AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಇಂದಿನ ಕೆಲಸದಲ್ಲಿ ಕೆಲವು ತೊಂದರೆಗಳು ಕಾಣಿಸಿಕೊಂಡರೂ, ಅದನ್ನು ಲೆಕ್ಕಿಸದೇ ಮುಂದೆ ಸಾಗುವಿರಿ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಸೆಪ್ಟೆಂಬರ್ 22) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಇಂದಿನ ಕೆಲಸದಲ್ಲಿ ಕೆಲವು ತೊಂದರೆಗಳು ಕಾಣಿಸಿಕೊಂಡರೂ, ಅದನ್ನು ಲೆಕ್ಕಿಸದೇ ಮುಂದೆ ಸಾಗುವಿರಿ
ರಾಶಿ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Sep 22, 2023 | 12:45 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 22 ಶುಕ್ರವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ತುಲಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಪೂರ್ವಾಷಾಢ, ಯೋಗ: ಅತಿಗಂಡ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 28 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:55 ರಿಂದ 12:25 ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:27 ರಿಂದ 04:57 ರವರೆಗೆ, ಗುಳಿಕ ಕಾಲ ಬೆಳಿಗ್ಗೆ 07:55 ರಿಂದ 09:24ರ ವರೆಗೆ.

ಸಿಂಹ ರಾಶಿ : ಸತತ ಪ್ರಯತ್ನದಿಂದ ಆದಾಯ ಹಾಗೂ ಖರ್ಚನ್ನು ಸರಿಯಾಗಿ ತೂಗಿಸಲು ಕಲಿಯುವಿರಿ. ಇಂದಿನ ಕೆಲಸದಲ್ಲಿ ಕೆಲವು ತೊಂದರೆಗಳು ಕಾಣಿಸಿಕೊಂಡರೂ ಅದನ್ನು ಲೆಕ್ಕಿಸದೇ ಮುಂದೆ ಸಾಗುವಿರಿ. ಅಧಿಕಾರಿಗಳಿಗೆ ಒಂದಿಲ್ಲೊಂದು ಒತ್ತಡವು ಬರಬಹುದು. ಗೆಳೆಯರ ಮಾತನ್ನು ಗೌರವಿಸಿದ್ದು ಅವರಿಗೆ ಸಂತೋಷವಾಗಲಿದೆ. ಬಂಧುಗಳು ನಿಮ್ಮ ಹತ್ತಿರ ಆರ್ಥಿಕ ಸಹಾಯವನ್ನು ಕೇಳಿಕೊಂಡು ಬರಬಹುದು. ಬೇಸರ ಮಾಡದೇ ಕಳುಹಿಸಿ ಕೊಡಿ. ಮನಸ್ಸಿನ ಕಿರಿಕಿರಿಯಿಂದ ಕೋಪವು ಬರಬಹುದು. ಸರ್ಕಾರಿ ಕೆಲಸಕ್ಕಾಗಿ ಅರ್ಜಿಯನ್ನು ಹಾಕಿ ಕಾಯುತ್ತ ಕುಳಿತಿರುವಿರಿ. ಸಂಗಾತಿಯ ಕೋಪವನ್ನು ಶಾಂತ ಮಾಡುವಿರಿ. ಇನ್ನೊಬ್ಬರನ್ನು‌ ಅನುಕರಿಸಿ ಹಾಸ್ಯ ಮಾಡುವಿರಿ. ನಿಮಗೆ ಗೊತ್ತಿಲ್ಲದೇ ನಿಮ್ಮ ಬಗ್ಗೆ ಕೆಲವು ಮಾತುಗಳು ಆಪ್ತರು ಆಡಬಹುದು. ಸೋಲನ್ನು ಒಪ್ಪಿಕೊಳ್ಳುವುದು ನಿಮ್ಮ ಸ್ವಭಾವವಾಗಿರದು.

ಕನ್ಯಾ ರಾಶಿ : ಉತ್ತಮ‌ ದಿನದ ನಿರೀಕ್ಷೆಯಿಂದ ನಿಮಗೆ ಬೇಸರವಾಗಬಹುದು. ಇನ್ನೊಬ್ಬರ ಸಂಧಾನಕ್ಕೆ ಮಧ್ಯಸ್ತಿಕೆಯನ್ನು ವಹಿಸುವಿರಿ. ಕಛೇರಿಯ ವ್ಯವಹಾರವು ನಿಮಗೆ ಸರಿ ಕಾಣಿಸದು. ಹೇಳದೇ ಮೌನದಿಂದ ಇರುವಿರಿ. ನೆಮ್ಮದಿಗಾಗಿ ಚಡಪಡಿಸುವಿರಿ. ಒತ್ತಡವು ನಿಮಗೆ ಯಾವ ವ್ಯವಹಾರಕ್ಕೂ ಆಸಕ್ತಿ ಇರದಂತೆ ಮಾಡಿದೆ‌. ಆರ್ಥಿಕ ಉಳಿತಾಯಕ್ಕೆ ಹೆಚ್ಚಿನ ಗಮನ ನೀಡಿ. ಅವಕಾಶಗಳನ್ನು ಸರಿಯಾಗಿ ಬಳಕೆ ಮಾಡಿಕೊಳ್ಳುವಿರಿ. ಬಂಧುಗಳ ಮಾತಿನಿಂದ ಅಸಮಾಧನವು ಇರುವುದು. ಒಬ್ಬರೇ ಹೊರಗೆ ಸುತ್ತಾಟ ಮಾಡಿ ಮನಸ್ಸನ್ನು ಹಗುರ ಮಾಡಿಕೊಳ್ಳುವಿರಿ. ಕೆಟ್ಟ ಅಭ್ಯಾಸದತ್ತ ಮನಸ್ಸು ಹರಿಯುವುದು.

ತುಲಾ ರಾಶಿ : ನಿಮ್ಮ ಆಲೋಚನೆಯನ್ನು ದೀರ್ಘವಾಗಿ ಹರಿದುಬಿಡುವಿರಿ. ಕೆಟ್ಟ ಆಲೋಚನೆಯಿಂದ ದೂರವಿರುವುದು ಸುಖ. ಹಿರಿಯರಿಗೆ ಬಾಯ್ತಪ್ಪಿ ಮಾತನಾಡಿ ಪಶ್ಚಾತ್ತಾಪಪಡುವಿರಿ. ತೀರ್ಥಯಾತ್ರೆಯ ಸಂದರ್ಭವು ಬರಬಹುದು. ಹಣಕಾಸಿನ ಕೊರತೆಯಿಂದ ಯಾವದೋ ಕಾರ್ಯವನ್ನು ಮಾಡುವಿರಿ. ಪರೋಕ್ಷವಾಗಿ ನಿಮ್ಮವರನ್ನು ದ್ವೇಷಿಸುವಿರಿ.‌ ಮಕ್ಕಳ‌ ಮೇಲೆ‌ ನಿಮ್ಮ ಮೋಹವು ಅತಿಯಾಗಿದ್ದು ಅದು ಬಂಧನವೂ ಆಗಬಹುದು. ಅಸಾಮಾನ್ಯ ಕಾರ್ಯವನ್ನು ಮಾಡಲು ಬಹಳ ಉತ್ಸಾಹವಿರುವುದು. ನಿಮ್ಮ ಹಣದ ಅಭಾವವನ್ನು ಯಾರ ಬಳಿಯೂ ಹೇಳಿಕೊಳ್ಳುವುದು ಬೇಡ. ಇಂದು ನಿಮ್ಮ ಮನೆಯ ಕೆಲಸದಲ್ಲಿಯೇ ಹೆಚ್ಚು ಆನಂದಿಸುವಿರಿ. ಆಸ್ತಿಯ ಹಂಚಿಕೆಯು ನಿಮಗೆ ಸಮಾಧಾನ ತರದು.

ವೃಶ್ಚಿಕ ರಾಶಿ : ಇಂದಿನ ನಿಮ್ಮ ಮಾತಿನಿಂದ ದ್ವೇಷವು ಬರಬಹುದು. ಬಹಳ ದಿನಗಳಿಂದ ಉಳಿದಿದ್ದ ಕಾರ್ಯವು ಪೂರ್ಣವಾಗಬಹುದು. ವಿದ್ಯಾದಾನವನ್ನು ಮಾಡಿದವರನ್ನು ಗೌರವಿಸುವಿರಿ. ಭೂಮಿಯ ವ್ಯವಹಾರದಲ್ಲಿ ಮಾತುಕತೆಗಳು ನಡೆಯಲಿದ್ದು ತೀರ್ಮಾನವಾಗದು. ಓಡಾಟದ ಸಮಯದಲ್ಲಿ ನಿಮ್ಮ‌ ವಸ್ತುವು ಕಾಣೆಯಾಗಿದ್ದು ನಿಮಗೆ ಗೊತ್ತಾಗದು. ಅಪರಿಚಿತರು ನಿಮ್ಮಿಂದ ಧನವನ್ನು ಪಡೆಯುವರು. ಮನೆಗೆ ಬಂದ ಅತಿಥಿಯನ್ನು ಸತ್ಕಾರಿಸುವಿರಿ. ವಾಹನದಿಂದ ಬಿದ್ದು ಗಾಯವನ್ನು ಮಾಡಿಕೊಳ್ಳುವ ಸಾಧ್ಯತೆ ಇದೆ. ಸಹೋದರಿಯ ವಿಚಾರದಲ್ಲಿ ನಿಮಗೆ ಅಸಮಾಧಾನವಾಗುವುದು. ಸಂಗಾತಿಯ ಜೊತೆ ದೇಶಾಂತರ ಹೋಗುವಿರಿ. ನಿಮ್ಮವರ ಕೆಲವು ಮಾತಗಳು ಪ್ರಶಾಂತವಾದ ಮನಸ್ಸನ್ನು ಹಾಳುಮಾಡುವುದು.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ