Horoscope: ದಿನಭವಿಷ್ಯ, ಒಂದೇ ಸಲಕ್ಕೆ ಅನೇಕ ಕಾರ್ಯಗಳು ಈ ರಾಶಿಯವರಿಗೆ ದಿಕ್ಕು ತೋಚದಂತೆ ಮಾಡುವುದು

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಆಗಸ್ಟ್ 28) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ, ಒಂದೇ ಸಲಕ್ಕೆ ಅನೇಕ ಕಾರ್ಯಗಳು ಈ ರಾಶಿಯವರಿಗೆ ದಿಕ್ಕು ತೋಚದಂತೆ ಮಾಡುವುದು
ರಾಶಿಭವಿಷ್ಯImage Credit source: iStock Photo
Follow us
TV9 Web
| Updated By: Rakesh Nayak Manchi

Updated on: Aug 28, 2023 | 12:30 AM

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಆಗಸ್ಟ್ 28) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ನಿಜ ಶ್ರಾವಣ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಉತ್ತರಾಷಾಢ, ಯೋಗ: ಆತುಷ್ಮಾನ್, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 46 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 07:54 ರಿಂದ 09:27ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 11:00 ರಿಂದ ಮಧ್ಯಾಹ್ನ 12:34ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:07 ರಿಂದ 03:40ರ ವರೆಗೆ.

ಸಿಂಹ ರಾಶಿ: ದಾಂಪತ್ಯದ ಸಮಸ್ಯೆಯು ನ್ಯಾಯಾಲಯದವರೆಗೂ ಹೋಗಬಹುದು. ಪರಸ್ಪರ ಬಗೆ ಹರಿಸಿಕೊಳ್ಳುವುದು ಕ್ಷೇಮ. ನಿಮ್ಮ ತಪ್ಪುಗಳನ್ನು ಇನ್ನೊಬ್ಬರ ಮೇಲೆ ಹಾಕಬಹುದು. ಉದ್ಯೋಗದ ಸ್ಥಳದಲ್ಲಿ ಇಂದು ಮಾತನ್ನು ಕಡಿಮೆ ಮಾಡಿ, ಕೆಲಸದ ಬಗ್ಗೆ ಹೆಚ್ಚು ಗಮನವನ್ನು ಕೊಡಿ. ಗೃಹನಿರ್ಮಾಣಕ್ಕೆ ಯೋಜನೆಯನ್ನು ರೂಪಿಸಿಕೊಳ್ಳುವಿರಿ. ಒಂದೇ ಸಮಯಕ್ಕೆ ಹೆಚ್ಚು ಜವಾಬ್ದಾರಿಯನ್ನು ನಿರ್ವಹಿಸುವುದು ಕಷ್ವಾಗಲಿದೆ. ನೀವು ಏಕಾಂಗಿ ಎಂಬ ಮನೋಭಾವವು ಬರಲಿದೆ. ಇನ್ನೊಬ್ಬರ ಬಳಿ ಇದ್ದ ಸ್ಥಿರಾಸ್ತಿಯನ್ನು ನೀವು ಪಡೆದುಕೊಳ್ಳುವಿರಿ. ಸರ್ಕಾರಿ ಸೌಲಭ್ಯಗಳು ನಿಮಗೆ ನಿಮ್ಮ ಪ್ರಯತ್ನದ ಫಲವಾಗಿ ಸಿಗಲಿದೆ. ವಿದ್ಯಾಭ್ಯಾಸಕ್ಕೆ ಯಾರ ಬಳಿಯಾದರೂ ಸಹಾಯವನ್ನು ಕೇಳುವಿರಿ.

ಕನ್ಯಾ ರಾಶಿ: ತಂದೆಗೆ ಅಪರೂಪದ ಉಡುಗೊರೆಯನ್ನು ಕೊಡುವಿರಿ. ವಾಹನ ಸಂಚಾರವು ಕಡಿಮೆ ಇರಲಿ. ನಿಮ್ಮ ನಿರ್ಣಯಕ್ಕೆ ವಿರುದ್ಧವಾಗಿ ಯಾರಾದರೂ ಮಾತನಾಡಬಹುದು. ಸಂಗಾತಿಯ ಜೊತೆ ಅನಗತ್ಯ ವಸ್ತುಗಳ ಖರೀದಿಯ ಕಾರಣದಿಂದ ಕಲಹವಾಗಲಿದೆ. ನೀವಿಬ್ಬರೂ ಕುಳಿತು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವುದು ಯೋಗ್ಯ. ಯಾರನ್ನೋ ಅಪಮಾನಿಸಲು ಹೋಗಿ ನೀವೇ ಅವಮಾನಿತರಾಗಬಹುದು. ವಿದ್ಯಾರ್ಥಿಗಳಿಗೆ ಪ್ರೋತ್ಸಾಹವು ಸಿಗಲಿದೆ. ಫಲಾಪೇಕ್ಷೆ ಇಲ್ಲದೇ ಶ್ರದ್ಧೆಯಿಂದ ಸಾಮಾಜಿಕ ಕಾರ್ಯದಲ್ಲಿ ಮಗ್ನರಾಗುವಿರಿ. ತಾಯಿಯ ಕಡೆಯಿಂದ ಸಂಪತ್ತು ಸಿಗಬಹುದು.

ತುಲಾ ರಾಶಿ: ಈ ದಿನ‌ದ ಆರಂಭದಲ್ಲಿಯೇ ನಿಮ್ಮಲ್ಲಿ ಉತ್ಸಾಹದ ಕೊರತೆಯು ಕಾಣಿಸುವುದು. ಯಾರದೋ ವಿಚಾರಕ್ಕೆ ನೀವು ಸಮಯವನ್ನು ಕೊಡಬೇಕಾಗುವುದು. ಆರ್ಥಿಕತೆಯ ಸುಧಾರಣೆ ಮಾಡಿಕೊಳ್ಳುವಿರಿ. ವಿದೇಶದಲ್ಲಿ ಇರುವವರ ಬಗ್ಗೆ ಚಿಂತೆ ಇರಲಿದೆ. ಉದ್ಯೋಗದ ಕಾರಣಕ್ಕೆ ಮನೆಯಿಂದ ದೂರ ಇರುವಿರಿ. ಅನಧಿಕೃತ ಮಾಹಿತಿಯನ್ನು ಪಡೆದು ಯಾವ ಕೆಲಸಕ್ಕೂ ಮುಂದಾಗಬೇಡಿ. ನಾಲ್ಕಾರು ಜನರ ಅಭಿಪ್ರಾಯವನ್ನು ಪಡೆಯಿರಿ. ನಿಮ್ಮ ಬಗ್ಗೆಯೇ ನಿಮಗೆ ಬೇಸರವಾದೀತು. ಯಾವ ಜವಾಬ್ದಾರಿಯನ್ನೂ ನೀವು ಸ್ವೀಕರಿಸಲು ಹಿಂಜರಿಯುವಿರಿ. ಸಂತೋಷದ ಸಂದರ್ಭಗಳನ್ನು ನೆನಪಿಸಿಕೊಳ್ಳುವಿರಿ.

ವೃಶ್ಚಿಕ ರಾಶಿ: ನಿಮ್ಮ ಸಂಕಟವನ್ನು ಆಪ್ತರ ಜೊತೆ ಹಂಚಿಕೊಂಡು ಸಮಾಧಾನಪಟ್ಟುಕೊಳ್ಳುವಿರಿ. ನಿದ್ರೆಯಲ್ಲಿ ಕಂಡ ಕನಸಿನಿಂದ ಭೀತರಾಗುವಿರಿ. ನಿಮಗೆ ಸಂಪತ್ತು ಯಾರಿಗಾದರೂ ದಾನ ಮಾಡಬೇಕು ಎಂದು ಅನ್ನಿಸುವುದು. ರಾಜಕೀಯವಾದ ಒತ್ತಡವು ನಿಮ್ಮ ಮೇಲೆ ಬರಲಿದೆ. ಒಂದೇ ಸಲಕ್ಕೆ ಅನೇಕ ಕಾರ್ಯಗಳು ನಿಮ್ಮನ್ನು ದಿಕ್ಕು ತೋಚದಂತೆ ಮಾಡುವುದು. ಸಂಬಂಧವಿಲ್ಲದ ವ್ಯಕ್ತಿಗಳ ಬಗ್ಗೆ ಚರ್ಚೋಪಚರ್ಚೆಗಳನ್ನು ಮಾಡುವಿರಿ. ನಿಮ್ಮ ಸಾಮರ್ಥ್ಯವನ್ನು ನೀವಾಗಿಯೇ ತೋರಿಸುವುದು ಬೇಡ. ಅವಶ್ಯಕತೆ ಇದ್ದರೆ ಮಾತ್ರ ಬಳಸಿ. ನಾಗದೇವರ ಉಪಾಸನೆಯಿಂದ ಜಗಕಾಗಿರುವ ನಿಮ್ಮ ಕೆಲಸಕ್ಕೆ ವೇಗವು ಸಿಗಲಿದೆ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ