Horoscope: ದಿನಭವಿಷ್ಯ, ಆರೋಗ್ಯ ಸಮಸ್ಯೆ ಎದುರಾಗಬಹುದು, ನಿರ್ಲಕ್ಷ್ಯ ಬೇಡ, ನಡಿಗೆಯಲ್ಲಿ ವೇಗ ಕಡಿಮೆ ಮಾಡಿಕೊಳ್ಳುವುದು ಉತ್ತಮ

| Updated By: ಗಂಗಾಧರ​ ಬ. ಸಾಬೋಜಿ

Updated on: Sep 12, 2023 | 12:15 AM

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಸೆಪ್ಟೆಂಬರ್ 12) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ದಿನಭವಿಷ್ಯ, ಆರೋಗ್ಯ ಸಮಸ್ಯೆ ಎದುರಾಗಬಹುದು, ನಿರ್ಲಕ್ಷ್ಯ ಬೇಡ, ನಡಿಗೆಯಲ್ಲಿ ವೇಗ ಕಡಿಮೆ ಮಾಡಿಕೊಳ್ಳುವುದು ಉತ್ತಮ
ಪ್ರಾತಿನಿಧಿಕ ಚಿತ್ರ
Follow us on

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 12 ಮಂಗಳವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ನಿಜ ಶ್ರಾವಣ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಆಶ್ಲೇಷಾ, ಯೋಗ: ಪರಿಘ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 35 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:32 ರಿಂದ ಸಂಜೆ 05:04 ರವರೆಗೆ,
ಯಮಘಂಡ ಕಾಲ ಬೆಳಿಗ್ಗೆ 09:26 ರಿಂದ 10:57ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:29 ರಿಂದ 02:01ರ ವರೆಗೆ.

ಸಿಂಹ ರಾಶಿ: ಅನಿರೀಕ್ಷಿತ ಮಾತುಗಳನ್ನು ಕೇಳಬೇಕಾದ ಸ್ಥಿತಿ‌ಯು ಬರಬಹುದು. ಸಣ್ಣ ಆರೋಗ್ಯದ ತೊಂದರೆಯೂ ನಿಮ್ಮ‌ ಮನಸ್ಸಿಗೆ ಕಿರಿಕಿರಿಯನ್ನು ಉಂಟುಮಾಡುವುದು. ಕಾರ್ಯದಲ್ಲಿ ವೇಗವು ಕುಂಠಿತವಾಗುವುದು. ಸರ್ಕಾರದ ಸೌಲಭ್ಯವು ನಿಮಗೆ ಸಿಗದೇ ಹೋಗಬಹುದು.. ಯಶಸ್ಸನ್ನು ಪಡೆಯುವ ಹಂಬಲವಿರಲಿದೆ. ನೀವು ನೋಡಿದ್ದೇ ಸತ್ಯ ಎಂದು ತಿಳಿದುಕೊಳ್ಳುವುದು ಬೇಡ. ಯಾರಿಗೂ ನಿಮ್ಮ ಅವಶ್ಯಕತೆ ಇಲ್ಲದೇ ಹೋಗಬಹುದು. ಸ್ನೇಹಿತರಿಗೆ ಸಾಲವಾಗಿ ಹಣವನ್ನು ಪುನಃ ಬರುವ ನಿರೀಕ್ಷೆ ಇಲ್ಲದೇ ಕೊಡುವಿರಿ. ಸಾಮಾಜಿಕ ತಾಣದಿಂದ ಪ್ರೇಮವು ಉಂಟಾಗಬಹುದು. ಸಹೋದರಿಯು ಹಣಕ್ಕಾಗಿ ನಿಮ್ಮನ್ನು ಕಾಡಬಹುದು. ನಡಿಗೆಯಲ್ಲಿ ವೇಗವನ್ನು ಕಡಿಮೆ ಮಾಡಿಕೊಳ್ಳುವುದು ಉತ್ತಮ.

ಕನ್ಯಾ ರಾಶಿ: ಶತ್ರುಗಳ ಕಾರಣದಿಂದ ಖರ್ಚುನ್ನು ಮಾಡಬೇಕಾದ ಸ್ಥಿತಿಯು ಬರಲಿದೆ. ಮನಶ್ಶಾಂತಿಗಾಗಿ ಧಾರ್ಮಿಕ ಕಾರ್ಯಗಳನ್ನು ಮಾಡಿಸುವಿರಿ. ಅಕಾಲದಲ್ಲಿ ಸೇವಿಸಿದ ಆಹಾರದಿಂದ ನಿಮಗೆ ಆರೋಗ್ಯವು ಹಾಳಾಗುವುದು. ಮನೆಯಲ್ಲಿ ನೌಕರರ ಕಾರಣಕ್ಕೆ ಸಿಟ್ಟಾಗುವಿರಿ. ಹೊಸ ಸಂಬಂಧದ ಕಡೆ ನಿಮ್ಮ ಚಿತ್ತವು ಇರಲಿದೆ. ನಿರಂತರ ಕೆಲಸವನ್ನು ಮಾಡುವುದು ಇಷ್ಟವಾಗಲಿದೆ. ಸಂಗಾತಿಯ ಭಾವನೆಗೆ ಬೆಲೆ ಕೊಟ್ಟು ಸಂತೋಷಪಡಿಸುವಿರಿ. ಗೃಹನಿರ್ಮಾಣವು ಕಾರಣಾಂತರಗಳಿಂದ ಮುಂದೆ ಹೋಗುವುದು. ನಿಮಗೆ ಬೇಕಾದ ಅವಕಾಶವು ಸಿಗದೇ ಒದ್ದಾಡುವಿರಿ. ವಿದ್ಯುತ್‌ ಉಪಕರಣದಿಂದ ಅಪಾಯವು ಆಗಬಹುದು.

ತುಲಾ ರಾಶಿ: ಸ್ತ್ರೀಯರ ಉಪಸ್ಥಿತಿಯು ನಿಮಗೆ ಬಲವನ್ನು ತಂದುಕೊಡುವುದು. ವಿದೇಶದ ಮಿತ್ರರ ಸಹಾಯದಿಂದ ನೀವು ಉದ್ಯಮವು ವಿಸ್ತಾರವಾಗಬಹುದು. ಅಧಿಕ ಓಡಾಟದಿಂದ ನೀವು ಆಯಾಸಗೊಳ್ಳುವಿರಿ. ಇಂದು ಹಣದ ಹರಿವು ಅಲ್ಪವಾಗಿ ಇರುವುದು. ಆಪ್ತರನ್ನು ಕಳೆದುಕೊಂಡು ಬೇಸರಿಸುವಿರಿ. ಕಲಾವಿದರು ಕಲಾ‌ಪ್ರದರ್ಶನಕ್ಕೆ ದೂರಪ್ರಯಾಣವನ್ನು ಮಾಡುವಿರಿ. ನಿದ್ರೆಯು ಕಡಿಮೆಯಾದ ಕಾರಣ ಕಾರ್ಯದಲ್ಲಿ ಉತ್ಸಾಹ ಕಡಿಮೆ ಇರಲಿದೆ‌. ಪ್ರೇಮಿಯ ಜೊತೆ ಹರಟೆ ಹೊಡೆಯುತ್ತ ದಿನವನ್ನು ಕಳೆಯುವಿರಿ. ಸ್ತ್ರೀಸಂಬಂಧದ ವಿಷಯದಲ್ಲಿ ಆರೋಪವು ಕೇಳಿಬರಬಹುದು. ನೇರವಾಗಿ ಹೇಳುವ ಸ್ವಭಾವವು ಎಲ್ಲ ಸನ್ನಿವೇಶದಲ್ಲಿಯೂ ಸಾಧುವಾಗದು.

ವೃಶ್ಚಿಕ ರಾಶಿ: ತಂದೆಗೆ ಬೇಕಾದ ಧನಸಹಾಯವನ್ನು ನೀವು ಮಾಡುವಿರಿ. ಬಂದ ಹಣವನ್ನು ಸಂಗ್ರಹಿಸಲು ಪ್ರಯತ್ನಿಸಿ. ಇಲ್ಲವಾದರೆ ಸಂಪತ್ತನ್ನು ಉಳಿಸಿಕೊಳ್ಳುವುದು ಕಷ್ಟವಾದೀತು. ಅಸಾಧ್ಯವನ್ನು ಸಾಧಿಸುವ ಹಠವು ಬೇಡವಾದೀತು. ಉದ್ಯಮದಲ್ಲಿ ಹಿನ್ನಡೆಯಾಗುವುದು ನಿಮಗೆ ಮೊದಲೇ ಗೊತ್ತಿದ್ದೂ ಪ್ರಯತ್ನಿಸುವಿರಿ. ಸಂಸ್ಥೆಯ ಮುಖಗಯಸ್ಥರಾಗಲು ಆಹ್ವಾನವು ಬರಬಹುದು. ಅನಪೇಕ್ಷಿಯ ವಿಚಾರವನ್ನು ಪ್ರಸ್ತಾಪಿಸಿಕೊಂಡು ಕಾಲಹರಣ ಮಾಡುವಿರಿ. ತಾಯಿಯ ವಿಚಾರದಲ್ಲಿ ನೀವು ಇಂದು ಕೋಪಗೊಳ್ಳುವ ಸಾಧ್ಯತೆ ಇದೆ. ಉದ್ಯಮಿಗಳಿಗೆ ಉದ್ಯಮವನ್ನು ವಿಸ್ತರಿಸುವ ಚಿಂತನೆಯಲ್ಲಿ ಇರುವಿರಿ.