Horoscope: ಈ ರಾಶಿಯವರಿಗೆ ಸಣ್ಣ ಪುಟ್ಟ ವಿಷಯಕ್ಕೆ ಸ್ನೇಹಿತರ ಜೊತೆಗಿನ ಸಂಬಂಧವು ಹಾಳಾಗಬಹುದು

| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 10, 2023 | 12:30 AM

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಸೆಪ್ಟೆಂಬರ್ 10) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರಿಗೆ ಸಣ್ಣ ಪುಟ್ಟ ವಿಷಯಕ್ಕೆ ಸ್ನೇಹಿತರ ಜೊತೆಗಿನ ಸಂಬಂಧವು ಹಾಳಾಗಬಹುದು
ಜ್ಯೋತಿಷ್ಯ
Follow us on

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 10 ಭಾನುವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ನಿಜ ಶ್ರಾವಣ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಪುನರ್ವಸು, ಯೋಗ: ವ್ಯತಿಪಾತ್, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 37 ನಿಮಿಷಕ್ಕೆ, ರಾಹು ಕಾಲ ಸಂಜೆ 05:05 ರಿಂದ 06:37 ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:30 ರಿಂದ 02:02ರ ವರೆಗೆ, ಗುಳಿಕ ಕಾಲ ಸಂಜೆ 03:33 ರಿಂದ 05:05ರ ವರೆಗೆ.

ಸಿಂಹ ರಾಶಿ : ಆರ್ಥಿಕ ವಿಚಾರದಲ್ಲಿ ಸಲ್ಲದ ಅಪವಾದಗಳು ಬರಬಹುದು. ಸಣ್ಣ ಪುಟ್ಟ ವಿಷಯಕ್ಕೆ ಸ್ನೇಹಿತರ ಜೊತೆಗಿನ ಸಂಬಂಧವು ಹಾಳಾಗಬಹುದು. ನಿಮ್ಮಿಂದ ಕಾರ್ಯವನ್ನು ಮಾಡಿಸಿಕೊಂಡು ಕೈ ಬಿಡಬಹುದು. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು ಯೋಗ್ಯ ಚಿಕಿತ್ಸೆಯನ್ನು ಕೊಡುವಿರಿ. ವಿವಾಹೇತರ ಸಂಬಂಧದಿಂದ ನಿಮಗೆ ಬೇಸರವಾಗುವುದು. ನಿಮ್ಮ ಮಾತಿನಿಂದ ಯಾವ ಲಾಭವೂ ಆಗದು ಎಂಬುದು ಇಂದು ತಿಳಿಯುವುದು. ಸ್ವಂತ ಉದ್ಯೋಗವನ್ನು ಮಾಡಬೇಕು ಎಂದು ಅನ್ನಿಸುವುದು. ನಿಮ್ಮನ್ನೇ ಒಮ್ಮೆ ನೋಡಿಕೊಳ್ಳಿ.

ಕನ್ಯಾ ರಾಶಿ : ಬಹಳ ದಿನಗಳಿಂದ ಒತ್ತಡದಲ್ಲಿ ಇದ್ದ ಕಾರಣ ಇಂದು ಎಲ್ಲವನ್ನೂ ಮರೆಯು ದಿನದ ಹೆಚ್ಚಿನ ಸಮಯವನ್ನು ವಿಶ್ರಾಂತಿಯಲ್ಲಿಯೇ ಕಳೆಯುವಿರಿ. ನೀವು ನಿರಂತರ ಕಾರ್ಯವನ್ನು ಬದಲಿಸುತ್ತಿರುವುದು ನಿಮ್ಮ ಅಭ್ಯಾಸವಾಗುವುದು. ದಾನದಿಂದ ಪುಣ್ಯವನ್ನು ಗಳಿಸುವಿರಿ. ನಿಮ್ಮ ಮಕ್ಕಳ ಮನೋಭಾವವನ್ನು ಅವರಿಗೆ ಇಷ್ಟವಾದುದನ್ನು ಮಾಡುವಿರಿ. ಇಂದಿನ ವ್ಯಾಪಾರದಿಂದ ಆರ್ಥಿಕತೆಯು ಬಲವಾಗುವುದು. ಮಕ್ಕಳು ಆರ್ಥಿಕತೆಯ ದುರ್ಬಲತೆಯಿಂದ ನಿಲ್ಲಿಸಬೇಕಾದೀತು. ಸ್ತ್ರೀಯರಿಂದ ಸಹಾಯ ಪಡೆದರೂ ನೋಡುಗರು ಅದನ್ನು ಅಪಾರ್ಥ ಮಾಡಿಕೊಳ್ಳಬಹುದು. ಭೇಟಿಯನ್ನು ಮಾಡಲು ಕಾದು ಸಮಯವನ್ನು ವ್ಯರ್ಥಮಾಡಿಕೊಳ್ಳುವಿರಿ.

ತುಲಾ ರಾಶಿ : ತಂದೆ ತಾಯಿಯರ ಸೇವೆಯನ್ನು ಮಾಡುವಿರಿ. ಮನೆಯ ಕೆಲಸವು ಆಗಿಲ್ಲವೆಂದು ಕೋಪವು ಇರಲಿದ್ದು ಅದನ್ನು ಪ್ರಕಟಿಸುವಿರಿ. ನಿಮ್ಮ‌ ರಕ್ಷಣೆಯ ಬಗ್ಗೆ ಕಾಳಜಿ ಇರಲಿ. ನಿಮ್ಮ ಪ್ರಾಮಾಣಿಕತೆಯು ಇತರರಿಗೆ ಇಷ್ಟವಾಗುವುದು. ನಿಮ್ಮ ಹಿತಶತ್ರುಗಳಿಂದ ತೊಂದರೆ ಬರುವ ಸಾಧ್ಯತೆ ಇದ್ದು, ಅವರನ್ನು ಸರಿ‌ಮಾಡಿಕೊಳ್ಳಿ. ಉದ್ಯೋಗವನ್ನು ಕೊಡಿಸಲು ನಿಮಗೆ ಹಣವನ್ನು ಕೇಳಬಹುದು. ಸತ್ಯವನ್ನು ಹೇಳುವ ಮನಸ್ಸಿದ್ದರೂ ಬೇರೆಯವರ ಒತ್ತಡದಿಂದಾಗಿ ಹೇಳದೇ ಮುಚ್ಚಿಡುವಿರಿ. ಹಿರಿಯರ ನಂಬಿಕೆಯನ್ನು ಗಳಿಸಲು ಕಷ್ಟವಾದೀತು. ಮನೆಯಿಂದ ಹೊರ ನಡೆಯುವ ಪ್ರಸಂಗವು ಬರಬಹುದು. ಸುಬ್ರಹ್ಮಣ್ಯನ ಆರಾಧನೆಯನ್ನು ಮಾಡಿ.

ವೃಶ್ಚಿಕ ರಾಶಿ : ವಿವಿಧ ಮೂಲಗಳಿಂದ ನಿಮಗೆ ಆದಾಯವು ಬರಲಿದ್ದು ಹೂಡಿಯ ಕಡೆ ನಿಮ್ಮ ಗಮನ ಇರುವುದು. ನಿಮ್ಮ ಆಲಸ್ಯವನ್ನು ಹಿತಶತ್ರುಗಳು ಅವಕಾಶವಾಗಿ ತೆಗೆದುಕೊಳ್ಳುವರು. ನಿಮ್ಮ ಭಾವನೆಗಳನ್ನು ಇನ್ನೊಬ್ಬರ ಬಳಿ ಹೇಳುಕೊಳ್ಳುವಿರಿ. ಭೂಮಿಯಿಂದ ಇಂದು ಸಂಪತ್ತು ಸಿಗಬಹುದು. ಹಿರಿಯರ ಮಾತುಗಳು ಪೂರ್ಣವಾಗಿ ಇಷ್ಟವಾಗದು. ವಿದ್ಯಾರ್ಥಿಗಳು ಓದಿನ ಬಗ್ಗೆ ಹೆಚ್ಚು ಗಮನ ಹರಿಸುವುದು ಮುಖ್ಯವಾದೀತು. ಯಾವುದನ್ನೇ ಆದರೂ ಚಿಂತಿಸಿ ಮಾತನಾಡಿ. ಹೊಸ ಮನೆಯನ್ನು ಕಟ್ಟುವ ಯೋಚನೆಯನ್ನು ಕಾರಣಾಂತೆಗಳಿಂದ ನಿಲ್ಲಿಸುವಿರಿ. ಇಂದು ನಿಮಗೆ ಏಕಾಂತವೇ ಹೆಚ್ಚು ಸುಖವನ್ನು ಕೊಡುವುದು.

-ಲೋಹಿತಶರ್ಮಾ 8762924271 (what’s app only)