Horoscope: ದಿನಭವಿಷ್ಯ; ನಿಮ್ಮ ಅತಿಯಾದ ನಂಬುಗೆಯು ಇಂದು ಹುಸಿಯಾಗಬಹುದು

| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 16, 2023 | 12:30 AM

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಅಕ್ಟೋಬರ್ 16) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ದಿನಭವಿಷ್ಯ; ನಿಮ್ಮ ಅತಿಯಾದ ನಂಬುಗೆಯು ಇಂದು ಹುಸಿಯಾಗಬಹುದು
ರಾಶಿ ಭವಿಷ್ಯ
Follow us on

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ಅಕ್ಟೋಬರ್ 16) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಅನುರಾಧಾ, ಯೋಗ: ವಿಷ್ಕಂಭ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 25 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 11 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:53 ರಿಂದ 09:22ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:50 ರಿಂದ 12:18ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 01:46 ರಿಂದ 03:15ರ ವರೆಗೆ.

ಸಿಂಹ ರಾಶಿ : ನಿಮ್ಮ ಅತಿಯಾದ ನಂಬುಗೆಯು ಇಂದು ಹುಸಿಯಾಗಬಹುದು. ಸಂತಾನಕ್ಕೆ ಸಂಬಂಧಿಸಿದಂತೆ ದಂಪತಿಗಳ ನಡುವೆ ಟೀಕೆಗಳು ನಡೆಯುವುದು. ನಿಮ್ಮ ಇಷ್ಟದವರನ್ನು ಭೇಟಿಯಾಗಿ ಕೆಲವು ಸಮಯ ಸಂತೋಷದಿಂದ ಕಳೆಯುವಿರಿ. ಯಾರಂದಲೋ ಪ್ರೇರಿತರಾದ ನಿಮಗೆ ಸಾಮಾಜಿಕ ಕಾರ್ಯವು ಹಿಡಿಸುವುದು. ಸಂಪತ್ತಿನ ಮೇಲೆ ನಿಮಗೆ ಮೋಹವು ಕಡಿಮೆ ಇರುವುದು. ವಂಚಿಸಿದವರಿಗೆ ಪ್ರತಿವಂಚನೆಯನ್ನು ಮಾಡಲು ಸಮಯವನ್ನು ನಿರೀಕ್ಷಿಸುತ್ತಿರುವಿರಿ. ಆಶಿಸ್ತಿನ ಕೆಲಸಕ್ಕೆ ಹಿರಿಯರು ನಿಂದಿಸಬಹುದು. ಅಪರಿಚಿತ ವ್ಯಕ್ತಿಗಳು ದೂರವಾಣಿಯ ಮೂಲಕ ಪದೆ ಪದೆ ಪೀಡಿಸಬಹುದು. ಭವಿಷ್ಯದ ಬಗ್ಗೆ ಸ್ಪಷ್ಟತೆಯು‌ ನಿಮಗೆ ಸಿಗದು. ಆಪ್ತರ ಜೊತೆ ನಿಮ್ಮ ಸಮಸ್ಯೆಯನ್ನು ಹಂಚಿಕೊಂಡು ಸಮಾಧಾನಿಗಳಾಗುವಿರಿ.

ಕನ್ಯಾ ರಾಶಿ : ಕುಟುಂಬದವರ ಮಾತುಗಳು ಕಿರಿಕಿರಿ ಎನಿಸಬಹುದು. ನಿಮ್ಮ ತಾಳ್ಮೆಯು ಇಂದು ಕಡಿಮೆಯಾಗಿ ಏನಾದರೂ ಹೇಳುವಿರಿ. ರಾಜಕಾರಣಿಗಳು ಹೆಚ್ಚು ಓಡಾಟವನ್ನು ಮಾಡಬೇಕಾಗಬಹುದು. ಬೌದ್ಧಿಕ ಆಯಾಸದಿಂದ ವಿಶ್ರಾಂತಿಯನ್ನು ಮಾಡಬೇಕು ಎನಿಸುವುದು. ನಿಮಗೆ ನಿರೀಕ್ಷಿತ ಉದ್ಯೋಗವು ಸಿಕ್ಕುವ ಸೂಚನೆ ಬರಲಿದೆ. ಸಾಲವು ಮುಗಿಯುತು ಎಂದುಕೊಳ್ಳುತ್ತಿದ್ದಂತೆ ಇನ್ನೊಂದು ಆರಂಭವಾಗಬಹುದು. ಬಂಧುಗಳಿಂದ ನೀವು ನಿರ್ಲಕ್ಷ್ಯಕ್ಕೆ ಒಳಗಾಗುವಿರಿ. ದಾಂಪತ್ಯದಲ್ಲಿ ನೀವು ಸುಖವನ್ನು ಕಾಣುವಿರಿ. ಇಷ್ಟು ದಿನ ನಿರ್ವಹಿಸುತ್ತಿದ್ದ ಜವಾಬ್ದಾರಿಗಳನ್ನು ಇಂದು ನಿರ್ವಹಿಸಲು ಕಷ್ಟವಾದೀತು. ಬಂಧುಗಳ ಕಡೆಯಿಂದ ನಿಮಗೆ ಅಶುಭ ಸುದ್ದಿಯು ಬರಬಹುದು. ನಿಮಗೆ ಬೇಕಾದ ವಸ್ತುವೊಂದನ್ನು ನೀವು ಕಳೆದುಕೊಳ್ಳುವಿರಿ.

ತುಲಾ ರಾಶಿ : ನಿಮ್ಮ ಬಳಕೆಯಾಗದ ಭೂಮಿಯಿಂದ ಮಾರಾಟ ಮಾಡಿ ಆದಾಯವನ್ನು ಪಡೆಯುವಿರಿ. ಹೂಡಿಕೆಯ ಕಡೆ ಅಧಿಕ ಆಲೋಚನೆ ಮಾಡುವಿರಿ. ಗೌಪ್ಯವಾಗಿ ನಿಮಗೆ ಹಣವು ಸಿಗಲಿದೆ‌. ಅದನ್ನು ಯಾರ ಬಳಿಯೂ ಹೇಳಿಕೊಳ್ಳುವುದಿಲ್ಲ. ಸಮಯವನ್ನು ನೋಡಿ ನಿಮ್ಮ ವಿಚಾರವನ್ನು ಮೇಲಧಿಕಾರಿಗಳಿಗೆ ಹೇಳಿ. ಮನೆಯಲ್ಲಿ ಇದ್ದು ಕೆಲಸ ಮಾಡುವವರಿಗೆ ಬಂಧನದಂತೆ ಅನ್ನಿಸಬಹುದು. ದಾನದಿಂದ ನಿಮಗೆ ಪ್ರಶಂಸೆಯು ಸಿಗುವುದು. ಆಭರಣಗಳನ್ನು ಖರೀದಿಸುವ ಇಚ್ಛೆ ಇದ್ದರೆ ಖರೀದಿಸಬಹುದು. ನಿಮ್ಮ ವಿವಾಹದ ಮಾತುಕತೆಯಿಂದ ನಿಮಗೆ ಖುಷಿ ಸಿಗುವುದು. ಸಜ್ಜನರ ಸಹವಾಸವು ಆಕಸ್ಮಿಕವಾಗಿ ಸಿಗುವುದು. ನಿಮ್ಮದಲ್ಲದ ವಸ್ತುಗಳನ್ನು ಹಿಂದಿರುಗಿಸಿ. ಆಲಸ್ಯವನ್ನು ಬಿಡುವುದು ಉತ್ತಮ.

ವೃಶ್ಚಿಕ ರಾಶಿ : ಅಂದುಕೊಂಡ ಕಾರ್ಯವು ಮುಗಿಯುತ್ತ ಇರುವಾಗಲೇ ಯಾರಾದರೂ ಅಡ್ಡಿ ಮಾಡುವರು. ಸ್ನೇಹಿತರ ಸಲಹೆಯ ಆಧಾರದ ಮೇಲೆ ಸಿಕ್ಕ ಅವಕಾಶವನ್ನು ಬಳಸಿಕೊಳ್ಳುವಿರಿ. ಮನೆ ಹಾಗೂ ಕಛೇರಿಯ ಎಲ್ಲ‌ ಕಡೆಯಿಂದ ಒತ್ತಡವು ಇರಲಿದೆ. ಸ್ವಂತ ಉದ್ಯಮವನ್ನು ನಡೆಸುತ್ತಿದ್ದರೆ ನೌಕರರು ಹಾಗೂ ಅಧಿಕಾರಿಗಳ ನಡುವೆ ವೈಮನಸ್ಸು ಉಂಟಾಗಬಹುದು. ಕೆಲವು ಸಂದರ್ಭದಲ್ಲಿ ಎಲ್ಲವೂ ಗೊತ್ತಿದೆ ಎಂದು ತೋರಿಸಿಕೊಳ್ಳುವುದು ನಿಮಗೆ ಕಷ್ಟವಾದೀತು. ಆಪ್ತರ ಜೊತೆಗಿನ ಬಿಚ್ಚು ಮನಸ್ಸಿನ ಮಾತುಕತೆಯಿಂದ ನಿಮ್ಮ ಭಾರವಾದ ಮನಸ್ಸು ಹಗುರಾಗುವುದು. ನೀವು ಇಂದು ಸಿಟ್ಟು ಮಾಡಿಕೊಳ್ಳಬಹುದಾದ ಸನ್ನಿವೇಶಗಳು ಬಾರದು. ಇಂದು ಸ್ತ್ರೀಯಿಂದ ಸುಖವನ್ನು ಅನುಭವಿಸುವಿರಿ. ಯಾರಿಗೂ ಹೇಳದೇ ಎಲ್ಲಿಗಾದರೂ ಹೋಗಿ ಸುತ್ತಾಡಿ ಬರುವಿರಿ.