Horoscope: ದಿನಭವಿಷ್ಯ, ಹಣಕಾಸಿನ ಕಾರಣಕ್ಕೆ ಈ ರಾಶಿಯವರು ಮೋಸ ಹೋಗಬಹುದು, ಎಚ್ಚರ..

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಅಕ್ಟೋಬರ್ 22) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ದಿನಭವಿಷ್ಯ, ಹಣಕಾಸಿನ ಕಾರಣಕ್ಕೆ ಈ ರಾಶಿಯವರು ಮೋಸ ಹೋಗಬಹುದು, ಎಚ್ಚರ..
ರಾಶಿಭವಿಷ್ಯImage Credit source: iStock Photo
Follow us
TV9 Web
| Updated By: Rakesh Nayak Manchi

Updated on: Oct 22, 2023 | 12:30 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಅಕ್ಟೋಬರ್ 22 ಭಾನುವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಉತ್ತರಾಷಾಢ, ಯೋಗ: ಸುಕರ್ಮಾ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 26 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 07 ನಿಮಿಷಕ್ಕೆ, ರಾಹು ಕಾಲ ಸಂಜೆ 04:40 ರಿಂದ 06:08ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:17 ರಿಂದ 01:45ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:12 ರಿಂದ 04:40ರ ವರೆಗೆ.

ಸಿಂಹ ರಾಶಿ: ಎಲ್ಲ ಕಡೆಯಿಂದ‌ ನಿಮಗೆ ಅನುಕೂಲವಾಗಬೇಕು ಎಂದುಕೊಳ್ಳುವುದು ಬೇಡ. ಅನಿಶ್ಚಿತತೆಯು‌ ನಿಮ್ಮ ಮೇಲೆ ದಟ್ಟವಾದ ಪ್ರಭಾವವನ್ನು ಬೀರಬಹುದು. ಅಮೂಲ್ಯವಾದ ಸಂಪತ್ತು ಅಥವಾ ಸಂಬಂಧವನ್ನು ಕಳೆದುಕೊಳ್ಳಬೇಕಸದೀತು. ಕುಟುಂಬದಲ್ಲಿ ಪರಸ್ಪರ ಪ್ರೀತಿಯು ತೋರುವುದು. ಪ್ರಯಾಣದಿಂದ ಪ್ರಯಾಸವಾಗಲಿದೆ. ಹೊಸ ವ್ಯವಹಾರದ ಬಗ್ಗೆ ನಿಮಗೆ ಆಪ್ತರ ಸಲಹೆಯು ಸಿಗಲಿದೆ. ಮಕ್ಕಳ ಸ್ವಭಾವವು ಇಷ್ಟವಾಗದೇ ಹೋಗುವುದು. ಖಾಸಗಿ ಸಂಸ್ಥೆಯೊಂದು ನಿಮ್ಮನ್ನು ಮುಖ್ಯಸ್ಥರನ್ನಾಗಿ ಮಾಡುವ ಯೋಚನೆಯನ್ನು ಇಟ್ಟುಕೊಂಡಿದೆ. ಹಣಕಾಸಿನ ಕಾರಣಕ್ಕೆ ನೀವು ಮೋಸ ಹೋಗಬಹುದು. ಹೊಸ ವಸ್ತ್ರವನ್ನು ಖರೀದಿಸಿ ಧರಿಸುವಿರಿ.

ಕನ್ಯಾ ರಾಶಿ: ಮಕ್ಕಳ ವಿದ್ಯಾಭ್ಯಾಸಕ್ಕೆ ಕಳುಹಿಸಿ ಬೇಸರಗೊಳ್ಳುವಿರಿ.‌ ನಿಮ್ಮ ಮಕ್ಕಳ ಬಾಂಧವ್ಯದಿಂದೆ‌ ನಿಮಗೆ ಅಗಲಿಕೆ ಕಷ್ಟವಾದೀತು. ಸಹೋದ್ಯೋಗಿಗಳನ್ನು ಅನೌಪಚಾರಿಕವಾಗಿ ಭೇಟಿಯಾಗುವಿರಿ. ಭೂಮಿಯ ವ್ಯವಹಾರವು ನಿಮಗೆ ಹಿನ್ನಡೆಯಾಗಬಹುದು.‌ ಓಡಾಟದಿಂದ ಸಮಯ ವ್ಯರ್ಥ ಮಾಡುವಿರಿ. ಸ್ಥಾನಮಾನವನ್ನು ಕಳೆದುಕೊಳ್ಳುವ ಸನ್ನಿವೇಶವು ಬರಬಹುದು. ಉದ್ಯೋಗವೇ ಸಾಕು ಎಂದು ಅನ್ನಿಸುವಷ್ಟು ಹಿಂಸೆಯನ್ನು ಮನಸ್ಸಿನಲ್ಲಿ ಅನುಭವಿಸುವಿರಿ. ಹೊಸ ಮನೆಗೆ ಸ್ಥಳಾಂತರ ಮಾಡಿಕೊಳ್ಳುವಿರಿ. ತಾಯಿಯ ಪ್ರೀತಿಯನ್ನು ಅನುಭವಿಸುವಿರಿ. ಸಂಪತ್ತಿನ ಬಗ್ಗೆ ನಿಮಗೆ ಆಸಕ್ತಿಯು ಇರದು. ಸಂಗಾತಿಯು ನಿಮ್ಮಿಂದ ಏನನ್ನೋ‌ ಮುಚ್ಚಿಡುತ್ತಾನೆ ಎಂದು ಅನ್ನಿಸಬಹುದು. ನೀವು ಕರ್ತವ್ಯವನ್ನು ಬಿಡದೇ ಕೈಯ್ಯಲ್ಲಿ ಆಗುವ ಕೆಲಸವನ್ನು ಮಾಡಿ.

ತುಲಾ ರಾಶಿ: ವಾಹನ ಖರೀದಿಯ ಬಗ್ಗೆ ಮನೆಯಲ್ಲಿ ಪೂರ್ಣ ಬೆಂಬಲ ಇರುವುದು.‌ ಹಳೆಯ ಘಟನೆಯನ್ನು ನೆನಪಿಸಿಕೊಂಡು ಸಂಕಟಪಡುವುದು ಬೇಡ. ಕಳ್ಳರ ಭೀತಿಯು ಇರಲಿದೆ. ದೇಹವು ವಾತದಿಂದ ತೊಂದರೆಗೆ ಸಿಲುಕಬಹುದು. ಧಾರ್ಮಿಕ ಆಚರಣೆಗೆ ಇನ್ನೊಬ್ಬರಿಂದ‌ ಪ್ರೇರಣೆ ಪಡೆಯುವಿರಿ. ಸ್ತ್ರೀಯರು ನಿಮ್ಮನ್ನು ಮೆಚ್ಚಿಕೊಳ್ಳುವರು. ನಿಮ್ಮ ಲಾಭದ ಉದ್ಯಮದ ಮೇಲೆ ಕೆಟ್ಟ ದೃಷ್ಟಿ ಬೀಳಬಹುದು. ಸಮಾಜಮುಖೀ ಕಾರ್ಯಗಳನ್ನು ನಿರಪೇಕ್ಷೆಯಿಂದ ಮಾಡುವಿರಿ. ಆರೋಗ್ಯವು ಚೆನ್ನಾಗಿ ಇರಲಿದ್ದು ಮಾನಸಿಕವಾದ ನೆಮ್ಮದಿಯು ಇರುವುದು. ತಾಳ್ಮೆ ಕಡಿಮೆ ಆದಂತೆ ತೋರುವುದು. ನಿಮ್ಮ ಗುಣವು ದುರುಪಯೋಗ‌ ಆಗಬಹುದು. ಬಂಧುಗಳ ಸಲಹೆಯನ್ನು ಸ್ವೀಕರಿಸದೇ ಇದ್ದುದಕ್ಕೆ ಅವರು ಬೇಸರವಾಗುವುದು. ದ್ವಿಚಕ್ರ ವಾಹನವನ್ನು ಚಲಾಯಿಸುವಾಗ ಎಚ್ಚರಿಕೆ ಇರಲಿ.

ವೃಶ್ಚಿಕ ರಾಶಿ: ಆರೋಗ್ಯದ ಬಗ್ಗೆ ಕಾಳಜಿ ಮುಖ್ಯವಾಗಿರಲಿ.‌ ಸ್ನೇಹಿತರ ಮಾತಿನಿಂದ ನಿಮಗೆ ನೋವಾಗಬಹುದು. ಹಣಕಾಸಿನ ವಿಚಾರಕ್ಕೆ ತಂದೆಯ ನಡುವೆ ವಾಗ್ವಾದವು ಆಗಬಹುದು. ನೆರ ಮನೆಯವರ ವರ್ತನೆಯಿಂದ ನೀವು ಸಿಟ್ಟಾಗುವಿರಿ. ಅಧ್ಯಾತ್ಮ ಸಾಧನೆಯ ಕಡೆ ನಿಮ್ಮ ಮನಸ್ಸು ಇರಲಿದೆ. ವಾಹನವನ್ನು ಚಲಿಸುವಾಗ ಒತ್ತಡವನ್ನು ಇಟ್ಟುಕೊಳ್ಳುವುದು ಬೇಡ. ಹಿರಿಯರು ಬೇಡ ಎಂದು ಹೇಳಿದ ಕೆಲಸವನ್ನು ಹಠದಿಂದ ಅವರ ಮಾತನ್ನು ವಿರೋಧಿಸಿ ಮಾಡುವಿರಿ. ಚರಾಸ್ತಿಗಳನ್ನು ನಷ್ಟ ಮಾಡಿಕೊಳ್ಳಬೇಕಾಗುವುದು. ನಿಮಗೆ ಯಾರಾದರೂ ದಾನಕ್ಕೆ ಯೋಗ್ಯರಾದವರು ಅನ್ನಿಸಿದವರಿಗೆ ದಾನವನ್ನು ಮಾಡಿ. ಸಾಲವಾಗಿ ನೀಡಿದ ಹಣವನ್ನು ಮತ್ತೆ ಬರುವುದು ಕಷ್ಟವಾದೀತು. ಸಂಗಾತಿಯನ್ನು ನಿರ್ಲಕ್ಷಿಸಿದಂತೆ ತೋರುವುದು. ನಿಮ್ಮಿಂದ ಆಗದ ಕೆಲಸಕ್ಕೆ ಮಾಡಿ ಕೈ ಸುಟ್ಟುಕೊಳ್ಳುವಿರಿ. ಪ್ರೀತಿ ಪಾತ್ರರನ್ನು ನೀವು ಚೆನ್ನಾಗಿ ನೋಡಿಕೊಳ್ಳುವಿರಿ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!