AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ; ಈ ರಾಶಿಯವರು ಯಾವುದೇ ಸಾಹಸ ಕಾರ್ಯವನ್ನು ಮಾಡಲು ಹೋಗುವುದು ಬೇಡ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಅಕ್ಟೋಬರ್ 14) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ದಿನಭವಿಷ್ಯ; ಈ ರಾಶಿಯವರು ಯಾವುದೇ ಸಾಹಸ ಕಾರ್ಯವನ್ನು ಮಾಡಲು ಹೋಗುವುದು ಬೇಡ
ಪ್ರಾತಿನಿಧಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Oct 14, 2023 | 12:30 AM

Share

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ಅಕ್ಟೋಬರ್ 14) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ಚಿತ್ರಾ, ಯೋಗ: ಐಂದ್ರ, ಕರಣ: ಕಿಂಸ್ತುಘ್ನ, ಸೂರ್ಯೋದಯ ಬೆಳಗ್ಗೆ 06 ಗಂಟೆ 24 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 12 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:22 ರಿಂದ 10:50ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:47 ರಿಂದ 03:16ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:25 ರಿಂದ 07:53ರ ವರೆಗೆ.

ಸಿಂಹ ರಾಶಿ : ದಿನದ ಆರಂಭವು ಬಹಳ ಉತ್ಸಾಹದಿಂದ ಇರಲಿದ್ದು, ಎಲ್ಲರ ಜೊತೆ ಸೌಹಾರ್ದವಾಗಿ ಇರುವಿರಿ. ಉದ್ಯೋಗದ ಸ್ಥಳದಲ್ಲಿ ಮಿತವಾದ ಮಾತುಗಳನ್ನು ಆಡಬೇಕಾದೀತು. ವಾಹನ ಚಾಲನೆಯನ್ನು ಸುರಕ್ಷಿತವಾಗಿ ಮಾಡಿ. ಆಪ್ತರಿಂದ ನಿಮಗೆ ಉಡುಗೊರೆ ಸಿಗಬಹುದು. ನಿಮಗೆ ಸಿಕ್ಕ ಜವಾಬ್ದಾರಿಯಲ್ಲಿ ಪೂರ್ಣ ತೃಪ್ತಿ ಇರದು. ಯಾರ ಜೊತೆಯಾದರೂ ಬೆರೆಯಬೇಕು ಅನ್ನಿಸುವುದು. ಸಂಗಾತಿಗೆ ಕಿರಿಕಿರಿ ಉಂಟಾಗುವಂತೆ ಮಾಡುವಿರಿ. ಎಲ್ಲ ತಪ್ಪುಗಳಿಗೂ ನಿಮ್ಮನ್ನೇ ಬೆರಳು ಮಾಡಿ ತೋರಿಸಬಹುದು. ಸರಿಯಾದ ಉತ್ತರವನ್ನು ನೀಡಬೇಕಾಗುತ್ತದೆ. ಮಾಧ್ಯಮದ ಉದ್ಯೋಗಿಗಳಿಗೆ ಹೆಚ್ಚು ಒತ್ತಡ ಇರಲಿದೆ. ಮೇಲಧಿಕಾರಿಗಳ ವಿಶ್ವಾಸವನ್ನು ಗಳಿಸಲು ವಿಫಲರಾಗುವಿರಿ. ಯಾರದೋ ಮಾತಿಗೆ ಉದ್ವೇಗಕ್ಕೆ ಒಳಗಾಗುವಿರಿ. ನಿಮ್ಮ ನಾಜೂಕಿನ ಕಾರ್ಯಗಳು ಎಲ್ಲರಿಗೂ ಇಷ್ಟವಾಗುವುದು.

ಕನ್ಯಾ ರಾಶಿ : ಕಾರ್ಯಗಳಿಗೆ ಅಡೆತಡೆ ಉಂಟಾಗುವ ಶಂಕೆಯು ದೂರವಾಗುವುದು. ಮಿತವಾದ ಆಹಾರ ಸೇವನೆಯನ್ನು ಮಾಡುವಿರಿ. ಮಿತ್ರರ ಜೊತೆ ಪ್ರವಾಸ ಹೋಗಬಹುದು. ಹಿರಿಯರಿಂದ ನಿರೀಕ್ಷಿತ ಲಾಭವು ಸಿಗಲಿದ್ದು ಸಂತೋಷವಾಗುವುದು. ಇಂದು ವೈಯಕ್ತಿಕ ಕಾರ್ಯಗಳನ್ನು ಮಾಡಿ ಮುಗಿಸಿಕೊಳ್ಳುವಿರಿ. ಚರ್ಮಕ್ಕೆ ಸಂಬಂಧಿಸಿದಂತೆ ಏನಾದರೂ ಕಾಣಿಸಿಕೊಳ್ಳಬಹುದು. ಎಲ್ಲರನ್ನೂ ನಿಮ್ಮ ಪರವಾಗಿ ಮಾಡಿಕೊಳ್ಳಲು ಪ್ರಯತ್ನಿಸುವಿರಿ. ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸಕ್ಕಾಗಿ ವ್ಯರ್ಥ ತಿರುಗಾಟವನ್ನು ಮಾಡುವರು. ಉತ್ತಮ ಭೂಮಿಯ ಖರೀದಿಗೆ ಬಂಧುಗಳ ಸಲಹೆ ಪಡೆಯಿರಿ. ಇಂದು ನಿಮ್ಮ ಶ್ರಮದ ಕಾರ್ಯಗಳು ನಿರರ್ಥಕವಾಗಬಹುದು. ತೊಂದರೆಗಳನ್ನು ನೀವು ಸಕಾರಾತ್ಮಕವಾಗಿ ತೆಗೆದುಕೊಂಳ್ಳುವಿರಿ.

ತುಲಾ ರಾಶಿ : ಆಲಸ್ಯದ ಪ್ರವೃತ್ತಿಯು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಕ್ರಿಯಾಶೀಲತೆಗೆ ಬೇಕಾದ ಕ್ರಮವನ್ನು ತೆಗೆದುಕೊಳ್ಳುವುದು ಅನಿವಾರ್ಯ ಆಗಬಹುದು. ನಿಮ್ಮ ವಾಹನದಿಂದ ನಿಮಗೆ ಅಲ್ಪ ಲಾಭವಾಗುವುದು. ನಕಾರಾತ್ಮಕ ಆಲೋಚನೆಯನ್ನು ಇಂದು ಹೆಚ್ಚು ಮಾಡುವಿರಿ. ಮಕ್ಕಳ ವಿವಾಹಕ್ಕಾಗಿ ನೀವು ಓಡಾಡಿ ಆಯಾಸಪಡುವಿರಿ. ನಿಮ್ಮ ಜವಾಬ್ದಾರಿಯ ಮನೋಭಾವಕ್ಕೆ ಹೆಚ್ಚು ಒತ್ತಡವು ಬರಬಹುದು. ನಿಮ್ಮ ಇಂದಿನ ವರ್ತನೆಯಿಂದ ಬಂಧುಗಳಿಗೆ ಅಸಮಾಧಾನವಾಗುವುದು. ಸರ್ಕಾರದಿಂದ ಆಗಬೇಕಾದ ಕಾರ್ಯಗಳಲ್ಲಿ ಹಿನ್ನಡೆಯಾಗುವುದು. ನಿಮ್ಮ ಹಣವನ್ನು ಉಚಿತ ಸ್ಥಳದಲ್ಲಿ ಹೂಡಿಕೆ ಮಾಡಿ. ಯಾವುದೇ ಸಾಹಸ ಕಾರ್ಯವನ್ನು ಮಾಡಲು ಹೋಗುವುದು ಬೇಡ. ಕಷ್ಟಕಾಲದಲ್ಲಿ ಸಹಾಯ ಮಾಡಿದವರನ್ನು ನೀವು ಸ್ಮರಿಸಿಕೊಳ್ಳುವಿರಿ. ಗೃಹೋದ್ಯಮ‌ ನಡೆಸುವವರಿಗೆ ಲಾಭವಿದೆ. ಅಪರಿಚಿತರ ಜೊತೆ ಮಾತುಕತೆ ಮಿತಿಯಲ್ಲಿ ಇರಲಿ.

ವೃಶ್ಚಿಕ ರಾಶಿ : ಮನೆಯಲ್ಲಿ ಮಂಗಲಕಾರ್ಯವನ್ನು ಮಾಡಲು ಪ್ರಯತ್ನಿಸುವಿರಿ. ಆದಾಯಕ್ಕೆ ಹತ್ತಾರು ಮೂಲಗಳು ನಿಮ್ಮೆದುರು ತೆರದುಕೊಳ್ಳುವುದು. ನೌಕರರ ವಿಚಾರಕ್ಕೆ ನೀವು ಸಿಟ್ಟುಗೊಳ್ಳುವಿರಿ. ಮತ್ತೆ ಮತ್ತೆ ನಿಮಗೆ ಅನಾರೋಗ್ಯವು ಕಾಣಿಸಿಕೊಂಡಿದ್ದು ವೈದ್ಯರಿಂದ ಚಿಕಿತ್ಸೆ ಪಡೆಯಿರಿ ಮತ್ತು ದೈವಜ್ಞರನ್ನು ಸಂಪರ್ಕಿಸಿ ದೈವಾನುಕೂಲದ ಬಗ್ಗೆಯೂ ಮಾತನಾಡಿ. ನಿಮ್ಮ ಪೊರ್ವಯೋಜಿತ ಕಾರ್ಯಗಳನ್ನು ಕ್ರಿಯಾರೂಪಕ್ಕೆ ತರಲು ನಿಮಗೆ ಸಾಧ್ಯವಾಗದು. ಏನಾದರೂ ಅಡೆತಡೆಗಳು ಬರಬಹುದು. ನಿಮಗೆ ಯಾರೂ ಸ್ಪಂದನೆ ಕೊಡದೇ ಹೋಗಬಹುದು. ಪುಣ್ಯ ಕ್ಷೇತ್ರಗಳ ದರ್ಶನವನ್ನು ಮಾಡಲು ಪ್ರಯಾಣ ಮಾಡುವಿರಿ. ಅನಿರೀಕ್ಷಿತವಾಗಿ ಕೆಲವು ವ್ಯಕ್ತಿಗಳ ಸಹಕಾರವು ಸಿಕ್ಕಿ ಸಂತೋಷವಾಗುವುದು. ನಿಮ್ಮ ಉನ್ನತ ಸ್ಥಾನ‌ಕೊಡುವ ಬಗ್ಗೆ ಒಮ್ಮತದ ಅಭಿಪ್ರಾಯವು ಬರಲಿದೆ.

ಗವಿಸಿದ್ದಪ್ಪ ಕೊಲೆಗೆ ಮತ್ತೊಂದು ಟ್ವಿಸ್ಟ್: ಸ್ಫೋಟಕ ಅಂಶ ಬಿಚ್ಚಿಟ್ಟ ತಾಯಿ
ಗವಿಸಿದ್ದಪ್ಪ ಕೊಲೆಗೆ ಮತ್ತೊಂದು ಟ್ವಿಸ್ಟ್: ಸ್ಫೋಟಕ ಅಂಶ ಬಿಚ್ಚಿಟ್ಟ ತಾಯಿ
ಆತ್ಮಹತ್ಯೆಗೆ ಯತ್ನಿಸಿದವನಿಗೆ ಕೊನೆ ಕ್ಷಣದಲ್ಲಿ ಹುಟ್ಟಿತು ಬದುಕಬೇಕೆಂಬ ಆಸೆ
ಆತ್ಮಹತ್ಯೆಗೆ ಯತ್ನಿಸಿದವನಿಗೆ ಕೊನೆ ಕ್ಷಣದಲ್ಲಿ ಹುಟ್ಟಿತು ಬದುಕಬೇಕೆಂಬ ಆಸೆ
ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು
ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಜೈಲು ಚೆಕ್ ಪೋಸ್ಟ್ ಬಳಿ ವಿಜಯಲಕ್ಷ್ಮಿ ದರ್ಶನ್​ ಕಾರು ತಡೆದ ಜೈಲು ಸಿಬ್ಬಂದಿ
ಜೈಲು ಚೆಕ್ ಪೋಸ್ಟ್ ಬಳಿ ವಿಜಯಲಕ್ಷ್ಮಿ ದರ್ಶನ್​ ಕಾರು ತಡೆದ ಜೈಲು ಸಿಬ್ಬಂದಿ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಎಲ್ಲರಿಗೂ ಇದೆ ಮಾರಿ ಹಬ್ಬ
ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಎಲ್ಲರಿಗೂ ಇದೆ ಮಾರಿ ಹಬ್ಬ
ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ
ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ