Horoscope: ಈ ರಾಶಿಯವರ ಇಷ್ಟದ ಕಾರ್ಯವು ಸಿದ್ಧಿಯಾಗಿ ಉತ್ಸಾಹವು ಹೆಚ್ಚಾಗುವುದು
ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಅಕ್ಟೋಬರ್ 24) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.
ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಅಕ್ಟೋಬರ್ 24 ಮಂಗಳವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ಶೂಲ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 26 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 06 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:12 ರಿಂದ 04:39ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:22 ರಿಂದ 10:49ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:17 ರಿಂದ 01:44ರ ವರೆಗೆ.
ಸಿಂಹ ರಾಶಿ: ನಂಬಿಕೆಯಲ್ಲಿ ದ್ರೋಹವಾಗಿದ್ದು ಯಾರನ್ನು ನಂಬಬೇಕು ಎನ್ನುವ ಗೊಂದಲ, ಹತಾಶೆಗಳು ಕಾಣಿಸುವುದು. ಎಲ್ಲವೂ ಆಗಿಹೋದಂತೆ ನಿಮಗೆ ಅನ್ನಿಸಬಹುದು. ವಸತಿಯಲ್ಲಿ ತೊಂದರೆ ಬಂದ ಕಾರಣ ಬದಲಾಯಿಸುವ ಸಂದರ್ಭವೂ ಬರಬಹುದು. ಸಂತಾನದ ವಿಚಾರದಲ್ಲಿ ಅಶಾಂತಿ ಮೂಡಬಹುದು. ಮೇಲಧಿಕಾರಿಗಳು ನಿಮ್ಮ ಮೇಲೆ ಒತ್ತಡ ತಂದು ಕೆಲಸವನ್ನು ಮಾಡಿಸಿಕೊಳ್ಳುವರು. ಅನಾರೋಗ್ಯವನ್ನೂ ನೀವು ಲೆಕ್ಕಿಸದೇ ಕಾರ್ಯದಲ್ಲಿ ಪ್ರವೃತ್ತರಾಗುವಿರಿ. ನಿಮ್ಮ ಬಯಕೆಗಳನ್ನು ಯಾರ ಬಳಿಯೂ ಪ್ರಕಟಪಡಿಸುವುದಿಲ್ಲ. ಮನಸ್ಸಿನಲ್ಲಿಯೇ ಮಂಡಿಗೆ ತಿನ್ನುವಿರಿ. ಸಣ್ಣ ವಿಚಾರಕ್ಕೆ ಯಾರನ್ನೋ ದ್ವೇಷ ಮಾಡುವುದು ಸರಿಯಲ್ಲ. ಸ್ಪರ್ಧಾತ್ಮಕ ಪರೀಕ್ಷೆಗೆ ಇನ್ನೂ ಹೆಚ್ಚಿನ ಶ್ರಮವು ಬೇಕು. ಎಂದೋ ಕಾಣೆಯಾದ ವಸ್ತುವು ಅನಿರೀಕ್ಷಿತವಾಗಿ ಸಿಗುವುದು. ತಂದೆಯ ಪ್ರೀತಿಯು ಸಿಗುವುದು.
ಕನ್ಯಾ ರಾಶಿ: ಇಂದು ಹಿರಿಯರಿಂದ ಕೆಲವು ಹಿತೋಪದೇಶವನ್ನು ಕೇಳಬೇಕಾದೀತು. ವ್ಯಾಪಾರದ ಸ್ಥಳದಲ್ಲಿ ಇಕ್ಕಟ್ಟು ಉಂಟಾಗಬಹುದು. ತಾಳ್ಮೆಯನ್ನು ಕಳೆದುಕೊಳ್ಳುವುದು ಬೇಡ. ರಾಜಕೀಯ ಏರಿಳಿತವನ್ನು ನೀವು ಊಹಿಸುವುದು ಕಷ್ಟವಾದೀತು. ಸಾಲದಿಂದ ಬಿಡುಗಡೆ ಸಿಕ್ಕ ಕಾರಣ ಕುಟುಂಬದಲ್ಲಿ ಸೌಖ್ಯವಿರುವುದು. ಎಲ್ಲ ಕೆಲಸಗಳೂ ಅಪೂರ್ಣವಾಗಿದ್ದು ನಿಮಗೆ ಅಸಮಾಧನ ಇರುವುದು. ಕಾರ್ಯದ ಒತ್ತಡದಿಂದ ತಾಳ್ಮೆಯನ್ನು ಕಳೆದುಕೊಳ್ಳಬೇಕಾಗುವುದು. ಇಷ್ಟು ದಿನ ಮನೆಯಿಂದಲೇ ಕೆಲಸ ಮಾಡುತ್ತಿದ್ದರೆ ಇಂದು ಕಛೇರಿಗೆ ಕರೆಯುವರು. ಇಂದಿನ ನಿಮ್ಮ ತುರ್ತು ಕಾರ್ಯಗಳನ್ನು ನೀವು ಬಿಡಬೇಕಾದೀತು. ಯಾವ ಕಾರ್ಯಕ್ಕೂ ಉತ್ಸಾಹವೇ ಇಲ್ಲದಂತಾದೀತು. ಯಾರಿಂದಲಾದರೂ ಪ್ರಚೋದನೆ ಸಿಕ್ಕೀತು.
ತುಲಾ ರಾಶಿ: ಪಾಲುದಾರಿಕೆಯ ಭೂ ಸಂಬಂಧದ ಕಾರ್ಯದಿಂದ ಲಾಭವಾಗಲಿದೆ. ದಾಂಪತ್ಯವು ಪರಸ್ಪರ ಸೌಹಾರ್ದದ ಮಾತುಗಳಿಂದ ನೆಮ್ಮದಿ ಸಿಗುವುದು. ಮಕ್ಕಳ ವಿಚಾರವಾಗಿ ಅನವಶ್ಯಕ ಖರ್ಚು ಮಾಡುವುದು ಬೇಡ. ಅವಶ್ಯಕತೆಯನ್ನು ನೋಡಿ. ಅನಿಶ್ಚಿತ ಕೆಲಸದಲ್ಲಿ ಆದಾಯವನ್ನು ಹೆಚ್ಚು ಪಡೆಯುವಿರಿ. ಸರ್ಕಾರಿ ಕೆಲಸಗಳು ಒತ್ತಡದ ಕಾರಣಕ್ಕೆ ಮುಂದುವರಿಯುವುದು. ನೀವು ಮೌನದಿಂದ ಇದ್ದರೆ ಒಪ್ಪಿಗೆ ಕೊಟ್ಟಿದ್ದೀರಿ ಎಂದಾಗುವುದು. ಸಮಯಕ್ಕೆ ಬೆಲೆ ಕೊಟ್ಟು ಎಲ್ಲವನ್ನೂ ಸಕಾಲಕ್ಕೆ ಮುಗಿಸುವುದು ಉತ್ತಮ. ದೇವರ ದರ್ಶನಕ್ಕೆ ನೀವು ಇಂದು ಬಿಡುವು ಮಾಡಿಕೊಂಡು ಹೋಗುವಿರಿ. ಆಪ್ತರನ್ನು ದೂರ ಮಾಡಿಕೊಳ್ಳಬೇಕಾಗುವುದು. ಒಂಟಿಯಾಗಿ ವಾಹನವನ್ನು ಚಲಾಯಿಸುವುದು ಬೇಡ. ಯಾವ ತೀರ್ಮಾನಕ್ಕೆ ಬರಲು ಮೊದಲು ಹತ್ತು ಬಾರಿ ಯೋಚಿಸಿ.
ವೃಶ್ಚಿಕ ರಾಶಿ: ಇಷ್ಟದ ಕಾರ್ಯವು ಸಿದ್ಧಿಯಾಗಿ ನಿಮಗೆ ಉತ್ಸಾಹವು ಹೆಚ್ಚಾಗುವುದು. ನಿಮ್ಮ ಕೆಲವು ವರ್ತನೆಯನ್ನು ಮಿತ್ರರು ವಿರೋಧಿಸುವರು. ಅಮೂಲ್ಯ ವಸ್ತುಗಳನ್ನು ಖರೀದಿಸುವುದು ಕಷ್ಟವಾದರೂ ಮಾಡುವಿರಿ. ಕಛೇರಿಯಲ್ಲಿ ನಾನಾ ಕಡೆಗಳಿಂದ ಒತ್ತಡ ಬರಬಹುದು. ನಿಮ್ಮ ಸಾಮರ್ಥ್ಯಕ್ಕೆ ಕೊಟ್ಟ ಜವಾಬ್ದಾರಿಯು ಸಣ್ಣದಾಗಿರುವುದು. ನಿಮ್ಮ ಬಂಧುಗಳ ಸಹಾಯದಿಂದ ವಿವಾಹದ ಮಾತುಕತೆಯು ಘಟಿಸುವುದು. ಪರಿಶ್ರಮಕ್ಕೆ ತಕ್ಕ ಫಲವನ್ನೂ ನೀವು ಅಪೇಕ್ಷಿಸಿ ಪಡೆದುಕೊಳ್ಳುವಿರಿ. ನೀವು ಮಾಡುವ ವೃತ್ತಿಯಲ್ಲಿ ಗೊಂದಲವಿದ್ದರೆ ಅನುಭವಗಳನ್ನು ಕೇಳಿ ಮಂದುವರೆಯಿರಿ. ಸಂಗಾತಿಯ ಕೆಲವು ಮಾತುಗಳಿಂದ ನಿಮಗೆ ಬೇಸರವಾಗುವುದು. ಅಗತ್ಯವಿರುವ ಸಂಪತ್ತನ್ನು ಸ್ನೇಹಿತರಿಂದ ಸಾಲವಾಗಿ ಪಡೆಯುವಿರಿ. ದುರಭ್ಯಾಸವನ್ನು ಬೆಳೆಸಿಕೊಳ್ಳುವುದು ಬೇಡ. ಮನೋರಂಜನೆಗೆ ಹಣವು ಖರ್ಚಾಗುವುದು. ಬೆನ್ನು ನೋವಿಗೆ ಸರಿಯಾದ ಔಷಧವನ್ನು ಮಾಡಿ.