ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಸೆಪ್ಟೆಂಬರ್ 18) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ತೃತೀಯಾ, ನಿತ್ಯನಕ್ಷತ್ರ: ವಿಶಾಖಾ, ಯೋಗ: ಪ್ರೀತಿ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 32 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:54 ರಿಂದ 09:25 ರವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:56 ರಿಂದ 12:27ರವರೆಗೆ, ಗುಳಿಕ ಕಾಲ ಸಂಜೆ 01:58 ರಿಂದ 03:29ರ ವರೆಗೆ.
ಸಿಂಹ ರಾಶಿ : ಉದ್ಯೋಗಕ್ಕೆ ಅನೇಕ ಮಾರ್ಗಗಳು ತೆರೆದುಕೊಳ್ಳಲಿವೆ. ಅಧಿಕಾರಿವರ್ಗದಿಂದ ನಿಮ್ಮ ಗೌರವಕ್ಕೆ ದಕ್ಕೆ ಆಗಬಹುದು. ಸಂಗಾತಿಯ ಇಂಗಿತವನ್ನು ಅರಿತು ಕಾರ್ಯವನ್ನು ಮಾಡುವಿರಿ. ಮನೋಭಿಲಾಶೆಯನ್ನು ಪೂರ್ಣಗೊಳಿಸಿಕೊಳ್ಳುವಿರಿ. ಒಂಟಿಯಾಗಿ ಸುತ್ತಾಡಬೇಕೆನಿಸುವುದು. ಇಂದು ನಿಮ್ಮ ಬಳಿ ಸಾಮಾಜಿಕ ಕಳಕಳಿಯಿರುವ ಜನರು ಬರುವರು. ಇನ್ನು ಬಾರದು ಎಂದುಕೊಂಡ ಹಣವು ಇಂದು ನಿಮ್ಮ ಕೈ ಸೇರುವುದು. ಕರ್ತವ್ಯದತ್ತ ನಿಮ್ಮ ಗಮನಹರಿಸುವಿರಿ. ನಿಮ್ಮ ಮೇಲೆ ಬಂದ ಅಪವಾದವನ್ನು ನೀವು ಇನ್ನೊಬ್ಬರ ಮೇಲೆ ಹಾಕುವುದು ಬೇಡ. ಸತ್ಯಾಸತ್ಯತೆಯನ್ನು ಸಾಬೀತು ಮಾಡಿ. ಪ್ರಾಣಿಗಳ ಜೊತೆ ಒಡನಾಡಲಿದ್ದೀರಿ. ಅನುಮಾನವನ್ನು ಬಿಟ್ಟು ನೇರವಾಗಿ ಇರಲು ಪ್ರಯತ್ನಿಸಿ.
ಕನ್ಯಾ ರಾಶಿ : ಸಹೋದರನ ಮಾತು ನಿಮಗೆ ಜೀರ್ಣಮಾಡಿಕೊಳ್ಳುವುದು ಕಷ್ಟವಾಗಿ ಸಿಟ್ಟಾಗುವಿರಿ. ಹಳೆಯ ಅನುಭವದ ಆಧಾರದ ಮೇಲೆ ನೀವು ಕೆಲಸವನ್ನು ಮಾಡುವಿರಿ. ನಿಮ್ಮ ಮಾತಿನ ಮೇಲೆ ವಿಶ್ವಾಸದ ಕೊರತೆ ಕಾಣಲಿದೆ. ವಾಹನವನ್ನು ಚಲಾಯಿಸುವಾಗ ಆತುರ ಬೇಡ. ದೂರ ಹೋಗುವವರಿದ್ದರೆ ಹಿರಿಯರ ಆಶೀರ್ವಾದವನ್ನು ಪಡೆದುಕೊಳ್ಳಿ. ಸಂಗಾತಿಯು ನಿಮ್ಮ ಜೊತೆ ಜಗಳವಾಡಿ ಹಳೆಯ ವಿಚಾರವನ್ನು ಪುನಃ ಪ್ರಸ್ತಾಪಿಸಬಹುದು. ಸ್ತ್ರೀಸಂಬಂಧವಾದ ಆರೋಪವು ಬರಲಿದೆ. ಹೊಸದಾಗಿ ಸಾರ್ವಜನಿಕ ಕೆಲಸದಲ್ಲಿ ಕಾರ್ಯ ಮಾಡುವವರಿಗೆ ಮುಜುಗರವಿರಲಿದೆ. ಆರೋಗ್ಯದ ವಿಚಾರವಾಗಿ ವೈದ್ಯರ ಜೊತೆ ಮಾತನಾಡಿ.
ತುಲಾ ರಾಶಿ : ಬಂಧುಗಳಿಗಾಗಿ ಇಂದಿನ ಸಮಯವನ್ನು ಕೊಡುವಿರಿ. ಅಶುಭ ವಾರ್ತಯಿಂದ ಏನೂ ಸೂಚಿಸದು. ಆಸ್ತಿಯ ವಿಚಾರವಾಗಿ ಕಾನೂನಾತ್ಮಕ ಹೋರಾಟಕ್ಕೆ ಸಿದ್ಧರಾಗುವಿರಿ. ನಿಮ್ಮ ನಿರ್ಧಾರವನ್ನು ಯಾರು ಏನೇ ಹೇಳಿದರೂ ಬದಲಾಯಿಸುವುದಿಲ್ಲ.ಪರಸ್ಪರ ಸಾಮರಸ್ಯಕ್ಕಾಗಿ ದಂಪತಿಗಳು ದಾರಿಯನ್ನು ಹುಡುಕುವಿರು. ಕಳೆದು ಹೋದ ಪ್ರೇಮ ವಿಚಾರವು ಮತ್ತೆ ಕಾರಣಾಂತರಗಳಿಂದ ನೆನಪಾಗುವುದು. ತಪ್ಪನ್ನು ಒಪ್ಪಿಕೊಳ್ಳದೇ ಅಹಂಕಾರವನ್ನು ತೋರಿಸುವಿರಿ. ನಿಮ್ಮ ಬಗ್ಗೆ ಬೇರೆಯವರಿಗೆ ಔದಾರ್ಯಭಾವವು ಇರಲಿದೆ. ನಿಮ್ಮ ಅಸಾಮಾನ್ಯ ಚಿಂತನೆಯು ನಿಮ್ಮನ್ನು ದೊಡ್ಡವರನ್ನಾಗಿ ಮಾಡಿದ್ದು. ಹೊಸ ಉದ್ಯೋಗದ ಬಗ್ಗೆ ಆಪ್ತರ ಜೊತೆ ಮಂಥನ ನಡೆಸುವಿರಿ. ನಿಮ್ಮ ಮಾತುಗಳು ನೇರವೂ ಕಠೋರವೂ ಅಗಿರಲಿದೆ. ಇದು ಎಲ್ಲರಿಗೂ ಪ್ರಿಯವಾಗದು.
ವೃಶ್ಚಿಕ ರಾಶಿ : ಇಂದಿನ ಸೋಲಿನಿಂದ ಪಾಠ ಕಲಿಯುವಿರಿ. ಅನಿರೀಕ್ಷಿತ ಪ್ರಯಾಣವು ಆಯಾಸವನ್ನು ಕೊಡಬಹುದು. ಸ್ಪರ್ಧಾತ್ಮಕ ಚಟುವಟಿಕೆಯಲ್ಲಿ ಪರಾಜಯ ಆಗಬಹುದು. ಭಾವನಾತ್ಮಕ ವಿಚಾರಗಳಿಗೆ ಸ್ಪಂದಿಸುವುದು ಕಷ್ಟವಾಗಲವಾಗಲಿದೆ. ನಿಮ್ಮವರ ಮಾತುಗಳಿಂದ ನೀವು ಬೇಸರಗೊಳ್ಳುವಿರಿ. ಸಾಲಗಾರರಿಗೆ ಅತಿಯಾದ ಕಿರಿಕಿರಿಯು ಮೇಲಿಂದ ಮೇಲೆ ಬರಲಿದೆ. ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಳ್ಳುವಿರಿ. ವಿದೇಶದಿಂದ ಆಹ್ವಾನವು ಬರಬಹುದು. ಆತುರದ ಪ್ರಯಾಣವನ್ನು ಇಂದು ಮಾಡಬೇಡಿ. ಒತ್ತಾಯದಿಂದ ಸ್ನೇಹಿತರ ಮನೆಗೆ ಹೋಗುವಿರಿ. ಆದಾಯದ ಬಗ್ಗೆ ಗಮನಹರಿಸಿ ಆರೋಗ್ಯವನ್ನು ನಿರ್ಲಕ್ಷ್ಯದಿಂದ ನೋಡುವಿರಿ. ಇಂದು ಉದ್ಯೋಗದ ಅನ್ವೇಷಣೆಯಲ್ಲಿ ಮಗ್ನರಾಗುವಿರಿ.