AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ, ಈ ರಾಶಿಯವರ ಶಿಸ್ತಿನ ಕೆಲಸಕ್ಕೆ ಹೆಚ್ಚಿನ ಜವಾಬ್ದಾರಿಗಳು ಬರಬಹುದು

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಆಗಸ್ಟ್ 14) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ, ಈ ರಾಶಿಯವರ ಶಿಸ್ತಿನ ಕೆಲಸಕ್ಕೆ ಹೆಚ್ಚಿನ ಜವಾಬ್ದಾರಿಗಳು ಬರಬಹುದು
ಇಂದಿನ ರಾಶಿಭವಿಷ್ಯ (iStock Photo)
TV9 Web
| Edited By: |

Updated on: Aug 14, 2023 | 12:30 AM

Share

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಆಗಸ್ಟ್ 14) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಆಶ್ಲೇಷಾ, ಮಾಸ: ಅಧಿಕ ಶ್ರಾವಣ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಪುಷ್ಯ, ಯೋಗ: ಶಿವ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 19 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 54 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 07:54 ರಿಂದ 09:28ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 11:03 ರಿಂದ ಮಧ್ಯಾಹ್ನ 12:37 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:11 ರಿಂದ 03:46ರ ವರೆಗೆ.

ಸಿಂಹ ರಾಶಿ: ನಿಮಗೆ ಸಿಕ್ಕ ಜವಾಬ್ದಾರಿಗಳು ಅಸಮಾಧಾನವನ್ನು ಉಂಟುಮಾಡುವುದು. ಯಾರ ಜೊತೆಯೂ ಬೆರೆಯುವ ಮನಸ್ಸಾಗದು. ಸಂಗಾತಿಯನ್ನು ಅರ್ಥಮಾಡಿಕೊಳ್ಳಲು ನಿಮಗೆ ಸಮಯ ಬೇಕಾಗುವುದು. ಎಲ್ಲ ವಿಚಾರಗಳಿಗೂ ನಿಮ್ಮನ್ನು ಬೆರಳು ಮಾಡಿ ತೋರಿಸುವರು. ಮಾಧ್ಯಮದ ಉದ್ಯೋಗಿಗಳು ಹೆಚ್ಚಿನ ಆದಾಯವನ್ನು ಪಡೆಯುವರು. ಮೇಲಧಿಕಾರಿಗಳ ವಿಶ್ವಾಸವನ್ನು ಗಳಿಸುವಿರಿ. ನೀವು ಇಂದು ಬಹಳ‌ ಬೇಡಿಕೆ ಉಳ್ಳವರಾಗಿರುವಿರಿ. ಯಾರದೋ ಮಾತಿಗೆ ಉದ್ವೇಗಕ್ಕೆ ಒಳಗಾಗುವಿರಿ. ನಿಮ್ಮ ಕುಶಲ ಕಾರ್ಯಗಳು ಎಲ್ಲರಿಗೂ ಇಷ್ಟವಾದೀತು.

ಕನ್ಯಾ ರಾಶಿ: ರಾಜಕೀಯವನ್ನೇ ತಮ್ಮ ಕಾರ್ಯಕ್ಷೇತ್ರವನ್ನು ಮಾಡಿಕೊಂಡವರಿಗೆ ಸ್ವಲ್ಪ ಹಿನ್ನಡೆಯಾಗಬಹುದು. ಎಲ್ಲವನ್ನೂ ನಿಮ್ಮ ಪರವಾಗಿ ಮಾಡಿಕೊಳ್ಳಲು ಪ್ರಯತ್ನಿಸದರೂ ಅಲ್ಪ ಲಾಭವಾಗುವುದು. ವಿದ್ಯಾರ್ಥಿಗಳು ವ್ಯರ್ಥ ತಿರುಗಾಟವನ್ನು ಮಾಡಬೇಕಾಗುವುದು. ಖರೀದಿಸಲು ಇಚ್ಛಿಸುವವರು ಉತ್ತಮ ಭೂಮಿಯನ್ನು ಪಡೆಯುವ ಸಾಧ್ಯತೆ ಇದೆ. ಇದಕ್ಕೆ ಬಂಧುವರ್ಗದಿಂದ ಬೇಕಾದ ಸಹಾಯವೂ ಸಿಗುವುದು. ನಿಮ್ಮ ಪರಿಶ್ರಮದ ಕೆಲಸಗಳು ನಿರರ್ಥಕವಾಗುವುದು. ಪ್ರಶಂಸೆಯೂ ಸಿಗದೇ ಇರುವುದು ನಿಮಗೆ ಬೇಸರವನ್ನು ತಂದೀತು. ಅಡ್ಡಿಗಳನ್ನು ನೀವು ಸಕಾರಾತ್ಮಕವಾಗಿ ತೆಗೆದುಕೊಂಡು ಮುನ್ನಡೆದರೆ ನಿಮಗೆ ಉತ್ತಮ ಮಾರ್ಗವು ತೆರೆಯುವುದು.

ತುಲಾ ರಾಶಿ: ಮಕ್ಕಳ ವಿವಾಹಕ್ಕೆ ನೀವು ತಿರುಗಾಟ ಮಾಡಬೇಕಾಗಬಹುದು. ನಿಮ್ಮ ಶಿಸ್ತಿನ ಕೆಲಸಕ್ಕೆ ಹೆಚ್ಚಿನ ಜವಾಬ್ದಾರಿಗಳು ಬರಬಹುದು. ನಿಮ್ಮ ವರ್ತನೆಯಿಂದ ಬಂಧುಗಳು ಅಸಮಾಧಾನಗೊಳ್ಳುವರು. ಸರ್ಕಾರದಿಂದ ಆಗಬೇಕಾದ ಕೆಲಸಗಳು ಬೇಗ ಆಗುವುವು. ನಿಮ್ಮ ಹಣವನ್ನು ಯೋಗ್ಯವಾದ ಸ್ಥಳದಲ್ಲಿ ಹೂಡಿಕೆ ಮಾಡುವಿರಿ. ಸಾಹಸವನ್ನು ಮಾಡಲು ಹೋಗುವುದು ಬೇಡ. ಕಷ್ಟಕಾಲದಲ್ಲಿ ಸಹಾಯ ಮಾಡಿದವರನ್ನು ನೀವು ನೆನಪಿಸಿಕೊಂಡು ಅವರ ಜೊತೆ ಮಾತನಾಡುವಿರಿ‌. ಗೃಹೋದ್ಯಮದಿಂದ ಅಧಿಕ ಲಾಭವನ್ನು ನೀವು ಗಳಿಸುವಿರಿ. ಅಪರಿಚಿತರ ಜೊತೆ ಮಾತುಕತೆಗಳು ಮಿತಿಯಲ್ಲಿ ಇರಲಿ.

ವೃಶ್ಚಿಕ ರಾಶಿ: ನಿಮ್ಮ ಯೋಜನೆಯ ಕೆಲಸಗಳಿಗೆ ವಿಘ್ನಗಳು ಬರುವುದು. ಸರಿಯಾದ ಮಾಹಿತಿಯ ಕೊರತೆ ಕಾಣುವುದು. ಯಾರೂ ನಿಮಗೆ ಸರಿಯಾಗಿ ಸ್ಪಂದಿಸದೇ ಇರುವವರು. ಎಲ್ಲ ಕಡೆಗಳಲ್ಲಿ ವಿಳಂಬವಾದಂತೆ ತೋರುವುದು. ಇದೆಲ್ಲವೂ ಮನಸ್ಸಿಗೆ ಕಿರಿಕಿರಿಯನ್ನು ಉಂಟುಮಾಡಬಹುದು. ಪ್ರಭಾವೀ ವ್ಯಕ್ತಿಗಳ ಸಹಾಯವನ್ನು ಪಡೆದುಕೊಳ್ಳುವ ಸಂದರ್ಭವು ನಿಮಗೆ ಬರಬಹುದು. ವಾಹನವನ್ನು ಬದಲಾಯಿಸಿ ಹೊಸ ವಾಹನವನ್ನು ಖರೀದಿಸುವಿರಿ. ನಿಮ್ಮದಲ್ಲದ ವಸ್ತುವನ್ನು ಪಡೆದುಕೊಂಡು ಕಷ್ಟಪಡುವಿರಿ. ಸಂಗಾತಿಯ ಎಲ್ಲ ಮಾತಿಗೂ ನಿಮ್ಮ ಒಮ್ಮತ ಇರದು. ಇದು ಕಲಹಕ್ಕೆ ಕಾರಣವಾಗಬಹುದು.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ