AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರಿಗೆ ಧನಲಾಭದಿಂದ ಆರ್ಥಿಕತೆಯೂ ಸುಸ್ಥಿರವಾಗುವುದು

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ನವೆಂಬರ್​ 11) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರಿಗೆ ಧನಲಾಭದಿಂದ ಆರ್ಥಿಕತೆಯೂ ಸುಸ್ಥಿರವಾಗುವುದು
ಪ್ರಾತಿನಿಧಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 11, 2023 | 12:30 AM

Share

ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್​ 11) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಚಿತ್ರಾ, ಯೋಗ: ಪ್ರೀತಿ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 32 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆಗೆ, ರಾಹು ಕಾಲ ಬೆಳಗ್ಗೆ 09:25 ರಿಂದ ಮಧ್ಯಾಹ್ನ 10:15ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:42 ರಿಂದ 03:08ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:33 ರಿಂದ 07:59ರ ವರೆಗೆ.

ಸಿಂಹ ರಾಶಿ : ಮೇಲಧಿಕಾರಿಗಳ ಜೊತೆ ಕಲಹ ಮಾಡಿಕೊಳ್ಳುವಿರಿ. ಮಿತ್ರರ ನಡುವೆ ದ್ವೇಷವು ಬೆಳೆಯಬಹುದು. ವೃತ್ತಿಯಲ್ಲಿ ಒತ್ತಡವು ಹೆಚ್ಚಾಗಿರುವುದು. ಸಂಗಾತಿಯ ಜೊತೆ ಸಮಾರಂಭಗಳಲ್ಲಿ ಭಾಗವಹಿಸುವಿರಿ‌. ಆರ್ಥಿಕ ವ್ಯವಹಾರದಲ್ಲಿ ನೀವು ಇಂದು ದುರ್ಬಲರಾಗುವಿರಿ. ಹೊಸ ಕಾರ್ಯದಲ್ಲಿ ಹುಮ್ಮಸ್ಸು ಅತಿಯಾಗುವುದು. ಕೆಲವು ಸ್ವಭಾವವನ್ನು ತೋರಿಸುವುದು ಉಚಿತವಾಗದು. ವಸ್ತುವನ್ನು ಕಳೆದುಕೊಂಡು ಚಿಂತಿತರಾಗುವಿರಿ. ಸ್ವಾವಲಂವನೆಯಿಂದ ಜೀವನವನ್ನು ನಡೆಸುವಿರಿ. ನಿಮಗೆ ವಹಸಿದ ಕೆಲಸದಲ್ಲಿ ನಿಷ್ಠೆಯನ್ನು ತೋರಿಸುವಿರಿ. ಅಶುಭವಾರ್ತೆಯು ನಿಮ್ಮನ್ನು ಕುಗ್ಗಿಸಬಹುದು. ವ್ಯರ್ಥ ಕಾಲಹರಣವನ್ನು‌ ಮಾಡಿ ಸಂಪತ್ತನ್ನೂ ಕಳೆದುಕೊಳ್ಳಬೇಕಾಗುವುದು. ಅತಿಯಾದ ನೋವನ್ನೂ ಸಹಿಸುವಿರಿ.

ಕನ್ಯಾ ರಾಶಿ : ಮಾತಿನಲ್ಲಿ ಉದ್ವೇಗವು ಹೆಚ್ಚಿರಲಿದೆ. ನಿಮ್ಮೊಳಗೇ ನಾನಾ ದ್ವಂದ್ವಗಳು ಕಾಣಿಸಿಕೊಳ್ಳಲಿವೆ. ದೈವಾನುಗ್ರಹವನ್ನು ನೀವು ಪಡೆದುಕೊಳ್ಳಬೇಕಾಗುವುದು. ನಕಾರಾತ್ಮಕ ಭಾವನೆಗಳಿಂದ ನಿಮಗೆ ಕಿರಿಕಿರಿಯಾಗಿ ಬಿಡಲೂ ಸಾಧ್ಯವಾಗದು. ಸಾಲ ಹೆಚ್ಚಾಗುವ ಭೀತಿಯು ಇರುವುದು. ಸಂಗಾತಿಯ ಪರವಾಗಿ ನೀವು ಮಾತನಾಡುವುದು ಅಚ್ಚರಿಯಾದೀತು. ನಿಮ್ಮವರಿಗೆ ಆದ ಅಪಮಾನದಿಂದ ನೀವು ಕೋಪಗೊಳ್ಳುವಿರಿ. ನಿಮ್ಮ ಔದಾರ್ಯವನ್ನು ದುರ್ಬಳಕೆ ಮಾಡಿಕೊಳ್ಳಬಹುದು. ಒರಟು ಸ್ವಭಾವವನ್ನು ಬಿಡುವುದು ಉತ್ತಮ. ಅದೃಷ್ಟವನ್ನು ನಂಬುವುದಕ್ಕಿಂತ ಸಾಮರ್ಥ್ಯವನ್ನು ನಂಬುವುದು ಒಳ್ಳೆಯದು. ಅತಿಯಾದ ಧನಾರ್ಜನೆಯ ಚಿಂತೆಯು ನಿಮ್ಮ ಎಲ್ಲ‌ ಕೆಲಸಗಳನ್ನು ಮರೆಸುವುದು. ಕಾನೂನು ಸಮರದಲ್ಲಿ ಸೋಲುಣ್ಣಬೇಕಾಗುವುದು. ನಿಮ್ಮ ವ್ಯಕ್ತಿತ್ವದ ನಿರ್ಮಾಣವು ಇನ್ನಷ್ಟು ಆಗಬೇಕಿದೆ. ಅನುಕರಿಸುವ ಸ್ವಭಾವವು ಹೆಚ್ಚು ಇರುವುದು.

ತುಲಾ ರಾಶಿ : ಶತ್ರುಗಳ ತೊಂದರೆಯಿಂದ ತಪ್ಪಿಸಿಕೊಳ್ಳಲು ನಿಮ್ಮ ಬೇರೆ ಕೆಲಸಗಳನ್ನು ಪಕ್ಕಕ್ಕಿರಿಸುವಿರಿ. ಅನಿರೀಕ್ಷಿತ ಸಹಾಯವು ನಿಮಗೆ ಸಿಕ್ಕಲಿದೆ. ಇಂದು ನಿಮ್ಮಲ್ಲಿ ವಿನೋದದ ಮನಃಸ್ಥಿತಿ ಇರುವುದು. ಸಾಮಾಜಿಕ ಚಟುವಟಿಕೆಯಲ್ಲಿ ಬಹಳ ದಿನಗಳ ಅನಂತರ ಭಾಗವಹಿಸುವಿರಿ. ಪ್ರಣಯದಲ್ಲಿ ಆಸಕ್ತಿಯು ಹೆಚ್ಚು ಇರುವುದು. ಮನಸ್ಸು ಉದ್ವೇಗದಿಂದ ಹೊರಬರಲು ಮನಸ್ಸು ಮಾರ್ಗವನ್ನು ಹುಡುಕುವುದು.‌ ಆಪ್ತರನ್ನು ಕಳೆದುಕೊಳ್ಳುವ ಭಯವು ಉಂಟಾಗಬಹುದು. ಧನಲಾಭದಿಂದ ಆರ್ಥಿಕತೆಯೂ ಸುಸ್ಥಿರವಾಗುವುದು. ಬಹಳ ದಿನಗಳಿಂದ ಸಾಗುತ್ತಿದ್ದ ಕೆಲಸವನ್ನು ಇಂದೇ ಮುಗಿಸಬೇಕೆಂದು ನಿರ್ಧರಿಸುವಿರಿ. ಸಂದರ್ಭವನ್ನು ನೋಡಿ ಮಾತನಾಡುವುದು ಉತ್ತಮ. ಸುಲಭದ ಕೆಲಸಗಳನ್ನು ಮೊದಲು ಮಾಡಿಕೊಳ್ಳಿ.

ವೃಶ್ಚಿಕ ರಾಶಿ : ನಿಮ್ಮ ಆತ್ಮವಿಶ್ವಾಸವು ಒಂದು ಮಿತಿಯಲ್ಲಿ ಇರಲಿ. ನಿಮಗೆ ಅಧಿಕಾರವನ್ನು ಕೊಡುವ ಬಗ್ಗೆ ಮಾತುಕತೆಗಳು ನಡೆಯಬಹುದು. ವ್ಯಕ್ತಿಗಳ ಮೇಲೆ ವಿರಕ್ತಿ ಉಂಟಾಗಬಹುದು. ನಿಮ್ಮವರ ಇಂಗಿತವನ್ನು ಅರ್ಥಮಾಡಿಕೊಳ್ಳುವಲ್ಲಿ ಸೋಲುವಿರಿ. ಸಾಹಿತ್ಯಾಸಕ್ತರಿಗೆ ಅನುಕೂಲಕರವಾದ ಸನ್ನಿವೇಶಗಳು ಬರಬಹುದು. ಸಂಕಷ್ಟಗಳ ನಿವಾರಣೆಗೆ ದೈವದ ಮೊರೆ ಹೋಗುವಿರಿ. ಬಲವಂತವಾಗಿ ನೆಮ್ಮದಿಯನ್ನು ತಂದುಕೊಳ್ಳುವಿರಿ. ನಿಮ್ಮ ಯೋಜನೆಯನ್ನು ಸುಲಭ ಮಾಡಿಕೊಂಡು ಖರ್ಚನ್ನು ಕಡಿತಗೊಳಿಸಿ. ಈ ದಿನವು ದುರಂತದಲ್ಲಿ ಕೊನೆಯಾಗಬಹುದು. ನಿಮ್ಮ ಉಪಯೋಗವನ್ನು ಪಡೆದು ಕೈ ಬಿಡಬಹುದು. ಉದ್ಯಮದ ಆದಾಯವನ್ನು ಹೆಚ್ಚು ಮಾಡಿಕೊಳ್ಳುವಿರಿ. ಉದ್ವೇಗದಲ್ಲಿ ಏನಾದರೂ ಮಾಡಿಕೊಳ್ಳುವಿರಿ.

2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು