Horoscope: ದಿನಭವಿಷ್ಯ; ನಿಮ್ಮ ತಪ್ಪಿನ ನಿರ್ಧಾರದಿಂದ ಪಶ್ಚಾತ್ತಾಪ ಪಡಬೇಕಾಗುವುದು

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಅಕ್ಟೋಬರ್ 13) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ದಿನಭವಿಷ್ಯ; ನಿಮ್ಮ ತಪ್ಪಿನ ನಿರ್ಧಾರದಿಂದ ಪಶ್ಚಾತ್ತಾಪ ಪಡಬೇಕಾಗುವುದು
ರಾಶಿ ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 13, 2023 | 12:30 AM

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ಅಕ್ಟೋಬರ್ 13) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ ಶುಕ್ರ:, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಹಸ್ತಾ, ಯೋಗ: ಬ್ರಹ್ಮ, ಕರಣ: ಚತುಷ್ಪಾತ್, ಸೂರ್ಯೋದಯ ಬೆಳಗ್ಗೆ 06 ಗಂಟೆ 24 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 13 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 10:50 ರಿಂದ 12:19ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:16 ರಿಂದ 04:45ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:53 ರಿಂದ 09:22ರ ವರೆಗೆ.

ಸಿಂಹ ರಾಶಿ : ನಿಮ್ಮ ತಪ್ಪಿನ ನಿರ್ಧಾರದಿಂದ ಪಶ್ಚಾತ್ತಾಪ ಪಡಬೇಕಾಗುವುದು. ಬಹಳ ದಿನಗಳ‌ ಅನಂತರ ನ್ಯಾಯಾಲಯದಿಂದ ಸಿಕ್ಕ ಜಯವು ಸಂತಸವನ್ನು ಉಂಟುಮಾಡುವುದು. ಇನ್ನೊಬ್ಬರನ್ನು ಪ್ರಶಂಸಿಸುವ ಮನೋಭಾವ ನಿಮ್ಮಲ್ಲಿ ಇರದು. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಅಗತ್ಯ. ಇಂದು ತುರ್ತಾಗಿ ಬೇಕಾಗಿರುವ ಹಣವನ್ನು ಹೊಂದಿಸಲು ನಿಮಗೆ ಕಷ್ಟವಾಗುವುದು. ಕೃಷಿಗೆ ಸಂಬಂಧಿಸಿದಂತೆ ಹೊಸ ಕಲ್ಪನೆಯನ್ನು ಇಟ್ಟುಕೊಳ್ಳುವಿರಿ. ಕಛೇರಿಯ ಕಾರ್ಯದಿಂದ ಆಯಾಸವಾಗಬಹುದು. ಬಹಳ ವರ್ಷಗಳಿಂದ ಒಂದೇ ಉದ್ಯೋಗದಲ್ಲಿ ಇದ್ದವರಿಗೆ ಸಂತೋಷದ ಸುದ್ದಿ ಸಿಗಲಿದೆ. ನಿಮ್ಮಿಂದ ಕಾರ್ಯವಾಗಲು ಯಾರಾದರೂ ನಿಮ್ಮನ್ನು ಹೊಗಳಬಹುದು. ಸಣ್ಣ ವಿಚಾರವನ್ನು ದೊಡ್ಡದಾಗಿ ಮಾಡುಕೊಳ್ಳುವುದು ಬೇಡ.

ಕನ್ಯಾ ರಾಶಿ : ಅನಿರೀಕ್ಷಿತ ಪ್ರಯಾಣ ಹೋಗುವ ಸಾಧ್ಯತೆ ಇದೆ. ನಿಮ್ಮದಾದ ಕೆಲವು ಅಸಂಬದ್ಧ ವ್ಯವಸ್ಥೆಯನ್ನು ನೀವು ಸರಿ ಮಾಡಿಕೊಳ್ಳಬೇಕಾಗುವುದು. ಹೊಸ ವಸ್ತುವಿನ ಖರೀದಿಯಲ್ಲಿ ನಿಮಗೆ ಮೋಸ ಆಗುವ ಸಾಧ್ಯತೆ ಇದೆ. ಪ್ರೀತಿಪಾತ್ರರ ಜೊತೆ ಇಂದು ಸಲುಗೆಯಿಂದ ಇರುವಿರಿ. ಮನಸ್ಸಿಗೆ ಇಷ್ಟವಾಗದ ಕಾರ್ಯವನ್ನು ನೀವು ಮಾಡಬೇಕಾದೀತು. ಕುಟುಂಬದ ಜೊತೆ ಧಾರ್ಮಿಕ ಸ್ಥಳಗಳಿಗೆ ಹೋಗುವಿರಿ. ಮನಸ್ಸಿನಿಂದ ನೀವು ಕೆಲವು ವಿಚಾರವನ್ನು ತೆಗೆದುಹಾಕುವುದು ಉತ್ತಮ. ಅಪನಂಬಿಕೆಯಿಂದ ನಿಮಗೆ ತೊಂದರೆ ಆಗಬಹುದು. ವಸತಿ ಸ್ಥಾನವನ್ನು ಬದಲಿಸಬೇಕಾದೀತು. ಯಾರನ್ನೋ ನೋಡಿ ಹೊಟ್ಟಿ ಉರಿ ಮಾಡಿಕೊಳ್ಳುವುದು ಬೇಡ. ಸಮಯೋಚಿತ ಕಾರ್ಯದಿಂದ ಲಾಭ ಸಿಗಲಿದೆ. ಅರ್ಥಿಕತೆಗೆ ಸಂಬಂಧಿಸಿದಂತೆ ಯಾರಾದರೂ ಆಡಿಕೊಂಡಾರು.

ತುಲಾ ರಾಶಿ : ಉಗುರಿನಲ್ಲಿ ಆಗುವ ಕಾರ್ಯಕ್ಕೆ ಕೊಡಲಿ ಏಟು ತರುವುದು ಉಚಿತವಲ್ಲ‌. ವಿಷಯ, ಸಮಯ ಎಲ್ಲವನ್ನೂ ನೋಡಿ ವ್ಯವಹರಿಸಿ. ದುಡುಕಿ ಯಾವುದನ್ನೂ ಮಾಡುವುದು ಬೇಡ. ನಿಮಗಮ ಸ್ಥಿರಾಸ್ತಿಯ ಮಾರಾಟದಲ್ಲಿ ಏಕಮುಖವಾದ ಅಭಿಪ್ರಾಯ ಬೇಡ. ನಿಮ್ಮ ಕೆಲವು ಆಸೆಗಳನ್ನು ಪೂರೈಸಿಕೊಳ್ಳುವಿರಿ. ಸಮಾಜವು ನಿಮ್ಮ ಸಾಧನೆಯನ್ನು ಗುರುತಿಸೀತು. ನಿಮ್ಮ ಬಗ್ಗೆ ಬಂದ‌ ಆರೋಪವನ್ನು ಜಾಣ್ಮೆಯಿಂದ ಪರಿಹಿರಿಸಿಕೊಳ್ಳುವಿರಿ.‌ ನಿಮ್ಮ ಉದ್ಯಮಕ್ಕೆ ಹೆಚ್ಚಿನ ಸಮಯವನ್ನು ಕೊಡುವುದು ಅಗತ್ಯ. ಪ್ರಭಾವೀ ಜನರ‌ ನಡುವೆ ಅಂತರವನ್ನು ಕಾಯ್ದುಕೊಳ್ಳಿ.‌ ನಿಮ್ಮ ಬಗ್ಗೆಯೇ ನೀವು ಅತಿಯಾಗಿ ಹೇಳಿಕೊಳ್ಳುವುದು ಸರಿ ಕಾಣದು.

ವೃಶ್ಚಿಕ ರಾಶಿ : ಸುಮ್ಮನೇ ವಾದ ಮಾಡುವ ಚಪಲವನ್ನು ಬಿಟ್ಟು ಸಹಜವಾಗಿ ಎಲ್ಲರ ಜೊತೆ ಮಾತನಾಡಿ. ದೈಹಕ‌ ಕಾರ್ಯದಲ್ಲಿ ತೊಡಗಿದವರಿಗೆ ಹೆಚ್ಚು ಆದಾಯವು ಇರುವುದು. ಕಾರ್ಯಕ್ಕಾಗಿ ಹೆಚ್ಚು ಓಡಾಡಬೇಕಾಗುವುದು. ಧಾರ್ಮಿಕ ಸೇವೆಯಲ್ಲಿ ನೀವು ಭಾಗಿಗಳಾಗುವಿರಿ. ನಿದ್ರಾಹೀನತೆಯಿಂದ ಕಿರಿಕಿರಿ ಉಂಟಾಗುವುದು. ಮಕ್ಕಳ ವರ್ತನೆಯು ಹಿಡಸದೇ ಇರುವುದು. ಆದರೂ ಏನನ್ನೂ ಹೇಳದೇ ಇರುವಿರಿ. ಹಿತಶತ್ರುಗಳನ್ನು ಸರಿಯಾಗಿ ಗಮನಿಸುತ್ತಿರಿ. ಕಾರ್ಯದ ಬಗ್ಗೆ ಅತಿಯಾದ ಆಲೋಚನೆಯಿಂದ ತಲೆನೋವು ಬರಬಹುದು. ಪ್ರೀತಿಗಾಗಿ ಇಂದು ಹೆಚ್ಚು ಸಮಯವನ್ನು ಕೊಡುವಿರಿ. ಹೊಸ ಆದಾಯದ ದಾರಿ ಸಿಕ್ಕಿ ಅಲ್ಪ ನೆಮ್ಮದಿ ಕಾಣುವಿರಿ. ರಾಜಕಾರಣಿಗಳು ಸಮಾಜದಿಂದ ಗೌರವವನ್ನು ಪಡೆಯುವರು. ದುರಾಸೆಯನ್ನು ಆದಷ್ಟು ನಿಮ್ಮ ಹಿಡಿತದಲ್ಲಿ ಇರಿಸಿಕೊಳ್ಳಿ.

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ