AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರ ದಾಂಪತ್ಯದಲ್ಲಿ ನಡೆಯುತ್ತಿದ್ದ ವಿವಾದವು ಪೂರ್ಣಗೊಂಡು ಹೊಂದಿಕೊಳ್ಳುವಿರಿ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಸೆಪ್ಟೆಂಬರ್ 20) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರ ದಾಂಪತ್ಯದಲ್ಲಿ ನಡೆಯುತ್ತಿದ್ದ ವಿವಾದವು ಪೂರ್ಣಗೊಂಡು ಹೊಂದಿಕೊಳ್ಳುವಿರಿ
ರಾಶಿ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Sep 20, 2023 | 12:30 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 20 ಬುಧವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ತುಲಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಪಂಚಮೀ, ನಿತ್ಯನಕ್ಷತ್ರ: ಜ್ಯೇಷ್ಠಾ, ಯೋಗ: ಸೌಭಾಗ್ಯ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 29 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:26 ರಿಂದ 01:57 ರವರೆಗೆ, ಯಮಘಂಡ ಕಾಲ ಬೆಳಿಗ್ಗೆ 07:54 ರಿಂದ 09:24ರವರೆಗೆ, ಗುಳಿಕ ಕಾಲ ಬೆಳಿಗ್ಗೆ 10:55 ರಿಂದ 12:26ರ ವರೆಗೆ.

ಸಿಂಹ ರಾಶಿ : ಇಂದು ನೀವು ಕೆಲಸವನ್ನು ಮಾಡಲು ಪ್ರಯತ್ನಿಸಿದರೂ ಪೂರ್ಣವಾಗದು. ಇಂದು ನಿಮಗೆ ಅತ್ಯಂತ ಪ್ರಿಯವಾದ ಕೆಲಸವನ್ನು ಮಾಡುವುದು ಬೇಡ. ನೀವು ಇತರರಿಂದ ಗೌರವಕ್ಕೆ ಪಾತ್ರರಾಗುವಿರಿ. ಇಂದು ವ್ಯಾಪಾರ ವಿಷಯಗಳಲ್ಲಿ ನೀವು ಅನುಭವಿಗಳ ಸಲಹೆಯನ್ನು ತೆಗೆದುಕೊಳ್ಳುವಿರಿ. ಕಾರ್ಯದ ಹಂಚಿಕೆಯಿಂದ ಕೆಲಸವು ಸುಲಭವಾಗಬಹುದು. ನಿಮ್ಮ ಆಕ್ಷೇಪಗಳು ಹಲವು ಸುಳ್ಳಿನಿಂದ ಇರಲಿದೆ. ನಿಮ್ಮ ಸಂಶೋಧನೆಗೆ ನಿರ್ದಿಷ್ಟ ಗುರಿಯ ಅವಶ್ಯಕತೆ ಇರಲಿದೆ. ಆಸ್ತಿಯ ವಿಚಾರವಾಗಿ ತಂದೆಯ ಕಡೆಯಿಂದ ನಿಮಗೆ ಸಿಂಹಪಾಲು ಸಿಗುವುದು. ಗಂಭೀರ ಚರ್ಚೆಯಲ್ಲಿ ನಿಮ್ಮ ಹಾಸ್ಯವು ಸಭೆಯನ್ನು ವಿಚಲಿತಗೊಳಿಸೀತು. ಸಂಕೀರ್ಣ ಕಾರ್ಯವನ್ನು ಸರಳ ಮಾಡುವ ವಿಧಾನವು ನಿಮ್ಮ ಕರಗತವಾಗಿದೆ. ಎಲ್ಲವನ್ನೂ ನಿಮ್ಮ ನೇರಕ್ಕೆ ತರುವುದು ಕಷ್ಟವಸದೀತು.

ಕನ್ಯಾ ರಾಶಿ : ವ್ಯಾವಹಾರಿಕ ಒಪ್ಪಂದವು ಕೊನೆಯ ಹಂತದಲ್ಲಿ ಇದ್ದು ಕೆಲವು ಅಸಮಾಧಾನಕರ ಮಾತನ್ನು ಕೇಳಬೇಕಾದೀತು. ದಾಖಲೆಗಳನ್ನು ಭದ್ರವಾಗಿ ಇರಿಸಿಕೊಳ್ಳಿ. ಆರ್ಥಿಕತೆಯಲ್ಲಿ ಸಬಲರಾಗಿರುವುದು ಸಂತೋಷವನ್ನು ಇಮ್ಮಡಿ ಮಾಡೀತು. ಇಂದು ನೀವು ಸಂಗಾತಿಗೆ ಉಡುಗೊರೆಯನ್ನು ಕೊಟ್ಟು ಸಿಟ್ಟನ್ನು ಕಡಿಮೆ‌ ಮಾಡಿಸುವಿರಿ. ಶತ್ರುಗಳು ನಿಮ್ಮ ಮಿತ್ರರಾಗಲು ಬಯಸಿ ಸಂಧಾನಕ್ಕೆ ಬರಬಹುದು. ಧಾರ್ಮಿಕ ಆಚರಣೆಯಲ್ಲಿ ಹೆಚ್ಚು ಸಮಯವನ್ನು ಕಳೆಯುವಿರಿ. ವಿದ್ಯಾರ್ಥಿಗಳಿಗೆ ದುಡಿಮೆಯ ಬಗ್ಗೆ ಆಸಕ್ತಿಯು ಹೆಚ್ಚಾಗಿ ಅಭ್ಯಾಸವು ನಿಲ್ಲುವುದು. ಬಂಧುಗಳ ಮನೆಯ ಸಮಾರಂಭಕ್ಕೆ ಹೋಗಲಿದ್ದೀರಿ. ದಾಂಪತ್ಯದಲ್ಲಿ ವಾಗ್ವಾದವೇ ಇಂದಿನ ಕಾರ್ಯಗಳಿಗೆ ತೊಂದರೆಯಾದೀತು. ಕಬ್ಬಿಣದ ವ್ಯಾಪಾರವು ಅಧಿಕ ಸಂಪತ್ತು ಬರಬಹುದು. ಅಪಜಯವು ನಿಮಗೆ ಅಪಮಾನದಂತೆ ಆಗಬಹುದು.

ತುಲಾ ರಾಶಿ : ಇಂದು ಕೌಶಲ್ಯದ ಕಾರ್ಯಕ್ಕೆ ಹೆಚ್ಚು ಆಸಕ್ತಿಯನ್ನು ತೋರಿಸುವಿರಿ. ನೀವು ಇಂದು ಆಸ್ತಿಯನ್ನು ಖರೀದಿಸಲು ಪ್ರಯತ್ನಿಸುತ್ತಿದ್ದು ನೀವು ಅದನ್ನು ಸುಲಭವಾಗಿ ಸಾಧಿಸುವಿರಿ. ಇಂದು ನಿಮ್ಮ ತಾಯಿಯ ಬಗ್ಗೆ ನಿಮ್ಮ ಪ್ರೀತಿ ಹೆಚ್ಚಾಗುತ್ತದೆ. ಇಂದು ನೀವು ನಿಮ್ಮ ಸುತ್ತಲಿನ ವಾತಾವರಣವನ್ನು ಆಹ್ಲಾದವೆನಿಸುವುದು. ನಿಮ್ಮ ವ್ಯವಹಾರದಲ್ಲಿ ಹೊಸ ಬದಲಾವಣೆಯನ್ನು ಮಾಡಲು ನೀವು ಯೋಚಿಸುತ್ತಿದ್ದರೆ ಯಶಸ್ವಿಯಾಗುವಿರಿ. ನೀವು ಅಂದುಕೊಂಡಿದ್ದು ಆಗುತ್ತಿದ್ದರೂ ಮನಸ್ಸು ಸ್ವಸ್ಥವಾಗಿ ಇರದು. ಮಕ್ಕಳ ಕಾರಣದಿಂದ‌ ನಿಮಗೆ ಕೆಟ್ಟ ಮಾತನ್ನು ಕೇಳಬೇಕಾದೀತು. ಯಾವ ಕಾರ್ಯದಲ್ಲಿಯೂ ಸಿಕ್ಕಿಹಾಕಿಕೊಳ್ಳದೇ ಇರುವಿರಿ. ಎಲ್ಲವನ್ನೂ ತಿಳಿದೂ ನೀವು ಸುಮ್ಮನಿರುವುದು ಇಷ್ಟವಾಗದು. ಅಧಿಕಾರಿಗಳ ವರ್ಗದಿಂದ ಗೌರವ ಸಿಗಬಹುದು.‌ ನಿಮ್ಮವರಿಗೆ ನಿಮ್ಮ ಸರಿಯಾದ ಪರಿಚಯು ಆಗದು. ಪತ್ನಿಯ ಆರೋಗ್ಯವು ಗಂಭಿರವಾಗುವ ಸಾಧ್ಯತೆ ಇದೆ. ದುರ್ಗಾಮಾತೆಯನ್ನು ವಿಧವಾಗಿ ಅರ್ಚಿಸಿ.

ವೃಶ್ಚಿಕ ರಾಶಿ : ಒಡಹುಟ್ಟಿದವರ ಜೊತೆಗಿನ ನಿಮ್ಮ ವ್ಯವಹಾರಕ್ಕೆ ಮತ್ತೊಬ್ಬರು ಪ್ರವೇಶಿಸಬಹುದು. ದಾಂಪತ್ಯದಲ್ಲಿ ನಡೆಯುತ್ತಿದ್ದ ವಿವಾದವು ಪೂರ್ಣಗೊಂಡು ಹೊಂದಿಕೊಳ್ಳುವಿರಿ. ಇಂದು ನಿಮ್ಮ ವ್ಯವಹಾರದಲ್ಲಿ ಬೇರೆಯವರ ಮಾತನ್ನು ಕೇಳಬೇಕಾಗಿಬರಬಹುದು. ಇಂದು ಸಮೂಹವನ್ನು ಕಟ್ಟಿಕೊಂಡು ಕೆಲಸವನ್ನು ಮಾಡುವಿರಿ. ಆಸ್ತಿಗೆ ಸಂಬಂಧಿಸಿದ ವಿಚಾರವನ್ನು ಪ್ರಸ್ತಾಪಿಸಿ ಮಕ್ಕಳಿಂದ ಒಪ್ಪಿಗೆಯನ್ನು ಪಡೆಯುವಿರಿ. ಸುಧಾರಿಸಿದ ಆರೋಗ್ಯವು ನಿಮಗೆ ಉತ್ಸಾಹವನ್ನು ಕಡಲ ಸಮಯವನ್ನು ತೆಗೆದುಕೊಂಡಿತು. ಜೀವನದ ಆಕಸ್ಮಿಕ ತಿರುವುಗಳಿಗೆ ನೀವು ಚಿಂತೆಗೆಡುವುದಿಲ್ಲ. ಹಣದ ಉಳಿತಾಯಕ್ಕೆ ಉಪಾಯದ ಅಗತ್ಯವು ಕಾಣಿಸಿಕೊಳ್ಳುವುದು. ಉದ್ಯೋಗದ ಕೆಲವು ರಹಸ್ಯಗಳನ್ನು ನೀವು ಇಂದು ತಿಳಿದುಕೊಳ್ಳುವಿರಿ. ವಿಷಯಾಸಕ್ತಿಯು ಇಂದು ಅಧಿಕವಾಗಿ ಇರುವುದು. ಸರ್ಕಾರದ ಕೆಲಸದಲ್ಲಿ ಹಿನ್ನಡೆಯಾಗಿದ್ದು ಬೇರೆಯವರ ಮೂಲಕ ಒತ್ತಡ ತಂದು ಕೆಲಸವನ್ನು ಮಾಡಿಸಿಕೊಳ್ಳುವಿರಿ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ