Horoscope: ದಿನಭವಿಷ್ಯ, ಈ ರಾಶಿಯವರಿಗೆ ನಿಮ್ಮ ಬಂಧುಗಳ ಕಡೆಯಿಂದ ವಿವಾಹವು ಏರ್ಪಡಬಹುದು
ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಆಗಸ್ಟ್ 24) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.
ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಆಗಸ್ಟ್ 24) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ನಿಜ ಶ್ರಾವಣ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಅನೂರಾಧಾ, ಯೋಗ: ಐಂದ್ರ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 20 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 49 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:08 ರಿಂದ 03:42ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:21 ರಿಂದ 07:54ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:28 ರಿಂದ 11:01ರ ವರೆಗೆ.
ಸಿಂಹ ರಾಶಿ : ಇಂದಿನ ಎಲ್ಲ ಕಾರ್ಯವನ್ನೂ ಒತ್ತಡದಿಂದಲೇ ಮಾಡಬೇಕಾದೀತು. ಶರೀರಪೀಡಿಯು ಹೆಚ್ಚಾಗಲಿದ್ದು ಕಛೇರಿಗೆ ಹೋಗುವವರು ವಿರಾಮವನ್ನು ತೆಗೆದುಕೊಳ್ಳುವುದು ಉತ್ತಮ. ವೈದ್ಯರಿಂದ ಸರಿಯಾದ ಮಾಹಿತಿಯನ್ನು ಪಡೆಯಿರಿ. ನಿಮ್ಮ ಬಯಕೆಗಳನ್ನು ಯಾರ ಬಳಿಯೂ ಪ್ರಕಟಪಡಿಸುವುದಿಲ್ಲ. ಯಾರನ್ನೋ ದ್ವೇಷ ಮಾಡುವುದು ಸರಿ ಕಾಣದು. ಸ್ಪರ್ಧಾತ್ಮಕ ಪರೀಕ್ಷೆಗೆ ಇನ್ನೂ ಹೆಚ್ಚಿನ ಶ್ರಮವು ಬೇಕಾಗುತ್ತದೆ. ಎಂದೋ ಕಾಣೆಯಾದ ವಸ್ತುವನ್ನು ಇಂದು ನೀವು ಹುಡುಕುವಿರಿ. ತಂದೆಯ ಪ್ರೀತಿಯು ನಿಮಗೆ ಸಿಗಲಿದೆ.
ಕನ್ಯಾ ರಾಶಿ : ಸ್ವಲ್ಪಮಟ್ಟಿಗೆ ಸಾಲವು ಮುಕ್ತಾಯವಾಗಿದ್ದರಿಂದ ಕುಟುಂಬದಲ್ಲಿ ಸೌಖ್ಯವು ಇರಲಿದೆ. ಎಲ್ಲ ಕೆಲಸಗಳೂ ಅಪೂರ್ಣವಾಗಿರುವುದು ನಿಮಗೆ ಕಿರಿಕಿರಿ ಆಗಲಿದೆ. ಯಾವುದನ್ನು ಮುಗಿಸಬೇಕು ಎನ್ನುವ ಗೊಂದಲವೂ ಇರುವುದು. ಮಾನಸಿಕ ಒತ್ತಡದಿಂದ ತಾಳ್ಮೆಯನ್ನು ಕಳೆದುಕೊಳ್ಳುವುದು ಬೇಡ. ಇಷ್ಟು ದಿನ ಮನೆಯಿಂದಲೇ ಕೆಲಸ ಮಾಡುತ್ತಿದ್ದ ನಿಮಗೆ ಇಂದು ಕಛೇರಿಗೆ ಕರೆಯುವರು. ನಿಮ್ಮ ತುರ್ತು ಕಾರ್ಯಗಳನ್ನು ನೀವು ಬಿಡಬೇಕಾದೀತು. ಹಿರಿಯರ ಮಾತುಗಳೂ ನಿಮಗೆ ಸಿಟ್ಟು ತರಿಸಬಹುದು. ಯಾವ ಕಾರ್ಯಕ್ಕೂ ಉತ್ಸಾಹವೇ ಇಲ್ಲವಾಗುವುದು. ಮಹಾವಿಷ್ಣುವಿನ ಆರಾಧನೆಯು ಅವಶ್ಯವಾಗಿ ಮಾಡಬೇಕಾಗುವುದು.
ತುಲಾ ರಾಶಿ : ಸುಲಭ ಮಾರ್ಗದಲ್ಲಿ ಆದಾಯವನ್ನು ಪಡೆಯುವ ಯೋಜನೆಯು ಯಶಸ್ವಿಯಾಗದು. ಸರ್ಕಾರಿ ಕೆಲಸಗಳು ಒತ್ತಡದಿಂದಾಗಿ ಮುಂದುವರಿಯುವುದು. ನೀವು ಮೌನದಿಂದ ಇದ್ದಷ್ಟು ಎಲ್ಲದಕ್ಕೂ ಒಪ್ಪಿಗೆ ಸೂಚಿಸಿದ್ದೀರಿ ಎಂದಾಗುವುದು. ಸಮಯಕ್ಕೆ ಬೆಲೆ ಕೊಟ್ಟು ಎಲ್ಲವನ್ನೂ ಸಕಾಲಕ್ಕೆ ಮುಗಿಸುವಿರಿ. ದೇವರ ದರ್ಶನಕ್ಕೆ ನೀವು ಇಂದು ಬಿಡುವುಮಾಡಿಕೊಂಡು ಹೋಗುವಿರಿ. ಆಪ್ತರನ್ನು ದೂರ ಮಾಡಿಕೊಳ್ಳಬೇಕಾದೀತು. ನಿಮ್ಮ ಸಾಧನೆಗೆ ಗೌರವವು ಸಿಗಲಿದೆ. ಆಲಸ್ಯದಿಂದ ನೀವು ಹೊರಬೇಕಡದೀತು. ವಾಹನಕ್ಕೆ ಸಂಬಂಧಿಸಿದ ವಿಚಾರದಲ್ಲಿ ಜಾಗರೂಕತೆ ಇರಲಿ. ಒಂದು ತೀರ್ಮಾನಕ್ಕೆ ಬರಲು ಹತ್ತು ಬಾರಿ ಯೋಚಿಸಿ.
ವೃಶ್ಚಿಕ ರಾಶಿ : ನಿಮ್ಮ ಸಾಮರ್ಥ್ಯಕ್ಕೆ ನಿಮಗೆ ಕೊಟ್ಟ ಜವಾಬ್ದಾರಿಯು ಚಿಕ್ಕದು ಎನಿಸಬಹುದು. ನಿಮ್ಮ ಬಂಧುಗಳ ಕಡೆಯಿಂದ ವಿವಾಹವು ಏರ್ಪಡಬಹುದು. ಪರಿಶ್ರಮಕ್ಕೆ ತಕ್ಕ ಫಲವನ್ನೂ ನೀವು ಅಪೇಕ್ಷಿಸುವಿರಿ. ನೀವು ಮಾಡುವ ಕಾರ್ಯದಲ್ಲಿ ಗೊಂದಲವಿದ್ದರೆ ಯಾರನ್ನಾದರೂ ಕೇಳಿ. ಮುಂದೂಡುತ್ತ ಕುಳಿತರೆ ಇನ್ನಷ್ಟು ಗೊಂದಲಗಳು ಹೆಚ್ಚಾದೀತು. ಸಂಗಾತಿಯ ವಿಷಯಕ್ಕೆ ನಿಮಗೆ ಬೇಸರವಾಗುವುದು. ನಿಮಗೆ ಬೇಕಾಗಿರುವ ಸಂಪತ್ತನ್ನು ಸ್ನೇಹಿತರಿಂದ ಸಾಲವಾಗಿ ಪಡೆಯುವಿರಿ. ದುರಭ್ಯಾಸಗಳು ಸಹವಾಸದಿಂದ ಬರಬಹುದು. ಮನೆಗೆ ಇಂದು ವಿಳಂಬವಾಗಿ ಹೋಗುವಿರಿ. ಮನೋರಂಜನೆಗೆ ಹಣವನ್ನು ಖರ್ಚು ಮಾಡುವಿರಿ. ಬೆನ್ನು ನೋವು ನಿಮ್ಮನ್ನು ಬಾಧಿಸೀತು.