AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದ್ವೇಷದಿಂದ ನಿಮ್ಮ ಜೀವನವು ಮಾರ್ಗಭ್ರಷ್ಟವಾಗಬಹುದು

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ನವೆಂಬರ್​ 17) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ದ್ವೇಷದಿಂದ ನಿಮ್ಮ ಜೀವನವು ಮಾರ್ಗಭ್ರಷ್ಟವಾಗಬಹುದು
ರಾಶಿ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Nov 17, 2023 | 12:30 AM

Share

ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್​ 17) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯ ಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಕಾರ್ತಿಕ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಪೂರ್ವಾಷಾಢಾ, ಯೋಗ: ಧೃತಿ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 35 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05-59 ಗಂಟೆ, ರಾಹು ಕಾಲ ಬೆಳಗ್ಗೆ 10:52 ರಿಂದ 12:17ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:09 ರಿಂದ 04:34ರ ವರೆಗೆ, ಗುಳಿಕ ಕಾಲ ಬೆಳಗ್ಗೆ 08:01 ರಿಂದ 09:26ರ ವರೆಗೆ.

ಸಿಂಹ ರಾಶಿ : ಇಂದು ನಿಮ್ಮ ಪ್ರೀತಿಪಾತ್ರರ ಜೊತೆ ತುಂಬಾ ಸಂತೋಷದಿಂದ ಇರುವಿರಿ. ಆರ್ಥಿಕತೆಯಿಂದ ಸೌಲಭ್ಯಗಳನ್ನು ಹೆಚ್ಚು ಮಾಡಿಕೊಳ್ಳುವಿರಿ. ದುಡಿಯುವವು ತಮ್ಮ ಶ್ರಮಕ್ಕೆ ಉಚಿತ ಫಲಿತಾಂಶವನ್ನು ನಿರೀಕ್ಷಿಸುವರು. ನಿಮ್ಮ ಆಸೆಯನ್ನು ಇನ್ನೊಬ್ಬರ ಎದುರು ಪ್ರಕಟಪಡಿಸಲು ಮುಜುಗರ ಆಗಬಹುದು. ಸಂಗಾತಿಗೆ ಸಿಟ್ಟು ಬರುವಂತೆ ನೀವು ಉದ್ದೇಶಪೂರ್ವಕವಾಗಿ ನಡೆದುಕೊಳ್ಳುವಿರಿ. ನಿಮಗೆ ಸಿಕ್ಕ ಅನಾದರದಿಂದ ಬೇಸರಗೊಳ್ಳುವಿರಿ. ದ್ವೇಷದಿಂದ ನಿಮ್ಮ ಜೀವನವು ಮಾರ್ಗಭ್ರಷ್ಟವಾಗಬಹುದು. ಧನಾತ್ಮಕ ಚಿಂತನೆಯಿಂದ ಕಳೆದುಕೊಂಡ ಉತ್ಸಾಹವು ಮತ್ತೆ ಬರುವುದು. ಪ್ರಭಾವೀ ಮುಖಂಡರ ಜೊತೆ ನೀವು ಸಾಮಾಜಿಕ ಕಾರ್ಯಗಳ ಬಗ್ಗೆ ಚರ್ಚಿಸುವಿರಿ.

ಕನ್ಯಾ ರಾಶಿ : ಹೂಡಿಕೆಯು ಆರ್ಥಿಕ ಚಿಂತನೆಯನ್ನು ದೂರ ಮಾಡುವುದು. ಇಂದಿನ ನಿರಾಸೆಯು ಮನಸ್ಸಿಗೆ ನೋವನ್ನು ಕೊಡುವುದು. ನಿಮ್ಮ ಕೆಲಸದ ಬಗ್ಗೆ ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಸಹಕಾರ ಲಭ್ಯ. ವ್ಯಾಪಾರಸ್ಥರಾದ ನೀವು ಆರ್ಥಿಕ ಸ್ಥಿತಿಯನ್ನು ಬಲಪಡಿಸಿಕೊಳ್ಳುವಿರಿ. ಮಗುವಿನ ಆರೋಗ್ಯದ ಚಿಂತೆ ಇಂದು ಕಾಡಬಹುದು. ದಾಯಾದಿ ಕಲಹವು ತಾರಕಕ್ಕೆ ಹೋಗಬಹುದು. ಇತರರ ಬೆಂಬಲವು ನಿಮಗೆ ಕಡಿಮೆ ಆಗಬಹುದು. ಸಹೋದ್ಯೋಗಿಗಳು ನಿಮ್ಮ ಬಗ್ಗೆ ದೂರಬಹುದು. ಎಂದೋ ಮಾಡಿದ ಸಾಮಾಜಿಕ ಕೆಲಸಗಳಿಂದ ಗೌರವ ಸಿಗುವ ಸಂದರ್ಭವು ಇದೆ. ಹಠವನ್ನು ಬಿಟ್ಟರೆ ಸಂತೋಷದ ಸಂಗತಿಗಳು ನಿಮ್ಮ ಹುಡುಕಿಕೊಂಡು ಬರಬಹುದು. ಪ್ರಯತ್ನವು ಫಲಿಸುವ ತನಕ ಸಹನೆ ಅತ್ಯವಶ್ಯಕ. ನಡೆದಾಡುವಾಗ ಜಾಗರೂಕತೆ ಬೇಕು.

ತುಲಾ ರಾಶಿ : ದೂರದ ಊರಿನಲ್ಲಿ ಉದ್ಯೋಗಕ್ಕೆ ಹೋಗಬೇಕಾಗಬಹುದು. ಇಂದಿನ ನಿಮ್ಮ ಕಾರ್ಯಗಳು ಸುಗಮವಾಗಿ ನಡೆಯಲಿವೆ. ಮನೆಯಲ್ಲಿ ಸಂತೋಷದ ವಾತಾವರಣವನ್ನು ನೀವೇ ಸೃಷ್ಟಿಸುವಿರಿ. ಬಂಧುಗಳು ನಿಮ್ಮ ಸಹಾಯವನ್ನು ಕೇಳಿ ಬರಬಹುದು. ಆಸ್ತಿಯ ವಿಚಾರವಾಗಿ ನೀವು ಕಾನೂನು ಹೋರಾಟವನ್ನು ಮಾಡುವುದು ಒಳ್ಳೆಯದು. ವಿಳಂಬವಾದರೂ ಮಾರ್ಗ ಸರಿಯಾಗಿರಲಿದೆ. ನಿಮ್ಮ ಮಾತಿನ ಮೇಲೆ‌ ನಂಬಿಕೆ ಕಡಿಮೆ ಆಗುವುದು. ಕಲಾವಿದರು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವರು. ಬೆನ್ನಿನ ನೋವು ಮತ್ತೆ ಕಾಣಿಕೊಂಡು ಸಂಕಟಪಡಬೇಕಾದೀತು. ಇಂದಿನ ಕಾರ್ಯವು ಪೂರ್ಣವಾಗುವ ತನಕ ನಿಮಗೆ ಮಾನಸಿಕ ವಿಶ್ರಾಂತಿಯು ಇರದು. ನಿಮ್ಮ ಮಾತು ವಿವಾದವನ್ನು ಹುಟ್ಟುಹಾಕಬಹುದು. ನಿತ್ಯ ಬಳಕೆಯ ವಸ್ತುವಿನ ವ್ಯಾಪಾರದಿಂದ ಲಾಭ ಗಳಿಸುವಿರಿ. ಸಂಗಾತಿಯ ಬಯಕೆಯನ್ನು ಪೂರ್ಣವಾಗಿಸುವಿರಿ.

ವೃಶ್ಚಿಕ ರಾಶಿ : ವಿದ್ಯಾಭ್ಯಾಸದ ಖರ್ಚನ್ನು ನೀವು ಸರಿದೂಗಿಸಿಕೊಳ್ಳುವಿರಿ. ನಡವಳಿಕೆಯು ಹದ ಮೀರದಿರಲಿ. ಪ್ರೇಮಿಗಳು ಇಂದು ಸ್ವತಂತ್ರವಾಗಿ ಇರಲು ಆಸೆಪಡುವರು. ವಿವಾಹಿತರ ಜೀವನವು ಆನಂದದಿಂದ ಇರುವುದು. ನಿಮ್ಮ ಆರ್ಥಿಕ ಸ್ಥಿತಿಯು ಸಾಮಾನ್ಯವಾಗಿದ್ದು ಹತಾಶ ಭಾವವಿರುವುದು. ಈ ಸಮಯದಲ್ಲಿ ನೀವು ಉಳಿತಾಯದ ಬಗ್ಗೆ ಹೆಚ್ಚು ಗಮನ ಕೊಡಬೇಕು. ಕಛೇರಿಯಲ್ಲಿ ನಿಮ್ಮ ಮಾತು ಮತ್ತು ನಡವಳಿಕೆಯ ಬಗ್ಗೆ ಗಮನವಿರುವುದು. ವ್ಯಾಪಾರಸ್ಥರಿಗೆ ಸಾಮಾನ್ಯವಾಗಿ ಇರುವುದು. ಭೂಮಿಯ ದಾಖಲೆಗಳನ್ನು ಸರಿಯಾಗಿ ಪಡೆದುಕೊಂಡು ವ್ಯವಹರಿಸಿ. ಭವಿಷ್ಯದ ಕುರಿತು ಬಹಳ ಆಲೋಚನೆ ಇರುವುದು. ಯುಕ್ತಿಯಿಂದ ಕೆಲಸವನ್ನು ಸಾಧಿಸಿದ ಎಲ್ಲವೂ ಕ್ಷೇಮ. ನಿಮ್ಮ ನಡವಳಿಕೆಯು ಕೆಲವರಿಗೆ ಇಷ್ಟವಾಗದೇ ಇರಬಹುದು.

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?