Horoscope: ದಿನಭವಿಷ್ಯ, ಈ ರಾಶಿಯವರು ಯಾರದ್ದೋ ಸಿಟ್ಟನ್ನು ಇನ್ಯಾರದ್ದೋ ಮೇಲೆ ತೀರಿಸಿಕೊಂಡು ಸಮಾಧಾನಪಡಲಿದ್ದಾರೆ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಆಗಸ್ಟ್ 1) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ, ಈ ರಾಶಿಯವರು ಯಾರದ್ದೋ ಸಿಟ್ಟನ್ನು ಇನ್ಯಾರದ್ದೋ ಮೇಲೆ ತೀರಿಸಿಕೊಂಡು ಸಮಾಧಾನಪಡಲಿದ್ದಾರೆ
ಇಂದಿನ ರಾಶಿಭವಿಷ್ಯImage Credit source: iStock Photo
Follow us
TV9 Web
| Updated By: Rakesh Nayak Manchi

Updated on: Aug 01, 2023 | 12:30 AM

ಇಂದಿನ ನಿಮ್ಮ ರಾಶಿ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಆಗಸ್ಟ್ 1) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ,ಪ ಮಹಾನಕ್ಷತ್ರ: ಪುಷ್ಯಾ, ಮಾಸ: ಅಧಿಕ ಶ್ರಾವಣ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಶ್ರವಣಾ , ಯೋಗ: ವಿಷ್ಕಂಭ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 16 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆಗೆ, ರಾಹು ಕಾಲ ಮಧ್ಯಾಹ್ನ 03 :49 ರಿಂದ 05:25ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:28 ರಿಂದ 11:03ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:39 ರಿಂದ 02:14ರ ವರೆಗೆ.

ಸಿಂಹ ರಾಶಿ: ತೆಗಳಿಕೆಗಳನ್ನು ನೀವು ಸ್ವೀಕರಿಸಲು ಸಿದ್ಧರಿರುವುದಿಲ್ಲ. ಸಂಗಾತಿಯ ಮಾತನ್ನು ನಿರ್ಲಕ್ಷಿಸಿ ಕೆಲಸವನ್ನು ಮಾಡುವಿರಿ. ಇದರಿಂದ ಸಿಟ್ಟಾಗಬಹುದು. ಬಹಳ ದಿನಗಳಿಂದ ಮರೆತುಹೋಗಿದ್ದ ಸಂಗತಿಯು ನಿಮ್ಮನ್ನು ಮತ್ತೆ ಕಾಡಬಹುದು. ಪಿತ್ರಾರ್ಜಿತ ಆಸ್ತಿಯಲ್ಲಿ ಪಾಲನ್ನು ಕೇಳುವ ಧೈರ್ಯ ಮಾಡುವಿರಿ. ಆಪ್ತರನ್ನು ನೀವು ದೂರ ಮಾಡಿಕೊಳ್ಳಬಹುದು. ಸೌಂದರ್ಯ ವರ್ಧನೆಗೆ ಹೆಚ್ಚು ಮಹತ್ತ್ವವನ್ನು ಕೊಡುವಿರಿ. ಬಡ್ಡಿಯ ಹಣದಲ್ಲಿ ನೀವು ಇಂದಿನ ಖರೀದಿಯನ್ನು ಮಾಡುವಿರಿ. ಪೂರ್ವಸಿದ್ಧತೆಯನ್ನು ಮಾಡಿಕೊಂಡು ಯಾವ ಕೆಲಸಕ್ಕಾದರೂ ಇಳಿಯಿರಿ. ಎಲ್ಲರೂ ನಿಮಗೆ ಹೊಸಬರಂತೆ ಕಾಣುವರು.

ಕನ್ಯಾ ರಾಶಿ: ನೀವು ಮಾಡಿದ ತಪ್ಪಿಗೆ ಇನ್ನೊಬ್ಬರನ್ನು ತೋರಿಸುವುದು ಸರಿಯಲ್ಲ. ಮಿತ್ರರನ್ನು ಅನುಮಾನದಿಂದ ಕಾಣುವಿರಿ. ಇನ್ನೊಬ್ಬರಿಗೆ ಉಪಕಾರ ಮಾಡಲು ಹೋಗಿ ತೊಂದರೆಗೆ ಸಿಕ್ಕಿಕೊಳ್ಳಬಹುದು. ನೂತನ ಗೃಹದ ಖರೀದಿಯ ಬಗ್ಗೆ ಸದ್ಯ ಮಾತುಕತೆಗಳು ಬೇಡ. ವಿವಾಹದ ಮಾತುಕತೆಯನ್ನೂ ಮುಂದೂಡಿ. ಕುಟುಂಬಕ್ಕೆ ನಿಮ್ಮಿಂದ ಅಲ್ಪ ಧನಸಹಾಯವಾಗಬಹುದು. ಎಲ್ಲ ಸಂಗತಿಗಳನ್ನು ನೀವು ಲಘುವಾಗಿ ಕಾಣುವಿರಿ. ನಿಮ್ಮ ಜವಾಬ್ದಾರಿಯನ್ನು ನಿರ್ವಹಿಸಲು ನಿಮಗೆ ಕಷ್ಟವಾದೀತು. ತಾಯಿಯ ಆರೋಗ್ಯವು ಕೆಡಬಹುದು. ಸೂಕ್ತ ಚಿಕಿತ್ಸೆಯನ್ನು ಮಾಡಿಸಿ.

ತುಲಾ ರಾಶಿ: ಅನಪೇಕ್ಷಿತ ವಿಚಾರಗಳನ್ನು ಚರ್ಚಿಸಿ ಸಮಯವನ್ನು ವ್ಯರ್ಥಮಾಡುವಿರಿ. ಉದ್ಯಮದಲ್ಲಿ ಎಂದಿಗಿಂತ ಕಡಿಮೆ ಲಾಭವಾಗುವುದು. ಉದ್ಯೋಗದಲ್ಲಿ ಒತ್ತಡವನ್ನು ನಿಭಾಯಿಸಲು ನಮಗೆ ಗೊತ್ತಾಗದೇ ಒದ್ದಾಡುವಿರಿ. ಸಂಗಾತಿಗಾಗಿ ಹಣವನ್ನು ಖರ್ಚು ಮಾಡುವಿರಿ. ಉದ್ಯೋಗವನ್ನು ಪಡೆಯಲು ನೀವು ಹಣವನ್ನು ನೀಡಬೇಕಾದೀತು. ಹೊರಗೆ ಭೋಜನವನ್ನು ಮಾಡುವಿರಿ. ನಿಮ್ಮ‌ ಸಹಜತೆಯು ನಾಟಕೀಯದಂತೆ ತೋರೀತು. ಬಂಗಾರವನ್ನು ಖರೀದಿಸಲಿದ್ದೀರಿ. ನಿಮ್ಮ ಚಿಂತನೆಯನ್ನು ಇನ್ನೊಬ್ಬರ ಜೊತೆ ಹಂಚಿಕೊಳ್ಳುವಿರಿ. ಒಟ್ಟಿಗೇ ಹತ್ತಾರು ಕೆಲಸಗಳಲ್ಲಿ ನೀವು ಮಗ್ನರಾಗಿರುವಿರಿ.

ವೃಶ್ಚಿಕ ರಾಶಿ: ಸರ್ಕಾರದ ಉದ್ಯೋಗಿಗಳು ನಿಮಗೆ ಅನುಕೂಲಕರವಾದುದನ್ನು ಸೃಷ್ಟಿಮಾಡಿಕೊಳ್ಳುವಿರಿ. ಯಾರಿಗೂ ಹೇಳದೇ ಎಲ್ಲಿಗಾದರೂ ಹೋಗಲಿದ್ದೀರಿ. ಸಂಬಂಧಗಳಲ್ಲಿ ಒಡಕು ಬರಬಹುದು. ಹೊಸ ಉದ್ಯೋಗಕ್ಕೆ ನೀವು ಹೊಂದಿಕೊಳ್ಳಲು ಕಷ್ಟವಾದೀತು. ನಿಮ್ಮ ನೋವನ್ನು ಯಾರ ಬಳಿಯಾದರೂ ಹಂಚಿಕೊಳ್ಳುವುದು ಉತ್ತಮ. ಮನಸ್ಸು ಹಗುರಾದೀತು. ಯಾರದೋ ಸಿಟ್ಟನ್ನು ಯಾರ ಮೇಲೋ ತೀರಿಸಿಕೊಂಡು ಸಮಾಧಾನಪಡುವಿರಿ. ಇನ್ನೊಬ್ಬರ‌ ವಿಚಾರಗಳನ್ನು ಕೇಳಲು ನಿಮಗೆ ಕುತೂಹಲವು ಅಧಿಕವಾಗಿರುವುದು. ಏನನ್ನಾದರೂ ಸಾಧಿಸಬೇಕು ಎಂದೆನಿಸಬಹುದು.

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ