Horoscope: ಈ ರಾಶಿಯವರು ಇಂದು ಸಹನೆ ಮೀರಿ ನೀವು ವರ್ತಿಸುವಿರಿ-ಎಚ್ಚರ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ನವೆಂಬರ್​ 15) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರು ಇಂದು ಸಹನೆ ಮೀರಿ ನೀವು ವರ್ತಿಸುವಿರಿ-ಎಚ್ಚರ
ಪ್ರಾತಿನಿಧಿಕ ಚಿತ್ರ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 15, 2023 | 12:30 AM

ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್​ 15) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಕಾರ್ತಿಕ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಜ್ಯೇಷ್ಠಾ, ಯೋಗ: ಅತಿಗಂಡ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 34 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05-59 ಗಂಟೆ, ರಾಹು ಕಾಲ ಮಧ್ಯಾಹ್ನ 12:17 ರಿಂದ 01:43ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 08:00 ರಿಂದ 09:26ರ ವರೆಗೆ, ಗುಳಿಕ ಕಾಲ ಬೆಳಗ್ಗೆ 10:51 ರಿಂದ 12:17ರ ವರೆಗೆ.

ಸಿಂಹ ರಾಶಿ : ಐಶ್ವರ್ಯವನ್ನು ಮಿತಿಯಲ್ಲಿ ಇರಿಸಿಕೊಳ್ಳಿ. ಆಗಮನದಿಂದ ಹಿಗ್ಗಿ ಇರುವದನ್ನು ಕಳೆದುಕಳ್ಳಬಹುದು. ಭೂಮಿಯ ಮಾರಾಟದಿಂದ ನಿಮ್ಮ ಜೀವನಕ್ಕೆ ಬೇಕಾದ ಸಂಪತ್ತು ಸಿಗಲಿದೆ. ಸಹನೆಯನ್ನು ಮೀರಿ ನೀವು ಇಂದು ವರ್ತಿಸುವಿರಿ. ಅಪರಿಚಿತರ ಜೊತೆ ಮಾತನಾಡಲು ನೀವು ಹಿಂಜರಿಯಬಹುದು. ಸ್ಮರಣಶಕ್ತಿಯ ದೋಷವು ಸ್ವಲ್ಪವೇ ಬರಲಿದೆ. ಅವಕಾಶಗಳು ತಪ್ಪಿಹೋಗಿ, ನಿಮ್ಮನ್ನೇ ನೀವು ಬೂದುಕೊಳ್ಳುವಿರಿ. ನಿಮಗೆ ವಹಿಸಿದ ಕೆಲಸವನ್ನು ಅದ್ಭುತವಾಗಿ ಮಾಡಲು ಪ್ರಯತ್ನಿಸುವಿರಿ. ನಿಮ್ಮ ಕಾಯುವಿಕೆಯು ಸಾರ್ಥಕವಾಗಬಹುದು. ಮಾತಿನಲ್ಲಿ ಮಾರ್ದವ ಇರಲಿ. ವೈಯಕ್ತಿಕ ಕಾರ್ಯದ ಕಾರಣ ಪ್ರಯಾಣ ಮಾಡುವಿರಿ. ಗಾತ್ರ ಇಲ್ಲ ಕಾರ್ಯವನ್ನು ಮಾಡಲು ಉತ್ಸಾಹ ಇರಲಿದೆ. ಸಹೋದ್ಯೋಗಿಗಳು ಅಹಂಕಾರವನ್ನು ತೋರಿಸುವರು. ನಿಮ್ಮ ನಿಲುವಲ್ಲಿ ನೀವಿರುವಿರಿ. ಕೆಲಸವು ಸರಳವಾದರೂ ಅದನ್ನು ಆರಂಭಿಸಲು ಸರಿಯಾದ ಮಾರ್ಗವು ಸಿಗದು.

ಕನ್ಯಾ ರಾಶಿ : ಗಣ್ಯರ ಒಡನಾಟವು ಸಿಗುವ ಸಾಧ್ಯತೆ ಇದೆ. ಮನಸ್ಸಿನ ಒತ್ತಡವನ್ನು ನೀವು ನಿಯಂತ್ರಣಕ್ಕೆ ತಂದುಕೊಳ್ಳುವುದು ಅನಿವಾರ್ಯ.ಅನೇಕ ದಿನಗಳಿಂದ ಅನಾರೋಗ್ಯದ ಕಾರಣ ಬಳಲುತ್ತಿದ್ದು ಸೂಕ್ತ ಚಿಕಿತ್ಸೆಯ ಅವಶ್ಯಕತೆ ಇರುವುದು. ಉದ್ಯೋಗದಲ್ಲಿ ಮಕ್ಕಳಿಗೆ ಪ್ರವೇಶವನ್ನು ಕೊಡುವಿರಿ. ಅಧಿಕ ಸಾಲವು ನಿಮ್ಮ‌ ಮಾನಸಿಕ‌ಸ್ಥಿತಿಯನ್ನೇ ಬದಲಿಸೀತು. ಸಹೋದರರು ಮರೆತ ವಿಚಾರವನ್ನು ಮತ್ತೆ ನೆನಪಿಸಿಕೊಳ್ಳುವರು. ಬಂಧುಗಳು ನಿಮ್ಮನ್ನು ಬಹಳವಾಗಿ‌ ದೂರುವರು. ಮನೆಯ ಕಾರ್ಯಗಳು ಇಂದು ಅಧಿಕವಾಗಿ ಇರಬಹುದು. ನೂತನ ವಾಹನದ ಖರೀದಿಗೆ ಪರ ಊರಿಗೆ ಹೋಗುವಿರಿ. ಅನಾಯಾಸದಿಂದ ಸಂಪಾದನೆಯ ಮಾರ್ಗವನ್ನು ನೀವು ಕಂಡುಕೊಳ್ಳುವಿರಿ. ಆಡಿಕೊಳ್ಳುವವರ ಮುಂದೆ ಮುಗ್ಗರಿಸಿ ಬೀಳಬಹುದು.‌ ನಿಮ್ಮ ಚಿಂತನೆಯನ್ನು ವಿಸ್ತರಿಸಿಕೊಳ್ಳುವುದು ಉತ್ತಮ. ದುರ್ಬಲರಿಗೆ ಮಾನಸಿಕ ಧೈರ್ಯವನ್ನು ತುಂಬುವಿರಿ.

ತುಲಾ ರಾಶಿ : ಆಪ್ತರ ಮಾತುಗಳು ನಿಮಗೆ ಸಹ್ಯವಾಗದೇ ಕೂಗಾಡುವಿರಿ. ಸಂಗಾತಿಗಾಗಿ ಹಣವನ್ನು ಖರ್ಚುಮಾಡಬೇಕಾದೀತು. ನಿಮಗೆ ಸಂಬಂಧಿಸದ ವಿಚಾರಗಳಲ್ಲಿ ಪ್ರವೇಶವನ್ನು ಪಡೆಯುವುದು ಬೇಡ. ಸರ್ಕಾರದ ಕಾರ್ಯಗಳನ್ನು ಬೇಗ ಮುಗಿಸಿಕೊಳ್ಳಲಿದ್ದೀರಿ. ವ್ಯವಹಾರದ ದಾಖಲೆಗಳು ಸರಿಯಾಗಿ ಇಟ್ಟುಕೊಳ್ಳುವಿರಿ. ವಾಹನಕ್ಕಾಗಿ ಸಾಲ ಮಾಡಬೇಕಾಗುವುದು. ದಾಂಪತ್ಯದಲ್ಲಿ ಪರಸ್ಪರರ ಹೊಂದಾಣಿಕೆಯು ಕಾಣಿಸುವುದು. ಮಕ್ಕಳನ್ನು ಪಡೆದುಕೊಳ್ಳುವ ಚಿಂತೆಯು ಕಾಡುವುದು. ಪ್ರೇಮದಲ್ಲಿ ಸಿಕ್ಕಿಕೊಂಡು ಕಷ್ಟಪಡುವಿರಿ. ನಿಮ್ಮ ತೀರ್ಮಾನವನ್ನು ಒಪ್ಪುವುದು ಕಷ್ಟವಾದೀತು. ಮಕ್ಕಳ ವಿಚಾರವಾಗಿ ನಿಮಗೆ ದೂರಬರಬಹುದು. ಮನಸ್ಸು ಬಿಚ್ಚಿ‌ ಮಾತನಾಡಲು ನಿಮಗೆ ಆಗದು. ಎಲ್ಲವನ್ನೂ ಒಳಗೇ ಅಡಗಿಸಿಕೊಳ್ಳುವಿರಿ.

ವೃಶ್ಚಿಕ ರಾಶಿ : ಬಹು ದಿನದ ನಿರೀಕ್ಷೆಗಳು ಇಂದು ಸಾಕಾರವಾಗವುದು. ನಿಮ್ಮ ಇಷ್ಟಗಳು ಸುಲಭ ಲಭ್ಯವಾಗಿರಲಿ. ನ್ಯಾಯಾಲಯದ ಹೋರಾಟವು ಅಪಯಶಸ್ಸನ್ನು ಕೊಡಬಹುದು. ಆಸ್ತಿಯಲ್ಲಿ ಸಮ ಪಾಲು ಸಿಗದೇ ನಿಮಗೆ ವಾದಕ್ಕಿಳಿಯುವಿರಿ. ಪಾಲುದಾರಿಕೆಯಲ್ಲಿ ನಿಮಗೆ ಸಣ್ಣ ಸಮಸ್ಯೆಗಳು ಹುಟ್ಟಿಕೊಳ್ಳಬಹುದು. ಇನ್ನೊಬ್ಬರ ಒತ್ತಾಯದ ಕಾರಣಕ್ಕೆ ನೀವು ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ. ಮಕ್ಕಳಿಂದ ಆರ್ಥಿಕ ಸಹಾಯವು ಸಿಗುವುದು. ಮಕ್ಕಳ ವಿವಾಹದ ಬಗ್ಗೆ ಬಂಧುಗಳ ಜೊತೆ ಗಂಭೀರವಾಗಿ ಚರ್ಚಿಸುವಿರಿ. ಮನಸ್ಸಿಗೆ ಹಿಡಿಸಿದ ಕೆಲಸವನ್ನು ಮಾತ್ರ ಬೇಗ ಮಾಡಿ ಮುಗಿಸುವಿರಿ. ಸಂಗಾತಿಯ ಕಡೆಯಿಂದ ನಿಮಗೆ ಶುಭಸಮಾಚಾರವು ಗೊತ್ತಾಗುವುದು. ಇಂದಿನ ನಿಮ್ಮ ಪ್ರಯಾಣವು ನಿಮಗೆ ಹಿತಕರವಾದ ಅನುಭವವನ್ನು ನೀಡಬಹುದು. ತಪ್ಪು ಮಾಡಿದರೂ ಸಿಕ್ಕಿಕೊಳ್ಳದೇ ಇರುವಿರಿ.

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ