Horoscope: ಯಾರು ಏನಂದುಕೊಳ್ಳುತ್ತಾರೆ ಎಂಬ ಹಿಂಜರಿಕೆ ಬೇಡ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಆಗಸ್ಟ್ 17) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ಯಾರು ಏನಂದುಕೊಳ್ಳುತ್ತಾರೆ ಎಂಬ ಹಿಂಜರಿಕೆ ಬೇಡ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Aug 17, 2023 | 12:15 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಆಗಸ್ಟ್ 17 ಗುರುವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಆಶ್ಲೇಷಾ, ಮಾಸ: ನಿಜ ಶ್ರಾವಣ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಮೇಘಾ, ಯೋಗ: ಪರಘ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ರಿಂದ 19 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 53 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:10 ರಿಂದ 03:45ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:20 ರಿಂದ 07:54ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:28 ರಿಂದ11:02ರ ವರೆಗೆ.

ಸಿಂಹ ರಾಶಿ: ಎಷ್ಟೋ ವರ್ಷಗಳ ಅನಂತರದ ಸ್ನೇಹಮಿಲನ ನಿಮಗೆ ಆಹ್ಲಾದವನ್ನು ತರುವುದು. ಆಯಾಸಕರವಾದ ಕಛೇರಿಯ ಕೆಲಸವನ್ನು ಮುಗಿಸಿದರೂ ನಿಮ್ಮಲ್ಲಿ ಉತ್ಸಾಹವು ಅಧಿಕವಾಗಿ ಇರುವುದು. ಒಂದೇ ರೀತಿಯ ದಿನಚರಿಯನ್ನು ಕಂಡು ಸ್ತ್ರೀಯರು ಹೊಸ ಪಾಕದತ್ತ ಹೆಚ್ಚಿನ ಒಲವು ತೋರಿಸುವರು. ದಾಂಪತ್ಯದಲ್ಲಿ ಹೊಂದಾಣಿಕೆಯೇ ಹೆಚ್ಚಾಗಿ ಇರುವುದು. ಯಾರನ್ನೂ ಯಾರೂ ಬಿಟ್ಟುಕೊಡದ ಸ್ಥಿತಿಯು ಬರಬಹುದು. ಆರೋಗ್ಯಕ್ಕೆ ಸಂಬಂಧಿಸಿದಂತೆ ವೈದ್ಯರ ಸಲಹೆಯನ್ನು ಮುಂದುವರಿಸಿ. ನಿಮ್ಮ ಕಾರ್ಯಗಳು ಎಂದಿಗಿಂತ ಶಿಸ್ತಿನಿಂದ ಇರುವುದು ನಿಮಗೆ ಅಚ್ಚರಿಯನ್ನು ತರಬಹುದು. ನಿಮ್ಮ ಕೋಪವು ತಾತ್ಕಾಲಿಕವಾಗಿ ಇರುವುದು.

ಕನ್ಯಾ ರಾಶಿ: ನಿಮಗೆ ಮೊದಲೇ ಸರಿ ಎನಿಸಿದ್ದು ಈಗ ತಪ್ಪು ಎಂದು ಅರಿವಿಗೆ ಬರುವುದು. ನೀವು ಸರಿಯಾದ ಮಾರ್ಗದರ್ಶನವನ್ನು ಪಡೆಯುವುದು ಮುಖ್ಯ. ಯಾರು ಏನಂದುಕೊಳ್ಳುತ್ತಾರೇನೋ ಎಂಬ ಹಿಂಜರಿಕೆ ಬೇಡ. ಭೋಗ ವಸ್ತುಗಳಗೆ ಹೆಚ್ಚು ಹಣವನ್ನು ಖರ್ಚು ಮಾಡುವಿರಿ. ನಿಮ್ಮ ಸಂತೋಷವನ್ನೇ ಮುಖ್ಯವಾಗಿ ಇಟ್ಟುಕೊಂಡು ಕೆಲಸಮಾಡುವಿರಿ. ನಿಮ್ಮ ಅಕ್ಕಪಕ್ಕದವರನ್ನು ನಿರ್ಲಕ್ಷ್ಯ ಮಾಡುವಿರಿ. ನಿಮ್ಮ ವಿದ್ಯೆಯ ಬಗ್ಗೆ ಅಹಂಕಾರ ಬರಬಹುದು. ಆದಷ್ಟು ಸಾಮಾಜಿಕವಾಗಿ ಸಭ್ಯರಂತೆ ವರ್ತಿಸಿ. ಕುಟುಂಬದ ಮರ್ಯಾದೆಯನ್ನು ಕಾಪಾಡುವ ಕೆಲಸವೂ ನಿಮ್ಮಿಂದ ಆಗಬೇಕಿದೆ.

ತುಲಾ ರಾಶಿ: ಕೆಲವರಿಗೆ ನಿಮ್ಮ ವರ್ತನೆಯು ಇಷ್ಟವಾಗದೇ ಇರಬಹುದು. ದೇಹಕ್ಕೆ ಇಂದು ಹೆಚ್ಚು ಆಯಾಸವಾಗಬಹುದು. ಆಸಮಯದಲ್ಲಿ ಭೋಜನವನ್ನು ಮಾಡುವುದು ಆರೋಗ್ಯದ ಮೇಲೆ ದುಷ್ಪರಿಣಾಮವನ್ನು ಉಂಟುಮಾಡಬಹುದು. ಭೂಮಿಯ ವ್ಯವಹಾರದಲ್ಲಿ ನಿಮಗೆ ಅತೀವ ಆಸಕ್ತಿಯು ಇರುವುದು. ಹೂಡಿಕೆಯನ್ನು ಸರಿಯಾದ ಸ್ಥಳದಲ್ಲಿ ಮಾಡಿ. ಯಾವ ಸನ್ನಿವೇಶವೂ ಬರಬಹುದು. ಮನಸ್ಸನ್ನು ಸಮಸ್ಥಿತಿಯಲ್ಲಿ ಇಟ್ಟುಕೊಳ್ಳುವುದು ಮುಖ್ಯ. ವಿದ್ಯುತ್ ಉಪಕರಣಗಳ ವ್ಯಾಪಾರವು ಅಥವಾ ಸಾಹಿತ್ಯಾಸಕ್ತರು ಹೆಚ್ಚಿನ ಲಾಭವನ್ನು ಪಡೆಯುವಿರಿ.

ವೃಶ್ಚಿಕ ರಾಶಿ: ಪರಪುರುಷರಿಂದ ಆದಷ್ಟು ದೂರವಿರುವುದು ಉತ್ತಮ. ನಿಮ್ಮ ಇಂದಿನ ಕೆಲಸವು ಗೊಂದಲದಿಂದ ಕೂಡಿರಲಿದೆ. ಸಂಪತ್ತಿದ್ದರೂ ಅದನ್ನು ಸದುಪಯೋಗ ಮಾಡುವ ಮಾರ್ಗವು ಗೊತ್ತಾಗದೇ ಇರಬಹುದು. ಮಕ್ಕಳ ಜೊತೆ ಹೆಚ್ಚಿನ ಸಮಯವನ್ನು ಕಳೆಯುವಿರಿ. ಸಂಗಾತಿಯ ಮೇಲೆ ದ್ವೇಷ ಸಾಧಿಸಲು ಹೋಗುವುದು ಸರಿಯಲ್ಲ. ಮುಂದೋಪವನ್ನು ಕಡಿಮೆ ಮಾಡಿಕೊಂಡರೂ ಅದು ನಿಮ್ಮ ಹತೋಟಿಗೆ ಬರುವ ತನಕ ಕಷ್ಟವಾದೀತು. ನಿಮ್ಮ ಬಗ್ಗೆ ನೀವೇ ಹೇಳಿಕೊಳ್ಳುವುದು ಸರಿಯಾಗದು. ಹಿರಿಯರಿಗೆ ಯೋಗ್ಯವಾದ ಗೌರವವನ್ನು ನೀಡಿ. ದುರ್ಬಲ ಸ್ಥಿತಿಯನ್ನು ಸಕಾರಾತ್ಮಕವಾಗಿ ನೋಡುವಿರಿ.

ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ