AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ, ಸಂಗಾತಿಯು ಸಾಲವನ್ನು ಮಾಡಲು ಪ್ರಚೋದನೆ ಕೊಡಬಹುದು

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಅಕ್ಟೋಬರ್ 20) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ದಿನಭವಿಷ್ಯ, ಸಂಗಾತಿಯು ಸಾಲವನ್ನು ಮಾಡಲು ಪ್ರಚೋದನೆ ಕೊಡಬಹುದು
ರಾಶಿ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Oct 20, 2023 | 12:30 AM

Share

ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ಅಕ್ಟೋಬರ್ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಮೂಲಾ, ಯೋಗ: ಶೋಭನ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 25 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 08 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 10:49 ರಿಂದ 12:17ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:13 ರಿಂದ 04:41ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:54 ರಿಂದ ಮಧ್ಯಾಹ್ನ 09:22ರ ವರೆಗೆ.

ನವರಾತ್ರಿಯ ಆರನೇ ದಿನ ಆರಾಧನೆಗೊಳ್ಳುವವಳು ಸ್ಕಂದಮಾತಾ. ಕಾರ್ತಿಕೇಯನನ್ನು ಸಲಹಿದ ಮಾತೆ ಆಕೆ. ಕಾರ್ತಿಕೇಯನನ್ನು ಕಾಪಾಡಿದಂತೆ ಎಲ್ಲರನ್ನೂ ರಕ್ಷಿಸಲಿ.

ಸಿಂಹಾಸನಗತಾ ನಿತ್ಯಂ ಪದ್ಮಾಶ್ರಿತಕರದ್ವಯಾ | ಶುಭದಾಸ್ತು ಸದಾ ದೇವೀ ಸ್ಕಂದಮಾತಾ ಯಶಸ್ವಿನೀ ||

ಸಿಂಹ ರಾಶಿ : ಇಂದು ನೀವು ಹೆಚ್ಚು ಉತ್ಸಾಹ ಹಾಗೂ ನಗುಮುಖದಲ್ಲಿ ಇರುವುದು ಎಲ್ಲರಿಗೂ ಗೊತ್ತಾಗಲಿದೆ. ನಿಮ್ಮ ಹೊಸ ಸುದ್ದಿಯು ಎಲ್ಲರಿಗೂ ಅಚ್ಚರಿ ಮೂಡಿಸುವುದು. ಬೆನ್ನು ನೋವಿನ ಸಮಸ್ಯೆಯು ಕಾಡೀತು. ಸಂಗಾತಿಯನ್ನು ದೂರ ಕಳಿಸಿ ಸಂಕಟಪಡುವಿರಿ‌. ಕುಟುಂಬದಿಂದ ದೂರವಿದ್ದರೂ ಮಾತುಕತೆಗಳ ಮೂಲಕ ಹತ್ತಿರವಾಗುವಿರಿ. ನಿಮ್ಮ ವೈಯಕ್ತಿಕ ಕಾರ್ಯದಲ್ಲಿ ಹೆಚ್ಚು ತೊಡಗಿಕೊಳ್ಳುವಿರಿ. ನೀವು ನಿರೀಕ್ಷಿಸಿದ ಹಣವು ಬಾರದೇ ಹೋಗಬಹುದು. ನಿಮ್ಮ ಹೆಸರನ್ನು ಹೇಳಿ ಯಾರಾದರೂ ವಂಚಿಸಿಯಾರು. ನಿಮ್ಮ ಮನಃಸ್ಥಿತಿಗೆ ಹೋಲುವವರ ಗೆಳೆತನ ಲಭ್ಯವಾದೀತು.

ಕನ್ಯಾ ರಾಶಿ : ಇಂದು ನೀವು ನಂಬಿದ ಅದೃಷ್ಟವು ಕೈ ಕೊಡಬಹುದು. ಸಾಲ ಕೊಟ್ಟವರು ನಿಮ್ಮನ್ನು‌ ನಾನಾ ಪ್ರಕಾರವಾಗಿ ಜರಿಯಬಹುದು. ನಿಮಗೆ ಸಿಗಬೇಕಾದ ಹಣವು ಸಿಗದೇ ಇರುವುದರಿಂದ ಬೇಸರ ಬೇಡ. ಪಾಲಿಗೆ ಬಂದಿದ್ದು ಪಂಚಾಮೃತ ಎಂದು ಭಾವಿಸಿ ಸುಮ್ಮನಿರುವುದು ಉತ್ತಮ. ಸಂಗಾತಿಯು ಸಾಲವನ್ನು ಮಾಡಲು ಪ್ರಚೋದನೆ ಕೊಡಬಹುದು. ಕಳೆದುಕೊಂಡ ವಿಶ್ವಾಸವನ್ನು ಮತ್ತೆ ಕೂಡಿಸಲು ಪ್ರಯತ್ನಿಸುವಿರಿ. ಅದು ಕನ್ನಡಿಯ ಗಾಜಿನಂತೆ. ಎಷ್ಟೇ ಕೂಡಿಸಿದರೂ ಬಿರುಕು ಎದ್ದು‌ ತೋರುವುದು. ವಿದ್ಯಾರ್ಥಿಗಳ ಮನೋಭಾವವು ಕ್ಷಣಕ್ಕೊಮ್ಮೆ ಬದಲಾಗುತ್ತಿದ್ದು ಸ್ಥಿರಮತಿಯನ್ನು ಪಾಲಕರು ಕೊಡುವುದು ಮುಖ್ಯ. ಆರೋಗ್ಯವು ಚೆನ್ನಾಗುವ ಆಹಾರವನ್ನು ನೀವು ವೈದ್ಯರನ್ನು ಕೇಳಿ ಪಡೆಯಿರಿ.

ತುಲಾ ರಾಶಿ : ಕ್ರೀಡೆಯಲ್ಲಿ ಮುನ್ನಡೆಯುವ ಆಸಕ್ತಿಯನ್ನು ತೋರಿಸುವಿರಿ. ಹತ್ತಾರೂ ಆಲೋಚನೆಗಳು ಒಂದಾದಮೇಲೆ‌‌ ಒಂದರಂತೆ ಬಂದು ನಿಮ್ಮ ದಿನಚರಿಯನ್ನು ಹಾಳು ಮಾಡಬಹುದು. ದ್ವಿಚಕ್ರವಾಹನದಲ್ಲಿ ಸಚರಿಸುವುದು ಬೇಡ. ವೃತ್ತಿಯಲ್ಲಿ ಅನಿರೀಕ್ಷಿತ ಒತ್ತಡಗಳು ಬರಲಿದ್ದು ಇಂದಿನ‌ ಕಾರ್ಯವನ್ನು ಹಾಳುಮಡುವುದು. ಸ್ತ್ರೀಯರು ಕೆಲವರ‌ ಬಗ್ಗೆ ಇರುವ ಪೂರ್ವಾಗ್ರಹವನ್ನು ಕಳೆದುಕೊಳ್ಳುವರು.‌ ಮೂರನೇ ವ್ಯಕ್ತಿಗಳ‌ ಮೂಲಕ ನಿಮ್ಮ ಗೌಪ್ಯ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ಮನಶ್ಚಾಂಚಲ್ಯದಿಂದ ಇಂದು ಅಶಿಸ್ತಿನಿಂದ‌ ಕಾರ್ಯವನ್ನು ಮಾಡುವಿರಿ. ಪ್ರಾಣಿಗಳ ಮೇಲೆ ಪ್ರೀತಿ ಹೆಚ್ಚಾದೀತು.

ವೃಶ್ಚಿಕ ರಾಶಿ : ಕೆಲವು ಸಂದರ್ಭಗಳು ನಿಮ್ಮ‌ ಪರೀಕ್ಷೆಗಾಗಿ ಬರಲಿದ್ದು ಅದನ್ನು ಎದುರಿಸುವುದು ನಿಮ್ಮ ಮೇಲಿದೆ. ಕುಟುಂಬದಿಂದ ವೃತ್ತಿಯ ಬದಲಾವಣೆಗೆ ಒತ್ತಾಯ ಬರಬಹುದು. ಅಧಿಕ ಆದಾಯವನ್ನು ನಿಮ್ಮಿಂದ ನಿರೀಕ್ಷಿಸಬಹುದು. ಮೂರ್ಖರಂತೆ ಬರ್ತಿಸಿ ಎಲ್ಲರ ನಡುವೆ ನಗೆಪಾಟಲಾಗುವಿರಿ. ಸಂಗಾತಿಯ ಹೆಸರಿನಲ್ಲಿ ಸ್ಥಿರಾಸ್ತಿಯನ್ನು ಖರೀದಿಸುವಿರಿ. ಆರ್ಥಿಕ ಸ್ಥಿತಿಯು ನಿಮಗೆ ಸಮಾಧಾನ ಕೊಡುವುದು. ಹಳೆಯ ವಸ್ತುಗಳು ನಿಮಗೆ ಭಾರವಾದೀತು. ತಾಳ್ಮೆಯನ್ನು ಕಳೆದುಕೊಂಡು ಎಲ್ಲರೆದುರು ಸಣ್ಣವರಾಗಬೇಕಾದೀತು. ವಿದ್ಯಾರ್ಥಿಗಳು ತಮ್ಮದಾದ ನೂತನ ಪ್ರಯತ್ನಕ್ಕೆ ಸಿದ್ಧರಾಗುವಿರಿ. ಹೊಳೆಯುವುದೆಲ್ಲ ನಕ್ಷತ್ರವಲ್ಲ ಎಂಬುದು ಎಡವಿದ‌ ಮೇಲೆ ಗೊತ್ತಾಗುವುದು.

ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ