Horoscope: ದಿನಭವಿಷ್ಯ, ಮೇಲಧಿಕಾರಿಗಳಿಂದ ನಿಮಗೆ ಕಿರಿಕಿರಿ ಆಗುವ ಸಾಧ್ಯತೆ ಇದೆ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಅಕ್ಟೋಬರ್ 18) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ದಿನಭವಿಷ್ಯ, ಮೇಲಧಿಕಾರಿಗಳಿಂದ ನಿಮಗೆ ಕಿರಿಕಿರಿ ಆಗುವ ಸಾಧ್ಯತೆ ಇದೆ
ಪ್ರಾತಿನಿಧಿಕ ಚಿತ್ರ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 18, 2023 | 12:30 AM

ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ಅಕ್ಟೋಬರ್ 18) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಮೂಲಾ, ಯೋಗ: ಆಯುಷ್ಮಾನ್, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 25 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 10 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:18 ರಿಂದ 01:46ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:53 ರಿಂದ 09:22ರ ವರೆಗೆ, ಗುಳಿಕ ಕಾಲ ಬೆಳಗ್ಗೆ 10:50 ರಿಂದ ಮಧ್ಯಾಹ್ನ 12:18ರ ವರೆಗೆ.

ಸಿಂಹ ರಾಶಿ : ಕಛೇರಿಯ ಕಿರಿಕಿರಿಯಿಂದ‌ ಮನೆಯಲ್ಲಿಯೂ ನಿಮಗೆ ನೆಮ್ಮದಿ ಸಿಗದು. ಖುಷಿಯ ವಾತಾವರಣವಿದ್ದರೂ ನಿಮಗೆ ನಿಮ್ಮದೇ ಚಿಂತೆ ಕಾಡಬಹುದು. ಹಳೆಯ ಸ್ನೇಹಿತರನ್ನು ಭೇಟಿಯಾಗಿ ಸ್ವಲ್ಪ ಹೊಸ ವಾತಾವರಣವನ್ನು ಕಾಣುವಿರಿ. ಜವಾಬ್ದಾರಿಯ ಕಾರಣಕ್ಕೆ ನಿಮ್ಮ ವರ್ತನೆಯಲ್ಲಿ ಭಿನ್ನತೆ ಕಾಣುವುದು. ನಿಮಗೆ ಬರಬೇಕಾದ ಹಣವನ್ನು ಬೇರೆಯವರ ಮೂಲಕ ತೀರಿಸಿಕೊಳ್ಳುವಿರಿ. ನಿಮ್ಮ ನೌಕರರ ಬಗ್ಗೆ ನಿಮಗೆ ಸಮಾಧಾನ ಇರಲಿದೆ. ಕಾರ್ಯಗಳಿಗೆ ನಿಗದಿತ ಸಮಯವನ್ನು ಇಟ್ಟುಕೊಳ್ಳುವುದು ಮುಖ್ಯ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆಯನ್ನು ಕೊಡಲಿದ್ದೀರಿ. ಪ್ರಸಿದ್ಧ ದೇವಾಲಯಕ್ಕೆ ಹೋಗಿ ಸ್ವಲ್ಪ ಸಮಯ ಕಳೆದುಬರುವಿರಿ. ದುರ್ಗಾ‌ ಮಾತೆಯನ್ನು ಪೂಜಿಸಿ.

ಕನ್ಯಾ ರಾಶಿ : ಸ್ತ್ರೀಯರಿಗೆ ತಾಳ್ಮೆಯ ಪರೀಕ್ಷೆ ಆಗಬಹುದು. ಮನೆಯ ಕೆಲಸದಲ್ಲಿ ಹೆಚ್ಚು ತೊಡಗಿಕೊಳ್ಳುವಿರಿ. ಸಹೋದರಿಯರ ನಡುವೆ ಕಲಹವಾಗಬಹುದು. ಅಮೂಲ್ಯವಾದ ವಸ್ತುಗಳನ್ನು ನಷ್ಟ ಮಾಡಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ವ್ಯತ್ಯಾಸ ಆಗಲಿದ್ದು ವೈದ್ಯರನ್ನು ಭೇಟಿಯಾಗುವುದು ಸೂಕ್ತ. ಮನೆಯಲ್ಲಿ ನಿಮ್ಮ ಮಾತಿಗೆ ಯಾವ ಉತ್ತರವೂ ಕೊಡದೇ ಇರುವುದು ನಿಮಗೆ ನೋವಾಗುವುದು. ದುರಭ್ಯಾಸವನ್ನು ಹಿಡಿಸಿಕೊಳ್ಳುವ ಸಂದರ್ಭವು ಬರಬಹುದು. ಆಸ್ತಿಯ ವಿಚಾರದಲ್ಲಿ ಜಗಳವು ತಾರಕಕ್ಕೆ ಹೋಗಬಹುದು. ನಿಮಗೆ ಗೊತ್ತಿಲ್ಲದ ಕಾರ್ಯವನ್ನು ಕಛೇರಿಯಲ್ಲಿ ನಿಭಾಯಿಸಬೇಕಾಗುವುದು. ಮನೋರಂಜನೆಯ ಕೊರತೆಯು ಅಧಿಕವಾಗಿ ಕಾಡುವುದು. ವಿರಾಮವನ್ನು ತೆಗದುಕೊಳ್ಳುವ ಮನಸ್ಸಾದೀತು.

ತುಲಾ ರಾಶಿ : ದಾಂಪತ್ಯದಲ್ಲಿ ಶಾಂತಿಯು ಬೇಕಾದರೆ ಸುಮ್ಮನಿರುವುದು ಉತ್ತಮ. ಕೋಪವನ್ನು ದೀರ್ಘಕಾಲ ಮುಂದುವರಿಸುವುದು ಬೇಡ. ಕಛೇರಿಯಲ್ಲಿ ಕೆಲಸವು ತುರ್ತು ಸಭೆಗಳ ಕಾರಣ ಹಿಂದುಳಿಯುವುದು. ಸ್ವಾಭಿಮಾನ ಬಂಧುಗಳ ಎದುರು ಕಾಣಿಸಿಕೊಳ್ಳಬಹುದು. ಎಲ್ಲ ವಿಚಾರದಲ್ಲಿ ಹಿನ್ನಡೆ ಇರಲಿದೆ. ಸ್ವಂತ ಉದ್ಯಮವನ್ನು ಮಾಡುತ್ತಿದ್ದರೆ ನಿರೀಕ್ಷಿತ ಲಾಭವನ್ನು ತಲುಪುವುದು ಕಷ್ಟವಾದೀತು. ಸ್ತ್ರೀಯರ ಜೊತೆ ಇಂದು ನಿಮ್ಮ ವ್ಯವಹಾರವು ಬೇಡ. ಮೇಲಧಿಕಾರಿಗಳಿಂದ ನಿಮಗೆ ಕಿರಿಕಿರಿ ಆಗುವ ಸಾಧ್ಯತೆ ಇದೆ. ಸರ್ಕಾರದ ಕಾರ್ಯದಲ್ಲಿ ಹಿನ್ನಡೆ ಅಧಿಕವಾಗಿ ಕಾಣಿಸುವುದು. ಪ್ರಭಾವೀ ವ್ಯಕ್ತಿಗಳನ್ನು ನೀವು ಬಳಸಿಕೊಳ್ಳುವಿರಿ. ದಿನಚರಿಯನ್ನು ಬದಲಾಯಿಸಿಕೊಳ್ಳುವುದು ಸೂಕ್ತ.

ವೃಶ್ಚಿಕ ರಾಶಿ : ದಿನ ಪೂರ್ತಿ ಬೆವರು ಹರಿಸಿ ಮಾಡಿದ ಕೆಲಸಕ್ಕೆ ದಿನದ ಕೊನೆಗೆ ಶುಭ ಫಲವು ಸಿಗುವುದು. ಹೊಸ ಉದ್ಯೋಗವನ್ನು ಹುಡುಕುವವರಿಗೆ ಹೆಚ್ಚು ಗೊಂದಲವಾಗಬಹುದು. ಇಂದು ಒಂದು ಮಿತಿಯಲ್ಲಿ ನಿಮ್ಮ ಮಾತಿರಲಿ. ತಾಯಿಯ ವಿಚಾರದಲ್ಲಿ ಕೋಪಗೊಳ್ಳುವಿರಿ. ಸಹೋದರರ ಸಹಕಾರವು ನಿಮಗೆ ಬಲವನ್ನು ಕೊಡಬಹುದು. ನಿಮ್ಮ ಸ್ವಭಾವವನ್ನು ಬಿಟ್ಟು ಎಲ್ಲರ ಜೊತೆ ಹೊಂದಾಣಿಕೆಯಿಂದ ಇರುವಿರಿ. ಯಾರ ಸಹಾಯವನ್ನೂ ಪಡೆಯದೆ ಕಾರ್ಯವು ನಿಧಾನವಾಗುವುದು. ಉದ್ಯೋಗಕ್ಕಾಗಿ ಖಾಸಗಿ ಸಂಸ್ಥೆಯನ್ನು ಅಲೆಯಬೇಕಾಗುವುದು. ನಿಮ್ಮ ಇಂದಿನ ವರ್ತನೆಯು ಅಸಹಜದಂತೆ ತೋರುವುದು. ಸಕಾರಾತ್ಮಕ ಚಿಂತನೆಯನ್ನು ರೂಢಿಸಿಕೊಳ್ಳುವುದು ಉತ್ತಮ.

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?