AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಾಂಪತ್ಯದ ಒಳ ಜಗಳವು ಕುಟುಂಬಕ್ಕೆ ಗೊತ್ತಾಗಲಿದೆ, ಕೆಟ್ಟ ವಿಚಾರಗಳಿಂದ ದೂರವಿರುವುದು ಉತ್ತಮ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಸೆಪ್ಟೆಂಬರ್ 23) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ದಾಂಪತ್ಯದ ಒಳ ಜಗಳವು ಕುಟುಂಬಕ್ಕೆ ಗೊತ್ತಾಗಲಿದೆ, ಕೆಟ್ಟ ವಿಚಾರಗಳಿಂದ ದೂರವಿರುವುದು ಉತ್ತಮ
ರಾಶಿಭವಿಷ್ಯ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Sep 23, 2023 | 12:15 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 23 ಶನಿವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಅಷ್ಟಮೀ, ನಿತ್ಯನಕ್ಷತ್ರ:ಮೂಲಾ, ಯೋಗ:ಸೌಭಾಗ್ಯ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 27 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:24 ರಿಂದ 10:54 ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:56 ರಿಂದ 03:26 ರವರೆಗೆ, ಗುಳಿಕ ಕಾಲ ಸಂಜೆ 06:23 ರಿಂದ 07:53ರ ವರೆಗೆ.

ಸಿಂಹ ರಾಶಿ: ದಾಂಪತ್ಯದ ಒಳ ಜಗಳವು ಕುಟುಂಬಕ್ಕೆ ಗೊತ್ತಾಗಲಿದೆ. ದುರಭ್ಯಾಸವನ್ನು ರೂಢಿಸಿಕೊಳ್ಳುವಿರಿ. ಇನ್ನೊಬ್ಬರ ಸ್ವತ್ತನ್ನು ಅಪೇಕ್ಷಿಸುವುದು ಬೇಡ. ಮೋಹದಿಂದ ಹೊರಬರುವುದು ಕಷ್ಟವಾದೀತು. ನಿಮ್ಮ ಶತ್ರುಗಳು ಬಲಗೊಳ್ಳುವ ಸಾಧ್ಯತೆ ಇದೆ. ಚರಾಸ್ತಿಯ ಸಲುವಾಗಿ ಕಾನೂನು ಹೋರಾಟ ಮಾಡಬೇಕಾದೀತು. ನಿಮ್ಮ ದುರ್ಬಲ್ಯವು ಇನ್ನೊಬ್ಬರಿಗೆ ಆಹಾರವಾಗಬಹುದು. ನೇರವಾದ ಮಾತಿನಿಂದ ತೊಂದರೆಯಾಗಬಹುದು. ಸಹನೆಯನ್ನು ನೀವು ಪ್ರಯತ್ನದಿಂದ ಬೆಳೆಸಿಕೊಳ್ಳಬೇಕಾದೀತು. ದೇಹಕ್ಕೆ ಬಲವಾದ ಪೆಟ್ಟು ಬೀಳಬಹುದು. ಅಪರಿಚಿತರ ಜೊತೆ ಮಾತನಾಡಲು ಮುಜುಗರಪಟ್ಟುಕೊಳ್ಳಬಹುದು. ಆರಾಮದಿಂದ ದಿನ ಕಳೆಯಬೇಕು ಎಂದು ಅನ್ನಿಸಬಹುದು. ಸಮೀಪದ ದೇವಾಲಯಕ್ಕೆ ಹೋಗಿ ಮನಸ್ಸಿಗೆ ಶಾಂತಿಯನ್ನು ಪಡೆಯುವಿರಿ.

ಕನ್ಯಾ ರಾಶಿ: ತರಬೇತುದಾರರಿಗೆ ಹೆಚ್ಚಿನ ಮನ್ನಣೆಯು ಬರಲಿದೆ. ನಿಮ್ಮ ಲಾಭವನ್ನು ಹೆಚ್ಚು ಮಾಡಿಕೊಳ್ಳುವಿರಿ. ಸಂತೋಷದ ಸಮಯವನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳುವಿರಿ. ಕಾಲಹರಣ ಮಾಡಲು ಅನವಶ್ಯಕ ಮಾತುಗಳನ್ನು ಆಡುವಿರಿ. ಆಲಸ್ಯ ಮನೋಭಾವವನ್ನು ಕಡಿಮೆ ಮಾಡಿಕೊಳ್ಳಿ. ಮಿತ್ರರಿಗೆ ಸಹಾಯ ಮಾಡಿ ನೀವು ತೊಂದರೆಯಲ್ಲಿ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ಆಕಸ್ಮಿಕ ಧನಲಾಭವು ನಿಮಗೆ ಸ್ವಲ್ಪ ಸಮಾಧಾನ ತರಬಹುದು. ಉದ್ಯೋಗದಲ್ಲಿ ಅವಘಡವು ಸಂಭವಿಸುವ ಸಾಧ್ಯತೆ ಇದೆ. ಎಲ್ಲರಿಗೂ ಆಕರ್ಷಕವಾಗಿ ನೀವು ಕಾಣುವಿರಿ. ಯಾರು ಏನೇ ಅಂದರೂ ನಿಮ್ಮ ನಿರ್ಧಾರವನ್ನು ಬದಲಿಸಲು ನೀವು ಒಪ್ಪುವುದಿಲ್ಲ. ವಿದ್ಯಾರ್ಥಿಗಳಿಗೆ ಪಾಲಕರು ಭವಿಷ್ಯದ ಬಗ್ಗೆ ಕಿವಿ ಮಾತನ್ನು ಹೇಳುವರು. ಕುಲದೇವರ ಸ್ತುತಿಯನ್ನು ಮಾಡಿ.

ತುಲಾ ರಾಶಿ: ಆರೋಗ್ಯದ ಸಮತೋಲನವನ್ನು ಇಟ್ಟುಕೊಳ್ಳುವುದು ಮುಖ್ಯವಾಗುವುದು. ಹಿತಶತ್ರುಗಳಿಂದ ಹಲವು ತೊಂದರೆಗಳು ಬರಬಹುದು. ಹೊಗಳಿಕೆಯನ್ನು ಬಹಳ ಸಂಕೋಚದಿಂದ ಪಡೆಯುವಿರಿ. ಬಂಧುಗಳು ಮನಸ್ಸಿಗೆ ನೋವಾಗುವ ಮಾತುಗಳನ್ನು ಆಡಿದರೂ ಅದನ್ನು ಮನಸ್ಸಿನಲ್ಲಿ ಇರಿಸಿಕೊಳ್ಳುವುದಿಲ್ಲ. ಪ್ರೀತಿಯ ವಿಚಾರದಲ್ಲಿ ಬುದ್ಧಿವಾದವನ್ನು ಹೇಳುವರು. ಸರಳವಾಗಿರಲು ಇರುವುದು ನಿಮಗೆ ಕಷ್ಟವಾದೀತು. ಇನ್ನೊಬ್ಬರ ಜೊತೆ ಮಾತನಾಡುವಾಗ ಹೆದರಿಕೆ ಇರುವುದು. ನೆಮ್ಮದಿಯನ್ನು ಏಕಾಂತದಲ್ಲಿ ಪಡೆದುಕೊಳ್ಳುವಿರಿ. ಪತ್ನಿಯ ಮಾತಿನಂತೆ ನಡೆಯುವುದು ಕಷ್ಟವಾಗಿ ಸಿಡುಕು ಮಾತುಗಳು ಬರಬಹುದು. ಸಹಾಯವನ್ನು ಕೇಳಿ ಬಂದರೆ ನಿರ್ಲಕ್ಷಿಸಬೇಡಿ.

ವೃಶ್ಚಿಕ ರಾಶಿ: ಮನೆಯ ಮಂಗಲ ಕಾರ್ಯದಲ್ಲಿ ಭಾಗಿಯಾಗುವಿರಿ. ರಹಸ್ಯವನ್ನು ಭೇದಿಸುವ ಕುತೂಹಲ ಇರಲಿದೆ. ಗಣ್ಯರ ಜೊತೆ ಮಾತುಕತೆ ನಡೆಸುವಿರಿ. ದೂರವಾಣಿಯ ಕರೆಯಿಂದ ನಿಮಗೆ ಆತಂಕ ಎದುರಾಗಬಹುದು. ಕುಟುಂಬದ ಕಾರ್ಯದಿಂದ ಆಯಾಸವು ಬರಲಿದೆ. ಸಂಗಾತಿಯ ಬಗ್ಗೆ ಆರೋಗ್ಯದ ಕಾಳಜಿ ತೋರಿಸುವಿರಿ. ನೀವು ಇಷ್ಟಪಟ್ಟಿದ್ದನ್ನು ಕಳೆದುಕೊಳ್ಳುವ ಸಂದರ್ಭವು ಬರಬಹುದು. ಪತ್ನಿಯ ಕಡೆಯವರಿಂದ ಅಹಿತಕರವಾದ ಮಾತುಗಳು ಕೇಳಿಬರಬಹುದು. ಭವಿಷ್ಯಕ್ಕಾಗಿ ಹಣವನ್ನು ಯಾರಿಗೂ ಹೇಳದೇ ಗೌಪ್ಯವಾಗಿ ಇಡುವಿರಿ. ಇನ್ನೊಬ್ಬರ ಬಗ್ಗೆ ಗೊತ್ತಿಲ್ಲದೇ ಮಾತಡುವುದು ಸರಿಯಾಗದು. ಉನ್ನತ ಸ್ಥಾನಮಾನವನ್ನು ಪಡೆಯಲು ಬಹಳ ಉತ್ಸಾಹವಿರಲಿದೆ. ಕಾಲವನ್ನು ವ್ಯರ್ಥ ಮಾಡಲು ಮನಸ್ಸು ಇಲ್ಲದಿದ್ದರೂ ಅನಿವಾರ್ಯವಾದೀತು. ಗುರುಚರಿತ್ರೆಯ ಪಠಣವನ್ನು ಮಾಡಿ.

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ