Horoscope: ದಿನಭವಿಷ್ಯ, ಬಂಧುವಿನಿಂದ ನೀವು ಧನವನ್ನು ಅಪೇಕ್ಷಿಸುವಿರಿ, ಉತ್ತಮ ಸ್ನೇಹದಿಂದ ಖುಷಿ ಇರಲಿದೆ
ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಸೆಪ್ಟೆಂಬರ್ 14) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.
ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಸೆಪ್ಟೆಂಬರ್ 14) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ನಿಜ ಶ್ರಾವಣ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ಉತ್ತರಾಫಲ್ಗುಣೀ, ಯೋಗ: ಬ್ರಹ್ಮ, ಕರಣ: ಚತುಷ್ಪಾದ್, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 34 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 01:59 ರಿಂದ ಸಂಜೆ 03:31 ರವರೆಗೆ, ಯಮಘಂಡ ಕಾಲ ಬೆಳಿಗ್ಗೆ 06:22 ರಿಂದ 07:54ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:25 ರಿಂದ 10:57ರ ವರೆಗೆ.
ಸಿಂಹ ರಾಶಿ : ಅಪಾತ್ರರಿಗೆ ನಿಮ್ಮ ವಸ್ತುವನ್ನು ಗೊತ್ತಿಲ್ಲದೇ ಕೊಡುವಿರಿ. ಅಮೇಧ್ಯವಾದ ಆಹಾರವನ್ನು ಸೇವಿಸುವ ಸಂದರ್ಭವು ಬರಬಹುದು. ರಕ್ಷಣೆಯ ಜವಾಬ್ದಾರಿ ಇದ್ದವರಿಗೆ ಒತ್ತಡವಿರುವುದು. ಮಕ್ಕಳಲ್ಲಿ ಪ್ರೀತಿಯನ್ನು ತೋರುವಿರಿ. ದೂರದ ಸ್ಥಳಕ್ಕೆ ಉದ್ಯೋಗಕ್ಕೆ ಹೋಗಲು ಮನೆಯಿಂದ ನಕಾರಾತ್ಮಕ ಮಾತುಗಳು ಬರಬಹುದು. ಯಾರನ್ನೂ ಅವಲಂಬಿಸದೇ ನಿಲ್ಲಬೇಕು ಎನ್ನುವ ಹಠವು ಇರುವುದು. ಪ್ರಶಂಸೆಯು ಇಲ್ಲದೇ ಕೆಲಸದಲ್ಲಿ ನಿಮ್ಮ ಆಸಕ್ತಿಯು ಕಡಿಮೆ ಆಗಬಹುದು. ನಿಮ್ಮ ಕಾರ್ಯಕ್ಕೆ ಮಕ್ಕಳಿಂದ ವಿರೋಧವು ಇರಲಿದೆ. ಅಹಂಕಾರದ ಮಾತುಗಳು ನಿಮಗೆ ಶೋಭೆಯಾಗದು.
ಕನ್ಯಾ ರಾಶಿ : ಸಹೋದ್ಯೋಗಿಯೊಬ್ಬನಿಗೆ ಸಹಾಯ ಮಾಡುವ ಸ್ಥಿತಿಯು ನಿಮಗೆ ಬರಬಹುದು. ಆಗಬೇಕಾದ ಕಾರ್ಯಗಳು ಒತ್ತಡ ಇಲ್ಲದೇ ಆಗುವುದು. ರತ್ನ ವ್ಯಾಪಾರದಲ್ಲಿ ಹಿನ್ನಡೆಯಾಗಬಹುದು. ಇಂದಿನ ಸಮಯವನ್ನು ವ್ಯರ್ಥಮಾಡಿಕೊಂಡು ಬೇಸರಿಸುವಿರಿ. ನಿಮ್ಮ ಸ್ವಭಾವವು ಇಯರರಿಗೆ ಅಸಹಜತೆಯಂತೆ ಕಾಣಿಸಬಹುದು. ವಹಿಸಿಕೊಂಡ ಕಾರ್ಯವನ್ನು ಸಮಯಕ್ಕೆ ಮುಗಿಸುವಿರಿ. ಕೃಷಿಕರು ಆದಾಯದ ಮೂಲವನ್ನು ಹುಡುಕುವರು. ನಿಮ್ಮ ನಿರ್ಲಕ್ಷ್ಯದಿಂದ ಭೂಮಿಯ ಸ್ವಲ್ಪ ಭಾಗವನ್ನು ಕಳೆದುಹೋಗಬಹುದು. ಬಂಧಿವಿನಿಂದ ನೀವು ಧನವನ್ನು ಅಪೇಕ್ಷಿಸುವಿರಿ. ಉತ್ತಮ ಸ್ನೇಹದಿಂದ ಖುಷಿ ಇರಲಿದೆ.
ತುಲಾ ರಾಶಿ : ಮನಸ್ಸಿನ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಇಂದು ಕಷ್ಟವಾದೀತು. ಕೆಲವು ವ್ಯಕ್ತಿಗಳಿಂದ ನೀವು ದೂರವಿರಲು ಇಚ್ಛಿಸುವಿರಿ. ನಿಮ್ಮ ಅಸಹಕಾರದಿಂದ ಮಕ್ಕಳಿಗೆ ಬೇಸರವಾದೀತು. ಯೋಜಿತ ಕಾರ್ಯಗಳು ಸಮಯಕ್ಕೆ ಸರಿಯಾಗಿ ಮುಗಿಯಲಿದ್ದು ನೆಮ್ಮದಿ ಇರುವುದು. ವ್ಯಾಪಾರದಲ್ಲಿ ಜನರ ಆಕರ್ಷಣೆಯನ್ನು ಮಾಡುವ ಕಲೆ ಸಿದ್ಧಿಸಿದೆ. ನಿಮ್ಮ ಅಸಮಾಧಾನವನ್ನು ಅಸ್ಥಾನದಲ್ಲಿ ಹೊರಹಾಕಿ ಮುಜುಗರಕ್ಕೆ ಒಳಗಾಗುವಿರಿ. ತಂದೆಯ ಮೇಲೆ ನಿಮ್ಮ ಗೌರವವು ಅಧಿಕಾಗಿದ್ದು ಅನಿರೀಕ್ಷಿತ ಉಡುಗೊರೆಯನ್ನು ಕೊಡುವಿರಿ. ಹಿತಶತ್ರುಗಳನ್ನು ಸರಿಯಾಗಿ ಬಳಸಿಕೊಳ್ಳುವುದು ನಿಮಗೆ ಗೊತ್ತಾಗುವುದು.
ವೃಶ್ಚಿಕ ರಾಶಿ : ನೆರೆಹೊರೆಯರ ಮಾತು ನಿಮಗೆ ಬೇಸರ ತರಿಸಿ, ಪ್ರತಿಯಾಗಿ ಏನನ್ನಾದರೂ ಹೇಳಲು ಹೋಗುವಿರಿ. ನಿಮ್ಮ ಉದ್ವೇಗದ ಮನಸ್ಸನ್ನು ಇತರರಿಗೆ ತೋರಿಸುವಿರಿ. ಮೇಲಧಿಕರಿಗಳು ನಿಮ್ಮ ಕಾರ್ಯಕ್ಕೆ ತೊಂದರೆ ಕೊಟ್ಟಾರು. ಕಷ್ಟವಾದರೂ ಸಾಲದ ಮರುಪಾವತಿಯನ್ನು ಮಾಡವಿರಿ. ಮನಸ್ಸಿಗೆ ಬೇರಸವಾಗುವ ಸಂಗತಿಯು ಹತ್ತಿರ ಬಂದಾಗ ಅದನ್ನು ದೂರವಿಡಲು ಪ್ರಯತ್ನಿಸಿ. ನಿಮಗೆ ಖುಷಿ ಕೊಡುವ ಸಂಗತಿಯ ಕಡೆಗೆ ಗಮನಹರಿಸಿ. ಹಲವು ದಿನಗಳಿಂದ ನಿರೀಕ್ಷಿಸುತ್ತಿದ್ದ ಉದ್ಯೋಗದ ಭಡ್ತಿಯು ಸಿಗಲಿದೆ. ನಿಮ್ಮ ವಾಹನವನ್ನು ಬದಲಾಯಿಸುವ ಸಾಧ್ಯತೆ ಇದೆ. ಹಣವನ್ನು ವೃಥಾ ಖಾಲಿ ಮಾಡುವುದು ಬೇಡ. ಸ್ನೇಹಿತರ ಜೊತೆ ಎಲ್ಲಿಗಾದರೂ ಪ್ರಯಾಣವನ್ನು ಮಾಡುವಿರಿ. ಸತ್ಯವನ್ನು ಸಂಗಾತಿಯಿಂದ ಮುಚ್ಚಿಡಲು ಪ್ರಯತ್ನಿಸುವಿರಿ