Horoscope: ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಪೂರಕವಾದ ಜನರ ಗೆಳೆತನ ಮಾಡುವುದು ಉತ್ತಮ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಅಕ್ಟೋಬರ್ 27) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಪೂರಕವಾದ ಜನರ ಗೆಳೆತನ ಮಾಡುವುದು ಉತ್ತಮ
ಪ್ರಾತಿನಿಧಿಕ ಚಿತ್ರImage Credit source: iStock Photo
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Oct 27, 2023 | 12:15 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಅಕ್ಟೋಬರ್ 27 ಶುಕ್ರವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ತುಲಾ ಮಾಸ, ಮಹಾನಕ್ಷತ್ರ: ಸ್ವಾತೀ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಉತ್ತರಾಭಾದ್ರ, ಯೋಗ: ಹರ್ಷಣ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 27 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 05 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:49 ರಿಂದ 12:16 ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:11 ರಿಂದ 04:38 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:55 ರಿಂದ 09:22ರ ವರೆಗೆ.

ಸಿಂಹ ರಾಶಿ: ವೇಗವಾಗಿ ಹಣವನ್ನು ಪಡೆಯಲು ಹೋಗಿ ಸಾಲದ ಚಕ್ರದಲ್ಲಿ ಸಿಕ್ಕಿಕೊಳ್ಳುವಿರಿ. ಹೊಸ ವಾಹನದ ಖರೀದಿಯು ಸದ್ಯಕ್ಕೆ ಬೇಡ. ನಿಮ್ಮನ್ನು ಇಷ್ಟಪಡುವವರು ನಿಮ್ಮ ಮನೆಗೆ ಬರುವರು. ನಿಮ್ಮ ಸ್ವಭಾವವನ್ನು ದುರುಪಯೋಗ ಮಾಡಿಕೊಳ್ಳಬಹುದು. ನಿರಂತರ ಕಾರ್ಯದಿಂದ ದೇಹಕ್ಕೆ ಆಯಾಸವಾಗಬಹುದು. ಸುಖಜೀವನದ ನಿರೀಕ್ಷೆಯಲ್ಲಿ ಇರುವಿರಿ. ಸಮಾರಂಭಗಳಿಗೆ ಆಹ್ವಾನವಿದ್ದರೂ ಹೋಗುವ ಮನಸ್ಸಾಗದು. ನೀವು ಅಧಿಕವಾಗಿ ಮಾತನಾಡದೇ ಮೌನವಾಗಿರುವುದು ಉತ್ತಮ. ಕಾಲಹರಣಕ್ಕೆ ಇನ್ನೊಬ್ಬರ ವಿಚಾರವನ್ನು ಚರ್ಚಿಸುವಿರಿ. ಭವಿಷ್ಯದ ಬಗ್ಗೆ ನಿಮಗೆ ಸ್ಪಷ್ಟವಾದ ದೃಷ್ಟಿಕೋಣ ಇಲ್ಲವಾದೀತು. ಯಾರೋ ಮಾಡಿದ ತಪ್ಪು ಕೆಲಸದಿಂದ ನಿಮಗೆ ಸಿಟ್ಟು, ಹತಾಶೆ ಮೂಡಬಹುದು. ನೀವೇ ಸಂಗಾತಿಯ ಮನಸ್ಸನ್ನು ನೋಯಿಸಿ ಅನಂತರ ಸರಿಪಡಿಸುವಿರಿ.‌

ಕನ್ಯಾ ರಾಶಿ: ನಿಮ್ಮ‌ ನೇರ ನುಡಿಯಿಂದ ಎದುರಿನವರು ಸಿಟ್ಟಾಗಬಹುದು. ಸತ್ಯವನ್ನು ಹೇಳಲು ಅಪಹಾಸ್ಯವಾಗಬಹುದು. ವ್ಯಾಪರದ ನಷ್ಟಕ್ಕೆ ಸಮಸ್ತ ತಂತ್ರವನ್ನು ಮಾಡುವಿರಿ. ಅತಿಯಾದ ಕೋಪದ‌ ಕಾರಣ ನೀವು ಒಂಟಿಯಾಗಬೇಕಾದೀತು. ವಿದ್ಯಾಭ್ಯಾಸದಲ್ಲಿ ಹಿನ್ನಡೆಯನ್ನು ಕಾಣಲಿದ್ದು ಕುಟುಂಬದಲ್ಲಿ ಅಸಮಾಧನ ಇರಲಿದೆ. ನಿಮ್ಮ ಉನ್ನತ ಶಿಕ್ಷಣದ ಆಸೆಯು ಭಗ್ನವಾಗಬಹುದು. ಸ್ವಂತ ಉದ್ಯೋಗವು ಸಣ್ಣ ಪ್ರಮಾಣದ ಹಿನ್ನಡೆಯನ್ನು ಕಾಣಬಹುದು. ಔಷಧ ವ್ಯಾಪಾರಿಗಳು ಹೆಚ್ಚಿನ ಲಾಭ ಗಳಿಸುವರು. ನಿಮಗೆ ಭೂಮಿಯನ್ನು ಕೊಡುವುದು ಅನಿವಾರ್ಯವಾಗಿದ್ದು ಹೆಚ್ಚಿನ ಮೌಲ್ಯವು ಸಿಗದೇಹೋಗಬಹುದು. ಗುಂಪಿನಲ್ಲಿ ಕೆಲಸ ಮಾಡುವುದು ಇಷ್ಟವಾಗುವುದು. ನಿಮಗೆ ಸಂಬಂಧಿಸದ ವಿಷಯಕ್ಕೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ನಿಮ್ಮ ಸಂತೋಷವನ್ನು ಇತರರ ಜೊತೆ ಹಂಚಿಕೊಳ್ಳಲು ಇಷ್ಟಪಡುವಿರಿ.

ತುಲಾ ರಾಶಿ: ನೆರೆಯವರ ಸಹಾಯಕ್ಕೆ ಹೋಗಬೇಕಾದೀತು. ಪ್ರಾಣಿಗಳಿಂದ ಭೀತಿ ಉಂಟಾಗಬಹುದು. ಸುಲಭ ಕೆಲಸವನ್ನು ಇಂದು ಮಾಡಿಮುಗಿಸುವಿರಿ. ತಂದೆ ಕಡೆಯ ಬಂಧುಗಳು ನಿಮ್ಮನ್ನು ಅಪಹಾಸ್ಯ ಮಾಡಬಹುದು. ನಿಮ್ಮ ಹಿಂದೆ ಆಡುವ ಮಾತುಗಳಿಗೆ ಹೆಚ್ಚು ಬೆಲೆ ಕೊಡುವುದು ಬೇಡ. ಹಣದ ಹೂಡಿಕೆಯನ್ನು ಮಾಡುವ ಯೋಚನೆ ಇರಲಿದೆ. ಪ್ರೇಮದಲ್ಲಿ ಬೀಳುವಿರಿ. ವ್ಯಕ್ತಿಯ ಬಗ್ಗೆ ನಿಮಗೆ ಪೂರ್ಣ ವಿಶ್ವಾಸವಿರದು. ಹಳೆಯ ಖಾಯಿಲೆಗೆ ಔಷಧವು ಸಿಗದೇ ಹೋಗಬಹುದು. ನಿಮ್ಮ ಪ್ರಯತ್ನಕ್ಕೆ ಇಂದೇ ಫಲವು ಸಿಗಬೇಕೆಂಬ ಆತುರ ಬೇಡ. ನಿಮಗಿಂತ ಬಲವುಳ್ಳವರ ಮೇಲೆ ದ್ವೇಷವನ್ನು ಸಾಧಿಸುವಿರಿ. ಸಂಕಷ್ಟಕ್ಕೆ ಈಡಾಗುವಿರಿ. ಆರ್ಥಿಕ ‌ವೆಚ್ಚಕ್ಕೆ ನೀವು ಕಡಿವಾಣ ಹಾಕಿಕೊಳ್ಳಬೇಕಾದೀತು. ಮಕ್ಕಳ‌ ಸಂತೋಷದಿಂದ ನಿಮಗೂ ಸಂತೋಷವಾಗಲಿದೆ. ನಿಮ್ಮ‌‌‌ ಕೆಲವು ಮಾತುಗಳು ಇತರರಿಗೆ ಬೇಸರ ತರಿಸಬಹುದು. ನೌಕರರಿಂದ ಅಸಮಾಧಾನವಾಗಲಿದೆ.

ವೃಶ್ಚಿಕ ರಾಶಿ: ಆತ್ಮೀಯರು ನಿಮಗೆ ಹಿತಶತ್ರುಗಳಾಗಬಹುದು. ನಿಮ್ಮ ಬಗ್ಗೆ ಸಲ್ಲದ ಪ್ರಚಾರವನ್ನು ಮಾಡುವ ಸಾಧ್ಯತೆ ಇದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಪೂರಕವಾದ ಜನರ ಗೆಳೆತನನ್ನು ಮಾಡಿಕೊಳ್ಳುವುದು ಉತ್ತಮ. ಮನಶ್ಚಾಂಚಲ್ಯದಿಂದ ಓದಿನ ಕಡೆ ಗಮನವು ಕಡಿಮೆ ಆಗಲಿದೆ. ಸಹೋದ್ಯೋಗಿಗಳ ಮಾತನ್ನು ಸಹಿಸಿಕೊಳ್ಳಲು ಕಷ್ಟವಾಗದು. ಸ್ನೇಹಿತರ ಜೊತೆ ಪ್ರವಾಸ ಹೋಗುವಿರಿ. ಅಪರೂಪದ ಬಂಧುಗಳ ಭೇಟಿಯಿಂದ ಸಂತೋಷವಾಗಲಿದೆ.‌ ಇಂದು ನೀವು ಗಟ್ಟಿ ಮನಸ್ಸಿನಿಂದ ಹೋದರೂ ಕಛೇರಿಯಿಂದ ನಿಮಗೆ ಕೆಲವು ಕಹಿ ಅನುಭವವನ್ನು ಕೊಟ್ಟೀತು. ಸಂಗಾತಿಯ ಜೊತೆ ಮಾತನಾಡಲು ಹೋಗಿ ಕಲಹವಾದೀತು. ಉದ್ಯೋಗವನ್ನು ಬದಲಾಯಿಸುವ ಯೋಚನೆ ಸದ್ಯ ಬೇಡ.

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ