾರದಲ್ಲಿ ನಿಮಗೆ ಸ್ಪಷ್ಟ ಮಾಹಿತಿ ಸಿಗದು.

ತುಲಾ ರಾಶಿ : ವ್ಯವಹಾರದಲ್ಲಿ ಊಹಿಸಿದ್ದಕ್ಕಿಂತ ಹೆಚ್ಚಿನ ಲಾಭವು ಸಿಗಬಹುದು. ದುಡುಕಿ ಆಡಿದ ಮಾತಿನಿಂದ ಸತ್ಯವು ಹೊರಬರಬಹುದು. ಆಸ್ತಿಯ ಕಲಹವನ್ನು ನ್ಯಾಯಾಲಯಕ್ಕೆ ತಡಗೆದುಕೊಂಡು ಹೋಗುವಿರಿ. ವಿನಾಕಾರಣ ಯಾರ ಮೇಲಾದರೂ ಅಧಿಕಾರವನ್ನು ಚಲಾಯಿಸುವಿರಿ. ಸಂಗಾತಿಯಿಂದ ನಿಮಗೆ ನೂತನ ವಸ್ತ್ರಗಳು ಬರಬಹುದು. ನಿಮ್ಮ ಆದಾಯದ ಮೂಲವನ್ನು ಹೆಚ್ಚುಮಾಡಿಕೊಳ್ಳುವಿರಿ. ಕೆಲಸದಲ್ಲಿ ಪ್ರಾಮಾಣಿಕತೆ ಕಡಿಮೆ ಆದಂತೆ ತೋರಬಹುದು. ಪಾಲುದಾರಿಕೆಯಿಂದ ಹೊರಬರವುದು ಒಳ್ಳೆಯದು ಎಂದು ಅನ್ನಿಸಬಹುದು. ಸ್ಪರ್ಧಾಮನೋಭಾವವು ನಿಮಗೆ ಇಷ್ಟವಾಗದು. ನಿಮ್ಮ ಕಾರ್ಯಗಳು ಸೂಚನೆಯ ಅನುಸಾರವಾಗಿ ನಡೆಯಲಿ.

ವೃಶ್ಚಿಕ ರಾಶಿ : ಬಂಧುಗಳು ನಿಮ್ಮ ಸಮಸ್ಯೆಗೆ ಸ್ಪಂದಿಸುವರು. ವ್ಯಾಪಾರವು ಲಾಭಾಂಶವನ್ನು ಹೆಚ್ಚು ಪಡೆಯುವುದು. ಹುಡುಗಾಟದ ಬುದ್ಧಿಯಿಂದ ಕೆಲವು ವಿಚಾರಗಳು ನಿಮಗೆ ಗೊತ್ತಾಗದೇ ಹೋಗಬಹುದು. ಇಂದಿನ ಕಾರ್ಯದಲ್ಲಿ ಮುನ್ನಡೆಯಿರಲಿದ್ದು ನಿಮ್ಮ ಬಗ್ಗೆ ಸದಭಿಪ್ರಾಯವು ಇರುವುದು. ಸ್ಥಳ ಬದಲಾವಣೆಯಿಂದ ಹೊಂದಿಕೊಳ್ಳುವುದು ಕಷ್ಟವಾದೀತು. ಆಕಸ್ಮಿಕವಾದ ವಿಷಯದಿಂದ ನಿಮಗೆ ದುಃಖವಾಗುವುದು. ಕೊಡಬಹುದು. ಅಶಿಸ್ತಿನ ಜೀವನವು ನಿಮಗೆ ಸಮಾಧನಾವನ್ನು ಕೊಡದು. ನೀವು ಯಾರ ಮಾತನ್ನೂ ಕೇಳುವುದಿಲ್ಲ. ನಿಮ್ಮ ತಪ್ಪನ್ನು ಬೇರೆಯವರು ಎತ್ತಿ ಹೇಳುವುದು ನಿಮಗೆ ಸಿಟ್ಟು ಬರಬಹುದು.