Horoscope: ದಾಂಪತ್ಯದಲ್ಲಿ ಈ ರಾಶಿಯವರು ಸುಖವನ್ನು ಕಾಣಲಿದ್ದಾರೆ

| Updated By: Rakesh Nayak Manchi

Updated on: Aug 16, 2023 | 12:30 AM

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಆಗಸ್ಟ್ 16) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ದಾಂಪತ್ಯದಲ್ಲಿ ಈ ರಾಶಿಯವರು ಸುಖವನ್ನು ಕಾಣಲಿದ್ದಾರೆ
ದಿನಭವಿಷ್ಯ
Image Credit source: iStock Photo
Follow us on

ಇಂದಿನ ರಾಶಿ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಆಗಸ್ಟ್ 16) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಆಶ್ಲೇಷಾ, ಮಾಸ: ಅಧಿಕ ಶ್ರಾವಣ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ಆಶ್ಲೇಷಾ, ಯೋಗ: ವರೀಯಾನ್, ಕರಣ: ನಾಗವಾನ್, ಸೂರ್ಯೋದಯ ಬೆಳಗ್ಗೆ 06 ರಿಂದ 19 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 53 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:37 ರಿಂದ 02:11ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:54 ರಿಂದ 09:28ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:02 ರಿಂದ ಮಧ್ಯಾಹ್ನ 12:37ರ ವರೆಗೆ.

ಸಿಂಹ ರಾಶಿ: ಇನ್ನೊಬ್ಬರಿಂದ ಪ್ರೇರಿತರಾಗಿ ಸಾಮಾಜಿಕ ಕಾರ್ಯದಲ್ಲಿ ತೊಡಗುವಿರಿ. ಆರ್ಥಿಕತೆಯ ಮೇಲೆ ನಿಮಗೆ ಮೋಹವು ಕಡಿಮೆ ಆಗಬಹುದು. ವಂಚನೆಗೆ ಪ್ರತಿವಂಚನೆಯನ್ನು ಮಾಡುವ ಬುದ್ಧಿಯು ಬರಬಹುದು. ಆಶಿಸ್ತಿನ ಕೆಲಸಕ್ಕೆ ಹಿರಿಯರಿಂದ ಬೈಸಿಕೊಳ್ಳುವಿರಿ. ಅಪರಿಚಿತ ವ್ಯಕ್ತಿಯಿಂದ ತೊಂದರೆಗಳು ಎದುರಾಗಬಹುದು. ಭವಿಷ್ಯದ ಬಗ್ಗೆ ಅಸ್ಪಷ್ಟ ಆಲೋಚನೆಗಳು ನಿಮಗೆ ಸಮಾಧಾನವನ್ನು ತರದು. ಆಪ್ತರ ಜೊತೆ ನಿಮ್ಮ ಸಮಸ್ಯೆಯನ್ನು ಹಂಚಿಕೊಂಡು ನಿಶ್ಚಿಂತರಾಗಿ. ಆರೋಗ್ಯದ ಬಗ್ಗೆ ಗಮನವು ಅವಶ್ಯಕ. ತಂದೆಯ ಕಡೆಯಿಂದ ನಿಮಗೆ ಉದ್ಯೋಗಕ್ಕೆ ಸಹಕಾರವನ್ನು ಕೊಡಬಹುದು.

ಕನ್ಯಾ ರಾಶಿ: ನಿಮಗೆ ನಿರೀಕ್ಷಿತ ಉದ್ಯೋಗವು ಸಿಗದೇ ಇರುವುದು ನಿಮ್ಮನ್ನು ಖಿನ್ನಗೊಳಿಸೀತು. ಋಣ ಬಾಧೆಯು ಮುಕ್ತಾಯವಾಯಿತು ಎನ್ನುತ್ತಿದ್ದಂತೆ ಇನ್ನೊಂದು ಆರಂಭವಾಗುವುದು. ಬಂಧುಗಳಿಂದ, ಮನೆಯ ಹಿರಿಯರಿಂದ ನೀವು ಅಲಕ್ಷ್ಯಕ್ಕೆ ಒಳಗಾಗುವಿರಿ. ಇದು ನಿಮಗೆ ಬಹಳ ಬೇಸರವನ್ನು ತರಿಸುವುದು. ದಾಂಪತ್ಯದಲ್ಲಿ ನೀವು ಸುಖವನ್ನು ಕಾಣುವಿರಿ. ಇಷ್ಟು ದಿನ ನಿರ್ವಹಿಸುತ್ತಿದ್ದ ಜವಾಬ್ದಾರಿಗಳನ್ನು ನಿರ್ವಹಿಸಲಾಗಾದೇ ಕಷ್ಟಪಡುವಿರಿ. ಬಂಧುಗಳ ಕಡೆಯಿಂದ ನಿಮಗೆ ಶುಭವಲ್ಲದ ವಾರ್ತೆಯೊಂದು ಬರಬಹುದು. ವಸ್ತುಗಳನ್ನು ನೀವು ಕಳೆದುಕೊಳ್ಳುವಿರಿ.

ತುಲಾ ರಾಶಿ: ಸಮಯ ಹಾಗೂ ಸಂದರ್ಭಗಳನ್ನು ನೋಡಿ ನಿಮ್ಮ ವಿಚಾರವನ್ನು ಮೇಲಧಿಕಾರಿಗಳ ಜೊತೆ ಹಂಚಿಕೊಳ್ಳಿ. ವ್ಯಾಪರದ ವಹಿವಾಟನ್ನು ಮಾಡುತ್ತಿದ್ದರೆ ನಿಮಗೆ ಹೆಚ್ಚು ಕೆಲಸವೂ ಪ್ರಶಂಸೆಯೂ ಆರ್ಥಿಕಬಲವೂ ಬರಲಿದೆ. ಆಭರಣಗಳನ್ನು ಖರೀದಿಸುವ ಇಚ್ಛೆ ಇದ್ದರೆ ಖರೀದಿಸಿ. ವಿವಾಹದ ಮಾತುಕತೆಗಳು ನಿಮಗೆ ಖುಷಿ ಕೊಡುವುದು. ಶ್ರೇಷ್ಠ ವ್ಯಕ್ತಿಗಳ ಸಹವಾಸವು ನಿಮಗೆ ಸಿಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಅತಿಯಾದ ಶ್ರದ್ಧೆಯು ಬರುವುದು. ನಿಮ್ಮದಲ್ಲದ ವಸ್ತುಗಳನ್ನು ನೀವು ಇಟ್ಟುಕೊಳ್ಳದೇ ಹಿಂದಿರುಗಿಸಿ. ಆಲಸ್ಯವನ್ನು ಬಿಟ್ಟು ಇಂದು ಕಾರ್ಯದಲ್ಲಿ ಹೆಚ್ಚು ತೊಡಗುವಿರಿ.

ವೃಶ್ಚಿಕ ರಾಶಿ: ಸ್ವಂತ ಉದ್ಯಮವನ್ನು ನಡೆಸುತ್ತಿದ್ದರೆ ಆಡಳಿತಕ್ಕೆ ಸಂಬಂಧಿಸಿದಂತೆ ಲೋಪ ದೋಷಗಳು ಕಾಣಿಸಿಕೊಳ್ಳಬಹುದು. ಕೆಲವು ಸಂದರ್ಭವನ್ನು ಎದುರಿಸುವಾಗ ಗೊತ್ತಿದ್ದೂ ಗೊತ್ತಿಲ್ಲದಂತೆ ಇರುವುದು ಒಳ್ಳೆಯದು. ಹಣಕಾಸಿನ ವಿಚಾರದಲ್ಲಿ ಗೊಂದಲವು ಬರಬಹುದು. ಆಪ್ತರ ಜೊತೆಗಿನ ಒಡನಾಟವು ನಿಮ್ಮ ಭಾರವಾದ ಮನಸ್ಸನ್ನು ಹಗುರಗೊಳಿಸುವುದು. ನೀವು ಇಂದು ಸಿಟ್ಟು ಮಾಡಿಕೊಳ್ಳಬಹುದಾದ ಸನ್ನಿವೇಶಗಳು ಕಡಿಮೆ ಇರಬಹುದು. ಸ್ನೇಹಿತರ ನಡುವಿನ ಬಾಂಧವ್ಯವು ವೃದ್ಧಿಯಾಗಲಿದೆ. ಸ್ತ್ರೀಸುಖವನ್ನು ನೀವು ಅನುಭವಿಸುವಿರಿ. ಯಾರಿಗೂ ಹೇಳದೇ ಎಲ್ಲಿಗಾದರೂ ಹೋಗಿ ಆತಂಕವನ್ನು ಸೃಷ್ಟಿ ಮಾಡುವಿರಿ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ