AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ; ಈ ರಾಶಿಯವರ ಪ್ರೀತಿಯಲ್ಲಿ ಸಣ್ಣ ಕಲಹವಾಗಬಹುದು

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಅಕ್ಟೋಬರ್ 12) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ದಿನಭವಿಷ್ಯ; ಈ ರಾಶಿಯವರ ಪ್ರೀತಿಯಲ್ಲಿ ಸಣ್ಣ ಕಲಹವಾಗಬಹುದು
ಪ್ರಾತಿನಿಧಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Oct 12, 2023 | 12:30 AM

Share

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ಅಕ್ಟೋಬರ್ 12) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಉತ್ತರಾಫಲ್ಗುಣೀ, ಯೋಗ: ಶುಕ್ಲ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 24 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 13 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 01:48 ರಿಂದ 03:16ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:24 ರಿಂದ 07:53ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:22 ರಿಂದ ಮಧ್ಯಾಹ್ನ 10:50ರ ವರೆಗೆ.

ಸಿಂಹ ರಾಶಿ : ಸರ್ಕಾರಿ ಉದ್ಯೋಗಿಗಳಿಗೆ ಇನ್ನೊಂದಿಷ್ಟು ಜವಾಬ್ದಾರಿಯು ಬರಬಹುದು. ಉತ್ತಮ‌ ಸ್ನೇಹಿತರನ್ನು ಸಂಪಾದಿಸಿಕೊಳ್ಳಿ. ಪ್ರೀತಿಯಲ್ಲಿ ಸಣ್ಣ ಕಲಹವಾಗಬಹುದು. ಸಂಗಾತಿಯ ವಿಚಾರದಲ್ಲಿ ನಿಮಗೆ ಪೂರ್ಣ ವಿಶ್ವಾಸವಿರದು. ಇಂದು ನಿಮ್ಮ ಆರ್ಥಿಕತೆಯ ಸ್ಥಿತಿಯು ದರಿಯಾ ಗೊತ್ತಾಗಲಿದೆ. ಆಕಸ್ಮಿಕವಾಗಿ ಬರುವ ಹಣವನ್ನು ಭವಿಷ್ಯಕ್ಕಾಗಿ ಕೂಡಿ ಇಡುವಿರಿ. ಖಾಸಗಿ ಸಂಸ್ಥೆಯಲ್ಲಿ ನಿಮ್ಮ ಸ್ಥಾನವು ಏರಲಿದೆ. ಅಧಿಕಾರ ಇದೆ ಎಂದು ಏನನ್ನಾದರೂ ಹೇಳುವುದು ಬೇಡ. ಉದ್ಯಮದಲ್ಲಿ ಊಹಿಸಲಾಗದ ಸಮಸ್ಯೆಯನ್ನು ತಂದು ಕೊಳ್ಳುವಿರಿ. ತಜ್ಞರಿಂದ ಅದನ್ನು ಸರಿ ಮಾಡಿಕೊಳ್ಳುವುದು ಉತ್ತಮ. ಯಾರನ್ನೋ ಅನುಕರಿಸುತ್ತ ನೀವು ಸಂತೋಷವನ್ನು ಪಡುವಿರಿ. ವಿರುದ್ಧಾಹಾರ ಸೇವೆಯನ್ನು ಮಾಡುವುದು ಬೇಡ. ಸಹನೆಯನ್ನು ಬಿಡುವುದು ಬೇಡ.

ಕನ್ಯಾ ರಾಶಿ : ಮನಃಸ್ಥಿತಿಯು ಸರಿ ಇಲ್ಲದ ಕಾರಣ ನೌಕರರ‌ ಮೇಲೆ ಸಿಟ್ಟಾಗುವಿರಿ. ಸಂಗಾತಿಯ ಮಾತಿಗೆ ಸ್ಪಂದನೆಯೂ ಇರದು. ನಿಮ್ಮ ಆರ್ಥಿಕತೆಯನ್ನು ಗೌಪ್ಯವಾಗಿ ಇಡಬೇಕು ಎನಿಸುವುದು. ಭೂಮಿಯ ವ್ಯವಹಾರವು ಪೂರ್ಣ ಲಾಭವನ್ನು ತಂದುಕೊಡದು. ಪಿತ್ರಾರ್ಜಿತ ಆಸ್ತಿಗಾಗಿ ನೀವು ಆಸೆ ಪಡುವಿರಿ. ನಿಮ್ಮ ಚರಾಸ್ತಿಯು ನಷ್ಟವಾಗುವುದು. ಉದ್ಯೋಗದ ಸ್ಥಳದಲ್ಲಿ ನೀವು ಹೆಚ್ಚು ಓಡಾಟ ಮಾಡಬೇಕಾದೀತು. ಅಶಿಕ್ಷಿತರ ಜೊತೆ ಸುಮ್ಮನೇ ಕಲಹವಾಡುವಿರಿ. ಅಸಾಧ್ಯ ಎನಿಸಿದ್ದನ್ನು ಸುಮ್ಮನೇ ಮಾಡಲು ಹೋಗುವುದು ಬೇಡ. ಚಿಂತೆಗಳೇ ಇರುವ ಮನಸ್ಸಿನಲ್ಲಿ ದೇವರ ಭಕ್ತಿಯನ್ನು ತುಂಬಿಕೊಂಡು ಸಮಾಧಾನದಿಂದ ಇರಿ. ನಿಮ್ಮ ಶುಷ್ಕ ಮಾತು ಇತರರಿಗೆ ಇಷ್ಡವಾಗದು. ಮಕ್ಕಳ ವಿಚಾರದಲ್ಲಿ ನಿರ್ಲಕ್ಷ್ಯ ಬೇಡ. ಕಿವಿಯ ತೊಂದರೆ ಕಾಣಿಸಿಕೊಳ್ಳಬಹುದು.

ತುಲಾ ರಾಶಿ : ನಿಮ್ಮ‌ ವಿದ್ಯಾಭ್ಯಾಸದ‌‌ ಕನಸನ್ನು ಕುಟುಂಬದಲ್ಲಿ ಹಂಚಿಕೊಳ್ಳುವಿರಿ. ನಿಮ್ಮ ಹಳೆಯ ಪ್ರತಿಜ್ಞೆಯನ್ನು ಇಂದು ಪೂರ್ಣ ಮಾಡಿದ ಸಂತೋಷವು ಇರುವುದು. ವಿವಾಹದ ಸುಖದಲ್ಲಿ ನೀವಿರುವಿರಿ. ಸಕಾರಾತ್ಮಕ ಆಲೋಚನೆಯನ್ನು ಪ್ರಯತ್ನಪೂರ್ವಕವಾಗಿ ಮಾಡುವಿರಿ. ಯಾರನ್ನೂ ಸರಿಯಾಗಿ ಅರ್ಥಮಾಡಿಕೊಳ್ಳದೇ ನಿಮ್ಮ ಬಳಿ ಅವರನ್ನು ಬಿಟ್ಟುಕೊಳ್ಳಬೇಡಿ. ವಿದ್ಯುತ್ ಉಪಕರಣಗಳ ಖರೀದಿಯನ್ನು ಮಾಡುವಿರಿ. ವೃತ್ತಿಯಲ್ಲಿ ನಿಮ್ಮ ತಿಳಿವಳಿಕೆಯನ್ನು ಪ್ರದರ್ಶಿಸಿ ನಿಮ್ಮ ಸಾಮರ್ಥ್ಯವನ್ನು ಪರಿಚಯಿಸುವಿರಿ. ಬಹಳ ಕಾಲದ ಹಿಂದೇ ಆಲೋಚಿಸಿದ್ದ ಕಾರ್ಯವು ಇಂದು ಆರಂಭಿಸಬೇಕು ಎಂದೆನಿಸುವುದು. ಯಾರ ಮೇಲೋ ಗೂಬೆ ಕೂರಿಸಿ ನೀವು ಸಂತೋಷಪಡುವುದು ಬೇಡ.

ವೃಶ್ಚಿಕ ರಾಶಿ : ಗೃಹನಿರ್ಮಾಣದ ದಾಖಲಾತಿಗೆ ನೀವು ಓಡಾಟ ಮಾಡಬೇಕಾಗುವುದು. ನಿಮ್ಮ ನಿರ್ಧಾರವನ್ನು ಬದಲಿಸಿಕೊಳ್ಳುವುದು ಕಷ್ಟವಾದೀತು. ಆಡಂಬರಕ್ಕೆ ಹೆಚ್ಚು ಒತ್ತು ನೀಡುವಿರಿ. ಸಾರ್ವಜನಿಕ ಮನ್ನಣೆಯನ್ನು ಗಳಿಸವಿರಿ. ಉದ್ಯಮದ ವಿಸ್ತರಣೆಗೆ ನಿಮ್ಮ ಕ್ರಮವು ಯಶಸ್ವಿಯಾಗುವುದು. ಏಕಾಗ್ರ ಮನಸ್ಸಿನಿಂದ ನೀವು ಇಂದಿನ ಕೆಲಸದಲ್ಲಿ ತೊಡಗುವಿರಿ. ಕೆಲವು ಘಟನೆಗಳು ಕೌಟುಂಬಿಕ ಕಾಳಜಿಯನ್ನು ಹೆಚ್ಚು ಮಾಡುವುದು. ಜಾಣ್ಮೆಯ ವ್ಯವಹಾರವನ್ನು ಇಂದು ಮಾಡಬೇಕಾದೀತು. ಒಂದೇ ಶ್ರಮಕ್ಕೆ ಎರಡು ಫಲವನ್ನು ನೀವು ಪಡೆಯುವಿರಿ. ಉದ್ಯೋಗದ ಸ್ಥಳದಲ್ಲಿ ಸಿಕ್ಕ ಪ್ರಶಂಸೆಯಿಂದ ಸಂತೋಷವು ಇಮ್ಮಡಿಯಾಗುವುದು. ನಗುತ್ತ ಮಾಡುವ ಕೆಲಸದಿಂದ ನಿಮ್ಮ ಮೇಲೆ‌ ಅನುಮಾನ ಬರಬಹುದು.

Follow Us
Lohitha Hebbar
Lohitha Hebbar

ವಿದ್ವಾನ್​ ಲೋಹಿತ ಶರ್ಮಾ. ಸಾಗರ ಮೂಲದ ಇಡುವಾಣಿ ಗ್ರಾಮ. ವೇದ ಹಾಗೂ ಸಂಸ್ಕೃತ ಅಧ್ಯಯನ, ಜ್ಯೋತಿಷ್ಯದಲ್ಲಿ ವಿದ್ವತ್ತನ್ನು ಸಂಪಾದಿಸಿರುತ್ತಾರೆ. ಹಸ್ತಪ್ರತಿಶಾಸ್ತ್ರದಲ್ಲಿ ಡಿಪ್ಲೋಮಾ ಮಾಡಿರುತ್ತಾರೆ. ಜ್ಞಾನ-ವಿಜ್ಞಾನ ಅಧ್ಯಯನ ಕೇಂದ್ರ ಬೆಂಗಳೂರಿನಲ್ಲಿ ಸಂಶೋಧಕರಾಗಿ ಮೌಲ್ಯಶಿಕ್ಷಣ ಎನ್ನುವ ಪಠ್ಯವನ್ನು ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ರಚಿಸಿದ್ದಾರೆ. ಧರ್ಮಭಾರತೀ, ತ್ರಿವಿಕ್ರಮ ಮುಂತಾದ ಮಾಸಪತ್ರಿಕೆಯಲ್ಲಿ ಸಂಪಾದಕನಾಗಿ ಕಾರ್ಯ ಮಾಡಿರುತ್ತಾರೆ. ಹಿತೋಪದೇಶ, ಸಂತಗೋರಕ್ಷನಾಥ, ಮಹರ್ಷಿ ಶಂಖಲಿಖಿತ ಗ್ರಂಥಗಳನ್ನು ಬರೆದಿದ್ದಾರೆ. ಅನೇಕ ಲೇಖನಗಳು, ಕಥೆಗಳು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಆಸಕ್ತಿಯ ವಿಷಯ ಸಂಗೀತ, ನಾಟಕ, ಓದು, ಬರಹ, ಚಾರಣ, ಡಿಜಿಟಲ್ ವಿನ್ಯಾಸ. ಸದ್ಯ ಶಿಕ್ಷಕನಾಗಿ ಕಾರ್ಯ.

Read More
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ