Horoscope: ಸಂಗಾತಿಯ ವಿಷಯದಲ್ಲಿ ವಾಗ್ವಾದ ನಡೆಯಲಿದೆ
ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಅಕ್ಟೋಬರ್ 25) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.
ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಅಕ್ಟೋಬರ್ 25 ಬುಧವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ತುಲಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಶತಭಿಷಾ, ಯೋಗ: ಗಂಡ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 26 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 06 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:17 ರಿಂದ 01:44 ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 07:54 ರಿಂದ 09:22 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 10:49 ರಿಂದ 12:17ರ ವರೆಗೆ.
ಸಿಂಹ ರಾಶಿ : ಮಾತಿನಿಂದ ನಿಮಗೆ ಆದಾಯ ಬರಬಹುದು. ಉದ್ಯೋಗಕ್ಕಾಗಿ ನೀವು ವಿದೇಶಕ್ಕೆ ತೆರಳುವ ಆಸೆ ಇರಲಿದೆ. ಸಂಗಾತಿಯ ವಿಷಯದಲ್ಲಿ ವಾಗ್ವಾದ ನಡೆಯಲಿದೆ. ಮಕ್ಕಳಿಂದ ನಿಮಗೆ ಅಸಮಾಧಾನ ಇರಲಿದೆ. ನಿಮ್ಮ ಹಳೆಯ ಸಮಸ್ಯೆಯನ್ನು ಸರಿಮಾಡಿಕೊಳ್ಳುವಿರಿ. ವಾಹನ ವಿಚಾರವಾಗಿ ಮನೆಯಲ್ಲಿ ಕಲಹವಾಗುವುದು. ಸಂಗಾತಿಯ ಮಾತಿಗೆ ಏನಾದರೂ ಪ್ರತಿಕ್ರಿಯೆಯನ್ನು ನೀಡಿ. ಎಲ್ಲರೆದುರು ಸಭ್ಯರಂತೆ ತೋರುವಿರಿ. ಸಾಮಾಜಿಕ ಕಾರ್ಯದಿಂದ ನಿಮಗೆ ಹೆಸರು ಬರಲಿದೆ. ನಿಮ್ಮ ಉತ್ಸಾಹವನ್ನು ಶತ್ರುಗಳು ನಿರುತ್ಸಾಹಗೊಳಿಸುವೆರು. ಪಿತ್ತಕ್ಕೆ ಸಂಬಂಧಿಸಿದ ರೋಗದಿಂದ ಕಷ್ಟಪಡುವಿರಿ. ಬೇರೆಯವರ ಮೂಲಕ ಇಂದಿನ ಕೆಲಸವನ್ನು ಮಾಡಿ ಮುಗಿಸುವಿರಿ.
ಕನ್ಯಾ ರಾಶಿ : ಕಛೇರಿಯ ಕಾರ್ಯವು ಕುಂಟುತ್ತ ಸಾಗುವುದು. ಮನೆಯಲ್ಲಿ ನಿಮ್ಮ ಬಗ್ಗೆ ಏನಾದರೂ ಮಾತುಗಳು ಬರಬಹುದು. ಧಾರ್ಮಿಕ ಕಾರ್ಯದಲ್ಲಿ ಅಡಚಣೆ ಆಗಬಹುದು. ಕೆಲವು ವಿಚಾರದಲ್ಲಿ ನಿಮಗೆ ಸೂಕ್ಷ್ಮತೆಯು ಇರಬೇಕಾಗುವುದು. ನಿಮ್ಮದೇ ಆದ ದಾರಿಯಲ್ಲಿ ನೀವು ಸಾಗುವಿರಿ. ಯಾರ ಮಾತನ್ನೂ ಕೇಳುವ ಸಹನೆ ಇಲ್ಲವಾದೀತು. ವಿದ್ಯಾರ್ಥಿಗಳು ಓದಿನ ಬಗ್ಗೆ ಗಮನವನ್ನು ಕೊಡುವುದು ಕಷ್ಟವಾಗಬಹುದು. ದೂರ ಊರಿಗೆ ಕುಟುಂಬ ಸಹಿತವಾಗಿ ಪ್ರಯಾಣವನ್ನು ಮಾಡುವಿರಿ. ಸ್ಥಿರಾಸ್ತಿಯ ವಿಚಾರವಾಗಿ ನೆರೆಯವರ ಜೊತೆ ಕಲಹವಾಗಬಹುದು. ವಿದೇಶೀ ವ್ಯಾಪಾರದಿಂದ ಅಲ್ಪ ಲಾಭವಾಗಲಿದೆ. ಉದ್ಯೋಗದಲ್ಲಿ ನಿಮಗೆ ಮನಸ್ಸು ಖಿನ್ನವಾಗುವುದು. ಇಂದು ನೀವು ಹಣವನ್ನು ಉಳಿಸಿಕೊಳ್ಳಲು ಸಮಸ್ಯೆಯೇ ಆಗಬಹುದು.
ತುಲಾ ರಾಶಿ : ಸ್ನೇಹಿತರ ವಿವಾಹವನ್ನು ನೀವೇ ಮುಂದೆ ನಿಂತು ಮಾಡಿಸುವಿರಿ. ಶುಭ ಸುದ್ದಿಯನ್ನು ಆನಂದಿಸುವ ಮನಃಸ್ಥಿತಿ ಇಂದು ನಿಮ್ಮಲ್ಲಿ ಇರದು. ಸ್ನೇಹಿತರ ಮೇಲೆ ಕೂಗಾಡುವಷ್ಟು ಸಲುಗೆ ಬೇಡ. ಉದ್ಯೋಗದಲ್ಲಿ ಒತ್ತಡವನ್ನು ನಿವಾರಿಸಿಕೊಳ್ಳಲು ಯಾರದ್ದಾದರೂ ಸಹಾಯವನ್ನು ಪಡೆಯುವಿರಿ. ನಿಮಗೆ ಸಿಗಬೇಕಾದ ಗೌರವವು ಗೊಂದಲದಲ್ಲಿ ಇದ್ದು ಕೊನೆಗೂ ನಿಮಗೇ ಸಿಗಲಿದೆ. ನಿಮ್ಮ ವಿರುದ್ಧ ನಡೆಸುವ ತಂತ್ರಗಾರಿಕೆಯು ಹೊಸ ವಿಧಾನದಲ್ಲಿ ಇರಲಿದೆ. ಹಿರಿಯರ ಜೊತೆ ಕಳೆದ ಸಮಯವು ನಿಮಗೆ ಉಪಯೋಗಕ್ಕೆ ಬರಲಿದೆ. ನಿಮ್ಮ ಆರ್ಥಿಕ ವ್ಯವಸ್ಥೆಯನ್ನು ಸರಿಮಾಡಿಕೊಳ್ಳಿ. ಹಣಕಾಸಿನ ದಾಖಲೆಗಳನ್ನು ಜೋಪಾನವಾಗಿ ಇಟ್ಟುಕೊಳ್ಳಿ. ಹೊಸ ಪರಿಚಯವು ಆಗಬಹುದು.
ವೃಶ್ಚಿಕ ರಾಶಿ : ಆಹಾರದ ಕಾರಣ ನಿಮ್ಮ ಉದರಸಂಬಂಧಿ ರೋಗವು ಹೆಚ್ಚಾಗುವ ಸಾಧ್ಯತೆ ಇದೆ. ಪಕ್ಷಪಾತ ಸ್ವಭಾವವನ್ನು ಬಿಡುವುದು ಉತ್ತಮ. ನಿಮ್ಮನ್ನು ನೋಡು ದೃಷ್ಟಿಯು ಇದರಿಂದ ಬದಲಾದೀತು. ನೂತನ ಉದ್ಯಮಕ್ಕೆ ಹೆಚ್ಚು ಆದ್ಯತೆ ಇರಲಿದೆ. ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವಾಗ ನಿಮ್ಮ ಖರ್ಚಿನ ಅಂದಾಜು ತಪ್ಪಿಹೋಗಬಹುದು. ಕುಟುಂಬದಲ್ಲಿ ನಿಮ್ಮ ಪ್ರತಿ ಮಾತನ್ನು ಅನೇಕ ಅರ್ಥದಲ್ಲಿ ಗ್ರಹಿಸಬಹುದು. ಮೇಲಧಿಕಾರಿಗಳ ಜೊತೆ ನಿಮ್ಮ ಒಡನಾಟವನ್ನು ಚೆನ್ನಾಗಿಟ್ಟುಕೊಳ್ಳಿ. ನಿಮ್ಮ ಇಂದಿನ ಗುರಿಯನ್ನು ಸ್ಪಷ್ಟ ಮಾಡಿಕೊಂಡಿರಿ. ಕೆಲವು ರಾಜಕೀಯ ವ್ಯಕ್ತಿಗಳ ಪ್ರೇರಣೆಯಿಂದ ನೀವೂ ರಾಜಕೀಯಕ್ಕೆ ಬರುವಿರಿ. ನಿಮ್ಮದೇ ಕೆಲಸವಾದರೂ ನಿಮಗೆ ಅದರ ಸಂಪೂರ್ಣ ಯಶಸ್ಸು ಸಿಗದು. ಸ್ತ್ರೀಗೆ ಸೌಂದರ್ಯಕ್ಕೆ ವಶವಾಗುವ ಸಂಭವವಿದೆ.