Horoscope: ದಿನಭವಿಷ್ಯ, ಅವಕಾಶ ಸದುಪಯೋಗ ಮಾಡಿಕೊಂಡರೆ ಈ ರಾಶಿಯವರಿಗೆ ಉತ್ತಮ ಭವಿಷ್ಯವು ಇರಲಿದೆ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಆಗಸ್ಟ್ 11) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ, ಅವಕಾಶ ಸದುಪಯೋಗ ಮಾಡಿಕೊಂಡರೆ ಈ ರಾಶಿಯವರಿಗೆ ಉತ್ತಮ ಭವಿಷ್ಯವು ಇರಲಿದೆ
ಇಂದಿನ ರಾಶಿಭವಿಷ್ಯImage Credit source: iStock Photo
Follow us
TV9 Web
| Updated By: Rakesh Nayak Manchi

Updated on: Aug 11, 2023 | 12:30 AM

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಆಗಸ್ಟ್ 11) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಆಶ್ಲೇಷಾ, ಮಾಸ: ಅಧಿಕ ಶ್ರಾವಣಮ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಮೃಗಶಿರಾ, ಯೋಗ: ವ್ಯರಿಯಾನ್, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ರಿಂದ 18 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 56 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 11:03 ರಿಂದ ಮಧ್ಯಾಹ್ನ 12:37ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:47 ರಿಂದ 05:21ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:54 ರಿಂದ 09:28 ರ ವರೆಗೆ.

ಸಿಂಹ ರಾಶಿ: ಶಿಕ್ಷಕರಾಗಿದ್ದರೆ ನಿಮ್ಮ‌ ಶಿಷ್ಯರಿಂದ ಉಡುಗೊರೆ ಸಿಗಬಹುದು. ಯಾವ ಅಪವಾದವನ್ನೂ ನೀವು ಇಟ್ಟುಕೊಳ್ಳುವುದು ಇಷ್ಟಪಡುವುದಿಲ್ಲ. ದೂರದ ಊರಿಗೆ ನಿಮ್ಮ ಪ್ರಯಾಣವು ಇರಲಿದೆ. ಉತ್ಸಾಹದಿಂದ ನಿಮ್ಮ ಇಂದಿನ ಕೆಲಸವು ಆಗಲಿದೆ. ಭವಿಷ್ಯದ ಬಗ್ಗೆ ಅತಿಯಾದ ಆಲೋಚನೆಗಳು ನಿಮ್ಮ ತಲೆನೋವಿಗೆ ಕಾರಣವಾಗುವುದು. ಸಹೋದನಿಂದ ನಿಮಗೆ ಸಮಸ್ಯೆ ಆಗಬಹುದು. ಹಠದ ಸ್ವಭಾವದಿಂದ ನಿಮ್ಮವರಿಗೆ ಕಿರಿಕಿರಿ ಆಗಬಹುದು. ಹೊಸ ಆದಾಯದ ಮೂಲಗಳನ್ನು ಕಂಡುಕೊಳ್ಳುವಿರಿ. ರಾಜಕಾರಣಿಗಳಿಗೆ ಇಂದು ಸ್ಥಾನಮಾನಗಳು ಸಿಗಬಹುದು. ನಿಮ್ಮ ಬಗ್ಗೆ ನಿಮಗೆ ವಿಶ್ವಾಸವಿರಲಿ.

ಕನ್ಯಾ ರಾಶಿ: ಭೋಗವಸ್ತುಗಳನ್ನು ಅನವಶ್ಯಕವಾಗಿ ಖರೀದಿಸುವಿರಿ. ನಿಮ್ಮ ಇಷ್ಟದವರು ನಿಮ್ಮನ್ನು ಭೇಟಿಯಾಗಲು ಬರಬಹುದು. ನಿಮ್ಮ‌ ಸಣ್ಣ ಉಳಿತಾಯಕ್ಕೆ ಇಂದು ಬಹಳ ಬೆಲೆ‌ಬರಲಿದೆ. ಏನಾದರೂ ಮಾಡುತ್ತ ತಮ್ಮನ್ನು ತೊಡಗಿಸಿಕೊಳ್ಳುವಿರಿ. ವಿವೇಕಮತಿಯಾಗಿ ನೀವು ಮಾಡಿದ ಕೆಲಸಕ್ಕೆ ಮೆಚ್ಚುಗೆ ಸಿಗಬಹುದು. ವೃತ್ತಿಜೀವನದಲ್ಲಿ ಆನಂದದ ವಾತಾವರಣವು ಇರಲಿದೆ. ಹೊಸ ಉದ್ಯಮವಾದರೂ ಅಭಿವೃದ್ಧಿಯ ಕಡೆಗೆ ಕೊಂಡೊಯ್ಯುವಿರಿ. ಪ್ರಭಾವೀ ಜನರ ಜೊತೆ ಆತ್ಮೀಯತೆಯು ಬೆಳೆಯಬಹುದು. ಮಾನಸಿಕವಾಗಿ ಉಂಟಾಗವ ಕಿರಿಕಿರಿಗೆ ನಿಮಗೆ ಕೋಪ ಬರಬಹುದು.

ತುಲಾ ರಾಶಿ: ಸಮಸ್ಯೆಯನ್ನು ಬರುವ ಮೊದಲೇ ಯೋಚಿಸಿ ಸಿದ್ಧತೆಯನ್ನು ಮಾಡಿಕೊಳ್ಳುವಿರಿ. ಬಹಳ ದಿನಗಳಿಂದ‌ ನಿರೋದ್ಯೋಗ ಹಿಂಸೆಯನ್ನು ಅನುಭವಿಸುವವರಿಗೆ ಉದ್ಯೋಗವು ಸಿಗಬಹುದು. ಈಗ ಸಿಕ್ಕ ಅವಕಾಶಗಳನ್ನು ಉಪಯೋಗಿಸಿಕೊಳ್ಳಿ. ನಿಮ್ಮ ಕೆಲಸದಲ್ಲಿ ಇಂದು ಅಡತಡೆಗಳು ಬರಬಹುದು. ಆಧ್ಯಾತ್ಮಿಕತೆಯ ಸೆಳೆತವು ಇರುವುದು. ನೆರೆಯವರ ವರ್ತನೆಯು ನಿಮ್ಮ ಸಿಟ್ಟಿಗೆ ಕಾರಣವಾಗಲಿದೆ. ಹೊಸ ಉದ್ಯೋಗವನ್ನು ಆರಂಭಿಸಬಹುದು. ಪ್ರೇಮ ಸಂಬಂಧಗಳಲ್ಲಿ ಅನುಮಾನವನ್ನು ಇಟ್ಟುಕೊಳ್ಳುವುದು ಬೇಡ. ಸಹೋದರನ ಪ್ರಗತಿಯಲ್ಲಿ ನೀವು ಸಂತೋಷ ಆಗಲಿದೆ. ಸಹೋದರಿಯೆ ತೊಂದರೆಗೆ ನೀವು ಸ್ಪಂದಿಸುವಿರಿ.

ವೃಶ್ಚಿಕ ರಾಶಿ: ವೃತ್ತಿಯಲ್ಲಿ ಆತಂಕದ ವಾತಾವರಣವು ಇರಲಿದೆ. ಪ್ರಾಣಿಗಳಿಂದ ಭಯವಾಗಬಹುದು. ನಿಮ್ಮ ಇಷ್ಟದವರ ಭೇಟಿಯಾಗಲಿದೆ. ಶಕ್ತಿ‌ ಮೀರಿ ಮಾಡಿದ ಕೆಲಸದಲ್ಲಿ ನಿಮಗೆ ತೊಂದರೆಯಾಗಬಹುದು. ಯಾರ ಬಗ್ಗೆಯೂ ಅನಗತ್ಯ ಟೀಕೆಗಳನ್ನು ಮಾಡುವುದು ಬೇಡ. ಆಧ್ಯಾತ್ಮದಲ್ಲಿ ಮನಸ್ಸು ಇರಲಿದೆ. ಕಳೆದ ದಿನಗಳ ಉದ್ಯಮ‌ ಮತ್ತು ಈಗಿನದ್ದನ್ನು ತೂಕ ಮಾಡುವಿರಿ. ಇಂದು ನಿಮ್ಮ ಸಂತೋಷವು ಕಡಿಮೆ ಇರಬಹುದು. ನಿಮ್ಮ ಪ್ರತಿಭೆಯನ್ನು ಪ್ರಕಟಪಡಿಸಲು ಉತ್ತಮ ಅವಕಾಶವು ಸಿಗಲಿವೆ. ಸದುಪಯೋಗ ಮಾಡಿಕೊಂಡರೆ ಉತ್ತಮ ಭವಿಷ್ಯವು ಇರಲಿದೆ. ಸಹೋದ್ಯೋಗಿಗಳು ನಿಮ್ಮ ಕೆಲಸವನ್ನು ತಪ್ಪಿಸಲು ಅಸಂಬದ್ಧ ಸಲಹೆಗಳನ್ನು ಕೊಡಬಹುದು. ಬಂಧುಗಳು ನಿಮ್ಮ ಬಗ್ಗೆ ಆಡಿಕೊಡಾರು.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM