Horoscope: ದಿನಭವಿಷ್ಯ, ಇಂದು ಈ ರಾಶಿಯವರು ಸಮಾಧಾನ ಚಿತ್ತದಿಂದ ಇರುವುದು ಒಳ್ಳೆಯದು
ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ನವೆಂಬರ್ 12) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.
ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್ 12) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಸ್ವಾತೀ, ಯೋಗ: ಆಯುಷ್ಮಾನ್, ಕರಣ: ಚತುಷ್ಪಾತ್, ಸೂರ್ಯೋದಯ ಬೆಳಗ್ಗೆ 06 ಗಂಟೆ 33 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ. ರಾಹು ಕಾಲ ಮಧ್ಯಾಹ್ನ 04:34 ರಿಂದ 06:00, ಯಮಘಂಡ ಕಾಲ ಮಧ್ಯಾಹ್ನ 12:17 ರಿಂದ 01:43ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:08 ರಿಂದ 04:34ರ ವರೆಗೆ.
ಸಿಂಹ ರಾಶಿ: ನಂಬಿಕೆಯನ್ನು ಉಳಿಸಿಕೊಳ್ಳುವ ಪ್ರಯತ್ನವನ್ನು ಮಾಡುವಿರಿ. ಮನೆಯ ಕೆಲಸದಲ್ಲಿ ಆಲಸ್ಯವನ್ನು ತೋರಿಸುವಿರಿ. ಅನಿರೀಕ್ಷಿತ ಮಾತುಗಳನ್ನು ಕೇಳಬೇಕಾದ ಸ್ಥಿತಿಯು ಬರಬಹುದು. ಸಣ್ಣ ಆರೋಗ್ಯದ ತೊಂದರೆಯೂ ನಿಮ್ಮ ಮನಸ್ಸಿಗೆ ಕಿರಿಕಿರಿಯನ್ನು ಉಂಟುಮಾಡುವುದು. ಕಾರ್ಯದಲ್ಲಿ ವೇಗವು ಕುಂಠಿತವಾಗುವುದು. ಸರ್ಕಾರದ ಸೌಲಭ್ಯವು ನಿಮಗೆ ಸಿಗದೇ ಹೋಗಬಹುದು. ನಿಮ್ಮ ಕೆಲಸವು ಸಂದೇಹಕ್ಕೆ ಆಸ್ಪದ ಕೊಡುವುದು ಬೇಡ. ಯಶಸ್ಸನ್ನು ಪಡೆಯುವ ಹಂಬಲವಿರಲಿದೆ. ನೀವು ನೋಡಿದ್ದೇ ಸತ್ಯ ಎಂದು ತಿಳಿದುಕೊಳ್ಳುವುದು ಬೇಡ. ಯಾರಿಗೂ ನಿಮ್ಮ ಅವಶ್ಯಕತೆ ಇಲ್ಲದೇ ಹೋಗಬಹುದು. ಸ್ನೇಹಿತರಿಗೆ ಸಾಲವಾಗಿ ಹಣವನ್ನು ಪುನಃ ಬರುವ ನಿರೀಕ್ಷೆ ಇಲ್ಲದೇ ಕೊಡುವಿರಿ. ಸಾಮಾಜಿಕ ತಾಣದಿಂದ ಪ್ರೇಮವು ಉಂಟಾಗಬಹುದು. ಉಡುಗೊರೆಯನ್ನು ಮನೆಯವರಿಗೆ ನೀಡುವಿರಿ.
ಕನ್ಯಾ ರಾಶಿ: ನಿಮ್ಮ ಸ್ವಪ್ರತಿಷ್ಠೆಯಿಂದ ಜನರನ್ನು ಕಳೆದುಕೊಳ್ಳುವಿರಿ. ರಾಜಕೀಯ ಹಿತಾಸಕ್ತಿಯನ್ನು ಬಯಸುವಿರಿ. ಶತ್ರುಗಳ ಕಾರಣದಿಂದ ಖರ್ಚುನ್ನು ಮಾಡಬೇಕಾದ ಸ್ಥಿತಿಯು ಬರಲಿದೆ. ಮನಶ್ಶಾಂತಿಗಾಗಿ ಧಾರ್ಮಿಕ ಕಾರ್ಯಗಳನ್ನು ಮಾಡಿಸುವಿರಿ. ಅಕಾಲದಲ್ಲಿ ಸೇವಿಸಿದ ಆಹಾರದಿಂದ ನಿಮಗೆ ಆರೋಗ್ಯವು ಹಾಳಾಗುವುದು. ಮನೆಯಲ್ಲಿ ನೌಕರರ ಕಾರಣಕ್ಕೆ ಸಿಟ್ಟಾಗುವಿರಿ. ಹೊಸ ಸಂಬಂಧದ ಕಡೆ ನಿಮ್ಮ ಚಿತ್ತವು ಇರಲಿದೆ. ನಿರಂತರ ಕೆಲಸವನ್ನು ಮಾಡುವುದು ಇಷ್ಟವಾಗಲಿದೆ. ಸಂಗಾತಿಯ ಭಾವನೆಗೆ ಬೆಲೆ ಕೊಟ್ಟು ಸಂತೋಷಪಡಿಸುವಿರಿ. ವೈವಾಹಿಕ ಸಂಬಂಧವನ್ನು ಸರಿಯಾಗಿ ಇಟ್ಟುಕೊಳ್ಳಿ. ಗೃಹನಿರ್ಮಾಣವು ಕಾರಣಾಂತರಗಳಿಂದ ಮುಂದೆ ಹೋಗುವುದು. ನಿಮಗೆ ಬೇಕಾದ ಅವಕಾಶವು ಸಿಗದೇ ಒದ್ದಾಡುವಿರಿ.
ತುಲಾ ರಾಶಿ: ಅನಿವಾರ್ಯವಾಗಿ ಕಛೇರಿಯ ಕಾರ್ಯವನ್ನು ಮಾಡಬೇಕಾಗುವುದು. ಮಕ್ಕಳ ಕಾರ್ಯದಿಂದ ನಿಮಗೆ ಅಪ್ರಶಂಸೆಯು ಬರಬಹುದು. ಸ್ತ್ರೀಯರ ಉಪಸ್ಥಿತಿಯು ನಿಮಗೆ ಬಲವನ್ನು ತಂದುಕೊಡುವುದು. ವಿದೇಶದ ಮಿತ್ರರ ಸಹಾಯದಿಂದ ನೀವು ಉದ್ಯಮವು ವಿಸ್ತಾರವಾಗಬಹುದು. ಅಧಿಕ ಓಡಾಟದಿಂದ ನೀವು ಆಯಾಸಗೊಳ್ಳುವಿರಿ. ಇಂದು ಹಣದ ಹರಿವು ಅಲ್ಪವಾಗಿ ಇರುವುದು. ಆಪ್ತರನ್ನು ಕಳೆದುಕೊಂಡು ಬೇಸರಿಸುವಿರಿ. ವ್ಯಾಪಾರದ ನಷ್ಟವನ್ನು ನಿಮಗೆ ಅರಗಿಸಿಕೊಳ್ಳಲಾಗದು. ನಿದ್ರೆಯು ಕಡಿಮೆಯಾದ ಕಾರಣ ಕಾರ್ಯದಲ್ಲಿ ಉತ್ಸಾಹ ಕಡಿಮೆ ಇರಲಿದೆ. ಪ್ರೇಮಿಯ ಜೊತೆ ಹರಟೆ ಹೊಡೆಯುತ್ತ ದಿನವನ್ನು ಕಳೆಯುವಿರಿ. ಸ್ತ್ರೀಸಂಬಂಧದ ವಿಷಯದಲ್ಲಿ ಆರೋಪವು ಕೇಳಿಬರಬಹುದು.
ವೃಶ್ಚಿಕ ರಾಶಿ: ಆತುರದಲ್ಲಿ ಇಂದು ಇರುವಿರಿ. ಸಮಾಧಾನ ಚಿತ್ತದಿಂದ ಇರುವುದು ಒಳ್ಳೆಯದು. ತಂದೆಗೆ ಬೇಕಾದ ಧನಸಹಾಯವನ್ನು ನೀವು ಮಾಡುವಿರಿ. ಬಂದ ಹಣವನ್ನು ಸಂಗ್ರಹಿಸಲು ಪ್ರಯತ್ನಿಸಿ. ಇಲ್ಲವಾದರೆ ಸಂಪತ್ತನ್ನು ಉಳಿಸಿಕೊಳ್ಳುವುದು ಕಷ್ಟವಾದೀತು. ಅಸಾಧ್ಯವನ್ನು ಸಾಧಿಸುವ ಹಠವು ಬೇಡವಾದೀತು. ಸಾಹೋದರ್ಯದಲ್ಲಿ ಅನಗತ್ಯ ಮಾತುಗಳು ಬರಬಹುದು. ಉದ್ಯಮದಲ್ಲಿ ಹಿನ್ನಡೆಯಾಗುವುದು ನಿಮಗೆ ಮೊದಲೇ ಗೊತ್ತಿದ್ದೂ ಪ್ರಯತ್ನಿಸುವಿರಿ. ಸಂಸ್ಥೆಯ ಮುಖಗಯಸ್ಥರಾಗಲು ಆಹ್ವಾನವು ಬರಬಹುದು. ಅನಪೇಕ್ಷಿಯ ವಿಚಾರವನ್ನು ಪ್ರಸ್ತಾಪಿಸಿಕೊಂಡು ಕಾಲಹರಣ ಮಾಡುವಿರಿ. ತಾಯಿಯ ವಿಚಾರದಲ್ಲಿ ನೀವು ಇಂದು ಕೋಪಗೊಳ್ಳುವ ಸಾಧ್ಯತೆ ಇದೆ. ಹೂಡಿಕೆಯನ್ನು ಸರಿಯಾದ ಕಡೆ ಇರಲಿದೆ.
ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ