AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ, ಈ ರಾಶಿಯವರು ಕಲ್ಪನಾಲೋಕದಿಂದ ಹೊರಬಂದು ವಾಸ್ತವದಲ್ಲಿ ಇರಿ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ನವೆಂಬರ್​ 25) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ದಿನಭವಿಷ್ಯ, ಈ ರಾಶಿಯವರು ಕಲ್ಪನಾಲೋಕದಿಂದ ಹೊರಬಂದು ವಾಸ್ತವದಲ್ಲಿ ಇರಿ
ರಾಶಿಭವಿಷ್ಯImage Credit source: iStock Photo
TV9 Web
| Updated By: Rakesh Nayak Manchi|

Updated on: Nov 25, 2023 | 12:30 AM

Share

ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್​ 25) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಕಾರ್ತಿಕ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಅಶ್ವಿನೀ, ಯೋಗ: ವರಿಯಾನ್, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 39 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:29 ರಿಂದ 10:54ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:45 ರಿಂದ 03:10ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:39 ರಿಂದ 08:04ರ ವರೆಗೆ.

ಸಿಂಹ ರಾಶಿ: ಕೈಯ್ಯಲ್ಲಿ ಹಣವಿಲ್ಲದೇ ಯಾರನ್ನಾದರೂ ಕೇಳಬೇಕಾದೀತು. ಯಾರಿಂದಲಾದರೂ ಮಾನಸಿಕವಾಗಿ ಕಿರುಕುಳ ಉಂಟಾಗಬಹುದು. ಅದನ್ನು ಕಡಿಮೆ ಮಾಡಿಕೊಳ್ಳಲು ಅಗತ್ಯ ವಿಧಾನವನ್ನು ರೂಪಿಸಿಕೊಳ್ಳುವಿರಿ. ದೇಹಕ್ಕೆ ಯೋಗ್ಯವಲ್ಲದ ಆಹಾರದ ಸ್ವೀಕಾರದಿಂದ ನಿಮಗೆ ತೊಂದರೆಯಾದೀತು. ಸಹೋದರಿಯ ಜೊತೆ ಮನೆಗೆ ಸಂಬಂಧಿಸಿದಂತೆ ಮಾತಾಗಬಹುದು. ವಿಶ್ವಾಸವನ್ನು ಗಳಿಸುವ ಪ್ರಯತ್ನವು ಸಾಧ್ಯವಾಗಬಹುದು. ನಿಮ್ಮ ಅಸಹಜ ವರ್ತನೆಯಿಂದ ಸಂಗಾತಿಗೆ ಸಿಟ್ಟು ಬರಬಹುದು. ನಿಮ್ಮ‌ ದುರಭ್ಯಾಸವು ಗೊತ್ತಾದೀತು. ನಿಮ್ಮ ಪ್ರೀತಿಯನ್ನು ಹಂಚಿಕೊಳ್ಳಲು ಕಾಯುತ್ತಿರುವಿರಿ. ನಿಮ್ಮ ನಕಾರಾತ್ಮಕ ವರ್ತನೆಯ ಬಗ್ಗೆ ಯಾರಾದರೂ ಹೇಳಿಯಾರು. ಮನೋರಂಜನೆ ಕಾರ್ಯದಲ್ಲಿ ನೀವು ಮಗ್ನರಾಗಿರುವಿರಿ. ಕೆಲವು ವಿಚಾರಗಳನ್ನು ಬೇಕೆಂದೇ ನಿರ್ಲಕ್ಷ್ಯಿಸಿ ಅವಕಾಶದಿಂದ ವಂಚಿತರಾಗುವಿರಿ.

ಕನ್ಯಾ ರಾಶಿ: ವಸ್ತುಗಳ ವಿನಿಮಯವನ್ನು ಮಾಡಿಕೊಳ್ಳುವಿರಿ. ಕೃಷಿಗೆ ಕೆಲವು ಉಪಯುಕ್ತ ಅಂಶಗಳನ್ನು ಪಡೆಯುವಿರಿ. ಅಸೂಯೆಯಿಂದ ಏನನ್ನೋ ಸಾಧಿಸಲು ಹೋಗುವಿರಿ. ಅತಿಯಾದ ಆತ್ಮವಿಶ್ವಾಸವೇ ನಿಮ್ಮನ್ನು ಕೆಳಗಿಳಿಸಬಹುದು. ಸಾಮನ್ಯ ವಿಷಯವನ್ನು ಅಸಾಮಾನ್ಯವೆನ್ನುವಂತೆ ಮಾಡುವಿರಿ. ನಿಮ್ಮ ದೌರ್ಬಲ್ಯಗಳು ನಿಮ್ಮ ಯಶಸ್ಸನ್ನು ಕಟ್ಟಿಹಾಕಬಹುದು. ವಿದ್ಯಾರ್ಥಿಗಳು ಆಲಸ್ಯದಿಂದ ಇರುವರು. ಇನ್ನೊಬ್ಬರ ಚಿಂತನೆಯನ್ನು ಗೌರವಿಸಿ ಅವರ ಪಾಲಿಗೆ ದೊಡ್ಡವರಾಗಿ. ನಿಮಗೆ ಗೊತ್ತಿರುವ ಕಾರ್ಯಕುಶಲತೆಯನ್ನು ಮೆಚ್ಚುಬರು. ನೋವನ್ನು ಕೊಟ್ಟು ಅನಂತರ ಪಶ್ಚಾತ್ತಾಪಪಡಬೇಕಾದೀತು. ಸಂಗಾತಿಗೆ ನಿಮ್ಮಿಂದ ಅಪರೂಪದ ಉಡುಗೊರೆಯು ಸಿಗಲಿದೆ.‌ ಚಾಲನೆಯು ಜಾಗರೂಕತೆಯಿಂದ ಇರಲಿ.

ತುಲಾ ರಾಶಿ: ಮನೆಯ ಶುಭ ಕಾರ್ಯದಲ್ಲಿ ನೀವು ಬಹಳ ಖುಷಿಯಿಂದ ಇರುವಿರಿ. ಕಲ್ಪನಾಲೋಕದಿಂದ ಹೊರಬಂದು ವಾಸ್ತವದಲ್ಲಿ ಇರಿ. ಇನ್ನೊಬ್ಬರ ಹಂಗಿನಲ್ಲಿ ಬದುಕುತ್ತಿರುವಂತೆ ಭಾಸವಾಗುವುದು. ನೆರೆಯರ ಜೊತೆ ನಿಮ್ಮ ಭಾವನೆಗಳನ್ನು ಹೇಳಿಕೊಳ್ಳುವಿರಿ. ಬರಬೇಕಾದ ಹಣವು ಸಕಾಲಕ್ಕೆ ಸಿಗದೇ ವ್ಯವಹಾರದಲ್ಲಿ ಅಡೆತಡೆಯಾಗಬಹುದು. ನೀವು ಅಂದುಕೊಂಡಂತೆ ನಿಮ್ಮ ಬದುಕು ಸಾಗುತ್ತಿದೆಯೇ ಎಂದು ಅವಲೋಕಿಸಿ. ಹಿರಿಯರಿಂದ ನಿಮ್ಮ ಕೆಲಸಕ್ಕೆ ಕೆಲವು ನಿಂದನೆಯ ಮಾತುಗಳು ಕೇಳಿಸಬಹುದು. ಬಾಲಿಶ ಮಾತುಗಳನ್ನು ಕಡಿಮೆ ಮಾಡಿಕೊಳ್ಳಿ.‌ ನಿಮ್ಮ‌ ನಿಶ್ಚಿತ ಬುದ್ಧಿಯು ಬರುವ ಸಮಸ್ಯೆಗಳನ್ನು ಎದುರಿಸುವುದು. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿಯು ವೃದ್ಧಿಯಾಗುವುದು. ‌ದಿನದ ಕಾರ್ಯವನ್ನು ಬದಲಾಯಿಸಿಕೊಳ್ಳುವಿರಿ. ಬೇಕಾದುದನ್ನು ಪಡೆದುಕೊಳ್ಳುವಿರಿ.

ವೃಶ್ಚಿಕ ರಾಶಿ: ಉದ್ಯಮದಲ್ಲಿ ಬರುವ ವಿಘ್ನಗಳನ್ನು ಅನಾಯಾಸವಾಗಿ ದೂರಮಾಡಿಕೊಳ್ಳುವಿರಿ. ಇನ್ನೊಬ್ಬರ ವಿಚಾರಗಳಿಗೆ ಮೂಗುತೂರಿಸಲಿದ್ದೀರಿ. ನಿಮ್ಮದೊಂದೇ ಶ್ರೇಷ್ಠ ಎಂಬ ಭಾವನೆಯು ಬರುವುದು. ಯಾರನ್ನೋ ಉತ್ತೇಜಿಸಿ ನಿಮ್ಮ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ಕೆಲವರು ನಿಮ್ಮ ಬಗ್ಗೆ ಸಲ್ಲದ ಮಾತುಗಳನ್ನು ಆಡಬಹುದು. ಮನಸ್ಸು ಚಂಚಲವಾದ್ದರಿಂದ ಕ್ಷಣಕ್ಕೊಂದು ಆಲೋಚನೆ ಬರಬಹುದು. ನೂತನ ವಸ್ತುವಿನ ಖರೀದಿಯಿಂದ ಮೋಸ ಹೋಗುವಿರಿ. ಸಂಗಾತಿಗೆ ಪೆಟ್ಟುಗಳು ಆಗಬಹುದು. ಅನಗತ್ಯ ವಸ್ತುಗಳನ್ನು ಖರೀದಿಸಿ ಧನವ್ಯಯವಾಗುವುದು. ರಾಜಕೀಯದಲ್ಲಿ ಕೆಲವು ಬದಲಾವಣೆಯನ್ನು ನೀವು ನಿರೀಕ್ಷಿಸಬಹುದು. ಮಕ್ಕಳಿಗೆ ಬೇಕಾದುದನ್ನು ಕೊಡಿಸಬೇಕಾದೀತು. ಮನೆಯ ಬಗ್ಗೆಯೇ ಆಲೋಚನೆ ಇರುವ ಕಾರಣ ಕಛೇರಿಯಲ್ಲಿ ಕೆಲಸದ ಮನಃಸ್ಥಿತಿ ಇರದು.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್