Horoscope: ದಿನಭವಿಷ್ಯ, ಸಕಾಲಕ್ಕೆ ಆರ್ಥಿಕ ನೆರವು, ಸ್ವಲ್ಪ ನೆಮ್ಮದಿ ಸಿಗುವುದು

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಅಕ್ಟೋಬರ್ 23) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ದಿನಭವಿಷ್ಯ, ಸಕಾಲಕ್ಕೆ ಆರ್ಥಿಕ ನೆರವು, ಸ್ವಲ್ಪ ನೆಮ್ಮದಿ ಸಿಗುವುದು
ಪ್ರಾತಿನಿಧಿಕ ಚಿತ್ರImage Credit source: iStock Photo
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Oct 23, 2023 | 12:30 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಅಕ್ಟೋಬರ್ 23 ಸೋಮವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ದಶಮೀ, ನಿತ್ಯನಕ್ಷತ್ರ:ಶ್ರವಣ, ಯೋಗ: ಧೃತಿ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 26 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 07 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:54 ರಿಂದ 09:22ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:49 ರಿಂದ 12:17ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 01:44 ರಿಂದ 03:12ರ ವರೆಗೆ.

ಸಿಂಹ ರಾಶಿ: ಸಹೋದರನ ಕುಟುಂಬದಲ್ಲಿ ನಿಮ್ಮ ಮಧ್ಯಪ್ರವೇಶವು ಆಗಬೇಕಾಗಬಹುದು. ಧಾರ್ಮಿಕ ಕಾರ್ಯದಲ್ಲಿ ನಿಮ್ಮ ತೊಡಗುವಿಕೆ ಹೆಚ್ಚಿರುವುದು. ಶಿಕ್ಷಣಕ್ಷೇತ್ರದಲ್ಲಿ ಯಶಸ್ಸು ಸಿಗುವುದು. ಧಾರ್ಮಿಕ ಮುಖಂಡರಿಗೆ ಅಪವಾದ ಬರುವ ಸಾಧ್ಯತೆ ಇದೆ. ಸಕಾಲಕ್ಕೆ ಆರ್ಥಿಕ ನೆರವು ಸಿಗಲಿದ್ದು ಸ್ವಲ್ಪ ನೆಮ್ಮದಿ ಸಿಗುವುದು. ಸಾಲದ ಕಾರಣಕ್ಕೆ ತಲೆ ಮರೆಸಿಕೊಳ್ಳಬಹುದು. ದಾಂಪತ್ಯ ಜೀವನದಲ್ಲಿ ಕೆಲವು ಅನಿರೀಕ್ಷಿತ ತಿರುವುಗಳು ಬರಲಿದ್ದು ಅದಕ್ಕೆ ಹೊಂದಿಕೊಳ್ಳುವುದು ಅನಿವಾರ್ಯವಾದೀತು. ವೃತ್ತಿಯ ಸ್ಥಳದಲ್ಲಿ ರೋಚಕ ಅನುಭವವು ಇರಲಿದೆ. ಅನ್ನಿಸಿದ್ದನ್ನು ಹೇಳಲು ನಿಮಗೆ ಅವಕಾಶವು ಸಿಗದೇ ಹೋಗಬಹುದು. ಹಿರಿಯರಿಂದ ಆಶೀರ್ವಾದವನ್ನು ಪಡೆದುಕೊಂಡು ಮುಂದುವರಿಯಿರಿ. ಪ್ರೇಮಪ್ರಕರಣವು ಬಿಸಿಯ ತುಪ್ಪದಂತಾಗುವುದು. ಕೃಷಿಯಲ್ಲಿ ಆಸಕ್ತಿಯು ಹೆಚ್ಚಿರುವುದು.

ಕನ್ಯಾ ರಾಶಿ: ನಿಮ್ಮ ಆದಾಯದ ಮೇಲೆ ಸರ್ಕಾರದ ಕಣ್ಣು ಬೀಳಬಹುದು. ಲೆಕ್ಕಪತ್ರಗಳನ್ನು ಸರಿಯಾಗಿ ಇರುವಂತೆ ನೋಡಿಕೊಳ್ಳಿ.‌ ವಕೀಲವೃತ್ತಿಯವರಿಗೆ ಹೆಚ್ಚಿನ ಕಾರ್ಯವು ಬರಲಿದ್ದು ನಿಭಾಯಿಸುವ ಕಲೆಯನ್ನು ಕಲಿತಿರುವಿರಿ. ನಿಮ್ಮ ಪ್ರೀತಿ ಪಾತ್ರರು ನಿಮಗೆ ಉಡುಗೊರೆಯನ್ನು ಕೊಡಬಹುದು. ಸಂಗಾತಿಯ ಪ್ರೀತಿಯಿಂದ ಖುಷಿಯಾಗಲಿದೆ.‌ ಮನಸ್ಸಿನಲ್ಲಿ ಹತಾಶೆ, ಗೊಂದಲಗಳಿಂದ ಏನನ್ನೂ ಮಾಡಲಾಗದ ಸ್ಥಿತಿಯು ಬರಲಿದೆ. ಹೊಸ ವಸ್ತುಗಳ ಖರೀದಿಗೆ ಉತ್ಸಾಹವು ಅಧಿಕವಾಗಿರಲಿದೆ. ಯಾರ ಮಾತನ್ನೂ ಕೇಳುವ ವ್ಯವಧಾನವೂ ನಿಮ್ಮಲ್ಲಿ ಇರದು. ಎಲ್ಲರ ಮಾತಿಗೂ ನಿಮ್ಮ ಕೋಪ ಮಾಡಿಕೊಳ್ಳುವಿರಿ. ನಿಮ್ಮ ಎಲ್ಲ ನಿರ್ಧಾರಗಳೂ ನಿಮಗೇ ನಕಾರಾತ್ಮಕವಾಗಿ ಇರುವಂತೆ ತೋರುವುದು. ನಿಮ್ಮದಲ್ಲದ ಕೆಲಸಕ್ಕೂ ನೀವೇ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕಾಗುವುದು. ಸುಮ್ಮನೇ ಕುಳಿತರೇ ಹತ್ತಾರು ಆಲೋಚನೆಗಳಿಂದ ನಿಮ್ಮ ಮನಸ್ಸು ದುರ್ಬಲವಾಗುವುದು.‌

ತುಲಾ ರಾಶಿ: ತಂದೆಯ ಆಸೆಯನ್ನು ಪೂರ್ಣ ಮಾಡಿ, ಅವರಿಗೆ ಖುಷಿಯನ್ನು ಕೊಡುವಿರಿ. ಮಂದಗತಿಯಲ್ಲಿ ಸಾಗುವ ನಿಮ್ಮ ಕೆಲಸದಿಂದ ಸಹೋದ್ಯೋಗಿಗಳು ಆಡಿಕೊಳ್ಳುವರು. ಬಂಧುಗಳ ಆಶ್ರಯದಲ್ಲಿ ಇಂದು ನೀವು ಇರಬೇಕಾದೀತು. ಸಂಗಾತಿಗೆ ನೀವು ಉತ್ತಮ ಕೆಲಸವು ಕೊಡಿಸುವಿರಿ. ಕಛೇರಿಯಲ್ಲಿ ನಿಮ್ಮ ಕಾರ್ಯವನ್ನು ಪ್ರಶಂಸಿಸಬಹುದು. ಕೆಟ್ಟ ಆಲೋಚನೆಗಳು ಬಂದರೂ ಅದನ್ನು ದೂರ ಮಾಡಿಕೊಳ್ಳುವ ತಂತ್ರವನ್ನು ತಿಳಿಯಿರಿ. ಹೂಡಿಕೆಯ ವಿಚಾರದಲ್ಲಿ ಯಾರಾದರೂ ಒತ್ತಾಯ ಮಾಡಬಹುದು. ದೂರದಲ್ಲಿ ಉದ್ಯೋಗ ಮಾಡುತ್ತಿರುವವರಿಗೆ ಮನೆಯ ನೆನಪಾಗಬಹುದು. ಆಲಂಕಾರಿಕ ಉದ್ಯಮವನ್ನು ಮಾಡಿದರೆ ಆದಾಯ ಸಿಗಲಿದೆ. ಮನೆಯ ಕೆಲಸವು ಮುಗಿಯದಷ್ಟು ಇರಲಿದ್ದು ಚಿಂತೆಯಾಗುವುದು. ವಾಸ್ತವದಲ್ಲಿ ಜೀವಿಸುವುದನ್ನು ಕಲಿಯುವಿರಿ.

ವೃಶ್ಚಿಕ ರಾಶಿ: ರಕ್ಷಣೆಯ ಹೊಣೆಹೊತ್ತವರಿಗೆ ತುರ್ತು ಕಾರ್ಯಗಳು ಬರಲಿದ್ದು, ಅನಿವಾರ್ಯವಾಗಬಹುದು. ಪ್ರವಾಸದಲ್ಲಿ ಇರುವವರಿಗೆ ಆಹಾರದ ವ್ಯತ್ಯಾಸದಿಂದ ಕಷ್ಟವಾಗುವುದು. ಸಂಶೋಧನೆಯ ವಿದ್ಯಾರ್ಥಿಗಳು ಉತ್ಸಾಹದಿಂದ ಕಾರ್ಯದಲ್ಲಿ ಪ್ರವೃತ್ತರಾಗುವರು. ಸ್ಪರ್ಧೆಯಲ್ಲಿ ಭಾಗವಹಿಸಿದವರಿಗೆ ಯಶಸ್ಸು ಸಿಗುವುದು. ಎಲ್ಲ ಸಂದರ್ಭದಲ್ಲಿಯೂ ನಿಮ್ಮ ಮಾತು ನಡೆಯುತ್ತದೆ ಎನ್ನುವ ಕಲ್ಪನೆ ಬೇಡ. ಆರೋಗ್ಯವನ್ನು ಹೆಚ್ಚಿಸಿಕೊಳ್ಳಲು ಬೇಕಾದ ಕ್ರಮಗಳನ್ನು ಮಾಡಿಕೊಳ್ಳಿ. ವೃತ್ತಿಯ ಕೆಲಸಗಳ ನಡುವೆ ಮನೆಯ ಕೆಲಸವೂ ನಿಮಗೆ ಕಷ್ಟವಾದೀತು‌. ಪರಿಶ್ರಮವಿಲ್ಲದೇ ಆದಾಯವು ಸಿಗಲಿ ಎನ್ನುವ ಮನೋಭಾವ ಇರಲಿದೆ. ಮೇಲಧಿಕಾರಿಗಳ ಹೊಸ ಯೋಜನೆಯನ್ನು ನಿರ್ವಹಿಸಲು ನಿಮ್ಮ ತಲೆಗೆ ಬರುವುದು. ಸ್ತ್ರೀಯರ ಒಡನಾಟ ಅತಿಯಾಗುವುದು ಬೇಡ. ನೌಕರರ ನೇರ ನುಡಿಗಳನ್ನು ನೀವು ಸಹಿಸಲಾರಿರಿ.

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ