ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 21 ಗುರುವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ತುಲಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಮೂಲಾ, ಯೋಗ: ಶೋಭನ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 29 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:26 ರಿಂದ 01:57 ರವರೆಗೆ, ಯಮಘಂಡ ಕಾಲ ಬೆಳಿಗ್ಗೆ 07:54 ರಿಂದ 09:24ರವರೆಗೆ, ಗುಳಿಕ ಕಾಲ ಬೆಳಿಗ್ಗೆ 10:55 ರಿಂದ 12:26ರ ವರೆಗೆ.
ಸಿಂಹ ರಾಶಿ : ನಿಮ್ಮ ಸ್ವಂತಿಕೆಯನ್ನು ಉಳಿಸಿಕೊಳ್ಳುವ ಅನಿವಾರ್ಯತೆ ಇರಲಿದೆ. ದೂರದ ಬಂಧುಗಳ ಆಗಮನವು ಆಗಲಿದೆ. ಹಳೆಯ ಘಟನೆಗಳು ವಿಸ್ಮರಣೆಯಾಗಬಹುದು. ನಿಮ್ಮ ಆರ್ಥಿಕ ದೌರ್ಬಲ್ಯವನ್ನು ಆಡುಕೊಳ್ಳಬಹುದು. ನಿಮಗೆ ಗೊತ್ತಿಲ್ಲದೇ ಚರಾಸ್ತಿಯು ಇಲ್ಲವಾಗಬಹುದು. ಸಕಾಲಕ್ಕೆ ಯಾವದೂ ಆಗದೇ ಎಲ್ಲವೂ ಅಸ್ತವ್ಯಸ್ತವಾಗಲಿದೆ. ಉದ್ವಿಗ್ನತೆಗೆ ದಾರಿ ಮಾಡಿಕೊಡದೇ ಸಮಚಿತ್ತದಲ್ಲಿ ಇರುವಂತೆ ನೋಡಿಕೊಳ್ಳಿ. ನಿಮ್ಮ ಇರುವಿಕೆಯನ್ನು ತೋರಿಸುವ ಪ್ರಯತ್ನ ಮಾಡುವಿರಿ. ನೌಕರರ ವಿಷಯದಲ್ಲಿ ಕೋಪಗೊಳ್ಳುವ ಸನ್ನಿವೇಶ ಬರಬಹುದು. ನಿಮ್ಮ ಕೈಲಾಗದು ಎಂದು ಕೈಕಟ್ಟಿ ಕುಳಿತುಕೊಳ್ಳುವುದು ಬೇಡ. ಪ್ರಯತ್ನವಿರಲಿ. ನಿಮ್ಮನ್ನು ಯಾರಾದರೂ ಆಕರ್ಷಿಸಿಯಾರು. ನಿಮ್ಮ ಸಮಯೋಚಿತ ಉತ್ತರಗಳು ಧನಾತ್ಮಕ ಅಂಶಗಳನ್ನು ತಂದುಕೊಡುವುದು. ನಿಮ್ಮ ವರ್ತನೆಗಳು ಇತರರಿಗೆ ಇಷ್ಟವಾದೀತು.
ಕನ್ಯಾ ರಾಶಿ : ಶತ್ರುಗಳ ಹುಡುಕಾಟದಲ್ಲಿ ಸಫಲರಾಗುವುದಿಲ್ಲ. ಕೆತ್ತನೆಯ ಕಲಾವಿದರಿಗೆ ಹೆಚ್ಚು ಬೇಡಿಕೆ ಬರಬಹುದು. ಪಕ್ಷಪಾತದಿಂದ ಕಲಹವಾಗುವುದು. ನೌಕರರ ವಿಚಾರದಲ್ಲಿ ನಿಮ್ಮ ವರ್ತನೆಯು ಸರಿಯಾಗಿರಲಿ. ಬೌದ್ಧಿಕ ಕಸರತ್ತನ್ನು ಪ್ರದರ್ಶಿಸುವಿರಿ. ಒಂದೇ ರೀತಿಯಲ್ಲಿ ಜೀವನ ಸಾಗುವುದು ನಿಮಗೆ ಇಷ್ಟವಾಗದು. ಯಾವುದಕ್ಕೆ ಎಷ್ಟು ಸಮಯವನ್ನು ಕೊಡಬೇಕು ಎನ್ನುವುದನ್ನು ಪರೀಕ್ಷೆಯ ವಿದ್ಯಾರ್ಥಿಗಳು ನಿರ್ಧರಿಸಿ. ಭೂಮಿಯ ವ್ಯವಹಾರವು ಗೊಂದಲಮಯ ಆಗಬಹುದು. ಪ್ರೀತಿಯನ್ನು ದೂರಮಾಡಿಕೊಳ್ಳಲಿದ್ದೀರಿ. ನಿಮ್ಮ ಮೇಲೆ ಅಸಂಬದ್ಧ ಮಾತುಗಳು ಕೇಳಿಬರುವುದು. ನೀವು ಅತಂತ್ರ ಸ್ಥಿತಿಯಲ್ಲಿ ಸಿಕ್ಕಿಕೊಳ್ಳುವ ಹಾಗೆ ಆಗಬಹುದು. ವಿದೇಶದಲ್ಲಿ ಇದ್ದವರಿಗೆ ಕಾನೂನು ಸಂಘರ್ಷವು ಬರಬಹುದು. ಇಂದಿನ ವಾತಾವರಣದಿಂದ ನಿಮ್ಮ ಮನಸ್ಸು ಹಾಳಾಗುವುದು.
ತುಲಾ ರಾಶಿ : ನಿಮ್ಮ ಬಗ್ಗೆ ಯಾರಾದರೂ ಅಂದುಕೊಂಡಾರು ಎನ್ನುವ ಹಿಂಜರಿಕೆಯು ಇರಲಿದೆ. ಉನ್ನತಮಟ್ಟದ ಅಧ್ಯಯನವು ಮುಗಿಯುತ್ತಿರುವುದು ನಿಮಗೆ ಹೆಮ್ಮೆ ಎನಿಸುವುದು. ಸಂಗಾತಿಯ ಮಾತಿನಿಂದ ಬೇಸರವಾಗಲಿದೆ. ಸಮಯಪಾಲನೆಯಿಂದ ನಿಮ್ಮ ಕೆಲಸಗಳು ಸರಿಯಾಗುವುದು. ನೀರಿನಿಂದ ಭೀತಿಯು ಉಂಟಾಗುವುದು. ನಿಮ್ಮ ಮಾತುಗಳಲ್ಲಿ ನಂಬಿಕೆ ಇಲ್ಲವಾದೀತು. ವೃತ್ತಿಯನ್ನು ಉತ್ಸಾಹದಿಂದ ಮಾಡುವಿರಿ. ಸಂಗಾತಿಯು ನಿಮಗೆ ಕೆಲವು ಉಪಯುಕ್ತ ಮಾತುಗಳನ್ನು ಹೇಳಬಹುದು. ಒತ್ತಡವನ್ನು ನಿವಾರಿಸಿಕೊಳ್ಳಲು ಕೆಲವು ವಿಧಾನಗಳು ಇರಲಿದೆ. ಹಳೆಯ ವಾಹನವನ್ನು ಮಾರಾಟ ಮಾಡುವಿರಿ. ಸಂಬಂಧವು ಇಂದು ಉಪಯೋಗಕ್ಕೆ ಬರುವುದು.
ವೃಶ್ಚಿಕ ರಾಶಿ : ಮಹಿಳೆಯ ಕಾರಣದಿಂದ ನಿಮಗೆ ಧನನಷ್ಟವು ಆಗಬಹುದು. ಭೂಮಿಯನ್ನು ನಿಮ್ಮದಾಗಿಸಿಕೊಳ್ಳುವ ಪ್ರಯತ್ನವು ಸಫಲವಾಗುವುದು. ನಿಮಗೆ ಬರುವ ಪ್ರಶಂಸೆಯ ಮಾತನ್ನು ಅಲ್ಲಗಳೆಯುವಿರಿ. ಉದ್ಯೋಗದ ಒತ್ತಡದಿಂದ ನಿಮಗೆ ಅನಾರೋಗ್ಯದಿಂದ ಬಳಲುವಿರಿ. ಬರಬೇಕಾದ ಹಣವನ್ನು ಪಡೆದರೂ ಖರ್ಚಿಗೆ ದಾರಿ ತೆರೆದುಕೊಂಡು ಇರುವುದು. ಆಸ್ತಿಯ ಕಲಹವನ್ನು ಮನೆಯಲ್ಲಿಯೇ ಇತ್ಯರ್ಥ ಮಾಡಿಕೊಳ್ಳಿ. ಕಲಾವಿದರಿಗೆ ಅವಕಾಶವು ಬರುವುದು. ವಿದೇಶದ ವ್ಯವಹಾರಕ್ಕೆ ಮತ್ತಷ್ಟು ಬಲ ಬರಬಹುದು. ಗೃಹನಿರ್ಮಾಣದ ರೂಪವನ್ನು ನಿರ್ಧರಿಸಿಕೊಳ್ಳುವಿರಿ. ಸಮಯೋಚಿತ ಪ್ರಜ್ಞೆಯಿಂದ ಆಪತ್ತಿನ್ನು ದೂರಮಾಡಿಕೊಳ್ಳುವಿರಿ. ಆರೋಗ್ಯಕ್ಕೆ ತಜ್ಞರ ಸಲಹೆಯನ್ನು ಪಡೆದು ಮುಂದುವರಿಸಿರಿ. ಪ್ರಯಾಣಕ್ಕೆ ಮನಸ್ಸು ಇರದು.