Horoscope: ದಿನಭವಿಷ್ಯ, ಅಧ್ಯಾತ್ಮ ಸಾಧನೆಗೆ ಈ ರಾಶಿಯವರ ಮನಸ್ಸು ಬದಲಾಗಬಹುದು
ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಆಗಸ್ಟ್ 22) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.
ಇಂದಿನ ರಾಶಿ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಆಗಸ್ಟ್ 22) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ನಿಜ ಶ್ರಾವಣ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಸ್ವಾತೀ, ಯೋಗ: ಶುಕ್ಲ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 20 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 49 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:43 ರಿಂದ 05:16ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:28 ರಿಂದ 11:02ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:35 ರಿಂದ 02:09ರ ವರೆಗೆ.
ಸಿಂಹ ರಾಶಿ: ಕುಟುಂಬದಲ್ಲಿ ಪರಸ್ಪರ ಸಹಬಾಳ್ವೆಯು ಎದ್ದು ತೋರುವುದು. ಧಾರ್ಮಿಕ ಆಚರಣೆಗಳಲ್ಲಿ ನಿರಾಸಕ್ತಿಯು ಇರುವುದು. ಪ್ರಯಾಣದಿಂದ ಪ್ರಯಾಸವಾಗಬಹುದು. ಇಂದಿನ ಅದಾಯಕ್ಕೆ ತಕ್ಕುದಾದ ಖರ್ಚು ಇರಲಿದೆ. ಹೊಸ ಯೋಜನೆಯಿಂದ ಲಾಭವೂ ಅಧಿಕವಾಗುವುದು. ಎಲ್ಲವನ್ನೂ ಬದಲಿಸುತ್ತೇನೆ ಎಂಬ ಹುಂಬುತನ ಬೇಡ. ಸಂಸ್ಥೆಗೆ ನಿಮ್ಮನ್ನು ಮುಖ್ಯಸ್ಥರನ್ನಾಗಿ ಮಾಡುವರು. ಹಣದ ಉಳಿಕೆಗೆ ಸಂಬಂಧಿಸಿದಂತೆ ನೀವು ಕಾನೂನು ರೀತಿಯ ಕ್ರಮವನ್ನು ಅನುಸರಿಸಬೇಕಾಗಬಹುದು. ಹಣದ ಕಾರಣಕ್ಕೆ ವಂಚನೆಯಲ್ಲಿ ಬೀಳುವಿರಿ. ಕ್ರಯ ಹಾಗೂ ವಿಕ್ರಯಗಳ ವಿಚಾರದಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುವುದು.
ಕನ್ಯಾ ರಾಶಿ: ನಿಷ್ಠೆಯಿಂದ ಮಾಡುವ ಉದ್ಯೋಗದಲ್ಲಿ ಬಡ್ತಿಯು ಸಿಗದೇ ಬೇಸರವಾಗುವುದು. ಸ್ಥಾನಮಾನವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಉದ್ಯೋಗವೇ ಸಾಕು ಎಂದು ಅನ್ನಿಸುವಷ್ಟು ಮಾನಸಿಕ ಸ್ಥಿತಿಯು ಬರಬಹುದು. ಹೊಸ ಮನೆಗೆ ಸ್ಥಳಾಂತರ ಮಾಡಿಕೊಳ್ಳುವಿರಿ. ತಾಯಿಯ ಪ್ರೀತಿಯು ನಿಮಗೆ ಸಿಗಲಿದೆ. ಮನೆಯಲ್ಲಿ ಹಿರಿಯರಾದ ಕಾರಣ ನೀವು ಹೆಚ್ಚು ಬೈಗಳುಕ್ಕೆ ಸಿಲುಕುವಿರಿ. ಹೋದ ಸಂಪತ್ತಿನ ಬಗ್ಗೆ ನಿಮಗೆ ಆಸಕ್ತಿಯು ಇರದು. ಸಂಅಗರಿಯು ನಿಮ್ಮಿಂದ ಏನನ್ನೋ ಮುಚ್ಚಿಡುತ್ತಾನೆ ಎಂದು ಅನ್ನಿಸಬಹುದು. ನೀವು ಕರ್ತವ್ಯವನ್ನು ಬಿಡದೇ ಕೈಯ್ಯಲ್ಲಿ ಆಗುವ ಕೆಲಸವನ್ನು ಮಾಡಿ. ಎಲ್ಲವೂ ಅನುಕೂಲಕರವಾಗಿದೆ ಎಂದು ಅನ್ನಿಸಬಹುದು.
ತುಲಾ ರಾಶಿ: ನಿಮ್ಮ ಉದ್ಯಮದ ಮೇಲೆ ಯಾರದ್ದಾದರೂ ದೃಷ್ಟಿಯು ಬೀಳಲಿದೆ. ಸಮಾಜಮುಖೀ ಕಾರ್ಯಗಳನ್ನು ಯಾವದೇ ಫಲಾಪೇಕ್ಷೆ ಇಲ್ಲದೆ ಮಾಡುವಿರಿ. ಆರೋಗ್ಯವು ಚೆನ್ನಾಗಿ ಇರಲಿದ್ದು ಮಾನಸಿಕವಾದ ನೆಮ್ಮದಿಯು ಇರಲಿದೆ. ನಿಮ್ಮ ತಾಳ್ಮೆಯು ಕಡಿಮೆ ಆದಂತೆ ತೋರುವುದು. ನಿಮ್ಮ ಗುಣಗಳನ್ನು ದುರುಪಯೋಗ ಮಾಡಿಕೊಳ್ಳಬಹುದು. ಬಂಧುಗಳ ಸಲಹೆಯನ್ನು ಸ್ವೀಕರಿಸದೇ ಇದ್ದುದಕ್ಕೆ ಅವರು ಬೇಸರಿಸುವರು. ನಿಮ್ಮ ಹೊಸ ಉದ್ಯೋಗದಕ್ಕೆ ಎದುರಾಗುವ ಸವಾಲುಗಳನ್ನು ಚರ್ಚಿಸಿ ಪರಿಹಾರವನ್ನು ಕಂಡುಕೊಳ್ಳುವಿರಿ. ಸರ್ಕಾರಿ ಉದ್ಯೋಗಿಗಳ ಆದಾಯವು ಹೆಚ್ಚಾಗಲಿದೆ. ನಿರಾಧಾರವಾದ ನಿಮ್ಮ ದೂರು ಬಿದ್ದು ಹೋಗುವುದು.
ವೃಶ್ಚಿಕ ರಾಶಿ: ಅಧ್ಯಾತ್ಮ ಸಾಧನೆಗೆ ನಿಮ್ಮ ಮನಸ್ಸು ಬದಲಾಗಬಹುದು. ವಾಹನವನ್ನು ಚಲಿಸುವಾಗ ಯಾವದೇ ಒತ್ತಡವನ್ನು ಇಟ್ಟುಕೊಳ್ಳುವುದು ಬೇಡ. ಯಾರಾದರೂ ಬೇಡ ಎಂದು ಹೇಳಿದ ಕೆಲಸವನ್ನು ಹಠದಿಂದ ಅವರ ಮಾತನ್ನು ವಿರೋಧಿಸಿ ಮಾಡುವುದು ಬೇಡ. ಚರಾಸ್ತಿಗಳನ್ನು ನಷ್ಟ ಮಾಡಿಕೊಳ್ಳುವಿರಿ. ನಿಮಗೆ ಯಾರಾದರೂ ದಾನವನ್ನು ಮಾಡಲು ಯೋಗ್ಯರೂ ಎಂದು ಅನ್ನಿಸಿದರೆ ಅಂಥಹವರಿಗೆ ದಾನವನ್ನು ಮಾಡಿ. ಸಾಲವಾಗಿ ನೀಡಿದ ಹಣವನ್ನು ಹಿಂಪಡೆಯಲು ಕಷ್ಟವಾದೀತು. ಸಂಗಾತಿಯನ್ನು ನೀವು ಅಲಕ್ಷಿಸುವಿರಿ. ನಿಮ್ಮ ಕೆಲಸದ ವೇಗವನ್ನು ಹೆಚ್ಚಿಸುವಿರಿ. ನಿಮ್ಮಿಂದ ಆಗದ ಕೆಲಸಕ್ಕೆ ನೀವು ಹೋಗಿ ಕೈ ಸುಟ್ಟುಕೊಳಳ್ಳುವಿರಿ. ಪ್ರೀತಿ ಪಾತ್ರರನ್ನು ನೀವು ಚೆನ್ನಾಗಿ ನೋಡಿಕೊಳ್ಳುವಿರಿ. ಹಣವನ್ನು ಗಳಿಸಬೇಕು ಎಂಬ ಹಂಬಲವು ಅಧಿಕವಾಗಿರುವುದು.
ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ